ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಪುನರ್ವಿಂಗಡಣೆಯನ್ನು (delimitation) ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಸೋಮವಾರ ತಳ್ಳಿಹಾಕಿದೆ.
ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹಾಗೂ ಎ ಎಸ್ ಒಕ್ ಅವರಿದ್ದ ಪೀಠವ ಅರ್ಜಿಯ ವಿಚಾರಣೆ ನಡೆಸಿ, “ಈ ತೀರ್ಪಿನಲ್ಲಿ ಯಾವುದನ್ನೂ ಆರ್ಟಿಕಲ್ 370 ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಲು ಅಸಹಜತೆಯನ್ನು ನೀಡುವಂತೆ ಅರ್ಥೈಸಲಾಗುವುದಿಲ್ಲ. ಈಗಾಗಲೇ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ರದ್ದು ಹಾಗೂ ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸಿ, ಜಮ್ಮು-ಕಾಶ್ಮೀರ ಹಾಗೂ ಲಡಾಕ್ ಕೇಂದ್ರಾಡಳಿತ ಪ್ರದೇಶಗಳಾಗಿ ರಚಿಸಿದ್ದರ ಸಂಬಂಧ ಪ್ರತ್ಯೇಕ ವಿಚಾರಣೆಯನ್ನು ಮಾಡಲಾಗುತ್ತಿದೆ. ಹಾಗಾಗಿ, ಈ ಅರ್ಜಿ ವಿಚಾರಣೆ ಪ್ರಸ್ತುತವಾಗುವುದಿಲ್ಲ ಎಂದು ಪೀಠ ಹೇಳಿತು.
ಇದನ್ನೂ ಓದಿ: Supreme Court: ಸುಪ್ರೀಂ ಕೋರ್ಟ್ ಜಡ್ಜ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಕನ್ನಡಿಗ ನ್ಯಾ. ಅರವಿಂದ್ ಕುಮಾರ್
ಪುನರ್ಸಂಘಟನೆ ಕಾಯ್ದೆಯ ವಿಷಯವು ಈ ನ್ಯಾಯಾಲಯದ ಮುಂದೆ ಬಾಕಿ ಇದೆ. ಮತ್ತು ಅದರ ಅರ್ಹತೆಯ ಬಗ್ಗೆ ನಾವು ಏನನ್ನೂ ಹೇಳಿಲ್ಲ. ಇಲ್ಲದಿದ್ದರೆ ಅರ್ಜಿಯನ್ನು ವಜಾಗೊಳಿಸಲಾಗುತ್ತದೆ ಎಂದು ಪೀಠವು ಅರ್ಜಿದಾರರಿಗೆ ತಿಳಿಸಿತು. ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರವು, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಕ್ಷೇತ್ರಗಳ ಪುನರ್ವಿಂಗಡಣೆಯನ್ನು 2026ವರೆಗೆ ಕಾಯಲಾಗುವುದಿಲ್ಲ. ಯಾಕೆಂದರೆ, ಕೂಡಲೇ ಈ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ಚಾಲನೆ ನೀಡಬೇಕಾಗಿದೆ ಎಂದು ಹೇಳಿತ್ತು.