Site icon Vistara News

India-Maldives: ಮೇ 10ರೊಳಗೆ ಮಾಲ್ಡೀವ್ಸ್‌ನಿಂದ ಭಾರತ ಸೇನಾ ಸಿಬ್ಬಂದಿ ತವರಿಗೆ ವಾಪಸ್!

India-Maldives pact, Indian Army will return home from Maldives by May 10

ನವದೆಹಲಿ: ಅಧ್ಯಕ್ಷ ಮೊಹಮ್ಮದ್ ಮುಯಿಜು ( President mohamed muizzu) ಅವರ ಮಾಲ್ಡೀವ್ಸ್‌ನಿಂದ ಭಾರತವು (India-Maldives) ತನ್ನ ಸೇನಾ ತುಕಡಿಯನ್ನು ವಾಪಸ್‌ ಕರೆಯಿಸಿಕೊಳ್ಳಬೇಕು (Indian Army) ಎಂದು ಒತ್ತಾಯಿಸುತ್ತಲೇ ಇದ್ದರು. ಅದಕ್ಕೀಗ ಕಾಲ ಕೂಡಿ ಬಂದಿದೆ. ಸೋಮವಾರ ನಡೆದ ಭಾರತ ಮತ್ತು ಮಾಲ್ಡೀವ್ಸ್ ಮಾತುಕತೆ ವೇಳೆ, ಪ್ರಸಕ್ತ ಸಾಲಿನ ಮೇ 24ರೊಳಗೆ ಭಾರತವು ಮಾಲ್ಡೀವ್ಸ್‌ನಿಂದ ತನ್ನ ಸೇನಾ ಸಿಬ್ಬಂದಿಯನ್ನು ವಾಪಸ್ ಕರೆಯಿಸಿಕೊಳ್ಳುವುದಾಗಿ ಹೇಳಿದೆ. ಆದರೆ ಭಾರತವು ಮಾತ್ರವು, ಸೇನಾ ಬದಲಾವಣೆ ಇಲ್ಲದೇ ಉಭಯ ರಾಷ್ಟ್ರಗಳ ನಡುವಿನ ಬಿಕ್ಕಟ್ಟುಗಳನ್ನು ಸೌಹಾರ್ದಯುತವಾಗಿ ಬಗೆ ಹರಿಸಿಕೊಳ್ಳಲು ಒಪ್ಪಿಕೊಳ್ಳಲಾಗಿದೆ ಎಂದು ಹೇಳಿದೆ.

ಭಾರತ ಸರ್ಕಾರವು, 2024 ಮಾರ್ಚ್ 10ರೊಳಗೆ ಮೂರು ವಾಯುಯಾನ ವೇದಿಕೆಗಳಲ್ಲಿ ಒಂದರಲ್ಲಿ ಮಿಲಿಟರಿ ಸಿಬ್ಬಂದಿಯನ್ನು ಬದಲಾಯಿಸಲಿದೆ ಮತ್ತು ಮೇ 10ರೊಳಗೆ ಇತರ ಎರಡು ಪ್ಲಾಟ್‌ಫಾರ್ಮ್‌ಗಳಲ್ಲಿ ಮಿಲಿಟರಿ ಸಿಬ್ಬಂದಿಯನ್ನು ವಾಪಸ್ ಕರೆಯಿಸಿಕೊಳ್ಳಲಿದೆ. ಈ ಬಗ್ಗೆ ಮಾಲ್ಡೀವ್ಸ್ ಮತ್ತು ಭಾರತವು ಒಂದು ಒಪ್ಪಂದಕ್ಕೆ ಬಂದಿವೆ. ಫೆಬ್ರುವರಿ ಕೊನೆಯ ವಾರದಲ್ಲಿ ಪರಸ್ಪರ ಒಪ್ಪುವ ದಿನಾಂಕದಂದು ಉನ್ನತ ಮಟ್ಟದ ಕೋರ್ ಗ್ರೂಪ್‌ನ ಮೂರನೇ ಸಭೆಯನ್ನು ಮಾಲೆಯಲ್ಲಿ ನಡೆಸಲು ಉಭಯ ರಾಷ್ಟ್ರಗಳು ಒಪ್ಪಿಗೆ ಸೂಚಿಸಿದವು ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವಾಲಯವು ತಿಳಿಸಿದೆ.

ರಾಷ್ಟ್ರ ರಾಜಧಾನಿ ನಡೆಯಲ್ಲಿ ನಡೆದ ಸಭೆಯಲ್ಲಿ, ನಡೆಯುತ್ತಿರುವ ಅಭಿವೃದ್ಧಿ ಸಹಕಾರ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸುವುದು ಸೇರಿದಂತೆ ಪಾಲುದಾರಿಕೆಯನ್ನು ಹೆಚ್ಚಿಸುವ ಹಂತಗಳನ್ನು ಗುರುತಿಸುವ ನಿಟ್ಟಿನಲ್ಲಿ ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದ ವ್ಯಾಪಕ ವಿಷಯಗಳ ಕುರಿತು ಎರಡೂ ಕಡೆಯವರು ತಮ್ಮ ಚರ್ಚೆಗಳನ್ನು ಮುಂದುವರೆಸಿದರು ಎಂದು ಭಾರತೀಯ ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮಾಲ್ಡೀವ್ಸ್‌ನ ಜನರಿಗೆ ಮಾನವೀಯ ಮತ್ತು ಮೆಡ್ವಾಕ್ ಸೇವೆಗಳನ್ನು (ವೈದ್ಯಕೀಯ ಸ್ಥಳಾಂತರಿಸುವಿಕೆ) ಒದಗಿಸುವ ಭಾರತೀಯ ವಾಯುಯಾನ ವೇದಿಕೆಗಳ ನಿರಂತರ ಕಾರ್ಯಾಚರಣೆಯನ್ನು ಸಕ್ರಿಯಗೊಳಿಸಲು ಪರಸ್ಪರ ಕಾರ್ಯಸಾಧ್ಯವಾದ ಪರಿಹಾರಗಳನ್ನು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ದ್ವೀಪಸಮೂಹದ ವಿಶಾಲವಾದ ಕಡಲ ಪ್ರದೇಶದಲ್ಲಿ ಗಸ್ತು ತಿರುಗಲು ಮೂರು ವಿಮಾನಗಳನ್ನು ನಿರ್ವಹಿಸಲು ಭಾರತವು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಸುಮಾರು 80 ಸೇನಾ ಸಿಬ್ಬಂದಿಯನ್ನು ಮಾಲ್ಡೀವ್ಸ್‌ನಲ್ಲಿ ಇರಿಸಿದೆ. ಚೀನಾ ಸ್ನೇಹಿತ ಎಂದು ಹೇಳಿಕೊಳ್ಳುವ ಮೊಹಮ್ಮದ್ ಮುಯಿಜು ಮಾಲ್ಡೀವ್ಸ್ ಅಧ್ಯಕ್ಷರಾಗುತ್ತಿದ್ದಂತೆ ಭಾರತವು ತನ್ನ ಸೇನಾ ಸಿಬ್ಬಂದಿಯನ್ನು ವಾಪಸ್ ಕರೆಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ಈ ಮಧ್ಯೆ, ಲಕ್ಷದ್ವೀಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ದ ಮಾಲ್ಡೀವ್ಸ್‌ ಸಚಿವರು ವೈಯಕ್ತಿಕ ನಿಂದನೆ ಮಾಡುವ ಮೂಲಕ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಘರ್ಷವೂ ಶುರುವಾಗಿತ್ತು.

ಈ ಸುದ್ದಿಯನ್ನೂ ಓದಿ: Maldives Tourism: ಮಾಲ್ಡೀವ್ಸ್‌ಗೆ ತೆರಳುವ ಭಾರತೀಯರ ಸಂಖ್ಯೆ ಕುಸಿತ; ಬಾಯ್ಕಾಟ್‌ ಪೆಟ್ಟು

Exit mobile version