ನವ ದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಏರಿಳಿಕೆ ಮುಂದುವರಿದೆ. ಭಾನುವಾರ (ಜು.10) 18,247 ಕೊರೊನಾ ಕೇಸ್ಗಳು ಪತ್ತೆಯಾಗಿದ್ದರೆ, ಸೋಮವಾರ (ಜು.11) ಹೊಸದಾಗಿ 16,678 ಮಂದಿಗೆ ಸೋಂಕು ತಗುಲಿದೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,36,22,651ಕ್ಕೆ ಏರಿದೆ.
ಪ್ರಸ್ತುತ ದೇಶದಲ್ಲಿ 1,30,713 ಸಕ್ರಿಯ ಪ್ರಕರಣಗಳಿದ್ದು, ಒಂದೇ ದಿನದಲ್ಲಿ ಮಹಾಮಾರಿ ಸೋಂಕಿಗೆ 26 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ 5,25,428 ಕ್ಕೆ ಏರಿಕೆಯಾಗಿದೆ. ಪ್ರತಿದಿನ 4.22% ಪಾಸಿಟಿವಿಟಿ ರೇಟ್ ಹೆಚ್ಚಳವಾಗುತ್ತಿದ್ದು, ವಾರದ ಪಾಸಿಟಿವಿಟಿ ರೇಟ್ 4.08% ಏರಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 14,629 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ 4,29,83,162 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೆಹಲಿ, ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳದಲ್ಲಿ ಪ್ರತಿನಿತ್ಯ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು, ಸೋಂಕು ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಈ ರಾಜ್ಯಗಳಿಗೆ ಸೂಚನೆ ನೀಡಿದೆ. ಜತೆಗೆ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲಾಗಿದ್ದು, ಒಂದೇ ದಿನದಲ್ಲಿ 11,44,145 ಕೊರೊನಾ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಒಟ್ಟಾರೆ. ದೇಶದಲ್ಲಿ ಈವರೆಗೂ 1,98,88,77,537 ಮಂದಿಗೆ ಕೊರೊನಾ ಡೋಸ್ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನು ಓದಿ| ಮುಂದುವರಿದ ಕೊರೊನಾ ಅಬ್ಬರ: ಹೊಸದಾಗಿ 18,840 ಕೇಸ್ ಪತ್ತೆ, 43 ಮಂದಿ ಸಾವು