ನವ ದೆಹಲಿ: ದೇಶದಲ್ಲಿ ಕೊರೊನಾ ಏರಿಳಿತ ಮುಂದುವರಿದಿದೆ. ಸೋಮವಾರ 17,073 ಕೊರೊನಾ ಪ್ರಕರಣಗಳು ದಾಖಲಾಗಿದ್ದರೆ ಮಂಗಳವಾರ (ಜೂ.28) ಹೊಸ ಸೋಂಕಿತರ ಸಂಖ್ಯೆ 11,793ಕ್ಕೆ ಇಳಿದಿದೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,34,18,839 ಕ್ಕೆ ಏರಿಕೆಯಾಗಿದೆ.
ಇದನ್ನು ಓದಿ| ಕೊರೊನಾ ಕೇಸು ನಿನ್ನೆಗಿಂತ ಇಂದು ಕಡಿಮೆ: 24 ಗಂಟೆಯಲ್ಲಿ 15,940 ಪ್ರಕರಣ ದಾಖಲು
ಸದ್ಯ ದೇಶದಲ್ಲಿ ಈವರೆಗೆ 96,700 ಸಕ್ರಿಯ ಪ್ರಕರಣಗಳಿದ್ದು, ಒಂದೇ ದಿನದಲ್ಲಿ 27 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾದಿಂದ ಸಾವನ್ನಪ್ಪಿದ್ದವರ ಸಂಖ್ಯೆ 5,25,047ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಒಟ್ಟಾರೆ ಪಾಸಿಟಿವಿಟಿ ದರ 0.21% ರಷ್ಟು ಇದ್ದು, ಸೋಂಕಿನಿಂದ ಗುಣಮುಖರಾದವರ ದರ 98.58%ಕ್ಕೆ ಏರಿದೆ. ನಿತ್ಯ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಎಲ್ಲಾ ರಾಜ್ಯಗಳಲ್ಲೂ ಕೊರೊನಾ ಪರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಕೇರಳ, ದೆಹಲಿ, ಮಹಾರಾಷ್ಟ್ರ, ಕರ್ನಾಟಕದಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ಹೀಗಾಗಿ ಈ ರಾಜ್ಯಗಳಲ್ಲಿ ವ್ಯಾಕ್ಸಿನೇಷನ್ ಪ್ರಗತಿಯನ್ನು ಹೆಚ್ಚಿಸಲಾಗಿದೆ. ಈಗಾಗಲೇ ದೇಶಾದ್ಯಂತ 197.31 ಕೋಟಿ ಕೊರೊನಾ ಲಸಿಕೆಗಳನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನು ಓದಿ| ದೇಶದಲ್ಲಿ ಮತ್ತೆ ಕೊರೊನಾ ಆರ್ಭಟ: 24 ಗಂಟೆಯಲ್ಲಿ17,073 ಹೊಸ ಕೇಸ್ಗಳು ಪತ್ತೆ, 21 ಜನರು ಸಾವು