ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟವು ನರೇಂದ್ರ ಮೋದಿ ಅವರನ್ನೇ ನಾಯಕನನ್ನಾಗಿ ಘೋಷಣೆ ಮಾಡಿದೆ. ಎನ್‌ಡಿಎ ಸಭೆಯಲ್ಲಿ (NDA Meeting) ಎಲ್ಲ ಪಕ್ಷಗಳ ನಾಯಕರು ಮೋದಿ ನಾಯಕತ್ವಕ್ಕೆ ಬೆಂಬಲ ಸೂಚಿಸಿದ್ದಾರೆ. ಜೂನ್ 8ರಂದು ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಪವಾಡ ನಡೆದು, ಅಧಿಕಾರದ ಆಸೆಯಲ್ಲಿದ್ದ ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ಸಭೆ (India Bloc Meeting) ನಡೆಸಿದ್ದು, ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂಡಿಯಾ ಒಕ್ಕೂಟದ ಸಭೆ ನಡೆದಿದೆ. ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯಾದ ಬಳಿಕ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡುವುದು, ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳ ಮಧ್ಯೆ ಸಮನ್ವಯತೆ, ಒಗ್ಗಟ್ಟು ಸಾಧಿಸುವುದು, ರಚನೆಯಾದ ನೂತನ ಸರ್ಕಾರದ ವಿರುದ್ಧ ಹೋರಾಡುವುದು, ಅದನ್ನು ಇಕ್ಕಟ್ಟಿಗೆ ಸಿಲುಕಿಸುವುದು, ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವುದು ಸೇರಿ ಹಲವು ರಣತಂತ್ರಗಳ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
#WATCH | INDIA bloc leaders hold a meeting at the residence of Congress president Mallikarjun Kharge in Delhi.
— ANI (@ANI) June 5, 2024
(Source: AICC) pic.twitter.com/1xtYlqQviE
ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎನ್‌ಸಿಪಿಯ ಶರದ್ ಪವಾರ್, ಸುಪ್ರಿಯಾ ಸುಳೆ, ಡಿಎಂಕೆಯ ಎಂ.ಕೆ.ಸ್ಟಾಲಿನ್, ಟಿ.ಆರ್.ಬಾಲು, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಜತೆಗೆ ಟಿಎಂಸಿ, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಆರ್‌ಜೆಡಿ, ಸಿಪಿಐ (ಎಂ), ಸಿಪಿಐ, ಜೆಜೆಎಂ, ಆಮ್ ಆದ್ಮಿ ಪಾರ್ಟಿ, ವಿಸಿಕೆ, ಕೆಎಂಡಿಕೆ ಸೇರಿ ಹಲವು ಪಕ್ಷಗಳ ನಾಯಕರು, ಪ್ರತಿನಿಧಿಗಳು ಇಂಡಿಯಾ ಒಕ್ಕೂಟದ ಸಭೆಯಲ್ಲಿ ಪಾಲ್ಗೊಂಡಿದ್ದರು.
ಪವಾಡದ ನಿರೀಕ್ಷೆಯಲ್ಲಿದ್ದ ಒಕ್ಕೂಟ
ಲೋಕಸಭೆ ಚುನಾವಣೆಯಲ್ಲಿ 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಇಂಡಿಯಾ ಒಕ್ಕೂಟವು ಪವಾಡ ನಡೆಯುವ ನಿರೀಕ್ಷೆಯಲ್ಲಿತ್ತು. ಚಂದ್ರಬಾಬು ನಾಯ್ಡು ಅವರ ಟಿಡಿಪಿ ಹಾಗೂ ನಿತೀಶ್ ಕುಮಾರ್ ಅವರ ಜೆಡಿಯು ಕೂಡ ಇಂಡಿಯಾ ಒಕ್ಕೂಟದ ಜತೆಗೆ ಕೈಜೋಡಿಸಿದರೆ ಸರ್ಕಾರ ರಚಿಸುವ ಕನಸಿತ್ತು. ಆದರೆ, ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದಾರೆ. ನರೇಂದ್ರ ಮೋದಿ ಅವರೇ ನಾಯಕ ಎಂಬುದಾಗಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಇಂಡಿಯಾ ಒಕ್ಕೂಟವು ಅಧಿಕಾರದ ಆಸೆಯನ್ನು ಕೈಬಿಡುವಂತಾಗಿದೆ.
ಇನ್ನೂ ಓದಿ: HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!