ನವ ದೆಹಲಿ: ದೇಶದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ 20,044 ಪ್ರಕರಣಗಳು ವರದಿಯಾಗಿವೆ. ೫೬ ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರ (ಜು.15) 20,038 ಕೊರೊನಾ ಪ್ರಕರಣಗಳು ದಾಖಲಾಗಿದ್ದವು.
ಶನಿವಾರ 18,301 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ ದೇಶದಲ್ಲಿ 1,40,760 ಸಕ್ರಿಯ ಪ್ರಕರಣಗಳಿವೆ. ಈ ಮೂಲಕ ಒಟ್ಟಾರೆ ದೇಶದಲ್ಲಿ ಕೊರೊನಾದಿಂದ ಚೇತರಿಕೆಯಾದವರ ಸಂಖ್ಯೆ 4,30,63,651ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಲಸಿಕಾ ಅಭಿಯಾನವನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದೆ. ಅದರಂತೆ ಕೊರೊನಾ ಲಸಿಕೆ ಹಾಗೂ ಬೂಸ್ಟರ್ ಡೋಸ್ ಕೂಡ ನೀಡಲಾಗುತ್ತಿದೆ. ಕೇರಳ, ಮಹಾರಾಷ್ಟ್ರ, ಗುಜರಾತ್, ಪಶ್ಚಿಮ ಬಂಗಾಳ, ಅಸ್ಸಾಂ, ಕರ್ನಾಟಕ, ಪಂಜಾಬ್, ಸಿಕ್ಕಿಂ, ತಮಿಳುನಾಡು, ಉತ್ತರಾಖಂಡದಲ್ಲಿ ಕೊರೊನಾ ಕೇಸ್ಗಳು ಹೆಚ್ಚಾಗಿದ್ದು, ಈ ರಾಜ್ಯಗಳು ಸೋಂಕು ಹೆಣಗಾಡುತ್ತಿದ್ದು, ಮಾಸ್ಕ್, ಸಾಮಾಜಿಕ ಅಂತರ ಹಾಗೂ ಲಸಿಕೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಿದೆ. ಒಟ್ಟಾರೆ ಈವರೆಗೂ ದೇಶಾದ್ಯಂತ 199.71 ಕೋಟಿ ಕೊರೊನಾ ಡೋಸ್ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನು ಓದಿ| ಕೊರೊನಾ ಇಳಿಮುಖ: 24 ಗಂಟೆಯಲ್ಲಿ 13,615 ಕೇಸ್, ಸಾವಿನ ಸಂಖ್ಯೆ 20