ನವದೆಹಲಿ: ದೇಶದಲ್ಲಿ ಕೊರೊನಾ ಮತ್ತೆ ಏರಿಕೆ ಕಂಡಿದ್ದು, ಬುಧವಾರ (ಜೂ.29) 14,506 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮಂಗಳವಾರ (ಜೂ.28) 11,793 ಕೇಸುಗಳಿದ್ದವು. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,34,33,345 ಕ್ಕೆ ಏರಿದೆ.
ಸದ್ಯ ದೇಶದಲ್ಲಿ ಈವರೆಗೆ 99,602 ಸಕ್ರಿಯ ಪ್ರಕರಣಗಳಿದ್ದು, ಒಂದೇ ದಿನದಲ್ಲಿ ಮಹಾಮಾರಿ ಸೋಂಕಿಗೆ 30 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 5,25,077 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನು ಓದಿ| ದೇಶದಲ್ಲಿ ಮತ್ತೆ ಕೊರೊನಾ ಆರ್ಭಟ: 24 ಗಂಟೆಯಲ್ಲಿ17,073 ಹೊಸ ಕೇಸ್ಗಳು ಪತ್ತೆ, 21 ಜನರು ಸಾವು
ದೇಶದಲ್ಲಿ ಒಟ್ಟಾರೆ ಪಾಸಿಟಿವಿಟಿ ದರ 0.23% ರಷ್ಟು ಇದ್ದು, ಸೋಂಕಿನಿಂದ ಗುಣಮುಖರಾದವರ ಪಾಸಿಟಿವಿಟಿ ದರ 98.56% ಕ್ಕೆ ಏರಿಕೆಯಾಗಿದೆ. ಸದ್ಯ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹೊತ್ತಲ್ಲೇ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವುದು ಕೊಂಚ ಸಮಾಧಾನ ತರಿಸಿದೆ.
ದೆಹಲಿ, ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಈ ರಾಜ್ಯಗಳಲ್ಲಿ ಸೋಂಕು ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಜೊತೆಗೆ ಲಸಿಕೆ ಅಭಿಯಾನ ಕೂಡ ಚುರುಕುಗೊಳಿಸಿದ್ದು, ಒಂದೇ ದಿನ 13,44,788 ಡೋಸ್ಗಳ ವಿತರಣೆ ಮಾಡಲಾಗಿದೆ. ಒಟ್ಟಾರೆ ದೇಶಾದ್ಯಂತ ಈವರೆಗೂ 1,97,46,57,138 ಕೊರೊನಾ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನು ಓದಿ| ಕೊರೊನಾ ಕೇಸು ನಿನ್ನೆಗಿಂತ ಇಂದು ಕಡಿಮೆ: 24 ಗಂಟೆಯಲ್ಲಿ 15,940 ಪ್ರಕರಣ ದಾಖಲು