ನವದೆಹಲಿ: 78ನೇ ಸ್ವಾತಂತ್ರ್ಯೋತ್ಸವ(Independence Day 2024) ಸಂಭ್ರಮದ ಮಧ್ಯೆಯೇ 2036ರಲ್ಲಿ ಒಲಿಂಪಿಕ್ ಕ್ರೀಡಾಕೂಟ(Olympics)ವನ್ನು ಆಯೋಜಿಸುವ ಕನಸು ಭಾರತ ಹೊಂದಿರುವುದಾಗಿ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಭಾರತದಲ್ಲಿ ಅತಿದೊಡ್ಡ ಕ್ರೋಡಾಕೂಟ ಆಯೋಜನೆಗೆ ದೇಶ ತಯಾರಾಗುತ್ತಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಪ್ಯಾರ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.
“ಇಂದು, ನಮ್ಮೊಂದಿಗೆ ಒಲಿಂಪಿಕ್ಸ್‌ನಲ್ಲಿ ಭಾರತದ ಧ್ವಜವನ್ನು ಎತ್ತರಕ್ಕೆ ಹಾರಿಸಿದ ಯುವಕರೂ ಇದ್ದಾರೆ. 140 ಕೋಟಿ ದೇಶವಾಸಿಗಳ ಪರವಾಗಿ, ನಾನು ನಮ್ಮ ಎಲ್ಲಾ ಕ್ರೀಡಾಪಟುಗಳು ಮತ್ತು ಆಟಗಾರರನ್ನು ಅಭಿನಂದಿಸುತ್ತೇನೆ. ಮುಂದಿನ ದಿನಗಳಲ್ಲಿ, ಭಾರತದ ಬೃಹತ್ ಪಡೆ ಪ್ಯಾರಿಸ್‌ಗೆ ತೆರಳಲಿದೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲು ನಾನು ನಮ್ಮ ಎಲ್ಲಾ ಪ್ಯಾರಾಲಿಂಪಿಯನ್‌ಗಳಿಗೆ ಶುಭ ಹಾರೈಸುತ್ತೇನೆ.” ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದರು.
“ಭಾರತವು ಭಾರತದಲ್ಲಿ ಜಿ 20 ಶೃಂಗಸಭೆಯನ್ನು ಆಯೋಜಿಸಿದೆ ಮತ್ತು ರಾಷ್ಟ್ರದಾದ್ಯಂತ 200 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಭಾರತವು ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಇದು ಸಾಬೀತುಪಡಿಸಿದೆ. ಇದು ಸಾಬೀತಾಗಿರುವಂತೆ, ಭಾರತದಲ್ಲಿ 2036 ರ ಒಲಿಂಪಿಕ್ಸ್ ಅನ್ನು ಆಯೋಜಿಸುವುದು ಈಗ ಭಾರತದ ಕನಸು, ಮತ್ತು ನಾವು ಅದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು.
It is India's dream to host the 2036 Olympics: PM Modi during Independence Day speech
— ANI Digital (@ani_digital) August 15, 2024
Read @ANI Story | https://t.co/slBuqD0Q1c#PMModiAtRedFort #IndependenceDay2024 #Olympics pic.twitter.com/OpePcwYqeg
PM Narendra Modi "it's a dream to host the 2036 Olympics in India". 🇮🇳🔥#Olympics #OlympicsInIndia
— Sports with naveen (@sportswnaveen) August 15, 2024
pic.twitter.com/hTNriqLmpx
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಕೋಲ್ಕತ್ತಾದಲ್ಲಿ ನಡೆದಿರುವ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿ ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಮಾತೆ ಸಹೋದರಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಪಾಪಿಗಳನ್ನು ಗಲ್ಲಿಗೇರಿಸಬೇಕು. ಆಗ ಮಾತ್ರ ಜನರಲ್ಲಿ ಅಪರಾಧಗಳ ಬಗ್ಗೆ ಭಯ ಮೂಡಲು ಸಾಧ್ಯ. ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬಹಳ ಉಗ್ರವಾಗಿ ಧ್ವನಿ ಎತ್ತಬೇಕಿದೆ. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ವಿಳಂಬ ಮಾಡದೆ ಶಿಕ್ಷಿಸಬೇಕು ಎಂದರು.
ಇದೇ ವೇಳೆ ಅವರು ಕಳೆದ ಕೆಲವು ತಿಂಗಳಿಂದ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ಬಗ್ಗೆ ಪ್ರಸ್ತಾಪಿಸಿದರು. ಬಾಂಗ್ಲಾದೇಶದ ಶೀಘ್ರದಲ್ಲೇ ಸಹಜ ಸ್ಥಿತಿ ಬರುತ್ತದೆ ಎಂಬ ಭರವಸೆ ಇದೆ. ಅದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ಭಾರತ ನೀಡಲಿದೆ ಎಂದು ಹೇಳಿದರು.