ನವ ದೆಹಲಿ : ದೇಶದಲ್ಲಿ ಕಳೆದ 3 ದಿನಗಳಿಂದ ಸೋಂಕಿತರ ಸಂಖ್ಯೆ ಇಳಿಕೆ ಕಾಣುತ್ತಿದ್ದು, ಕೊಂಚ ಸಮಾಧಾನ ತರಿಸಿದೆ. ಸೋಮವಾರ(ಜು.4) 13,135 ಕೊರೊನಾ ಪ್ರಕರಣಗಳು ದಾಖಲಾಗಿದ್ದವು. ಮಂಗಳವಾರ (ಜು.5) 13,086 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ.
ಪ್ರಸ್ತುತ ದೇಶದಲ್ಲಿ ಈವರೆಗೆ 1,14,475 ಸಕ್ರಿಯ ಪ್ರಕರಣಗಳಿದ್ದು, ಒಂದೇ ದಿನದಲ್ಲಿ 19 ಮಂದಿಗೆ ಕೊರೊನಾ ಮಹಾಮಾರಿಗೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 5,25,242 ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವ ಹೊತ್ತಿನಲ್ಲೇ ಗುಣಮುಖರಾದವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 12,456 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಈವರೆಗೂ ಕೊರೊನಾದಿಂದ 4,28,91,933 ಚೇತರಿಕೆ ಕಂಡಿದ್ದಾರೆ.
ದೆಹಲಿ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ರಾಜ್ಯಗಳಲ್ಲಿ ಕೊರೊನಾ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇದರ ಜೊತೆಗೆ ಸೋಂಕು ಹರಡುವಿಕೆಯನ್ಜು ನಿಯಂತ್ರಿಸಲು ಕೇಂದ್ರ ಸರ್ಕಾರ ಲಸಿಕೆ ಅಭಿಯಾನವನ್ನು ಹೆಚ್ಚಿಸುವಂತೆ ಸೂಚಿಸಿದೆ, ಹೀಗಾಗಿ ಸೋಂಕು ಹೆಚ್ಚಾಗಿರುವ ರಾಜ್ಯಗಳಲ್ಲಿ ಹಾಗೂ ಇತರೆ ರಾಜ್ಯಗಳಲ್ಲೂ ಲಸಿಕೆ ವಿತರಣೆ ಹೆಚ್ಚಿಸಲಾಗಿದೆ. ಒಂದೇ ದಿನದಲ್ಲಿ 11,44,805 ಮಂದಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗಿದೆ. ಒಟ್ಟಾರೆ ಈವರೆಗೂ 1,98,09,87,178 ಕೊರೊನಾ ಡೋಸ್ಗಳ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನು ಓದಿ| ಮುಂದುವರಿದ ಕೊರೊನಾ ಏರಿಳಿತ: ಕಳೆದ 24 ಗಂಟೆಯಲ್ಲಿ 16,135 ಕೇಸ್, 24 ಸಾವು