ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಸುಮಾರು 26 ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟ ರಚಿಸಿವೆ. ಎನ್‌ಡಿಎ ಕೂಡ ಮೈತ್ರಿಪಕ್ಷಗಳ ಒಗ್ಗಟ್ಟು, ಪ್ರಧಾನಿ ನರೇಂದ್ರ ಮೋದಿ (Narendra Modi) ವರ್ಚಸ್ಸು, ಅಭಿವೃದ್ಧಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು ಸೇರಿ ಹಲವು ದಿಸೆಯಲ್ಲಿ ರಣತಂತ್ರ ರೂಪಿಸುತ್ತಿದೆ. ಇದರ ಬೆನ್ನಲ್ಲೇ, ಈಗ ಚುನಾವಣೆ ನಡೆದರೂ ಯಾವ ಒಕ್ಕೂಟ ಎಷ್ಟು ಸ್ಥಾನ ಗಳಿಸುತ್ತದೆ ಎಂಬ ಕುರಿತು 282 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ (India TV-CNX Opinion Poll) ನಡೆಸಿದೆ. 282 ಕ್ಷೇತ್ರಗಳಿಗೆ ಈಗ ಚುನಾವಣೆ ನಡೆದರೂ ಬಿಜೆಪಿ ನೇತೃತ್ವದ ಎನ್‌ಡಿಎ 118 ಕ್ಷೇತ್ರ ಹಾಗೂ ಇಂಡಿಯಾ ಒಕ್ಕೂಟ 110 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.
ಕರ್ನಾಟಕ ಸೇರಿ ಹಲವು ರಾಜ್ಯಗಳ 54,250 ಮತದಾರರ ಅಭಿಪ್ರಾಯ ಸಂಗ್ರಹಿಸಿ, ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಕೇರಳ, ಅಸ್ಸಾಂ ಸೇರಿ 18 ರಾಜ್ಯಗಳ 282 ಕ್ಷೇತ್ರಗಳ ಸಮೀಕ್ಷಾ ವರದಿ ಪ್ರಕಟಿಸಿದೆ. ಪ್ರಾದೇಶಿಕ ಪಕ್ಷಗಳಾದ ಬಿಜು ಜನತಾ ದಳ (BJD), ಭಾರತ್ ರಾಷ್ಟ್ರ ಸಮಿತಿ (BRS) ಹಾಗೂ ವೈಎಸ್‌ಆರ್‌ಸಿಪಿ ಪಕ್ಷಗಳು 282 ಕ್ಷೇತ್ರಗಳ ಪೈಕಿ 54 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿವೆ ಎಂದು ತಿಳಿಸಿದೆ. ಉತ್ತರ ಪ್ರದೇಶದಲ್ಲಿ ಸಮೀಕ್ಷೆ ನಡೆಸಿಲ್ಲ.
India TV-CNX opinion poll predicts BJP pain in West Bengal
— The Raisina Hills (@theraisinahills) October 5, 2023
LINK: https://t.co/Qa3iTK70EH#Elections2024 #OpinionPoll #NarendraModi #BJP pic.twitter.com/nS8skTBx9L
ಕರ್ನಾಟಕದಲ್ಲಿ ಏನಾಗುತ್ತದೆ?
ಕರ್ನಾಟಕದಲ್ಲಿ ಈಗ ಚುನಾವಣೆ ನಡೆದರೂ ಬಿಜೆಪಿಯು 16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ. ಕಾಂಗ್ರೆಸ್ 10, ಜೆಡಿಎಸ್ 2 ಕ್ಷೇತ್ರಗಳಲ್ಲಿ ಜಯ ತನ್ನದಾಗಿಸಿಕೊಳ್ಳಲಿದೆ. ಇನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 30 ಕ್ಷೇತ್ರಗಳಲ್ಲಿ, ತಮಿಳುನಾಡಿನಲ್ಲಿ ಡಿಎಂಕೆ 21, ಮಧ್ಯಪ್ರದೇಶದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಆದರೆ, ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.
ಇದನ್ನೂ ಓದಿ: India TV-CNX Opinion Poll: 3ನೇ ಅವಧಿಗೆ ಮೋದಿ ಪಿಎಂ! ‘ಇಂಡಿಯಾ’ಗಿಲ್ಲ ಲಕ್! ನೆಹರು ದಾಖಲೆ ಸರಿಗಟ್ಟಲಿರುವ ಮೋದಿ
ಇದಕ್ಕೂ ಮೊದಲಿನ ಸಮೀಕ್ಷೆ ಏನು ಹೇಳಿತ್ತು?
ಕೆಲ ತಿಂಗಳ ಹಿಂದೆಯೂ ಇಂಡಿಯಾ ಟವಿ-ಸಿಎನ್ಎಕ್ಸ್ ಸಮೀಕ್ಷೆ ಸಮೀಕ್ಷೆ ನಡೆಸಿತ್ತು. ಇಂದೇ ಲೋಕಸಭೆ ಚುನಾವಣೆ ನಡೆದರೆ, ಬಿಜೆಪಿ ನೇತೃತ್ವದ ಎನ್‌ಡಿಎ 318 ಹಾಗೂ ಪ್ರತಿಪಕ್ಷಗಳ ಕೂಟ ಇಂಡಿಯಾ 175 ಹಾಗೂ ಇತರರು 57 ಸ್ಥಾನಗಳನ್ನು ಗೆಲ್ಲಲಿದ್ದಾರೆ ಎಂದು ತಿಳಿಸಿತ್ತು.. ಸಮೀಕ್ಷೆಯ ಪ್ರಕಾರ, ಕರ್ನಾಟಕ, ಗುಜರಾತ್, ಗೋವಾ, ಉತ್ತರಾಖಂಡ, ಹಿಮಾಚಲಪ್ರದೇಶ, ಹರ್ಯಾಣ, ದೆಹಲಿ, ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್, ಈಶಾನ್ಯ ರಾಜ್ಯಗಳಲ್ಲಿ ಸ್ಪಷ್ಟ ಮುನ್ನಡೆಯನ್ನು ಕಾಯ್ದುಕೊಳ್ಳಲಿದೆ ಎಂದು ತಿಳಿದುಬಂದಿತ್ತು.