ನವದೆಹಲಿ: ದೇಶದಲ್ಲಿ ಕೊಂಚ ಇಳಿಕೆ ಕಂಡಿದ್ದ ಕೊರೊನಾ ಈಗ ಮತ್ತೆ ಏರುಗತಿಯನ್ನು ಕಂಡಿದೆ. ಕಳೆದ 24 ಗಂಟೆಯಲ್ಲೇ ಹೊಸದಾಗಿ 13,313 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಒಟ್ಟಾರೆ ದೇಶದಲ್ಲಿ ಸೋಂಕಿತರ ಸಂಖ್ಯೆ 4,33,44,958ಕ್ಕೆ ಏರಿದೆ. ನಿನ್ನೆ (ಬುಧವಾರ) 12,249 ಪ್ರಕರಣಗಳು ಪತ್ತೆಯಾಗಿದ್ದವು. ಇಂದು (ಗುರುವಾರ) ಒಂದು ಸಾವಿರ ಕೊರೊನಾ ಪ್ರಕರಣಗಳು ಏರಿಕೆಯಾಗಿದೆ.
ದೇಶದಲ್ಲಿ ಮತ್ತೆ 13,313 ಹೊಸ ಪ್ರಕರಣಗಳು ದಾಖಲಾಗಿರುವುದರಿಂದ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 83,990 ಕ್ಕೆ ಏರಿಕೆಯಾಗಿದೆ. ಅಲ್ಲದೆ ಒಂದೇ ದಿನದಲ್ಲಿ 38 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 5,24,941 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನು ಓದಿ| ಕೊರೊನಾ ಪ್ರಕರಣ ಮತ್ತೆ ಹೆಚ್ಚಳ, ದೇಶದಲ್ಲಿ12,249 ಮಂದಿಗೆ ಪಾಸಿಟಿವ್
ಕೇರಳ, ದೆಹಲಿ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಪ್ರತಿದಿನ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದೆ. ಹೀಗಾಗಿ ಲಸಿಕೆ ಅಭಿಯಾನ ಚುರುಕುಗೊಳಿಸಿದ್ದು, ಕಳೆದ 24 ಗಂಟೆಯಲ್ಲೇ 14,91,941 ಡೋಸ್ ವಿತರಣೆ ಮಾಡಲಾಗಿದೆ. ಒಟ್ಟಾರೆ 1,96,62,11,973 ಡೋಸ್ಗಳನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.