ನವ ದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಏರಿಳಿತ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ 15,528 ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಮವಾರ (ಜು.18) 16,935 ಕೊರೊನಾ ಕೇಸ್ ದಾಖಲಾಗಿತ್ತು. ಮಂಗಳವಾರ (ಜು.19) ಕೊಂಚ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4,37,83,062ಕ್ಕೆ ಏರಿದೆ
ನಿನ್ನೆಗಿಂತ ಇಂದು (ಮಂಗಳವಾರ) 610 ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಒಟ್ಟಾರೆ ದೇಶದಲ್ಲಿ 1,43,654 ಸಕ್ರಿಯ ಪ್ರಕರಣಗಳಿವೆ. ಮಂಗಳವಾರಕ್ಕೆ ಅನ್ವಯವಾಗುವಂತೆ ಒಂದೇ ದಿನ ಮಹಾಮಾರಿ ಸೋಂಕಿಗೆ 25 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 5,25,785ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 16,113 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಸೋಂಕಿನಿಂದ ಈವರೆಗೂ ಶೇಕಡಾ 98.47 ಜನರು ಚೇತರಿಕೆ ಕಂಡಿದ್ದಾರೆ. ಪ್ರತಿದಿನ ಪಾಸಿಟಿವಿಟಿ ದರ 3,.32 ದಾಖಲಾಗುತ್ತಿದ್ದು, ವಾರದ ಪಾಸಿಟಿವಿಟಿ ದರ 4.57 ರಷ್ಟು ತಲುಪಿದೆ. ಹೀಗಾಗಿ ದೇಶಾದ್ಯಂತ ಕೊರೊನಾ ಲಸಿಕಾ ಅಭಿಯಾನ ಚುರುಕುಗೊಳಿಸಿದ್ದು, ಒಟ್ಟಾರೆ ಈವರೆಗೂ 200.33 ಕೋಟಿ ಕೊರೊನಾ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನು ಓದಿ| ಕಳೆದ 24 ಗಂಟೆಯಲ್ಲಿ ಹೊಸದಾಗಿ 20,044 ಮಂದಿಗೆ ಕೊರೊನಾ ಸೋಂಕು