ನವ ದೆಹಲಿ: ದೇಶದಲ್ಲಿ ಕೊರೊನಾ ಇಳಿಕೆ ಗತಿಯನ್ನು ತೋರಿಸಿದೆ. ಸೋಮವಾರ (ಜು.11) 16,678 ಕೊರೊನಾ ಕೇಸ್ಗಳು ಪತ್ತೆಯಾಗಿದ್ದವು. ಮಂಗಳವಾರ ಈ ಸಂಖ್ಯೆ 13,615ಕ್ಕೆ ಇಳಿದಿದೆ. ಕಳೆದ ನಾಲ್ಕು ದಿನಗಳಿಂದ ಹೊಸ ಸೋಂಕು ಇಳಿಮುಖವಾಗುತ್ತಿದೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ಈಗ 4,36,52,944 ಆಗಿದೆ.
ಪ್ರಸ್ತುತ ದೇಶದಲ್ಲಿ ಈವರೆಗೂ 1,31,043 ಸಕ್ರಿಯ ಪ್ರಕರಣಗಳಿವೆ. ಮಂಗಳವಾರ ಸೋಂಕಿಗೆ 20 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,25,474 ಕ್ಕೆ ಏರಿದೆ. ಒಟ್ಟಾರೆ ದೇಶಾದ್ಯಂತ 0.30% ರಷ್ಟು ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಸೋಂಕು ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಗುಣಮುಖರ ಸಂಖ್ಯೆ ಕೂಡ ಏರಿಕೆಯಾಗುತ್ತಿದ್ದು, ಸೋಮವಾರ ಒಂದೇ ದಿನದಲ್ಲಿ 13,265 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿನಿಂದ ಚೇತರಿಕೆ ಕಂಡವರ ಸಂಖ್ಯೆ 4,29,96,427 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೆಹಲಿ, ಕೇರಳ, ಪಶ್ಚಿಮ ಬಂಗಾಳ, ಕರ್ನಾಟಕ, ಮಹಾರಾಷ್ಟ್ರದಲ್ಲಿ ಸೋಂಕಿನ ಸಂಖ್ಯೆ ಹೆಚ್ಚಾಗಿದ್ದು, ಪ್ರತಿದಿನ 3.23% ರಷ್ಟು ಪಾಸಿಟಿವಿಟಿ ಏರಿಕೆ ಕಾಣುತ್ತಿದೆ. ಕಳೆದ ಒಂದೇ ದಿನದಲ್ಲಿ 10,64,038 ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದ್ದು, ಈವರೆಗೂ 1,99,00,59,536 ಜನರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನು ಓದಿ| ಮುಂದುವರಿದ ಕೊರೊನಾ ಅಬ್ಬರ: ಹೊಸದಾಗಿ 18,840 ಕೇಸ್ ಪತ್ತೆ, 43 ಮಂದಿ ಸಾವು