Site icon Vistara News

INDIA bloc: ಇಂದು ಇಂಡಿಯಾ ಕೂಟದ ಮೀಟಿಂಗ್; ಸಂಚಾಲಕ ನೇಮಕ, ಸೀಟು ಷೇರಿಂಗ್ ಚರ್ಚೆ

INDIA bloc leaders will meet today virtually

ನವದೆಹಲಿ: ಹಲವು ಅಸಮಾಧಾನಗಳ ನಡುವೆಯೂ ಇಂಡಿಯಾ ಕೂಟದ (INDIA bloc) ನಾಯಕರು ಜನವರಿ 13, ಶನಿವಾರ ಬೆಳಗ್ಗೆ 11.30ಕ್ಕೆ ವರ್ಚುವಲ್ ಸಭೆ ನಡೆಸಲಿದ್ದಾರೆ(leaders virtual meet). ಪ್ರತಿಪಕ್ಷಗಳ ಕೂಟದ ಸಂಚಾಲಕರ ನೇಮಕ(convener), ಸೀಟು ಹಂಚಿಕೆ ಸೇರಿದಂತೆ (seat-sharing) ಅನೇಕ ವಿಷಯಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗುತ್ತಿದೆ. 2024ರ ಲೋಕಸಭೆ ಚುನಾವಣೆಗೆ (Lok Sabha 2024) ಸೀಟು ಹಂಚಿಕೆ ಸಂಬಂಧ ಕೂಟದ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾದ ಬೆನ್ನಲ್ಲೇ ಈ ಸಭೆ ನಡೆಯುತ್ತಿರುವುದು ಮಹತ್ವದ ಪಡೆದುಕೊಂಡಿದೆ.

ಇಂಡಿಯಾ ಕೂಟದಲ್ಲಿರುವ ಪ್ರಾದೇಶಿಕ ಪಕ್ಷಗಳು ತಮ್ಮ ರಾಜ್ಯಗಳಲ್ಲಿ ಹೆಚ್ಚಿನ ಸೀಟು ಪಡೆಯಲು ಪಟ್ಟು ಹಿಡಿದಿವೆ. ಅಲ್ಲದೇ, ಸೀಟು ಹಂಚಿಕೆಯಲ್ಲಿ ಕಾಂಗ್ರೆಸ್‌ಗೆ ಅವಕಾಶವನ್ನು ನೀಡಲು ನಿರಾಕರಿಸುತ್ತಿವೆ. ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಬಿಹಾರದಂಥ ರಾಜ್ಯಗಳಲ್ಲಿ ಕಾಂಗ್ರೆಸ್‌ ಪಾತ್ರವನ್ನು ನಗಣ್ಯ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಹಾಗಾಗಿ ಸೀಟು ಹಂಚಿಕೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಪ್ರಾದೇಶಿಕ ಪಕ್ಷಗಳು ಸಿದ್ಧವಾಗುತ್ತಿಲ್ಲ.

ಕೆಲವು ಮಾಧ್ಯಮಗಳ ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‌ ಪಕ್ಷಕ್ಕೆ ಕೇವಲ ಎರಡು ಸೀಟು ಬಿಟ್ಟು ಕೊಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮಾಲ್ಡಾ ದಕ್ಷಿಣ್ ಮತ್ತು ಬಹರಂಪುರ ಕ್ಷೇತ್ರಗಳನ್ನು ನೀಡಲಿದ್ದಾರೆ. ಈಗಾಗಲೇ ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರತಿನಿಧಿಗಳಿದ್ದಾರೆ. ಅಲ್ಲದೇ, ಕೂಟದ ಪಕ್ಷಗಳ ಜತೆಗೆ ಸೀಟು ಹಂಚಿಕೆ ಸಂಬಂಧ ಕಾಂಗ್ರೆಸ್ ರಚಿಸಿರುವ ಐದು ಸದಸ್ಯರ ಸಮಿತಿ ಜತೆಗಿನ ಸಭೆಯಲ್ಲೂ ಟಿಎಂಸಿ ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ.

ಅದೇ ರೀತಿ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲೂ ಸಮಾಜವಾದಿ ಮತ್ತು ಜೆಡಿಯು-ಆರ್‌ಜೆಡಿ ಪಕ್ಷಗಳು ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಬಿಟ್ಟುಕೊಡಲು ಮುಂದಾಗುತ್ತಿಲ್ಲ. ಈ ಕುರಿತು ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತಿದ್ದಂತೆ ಸ್ಥಳೀಯ ಕಾಂಗ್ರೆಸ್ ನಾಯಕರೂ ತಮ್ಮ ಮೈತ್ರಿ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿತ್ತಿದ್ದಾರೆ. ಪರಿಣಾಮ ಇಂಡಿಯಾ ಕೂಟದಲ್ಲಿ ಸಮನ್ವ ತರುವುದು ಮತ್ತಷ್ಟು ಕಷ್ಟವಾಗುತ್ತಿದೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷವು 255 ಕ್ಷೇತ್ರಗಳ ಮೇಲೆ ಹೆಚ್ಚು ಗಮನವನ್ನು ಕೇಂದ್ರೀಕರಿಸಲಿದೆ ಎಂದು ಹೇಳಿದ್ದಾರೆ. ಒಂದೊಮ್ಮೆ, ಇಷ್ಟೇ ಕ್ಷೇತ್ರಗಳಲ್ಲಿ ಸ್ಫರ್ಧಿಸಿದರೆ ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದಂತಾಗಲಿದೆ. 2014ರಲ್ಲಿ ಕಾಂಗ್ರೆಸ್ ಪಕ್ಷವು 417 ಕ್ಷೇತ್ರದಲ್ಲಿ ಸ್ಪರ್ಧಿಸಿತ್ತು. ಇದು ಅದಕ್ಕಿಂತಲೂ ಕಡಿಮೆ ಎನಿಸಲಿದೆ.

255 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನ ನಿರ್ಧಾರವು ಇಂಡಿಯಾ ಮೈತ್ರಿಕೂಟದ ಲಾಭಕ್ಕಾಗಿ ಮತ್ತು ಹಳೆಯ ಪಕ್ಷವು ತನ್ನ ಸ್ಥಾನದ ಮೇಲೆ ರಾಜಿ ಮಾಡಿಕೊಳ್ಳಲು ಸಿದ್ಧವಾಗಿದೆ. 2014 ರಲ್ಲಿ ಸ್ಪರ್ಧಿಸಿದ ಸ್ಥಾನಗಳಲ್ಲಿ 9.48% ಮತ್ತು 2019 ರಲ್ಲಿ ಸ್ಪರ್ಧಿಸಿದ 12.35% ಸ್ಥಾನಗಳನ್ನು ಗೆದ್ದಿರುವ ಪಕ್ಷವು ಎರಡು ನೇರವಾದ ಕಳಪೆ ಪ್ರದರ್ಶನದಿಂದ ಚೇತರಿಸಿಕೊಳ್ಳಲು ಬಯಸುತ್ತಿರುವ ಕಾರಣ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ಈ ಸುದ್ದಿಯನ್ನೂ ಓದಿ: INDIA Bloc: ಇಂಡಿಯಾ ಕೂಟದ ನಾಯಕತ್ವ ಹೊಣೆಗಾರಿಕೆ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ!?

Exit mobile version