Site icon Vistara News

Illegal Mining Case: ಅಕ್ರಮ ಗಣಿಗಾರಿಕೆ ಪ್ರಕರಣ; ಕಾಂಗ್ರೆಸ್‌ ಶಾಸಕ ಇಡಿ ಬಲೆಗೆ

Illegal Mining Case

ಚಂಡೀಗಡ: ಅಕ್ರಮ ಗಣಿಗಾರಿಕೆ ಪ್ರಕರಣ(Illegal Mining Case)ಕ್ಕೆ ಸಂಬಂಧಿಸಿದಂತೆ ಹರ್ಯಾಣದ ಶಾಸಕರೊಬ್ಬರನ್ನು ಜಾರಿ ನಿರ್ದೇಶನಾಲಯ (ED)ಅರೆಸ್ಟ್‌ ಮಾಡಿದೆ. ಹರಿಯಾಣದ ಸೋನೆಪತ್ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ ಬಲೆಗೆ ಬಿದ್ದಿದ್ದಾರೆ. 55 ವರ್ಷದ ಶಾಸಕ ಪನ್ವಾರ್ ಅವರನ್ನು ಗುರುಗ್ರಾಮ್‌ನಲ್ಲಿ ಶನಿವಾರ ಮುಂಜಾನೆ ಬಂಧಿಸಲಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ಸುರೇಂದರ್ ಪನ್ವಾರ್ ಮನೆ ಹಾಗೂ ಕಚೇರಿಗಳ ಮೇಲೆ ಜನವರಿಯಲ್ಲಿ ದಾಳಿ ನಡೆಸಿದ್ದರು. ಜನವರಿಯಲ್ಲಿ, ಸೋನೆಪತ್ನಲ್ಲಿರುವ ಪನ್ವಾರ್ ಮತ್ತು ಅವರ ಸಹಾಯಕರಿಗೆ ಸಂಬಂಧಿಸಿದ ಆವರಣಗಳು, ಕರ್ನಾಲ್ ಲ್ಲಿನರುವ ಬಿಜೆಪಿ ಮುಖಂಡ ಮನೋಜ್ ವಾಧ್ವಾ ಮತ್ತು ಯಮುನಾನಗರ ಜಿಲ್ಲೆಯ ಐಎನ್‌ಎಲ್ಡಿ ಶಾಸಕ ದಿಲ್ಬಾಗ್ ಸಿಂಗ್ ಮತ್ತು ಅವರ ಸಹಚರರ ನಿವಾಸಗಳಲ್ಲಿ ಇಡಿ ಶೋಧ ನಡೆಸಿತ್ತು. ಹೆಚ್ಚಿನ ವಿಚಾರಣೆಗಾಗಿ ಸಿಂಗ್ ಅವರನ್ನು ನಂತರ ಬಂಧಿಸಲಾಗಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ವಿಧಿಸಿರುವ ನಿಷೇಧದ ನಡುವೆಯೂ ಯಮುನಾನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಕಲ್ಲು ಮತ್ತು ಮರಳು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಕುರಿತು ಹರಿಯಾಣ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಅಲ್ಲದೆ, ಇದೇ ಪ್ರಕರಣದಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳದ (ಐಎನ್‌ಎಲ್‌ಡಿ) ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ಮತ್ತು ಅವರ ಸಹಚರ ಕುಲ್ವಿಂದರ್ ಸಿಂಗ್ ಅವರನ್ನು ಬಂಧಿಸಿತ್ತು

ಇನ್ನು ಪನ್ವಾರ್‌ ಅವರನ್ನು ಅಂಬಾಲದ ವಿಶೇಷ ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ತನ್ನ ಕಸ್ಟಡಿಗೆ ಪಡೆಯಲು ಇಡಿ ಮನವಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಅಕ್ರಮ ಗಣಿಗಾರಿಕೆಯಿಂದಾಗಿ ಕಳೆದ ಕೆಲವು ವರ್ಷಗಳಲ್ಲಿ ಸುಮಾರು 400-500 ಕೋಟಿ ರೂ.ಗಳಷ್ಟು ಅಕ್ರಮ ಹಣ ಸಂಪಾದನೆ ಮಾಡಲಾಗಿದೆ ಎಂದು ಇಡಿ ಅಂದಾಜಿಸಿದೆ.

ಯಮುನಾ ನದಿಯಲ್ಲಿ ಮರಳು ಗಣಿಗಾರಿಕೆ ನಡೆಸದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ನಿಷೇಧ ವಿಧಿಸಿದ್ದರೂ, ನಮುನಾಗರದ ಬಳಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಜಲ್ಲಿ ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಆರೋಪಗಳ ಮೇಲೆ ಹಲವಾರು ಎಫ್‌ಐಆರ್‌ಗಳನ್ನು ಹರಿಯಾಣ ಪೊಲೀಸರು ದಾಖಲಿಸಿದ್ದಾರೆ. ಇದೀಗ, ಅದೇ ಪ್ರಕರಣಗಳಲ್ಲಿ ಅಕ್ರಮ ಹಣ ವರ್ಗಾವಣೆಯೂ ನಡೆದಿದೆ ಎಂದು ಆರೋಪಿಸಲಾಗಿದ್ದು, ಆ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.

ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರಿಯಾಣ ಸರ್ಕಾರವು 2020ರಲ್ಲಿ ಪರಿಚಯಿಸಿದ ಆನ್‌ಲೈನ್ ಪೋರ್ಟಲ್ ‘ಇ-ರಾವಣ’ ಯೋಜನೆಯಡಿ ದಾಖಲಾಗಿರುವ ವಂಚನೆ ಪ್ರಕರಣಗಳ ಕುರಿತು ಇ.ಡಿ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: LKG UKG in Anganwadis: ದೇಶದಲ್ಲೇ ಮೊದಲ ಬಾರಿ ಅಂಗನವಾಡಿಗಳಲ್ಲಿ ಎಲ್‌‌ಕೆಜಿ, ಯುಕೆಜಿ; ಜು.22ಕ್ಕೆ ಉದ್ಘಾಟನೆ

Exit mobile version