ನವ ದೆಹಲಿ: ದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕೊರೊನಾ ಇಳಿಕೆ ಗತಿಯಲ್ಲಿ ಸಾಗುತ್ತಿತ್ತು. ಆದರೆ, ಈಗ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಮಂಗಳವಾರ (ಜು.5) 13,086 ಕೊರೊನಾ ಕೇಸ್ಗಳು ಪತ್ತೆಯಾಗಿದ್ದರೆ, ಬುಧವಾರ (ಜು.6) 16,159 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 43,547,809ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 1,15,212 ಸಕ್ರಿಯ ಪ್ರಕರಣಗಳಿದ್ದು, ಒಂದೇ ದಿನದಲ್ಲಿ ಮಹಾಮಾರಿ ಸೋಂಕಿಗೆ 28 ಮಂದಿ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 5,25,270ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನು ಓದಿ| ಇಳಿಕೆ ಗತಿಯಲ್ಲಿ ಕೊರೊನಾ ಸೋಂಕು, ಕಳೆದ 24 ಗಂಟೆಯಲ್ಲಿ 13,086 ಮಂದಿಗೆ ಪಾಸಿಟಿವ್
ದೇಶದಲ್ಲಿ ಈ ಐದು ರಾಜ್ಯಗಳಲ್ಲೇ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ಒಟ್ಟಾರೆ 69.15% ಸೋಂಕು ಈ ರಾಜ್ಯದಲ್ಲಿ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ (3,098), ತಮಿಳುನಾಡು (2,662), ಕೇರಳ (2,603), ಪಶ್ಚಿಮ ಬಂಗಾಳ (1,973) ಮತ್ತು ಕರ್ನಾಟಕದಲ್ಲಿ (839) ಕೊರೊನಾ ಕೇಸ್ಗಳು ಪತ್ತೆಯಾಗುತ್ತಿದೆ. ಹೀಗಾಗಿ ಈ ರಾಜ್ಯಗಳಲ್ಲಿ ಸೋಂಕು ನಿಯಂತ್ರಿಸುವಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
ದೇಶದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಗುಣಮುಖರಾದವರ ಸಂಖ್ಯೆ ಕೂಡ ಏರಿಕೆಯಾಗುತ್ತಿದ್ದು, ಕೊಂಚ ಸಮಾಧಾನ ತರಿಸಿದೆ. ಕಳೆದ ಒಂದೇ ದಿನದಲ್ಲಿ 15,394 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಒಟ್ಟಾರೆ ಚೇತರಿಕೆ ಕಂಡವರ ಸಂಖ್ಯೆ 42,907,327ಕ್ಕೆ ಏರಿದೆ. ಇನ್ನು ಕಳೆದ 24 ಗಂಟೆಯಲ್ಲಿ 9,95,810 ಕೊರೊನಾ ಲಸಿಕೆಯನ್ನು ವಿತರಣೆ ಮಾಡಲಾಗಿದ್ದು, ಈವರೆಗೂ 1,98,20,86,763 ಕೊರೊನಾ ಡೋಸ್ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶ ತಿಳಿಸಿದೆ.
ಇದನ್ನು ಓದಿ| ಮುಂದುವರಿದ ಕೊರೊನಾ ಏರಿಳಿತ: ಕಳೆದ 24 ಗಂಟೆಯಲ್ಲಿ 16,135 ಕೇಸ್, 24 ಸಾವು