Site icon Vistara News

ICICI Bank: ಐಸಿಐಸಿಐ ಬ್ಯಾಂಕ್‌ ಗ್ರಾಹಕರೇ ಎಚ್ಚರ; 17 ಸಾವಿರ ಜನರ ಕಾರ್ಡ್‌ ಮಾಹಿತಿ ಸೋರಿಕೆ!

ICICI Bank

ICICI Bank iMobile glitch: Portal raises alert as 17K card information erroneously mapped, bank restricts access

ಮುಂಬೈ: ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್‌ನ (ICICI Bank) ಮೊಬೈಲ್‌ ಬ್ಯಾಂಕಿಂಗ್‌ ಅಪ್ಲಿಕೇಷನ್‌ನಲ್ಲಿ (Mobile Banking Application) ತಾಂತ್ರಿಕ ತೊಂದರೆ ಎದುರಾಗಿದೆ. ಅಷ್ಟೇ ಅಲ್ಲ, ಸುಮಾರು 17 ಸಾವಿರ ಗ್ರಾಹಕರ ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ ಮಾಹಿತಿ ಬಹಿರಂಗವಾಗಿದೆ ಎಂಬ ಕುರಿತು ದೂರುಗಳು ವ್ಯಕ್ತವಾಗಿವೆ. ಇದರಿಂದಾಗಿ ಐಸಿಐಸಿಐ ಬ್ಯಾಂಕ್‌ನ ಲಕ್ಷಾಂತರ ಗ್ರಾಹಕರು (ICICI Bank Custormers) ಆತಂಕಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಐಸಿಐಸಿಐ ಬ್ಯಾಂಕ್‌ನ ಐ ಮೊಬೈಲ್‌ ಪೇ ಎಂಬ ಅಪ್ಲಿಕೇಶನ್‌ನಲ್ಲಿ (App) ಭಾರಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದಾಗಿ ಸಾವಿರಾರು ಗ್ರಾಹಕರ ಕ್ರೆಡಿಟ್‌ ಕಾರ್ಡ್‌ಗಳ ಮಾಹಿತಿ ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ. ಟೆಕ್ನೊಫಿನೋ ಸಂಸ್ಥೆಯ ಸಂಸ್ಥಾಪಕ ಸುಮಂತಾ ಮಂಡಲ್‌ ಅವರು ತಾಂತ್ರಿಕ ದೋಷ ಹಾಗೂ ಮಾಹಿತಿ ಸೋರಿಕೆ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದು, ಆರ್‌ಬಿಐ ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

“ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್‌ ಕಾರ್ಡ್‌ ಹೊಂದಿರುವ ಸಾವಿರಾರು ಗ್ರಾಹಕರಿಗೆ ತೊಂದರೆಯಾಗಿದೆ. ಅದರಲ್ಲೂ, ಐ ಮೊಬೈಲ್‌ ಪೇ ಅಪ್ಲಿಕೇಷನ್‌ನಲ್ಲಿ ಭಾರಿ ದೋಷ ಕಾಣಿಸಿಕೊಂಡಿದೆ. ಕ್ರೆಡಿಟ್‌ ಕಾರ್ಡ್‌ ನಂಬರ್‌, ಎಕ್ಸ್‌ಪೈರಿ ಡೇಟ್‌, ಸಿವಿವಿ ಸೇರಿ ಎಲ್ಲ ಮಾಹಿತಿಯು ಅಪ್ಲಿಕೇಷನ್‌ನಲ್ಲಿ ಬಹಿರಂಗವಾಗಿ ಕಾಣಿಸುತ್ತಿದೆ. ಅಂತಾರಾಷ್ಟ್ರೀಯ ಟ್ರಾನ್ಸ್ಯಾಕ್ಷನ್‌ ಸೆಟಿಂಗ್ಸ್‌ ಕೂಡ ಬದಲಾಯಿಸಬಹುದಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಟ್ರಾನ್ಸ್ಯಾಕ್ಷನ್‌ ಮಾಡಲು ಬೇರೆಯವರ ಕ್ರೆಡಿಟ್‌ ಕಾರ್ಡ್‌ ಮಾಹಿತಿಯನ್ನು ದುರುಪಯೋಗ ಮಾಡಿಕೊಳ್ಳಬಹುದಾಗಿದೆ” ಎಂದು ಅವರು ದೂರಿದ್ದಾರೆ.

ಐಸಿಐಸಿಐ ಬ್ಯಾಂಕ್‌ ಹೇಳುವುದೇನು?

ತಾಂತ್ರಿಕ ದೋಷವಾಗಿದೆಯೋ, ಯಾರಾದರೂ ಹ್ಯಾಕ್‌ ಮಾಡಿದ್ದಾರೋ ಎಂಬ ಕುರಿತು ಅನುಮಾನ ವ್ಯಕ್ತವಾಗುತ್ತಲೇ ಈ ಕುರಿತು ಐಸಿಐಸಿಐ ಬ್ಯಾಂಕ್‌ ಸ್ಪಷ್ಟನೆ ನೀಡಿದೆ. “ಹೊಸದಾಗಿ ನೀಡಲಾದ 17 ಸಾವಿರ ಕ್ರೆಡಿಟ್‌ ಕಾರ್ಡ್‌ಗಳ ಮಾಹಿತಿಯು ಬಹಿರಂಗವಾಗಿದೆ. ಇದು ತಾಂತ್ರಿಕ ದೋಷದಿಂದ ಉಂಟಾಗಿರುವ ಸಾಧ್ಯತೆ ಇದೆ. ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರ ಪೈಕಿ ಶೇ.0.1ರಷ್ಟು ಗ್ರಾಹಕರಿಗೆ ತೊಂದರೆಯಾಗಿದೆ. ಆದರೆ, ಗ್ರಾಹಕರ ಹಿತದೃಷ್ಟಿಯಿಂದಾಗಿ ಕೂಡಲೇ ಎಲ್ಲ ಕಾರ್ಡ್‌ಗಳನ್ನು ಬ್ಲಾಕ್‌ ಮಾಡಿದ್ದೇವೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದ್ದು, ಶೀಘ್ರವೇ ಬಗೆಹರಿಸಲಾಗತ್ತದೆ. ಯಾರದರೂ ಹಣ ಕಳೆದುಕೊಂಡಿದ್ದರೆ ಕಸ್ಟಮರ್‌ ಕೇರ್‌ಗೆ ಕರೆ ಮಾಡಿ” ಎಂಬುದಾಗಿ ಬ್ಯಾಂಕ್‌ ಮನವಿ ಮಾಡಿದೆ.

ಇದನ್ನೂ ಓದಿ: Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Exit mobile version