Site icon Vistara News

PM Narendra Modi: ಆರು ತಿಂಗಳಲ್ಲಿ ಜನಕಲ್ಯಾಣ ಯೋಜನೆ ಜಾರಿ ಮಾಡಿ! ಅಧಿಕಾರಿಗಳಿಗೆ ಮೋದಿ ಟಾರ್ಗೆಟ್

PM Narendra Modi

ನವದೆಹಲಿ: ಕೇಂದ್ರ ಸರ್ಕಾರದ (Central Government) ಎಲ್ಲ ಜನಕಲ್ಯಾಣ ಯೋಜನೆಗಳನ್ನು (Welfare Schemes) 6 ತಿಂಗಳೊಳಗೆ ಅನುಷ್ಠಾನವನ್ನು ಪೂರ್ಣಗೊಳಿಸುವ ಗುರಿಯನ್ನು ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನೀಡಿದ್ದಾರೆ. ಬೃಹತ್ ಪ್ರಮಾಣದಲ್ಲಿ ಅಭಿಯಾನವನ್ನು ಆರಂಭಿಸಲು ಉದ್ದೇಶಿಸಿರುವ ಕೇಂದ್ರ ಸರ್ಕಾರವು ದೇಶದ 2.7 ಲಕ್ಷ ಪಂಚಾಯತ್‌ಗಳಲ್ಲಿ ಫಲಾನುಭವಿಗಳನ್ನು ತಲುಪಲು ವಿಕಸಿತ ಭಾರತ್ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಲಿದೆ(Vikisit Bharat Sankalpa Yatra).

ದೀಪಾವಳಿ ಬಳಿಕ ಈ ಚಟುವಟಿಕೆಗಳು ಆರಂಭವಾಗಲಿದ್ದು, ಮುಂದಿನ ಕೆಲವು ವಾರಗಳವರೆಗೆ ಮುಂದುವರಿಯಲಿದೆ. ವಿಶೇಷವಾಗಿ ನಿರ್ಮಾಣ ಮಾಡಲಾದ ರಥಗಳು ದೇಶಾದ್ಯಂತ ಸಂಚರಿಸಲಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ಈವರೆಗೂ ಯೋಜನೆಗಳು ದೊರೆಯದ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೇಂದ್ರ ಸರ್ಕಾರದ ಯೋಜನೆಗಳು ತಲುಪುವಂತೆ ಮಾಡಬೇಕು ಎಂದು ತಮ್ಮ ಸಹೋದ್ಯೋಗಿ ಸಚಿವರಿಗೆ ತಿಳಿಸಿದ್ದಾರೆಂದು ಹೇಳಲಾಗಿದೆ. ಮುಂದಿನ ಆರು ತಿಂಗಳಲ್ಲಿ ಎಲ್ಲ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳು ತಲುಪಬೇಕೆಂದು ಕಟ್ಟು ನಿಟ್ಟಾಗಿ ಸೂಚಿಸಿದ್ದಾರೆಂದು ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಪ್ರಧಾನ ಮಂತ್ರಿ ಆವಾಸ್ ಯೋಜನಾ(ಗ್ರಾಮೀಣ), ರಾಷ್ಟ್ರೀಯ ಗ್ರಾಮೀಣ ಬದುಕು ಯೋಜನೆ, ಪಿಎಂ ಕಿಸಾನ್, ಫಸಲ್ ಭಿಮಾ ಯೋಜನೆ, ಪೋಷಣ್ ಅಭಿಯಾನ್, ಉಜ್ವಲಾ ಯೋಜನಾ, ಆಯುಷ್ಮಾನ್ ಭಾರತ್, ಜನೌಷದಿ ಯೋಜನೆ, ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಗಳು ಮಾತ್ರವಲ್ಲದೇ, ಕೌಶಲ್ಯ ಅಭಿವೃದ್ಧಿ ಯೋಜನೆಗಳು, ಇತ್ತೀಚೆಗೆ ಲಾಂಚ್ ಮಾಡಲಾದ ವಿಶ್ವಕರ್ಮ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

2024ರ ಲೋಕಸಭೆ ಚುನಾವಣೆಗೆ 6 ತಿಂಗಳಷ್ಟೇ ಬಾಕಿ ಉಳಿದಿರುವ ಹಿನ್ನೆಲೆಯಲ್ಲೇ ಬಿಜೆಪಿ ಚುನಾವಣೆಗೆ ಭರ್ಜರಿ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಇದರ ಭಾಗವಾಗಿಯೇ ಪ್ರಧಾನಿ ಮೋದಿ ಅವರು ಕೇಂದ್ರ ಸರ್ಕಾರದ ಎಲ್ಲ ಜನಪರ ಕಲ್ಯಾಣ್ ಯೋಜನೆಗಳನ್ನು ಜನರಿಗೆ ತಲುಪಿಸುವ ಗುರಿಯನ್ನು ನೀಡಿದ್ದಾರೆ. 2024 ಮತ್ತು 2019ರಲ್ಲಿ ಪ್ರಚಂಡ ಗೆಲವು ಸಾಧಿಸಿರುವ ಬಿಜೆಪಿ ಮೂರನೇ ಬಾರಿಗೂ ಅದೇ ಜಯವನ್ನು ರಿಪೀಟ್ ಮಾಡುವ ಸನ್ನಾಹದಲ್ಲಿದೆ. ಇದಕ್ಕೆ ಹೆಚ್ಚಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನೇ ಮೆಚ್ಚಿಕೊಂಡಿದೆ.

ಈ ಸುದ್ದಿಯನ್ನೂ ಓದಿ :PM Narendra Modi: ಪ್ರಧಾನಿ ನರೇಂದ್ರ ಮೋದಿ ಬರೆದ ಮತ್ತೊಂದು ಗರ್ಬಾ ಸಾಂಗ್ ‘ಮಾಡಿ’ ಸಖತ್ ಹಿಟ್!

Exit mobile version