ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದಕ್ಕೆ ಮಾಲ್ಡೀವ್ಸ್ ಸಚಿವರು ಉದ್ಧಟತನದ ಹೇಳಿಕೆ ಬಳಿಕ ಭಾರತದಲ್ಲಿ ಆರಂಭವಾಗಿದ್ದ ಬಾಯ್ಕಾಟ್ ಮಾಲ್ಡೀವ್ಸ್ (Boycott Maldives) ಅಭಿಯಾನವು ಸಫಲವಾಗಿದೆ. ಮೋದಿ ಭೇಟಿ ಕುರಿತಂತೆ ಭಾರತ ಹಾಗೂ ಮಾಲ್ಡೀವ್ಸ್ ಮಧ್ಯೆ ಬಿಕ್ಕಟ್ಟು ಉಂಟಾಗಿ, ಅಭಿಯಾನ (India Maldives Row) ಆರಂಭವಾದ ಬಳಿಕ ಮಾಲ್ಡೀವ್ಸ್‌ಗೆ ಭೇಟಿ ನೀಡುವ ಭಾರತೀಯರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಇದರಿಂದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ಕೊಡುಗೆ ನೀಡುವ ಅಗ್ರ ರಾಷ್ಟ್ರಗಳಲ್ಲಿ ಭಾರತವು ಅಗ್ರ ಸ್ಥಾನದಿಂದ 5ನೇ ಸ್ಥಾನಕ್ಕೆ ಕುಸಿದಿದೆ. ಇದರಿಂದ ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ಭಾರಿ ಪೆಟ್ಟು ಬಿದ್ದಿದೆ ಎಂದೇ ಹೇಳಲಾಗುತ್ತಿದೆ.
ಪ್ರಸಕ್ತ ವರ್ಷದ ಜನವರಿ 28ರವರೆಗಿನ ಮಾಹಿತಿಯಂತೆ ರಷ್ಯಾದ 18,561 ಪ್ರವಾಸಿಗರು ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದು, ಟಾಪ್ 5 ದೇಶಗಳಲ್ಲಿ ಮೊದಲನೇ ಸ್ಥಾನ ಪಡೆದಿದೆ. ಕಳೆದ ವರ್ಷ ರಷ್ಯಾ ಎರಡನೇ ಸ್ಥಾನ ಪಡೆದಿತ್ತು. ಇನ್ನು ಚೀನಾದ 16,529 ಜನ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದು, ಮೂರನೇ ಸ್ಥಾನದಲ್ಲಿದೆ. ಭಾರತದಿಂದ ಮಾಲ್ಡೀವ್ಸ್‌ಗೆ ತೆರಳುವವರ ಸಂಖ್ಯೆಯಲ್ಲಿ ಈ ಬಾರಿ ಗಣನೀಯವಾಗಿ ಕುಸಿದ ಕಾರಣ ರಷ್ಯಾ ಅಗ್ರ ಸ್ಥಾನ ಪಡೆದಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಆರಂಭದ ಬಳಿಕ ಅಪಾಯದ ಅರಿವಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು, ಹೆಚ್ಚಿನ ಪ್ರವಾಸಿಗರನ್ನು ಕಳುಹಿಸಿ ಎಂದು ಚೀನಾ ಎದುರು ಅಂಗಲಾಚಿದ್ದರು.
ಜನವರಿ 28ರವರೆಗೆ ಮಾಲ್ಡೀವ್ಸ್‌ಗೆ ಭೇಟಿ ನೀಡಿದವರು
ದೇಶ | ಭೇಟಿ ನೀಡಿದವರು | ಮಾರುಕಟ್ಟೆಗೆ ಕೊಡುಗೆ |
ರಷ್ಯಾ | 18,561 | 10.6% |
ಇಟಲಿ | 18,111 | 10.4% |
ಚೀನಾ | 16,529 | 9.5% |
ಬ್ರಿಟನ್ | 14,588 | 8.4% |
ಭಾರತ | 13,989 | 8.0% |
2023ರಲ್ಲಿ ಭಾರತವೇ ನಂಬರ್ 1
ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ.
India Falls to Fifth Place in Maldives Tourism Rankings, Down from First in 2023.
— Paurush Sharma (@paurushsh) January 30, 2024
Over the past three weeks, the Maldives has witnessed a marked change in its tourist demographics, with data from the country's tourism ministry indicating a substantial decrease in Indian… pic.twitter.com/JIkcOyCjPf
ಇದನ್ನೂ ಓದಿ: Mohamed Muizzu: ಮುಯಿಜು ಭಾರತ ವಿರೋಧಿ ನೀತಿಗೆ ಮಾಲ್ಡೀವ್ಸ್‌ನಲ್ಲೇ ಆಕ್ರೋಶ!
ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್ ಟ್ರಿಪ್ ಕ್ಯಾನ್ಸಲ್ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್ ಎದುರಿಸುತ್ತಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ