Air India: ಏರ್‌ ಇಂಡಿಯಾ ವಿಮಾನದಲ್ಲಿ ಧೂಮಪಾನ, ಗಲಾಟೆ; ಪ್ರಯಾಣಿಕನ ಕೈಕಾಲು ಕಟ್ಟಿ ಕೂರಿಸಿದ ಸಿಬ್ಬಂದಿ - Vistara News

ದೇಶ

Air India: ಏರ್‌ ಇಂಡಿಯಾ ವಿಮಾನದಲ್ಲಿ ಧೂಮಪಾನ, ಗಲಾಟೆ; ಪ್ರಯಾಣಿಕನ ಕೈಕಾಲು ಕಟ್ಟಿ ಕೂರಿಸಿದ ಸಿಬ್ಬಂದಿ

Air India: ವಿಮಾನದ ಸಿಬ್ಬಂದಿಯು ಸಿಗರೇಟ್‌ ಕಸಿದುಕೊಂಡ ಕಾರಣ ರಮಾಕಾಂತ್‌ ಕುಪಿತಗೊಂಡಿದ್ದಾನೆ. ಇದಾದ ಬಳಿಕ ಆತ ಜೋರಾಗಿ ಕಿರುಚಾಡಿದ್ದಾನೆ. ವಿಮಾನದ ಬಾಗಿಲು ತೆಗೆಯಲು ಯತ್ನಿಸಿದ್ದಾನೆ ಎಂದು ವಿಮಾನದ ಸಿಬ್ಬಂದಿ ತಿಳಿಸಿದ್ದಾರೆ.

VISTARANEWS.COM


on

Indian-origin man booked for smoking onboard London-Mumbai Air India flight
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಏರ್‌ ಇಂಡಿಯಾ ವಿಮಾನದಲ್ಲಿ ಕೆಲ ತಿಂಗಳ ಹಿಂದೆ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿ ಜೈಲು ಸೇರಿದ ಪ್ರಸಂಗ ದೇಶಾದ್ಯಂತ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಲಂಡನ್‌ನಿಂದ ಮುಂಬೈಗೆ ಆಗಮಿಸುತ್ತಿದ್ದ ಏರ್‌ ಇಂಡಿಯಾ (Air India) ವಿಮಾನದಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬ ಧೂಮಪಾನ ಮಾಡಿ, ಗಲಾಟೆ ನಡೆಸಿದ್ದಾನೆ. ಹಾಗಾಗಿ, ವಿಮಾನದ ಸಿಬ್ಬಂದಿಯು ಆತನ ಕೈಕಾಲು ಕಟ್ಟಿ ಸೀಟಿನಲ್ಲಿ ಕೂರಿಸಿದ್ದಾರೆ. ಹಾಗೆಯೇ, ಮುಂಬೈಗೆ ಆಗಮಿಸುತ್ತಲೇ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಾರ್ಚ್‌ 10ರಂದು ಲಂಡನ್‌ನಿಂದ ಮುಂಬೈಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಘಟನೆ ನಡೆದಿದೆ. ರಮಾಕಾಂತ್‌ ಎಂಬ 37 ವರ್ಷದ ವ್ಯಕ್ತಿಯು ವಿಮಾನ ಹಾರಾಟ ನಡೆಸುವಾಗಲೇ ಬಾತ್‌ರೂಮ್‌ಗೆ ತೆರಳಿದ್ದಾನೆ. ಅಲ್ಲಿ ಹೋಗಿ ಸಿಗರೇಟ್‌ ಸೇದಲು ಆರಂಭಿಸಿದ್ದಾನೆ. ಇದನ್ನು ಗಮನಿಸಿದ ಸಿಬ್ಬಂದಿಯು ಸಿಗರೇಟ್‌ ಬಿಸಾಕಿದ್ದಾರೆ. ಇದರಿಂದ ಕುಪಿತಗೊಂಡ ರಮಾಕಾಂತ್‌ ಗಲಾಟೆ ನಡೆಸಿದ್ದಾನೆ ಎಂದು ವಿಮಾನದ ಸಿಬ್ಬಂದಿ ತಿಳಿಸಿದ್ದಾರೆ.

ಸಿಗರೇಟ್‌ ಕಸಿದುಕೊಂಡ ಕಾರಣ ಪ್ರಯಾಣಿಕನು ಜೋರಾಗಿ ಕೂಗಿದ್ದಾನೆ. ವಿಮಾನದ ಬಾಗಿಲು ತೆಗೆಯಲು ಯತ್ನಿಸಿದ್ದಾನೆ. ಸಹ ಪ್ರಯಾಣಿಕರಿಗೂ ತೊಂದರೆ ಕೊಟ್ಟಿದ್ದಾನೆ. ಇದರಿಂದ ಬೇಸತ್ತ ಸಿಬ್ಬಂದಿಯು ಆತನ ಕೈಕಾಲು ಕಟ್ಟಿದ್ದಾರೆ. ಬಳಿಕ ಅತನನ್ನು ಪೊಲೀಸರಿಗೆ ಒಪ್ಪಿಸಿದ್ದು, ಪ್ರಕರಣ ದಾಖಲಾಗಿದೆ. ಭಾರತ ಮೂಲದ ರಮಾಕಾಂತ್‌, ಅಮೆರಿಕದಲ್ಲಿಯೇ ನೆಲೆಸಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Gold Smuggling : ಏರ್‌ ಇಂಡಿಯಾ ಸಿಬ್ಬಂದಿ ಕೈಗಳಲ್ಲಿತ್ತು 1.4 ಕೆ.ಜಿ. ಚಿನ್ನ! ಕೊಚ್ಚಿ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಸಿಬ್ಬಂದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

UPSC Result 2024: ಬಹು ನಿರೀಕ್ಷಿತ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ ಮೊದಲ ಸ್ಥಾನ ಪಡೆದಿದ್ದಾರೆ. ಓ ಮಧ್ಯೆ ತಮ್ಮ 12ನೇ ಪ್ರಯತ್ನದ ಹೊರತಾಗಿಯೂ ಆಯ್ಕೆಯಾಗದ ಕುನಾಲ್ ಆರ್. ವಿರುಲ್ಕರ್ ಎನ್ನುವವರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್‌ ವೈರಲ್‌ ಆಗಿದೆ.

VISTARANEWS.COM


on

UPSC Result 2024
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯ (UPSC Results 2023) ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ (Aditya Srivastava) ಅವರು ದೇಶದಲ್ಲೇ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ. ಆ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಇನ್ನು ಅನಿಮೇಶ್ ಪ್ರಧಾನ್ ಮತ್ತು ಡೊನೂರು ಅನನ್ಯಾ ರೆಡ್ಡಿ ಕ್ರಮವಾಗಿ ಎರಡು ಮತ್ತು ಮೂರನೇ ರ‍್ಯಾಂಕ್‌ ಪಡೆದಿದ್ದಾರೆ. ಈ ಮಧ್ಯೆ ಯುಪಿಎಸ್‌ಸಿ ಆಕಾಂಕ್ಷಿ ಕುನಾಲ್ ಆರ್. ವಿರುಲ್ಕರ್ (Kunal R Virulkar) ಎನ್ನುವವರು ತಮ್ಮ 12ನೇ ಪ್ರಯತ್ನದಲ್ಲಿಯೂ ಆಯ್ಕೆಯಾಗದ ವಿಚಾರವನ್ನು ತಿಳಿಸಿದ್ದಾರೆ. ತಮ್ಮ ಹೋರಾಟವನ್ನು ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್‌ ಆಗಿದೆ (Viral News).

“12 ಪ್ರಯತ್ನಗಳು, 7 ಮುಖ್ಯ ಪರೀಕ್ಷೆ, 5 ಸಂದರ್ಶನ. ಆದರೂ ಆಯ್ಕೆಯಾಗಲಿಲ್ಲ” ಎಂದು ಬರೆದುಕೊಂಡಿರುವ ವಿರುಲ್ಕರ್ ದೆಹಲಿಯ ಯುಪಿಎಸ್‌ಸಿ ಪ್ರಧಾನ ಕಚೇರಿಯ ಹೊರಗೆ ನಿಂತುಕೊಂಡಿರುವ ತಮ್ಮ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್‌ ವೈರಲ್‌

ಸದ್ಯ ವಿರುಲ್ಕರ್ ಅವರ ಪೋಸ್ಟ್‌ ಅನ್ನು 5 ಲಕ್ಷಕ್ಕಿಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ನೂರಾರು ಮಂದಿ ಪ್ರತಿಕ್ರಿಯಿಸಿ ಸಾಂತ್ವನ ಹೇಳಿದ್ದಾರೆ. ಹಲವು ಮಂದಿ ಇತರರ ಉದಾಹರಣೆ ನೀಡಿ ಸಮಾಧಾನ ಪಡಿಸಿದರೆ, ಇನ್ನು ಕೆಲವರು ಸ್ಫೂರ್ತಿದಾಯಕ ಕಥೆ ಹೇಳಿದ್ದಾರೆ. ಐಎಎಸ್ ಅಧಿಕಾರಿ ಅವನೀಶ್ ಶರಣ್ ಕಮೆಂಟ್‌ ಮಾಡಿ, ʼʼನಿಮ್ಮ ಬೆಂಬಲಕ್ಕೆ ನಾವೆಲ್ಲ ಇದ್ದೇವೆ. ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ. ಒಂದಲ್ಲ ಒಂದು ದಿನ ನಿಮ್ಮ ಪ್ರಯತ್ನದಲ್ಲಿ ಜಯ ಗಳಿಸುತ್ತೀರಿʼʼ ಎಂದು ಹೇಳಿದ್ದಾರೆ. “ಚಿಂತಿಸಬೇಡಿ. ಪ್ರಯತ್ನಿಸುತ್ತಲೇ ಇರಿ. ಮುಂದೊಂದು ದಿನ ನೀವು ನಿಮ್ಮ ಪ್ರಯತ್ನದಲ್ಲಿ ಯಶಸ್ವಿಯಾಗುತ್ತೀರಿ” ಎಂದು ಮತ್ತೊಬ್ಬರು ಹೇಳಿದ್ದಾರೆ. “ಇದು ನಿಮ್ಮ ಪ್ರಯತ್ನವನ್ನು, ಕಠಿಣ ಪ್ರರಿಶ್ರಮವನ್ನು ಎತ್ತಿ ಹಿಡಿಯುತ್ತದೆ. ನಿಮ್ಮ ವೃತ್ತಿ ಜೀವನಕ್ಕೆ ಶುಭ ಹಾರೈಕೆಗಳು” ಎಂದು ಇನ್ನೊಬ್ಬರು ತಿಳಿಸಿದ್ದಾರೆ. ಒಟ್ಟಿನಲ್ಲಿ ಬಹುತೇಕರು ವಿರುಲ್ಕರ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.

ಏತನ್ಮಧ್ಯೆ ಒಟ್ಟು 1,016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಮತ್ತು ಅವರನ್ನು ವಿವಿಧ ಕೇಂದ್ರ ಸರ್ಕಾರಿ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಯುಪಿಎಸ್‌ಸಿ ತಿಳಿಸಿದೆ. ಆದಾಗ್ಯೂ, ಶಿಫಾರಸು ಮಾಡಲಾದ 355 ಅಭ್ಯರ್ಥಿಗಳ ಉಮೇದುವಾರಿಕೆ ಹೆಚ್ಚಿನ ಪರಿಶೀಲನೆಗೆ ಬಾಕಿ ಉಳಿದಿದೆ. ಪ್ರತಿಷ್ಠಿತ ಪರೀಕ್ಷೆಯನ್ನು 2023ರ ಸೆಪ್ಟೆಂಬರ್ 15ರಿಂದ ಸೆಪ್ಟೆಂಬರ್ 24ರವರೆಗೆ ಎರಡು ಪಾಳಿಗಳಲ್ಲಿ ನಡೆಸಲಾಗಿತ್ತು. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು/ನೇಮಕಾತಿಗಳ ಕುರಿತು ಯಾವುದೇ ಮಾಹಿತಿ/ಸ್ಪಷ್ಟೀಕರಣವನ್ನು ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಖುದ್ದಾಗಿ ಭೇಟಿ ನೀಡಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆ 23385271/23381125/23098543ಕ್ಕೆ ಕರೆ ಮಾಡಬಹುದು.

ಇದನ್ನೂ ಓದಿ: UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ಫಲಿತಾಂಶವನ್ನು ಹೀಗೆ ಪರಿಶೀಲಿಸಿ

  • ನಿಮ್ಮ ಬ್ರೌಸರ್‌ನಲ್ಲಿ upsc.gov.in ತೆರೆಯಿರಿ
  • What’s New ಸೆಕ್ಷನ್‌ನ ಅಡಿಯಲ್ಲಿ ‘UPSC Civil Services Examination 2023 Final Results’ ಎಂಬುದರ ಮೇಲೆ ಕ್ಲಿಕ್ ಮಾಡಿ.
  • ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಪಿಡಿಎಫ್ ಮೂಲಕ ನೀಡಲಾಗಿದೆ. ಅದನ್ನು ಕ್ಲಿಕ್‌ ಮಾಡಿ.
Continue Reading

ಕ್ರೀಡೆ

Hardik Pandya : ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ; ಏನಿದು ಕೇಸ್​?

Hardik Pandya: ವೈಭವ್ ಪಾಂಡ್ಯ ಅವರ ಹಿಂದಿನ ರಿಮಾಂಡ್ ಅವಧಿ ಮುಗಿದ ನಂತರ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ವೈಭವ್ ಅವರ ಕಸ್ಟಡಿ ವಿಸ್ತರಿಸುವಂತೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ನ್ಯಾಯಾಲಯಕ್ಕೆ ಮನವಿ ಮಾಡಿದೆ. ವೈಭವ್ ಪರ ವಕೀಲ ನಿರಂಜನ್ ಮುಂಡರಗಿ ಅವರು ಇಒಡಬ್ಲ್ಯೂ ಮನವಿಯನ್ನು ವಿರೋಧಿಸದ ಕಾರಣ, ನ್ಯಾಯಾಲಯವು ಅವರ ಕಸ್ಟಡಿಯನ್ನು ಶುಕ್ರವಾರದವರೆಗೆ ವಿಸ್ತರಿಸಿತು.

VISTARANEWS.COM


on

Hardik Pandya
Koo

ನವದೆಹಲಿ: ಕ್ರಿಕೆಟಿಗ ಸಹೋದರರಾದ ಹಾರ್ದಿಕ್ ಹಾಗೂ ಕೃಣಾಲ್ ಪಾಂಡ್ಯ (Hardik Pandya) ಅವರಿಗೆ ಜಂಟಿ ವ್ಯವಹಾರ ಮಾಡುವ ನೆಪದಲ್ಲಿ 4 ಕೋಟಿ ರೂ.ಗಳನ್ನು ವಂಚಿಸಿದ ಅವರ ಮಲ ಸಹೋದರ ವೈಭವ್ ಪೊಲೀಸ್ ಕಸ್ಟಡಿಯನ್ನು ನ್ಯಾಯಾಲಯ ಮಂಗಳವಾರ ಏಪ್ರಿಲ್ 19 ರವರೆಗೆ ವಿಸ್ತರಿಸಿದೆ. ಆರೋಪಿ ವೈಭವ್ ಪಾಂಡ್ಯ ಅವರ ಹಿಂದಿನ ರಿಮಾಂಡ್ ಅವಧಿ ಮುಗಿದ ನಂತರ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ವೈಭವ್ ಅವರ ಕಸ್ಟಡಿ ವಿಸ್ತರಿಸುವಂತೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ನ್ಯಾಯಾಲಯಕ್ಕೆ ಮನವಿ ಮಾಡಿದೆ. ವೈಭವ್ ಪರ ವಕೀಲ ನಿರಂಜನ್ ಮುಂಡರಗಿ ಅವರು ಇಒಡಬ್ಲ್ಯೂ ಮನವಿಯನ್ನು ವಿರೋಧಿಸದ ಕಾರಣ, ನ್ಯಾಯಾಲಯವು ಅವರ ಕಸ್ಟಡಿಯನ್ನು ಶುಕ್ರವಾರದವರೆಗೆ ವಿಸ್ತರಿಸಿತು. ಕ್ರಿಕೆಟಿಗ ಸಹೋದರರಿಗೆ 4 ಕೋಟಿ ರೂ.ಗಿಂತ ಹೆಚ್ಚು ವಂಚಿಸಿದ ಆರೋಪದ ಮೇಲೆ 37 ವರ್ಷದ ವೈಭವ್ ಏಪ್ರಿಲ್ 8 ರಂದು ಬಂಧನಕ್ಕೆ ಒಳಗಾಗಿದ್ದ.

ಆರಂಭದಲ್ಲಿ ವೈಭವ್ ಅವರು ‘ಇದು ಕೌಟುಂಬಿಕ ವಿಷಯ. ತಪ್ಪು ತಿಳುವಳಿಕೆಯಿಂದಾಗಿ ಪ್ರಕರಣ ದಾಖಲಿಸಲಾಗಿದೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಕ್ರಿಕೆಟಿಗ ಸಹೋದರರು ವೈಭವ್ ಅವರೊಂದಿಗೆ ಮುಂಬೈನಲ್ಲಿ ಪಾಲುದಾರಿಕೆ ಆಧಾರಿತ ಸಂಸ್ಥೆಯನ್ನು ಸ್ಥಾಪಿಸಿದ್ದರು. 2021 ರಲ್ಲಿ ಅವರು ಪಾಲಿಮರ್ ವ್ಯವಹಾರವನ್ನು ಪ್ರಾರಂಭಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯಮದ ಪಾಲುದಾರಿಕೆಯ ನಿಯಮಗಳ ಪ್ರಕಾರ ಹಾರ್ದಿಕ್ ಹಾಗೂ ಕೃಣಾಳ್​ ತಲಾ 40 ಪ್ರತಿಶತದಷ್ಟು ಮತ್ತು ವೈಭವ್ ಉಳಿದ ಶೇಕಡಾ 20 ಮೊತ್ತವನ್ನು ಬಂಡವಾಳವನ್ನು ಹೂಡಿಕೆ ಮಾಡಿದ್ದ . ನಿಯಮಗಳ ಪ್ರಕಾರ, ವೈಭವ್ ವ್ಯವಹಾರದ ದೈನಂದಿನ ಕಾರ್ಯಾಚರಣೆಗಳನ್ನು ನಿರ್ವಹಿಸಬೇಕಾಗಿತ್ತು. ಲಾಭವನ್ನು ಹೂಡಿಕೆ ಅನುಪಾತದಲ್ಲಿ ವಿತರಿಸಬೇಕಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: T20 World Cup : ವಿಶ್ವ ಕಪ್​ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ನೋ ಚಾನ್ಸ್​; ಆಯ್ಕೆದಾರರ ಇಂಗಿತ ಬಹಿರಂಗ

ಆದರೆ ಪಾಂಡ್ಯ ಸಹೋದರರಿಗೆ ಮಾಹಿತಿ ನೀಡದೆ ವೈಭವ್ ಅದೇ ವ್ಯವಹಾರದಲ್ಲಿ ಮತ್ತೊಂದು ಸಂಸ್ಥೆಯನ್ನು ಸ್ಥಾಪಿಸಿದ್ದ. ಇದರಿಂದಾಗಿ ಪಾಲುದಾರಿಕೆ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹೊಸ ಕಂಪನಿ ಸ್ಥಾಪಿಸುವುದರೊಂದಿಗೆ, ಮೂಲ ಪಾಲುದಾರಿಕೆ ಸಂಸ್ಥೆಯ ಲಾಭವು ಕ್ಷೀಣಿಸಿ ಸುಮಾರು 3 ಕೋಟಿ ರೂ.ಗಳ ನಷ್ಟ ಎದುರಿಸಿತ್ತು.

ಈ ಅವಧಿಯಲ್ಲಿ, ವೈಭವ್ ತನ್ನ ಸ್ವಂತ ಲಾಭವನ್ನು ಶೇಕಡಾ 20 ರಿಂದ 33 ರಷ್ಟು ಹೆಚ್ಚಿಸಿ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರನಿಗೆ ನಷ್ಟವನ್ನುಂಟು ಮಾಡಿದ್ದ ವೈಭವ್ ಪಾಲುದಾರಿಕೆ ಖಾತೆಯಿಂದ ಹಣವನ್ನು ತನ್ನ ಸ್ವಂತಕ್ಕೆ ಬಳಸಿದ್ದ. ಇದು ಸುಮಾರು 1 ಕೋಟಿ ರೂಪಾಯಿ. ಹೀಗಾಗಿ ನಷ್ಟವಾದ 3 ಕೋಟಿ ಹಾಗೂ ದುರ್ಬಳಕೆ ಮಾಡಿಕೊಂಡ 1 ಕೋಟಿ ಸೇರಿ ನಾಲ್ಕು ಕೋಟಿ ರೂಪಾಯಿ ವಂಚನೆ ಪ್ರಕರಣ ಹೂಡಲಾಗಿತ್ತು.

Continue Reading

ದೇಶ

Lok Sabah Election : ಹೇಮಮಾಲಿನಿಗೆ ಅವಹೇಳನ; ಕಾಂಗ್ರೆಸ್​ ನಾಯಕ ಸುರ್ಜೇವಾಲಾಗೆ 48 ಗಂಟೆ ನಿಷೇಧ

Lok Sabah Election: ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ವಿಷಯದಲ್ಲಿ ಹೊರಡಿಸಲಾದ ಅಥವಾ ನಂತರ ಅವರಿಗೆ ನೀಡಿರುವ ಆದೇಶದಲ್ಲಿ ಯಾವುದೇ ಪೂರ್ವಾಗ್ರಹವಿಲ್ಲ. ಹರಿಯಾಣದಲ್ಲಿ ನಡೆದ ಚುನಾವಣಾ ಪ್ರಚಾರದ ಸಮಯದಲ್ಲಿ ಸುರ್ಜೇವಾಲಾ ನೀಡಿದ ಹೇಳಿಕೆಯನ್ನು ಆಯೋಗವು ಬಲವಾಗಿ ಖಂಡಿಸುತ್ತದೆ. ದುರ್ನಡತೆಗಾಗಿ ರಣದೀಪ್ ಸುರ್ಜೆವಾಲಾ ಅವರಿಗೆ ಛೀಮಾರಿ ಹಾಕಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಹಿನ್ನೆಲೆಯ (Lok Sabah Election) ಪ್ರಚಾರ ಸಭೆಯಲ್ಲಿ ಬಿಜೆಪಿ ನಾಯಕಿ ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ಹೇರಿದೆ. ಮಾಲಿನಿ ಬಗ್ಗೆ “ಅಮಾನವೀಯ, ಅನಾಗರಿಕ ಮತ್ತು ಅಶ್ಲೀಲ” ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಚುನಾವಣಾ ಆಯೋಗವು ಸುರ್ಜೆವಾಲಾ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ. ಸುರ್ಜೆವಾಲಾ ಅವರ ಉತ್ತರದಲ್ಲಿ ನೀಡಿದ ಹೇಳಿಕೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ವಿಷಯದಲ್ಲಿ ಹೊರಡಿಸಲಾದ ಅಥವಾ ನಂತರ ಅವರಿಗೆ ನೀಡಿರುವ ಆದೇಶದಲ್ಲಿ ಯಾವುದೇ ಪೂರ್ವಾಗ್ರಹವಿಲ್ಲ. ಹರಿಯಾಣದಲ್ಲಿ ನಡೆದ ಚುನಾವಣಾ ಪ್ರಚಾರದ ಸಮಯದಲ್ಲಿ ಸುರ್ಜೇವಾಲಾ ನೀಡಿದ ಹೇಳಿಕೆಯನ್ನು ಆಯೋಗವು ಬಲವಾಗಿ ಖಂಡಿಸುತ್ತದೆ. ದುರ್ನಡತೆಗಾಗಿ ರಣದೀಪ್ ಸುರ್ಜೆವಾಲಾ ಅವರಿಗೆ ಛೀಮಾರಿ ಹಾಕಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.

ಸಂವಿಧಾನದ 324 ನೇ ವಿಧಿ ಮತ್ತು ಈ ನಿಟ್ಟಿನಲ್ಲಿ ಇರುವ ಎಲ್ಲ ಅಧಿಕಾರಗಳ ಅಡಿಯಲ್ಲಿ, ಆಯೋಗವು ಏಪ್ರಿಲ್ 16 ರಂದು ಸಂಜೆ 6 ಗಂಟೆಯಿಂದ 48 ಗಂಟೆಗಳ ಕಾಲ ಸುರ್ಜೇವಾಲಾ ಅವರಿಗೆ ನಿಷೇಧ ಹೇರುತ್ತದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ಮೆರವಣಿಗೆಗಳು, ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಂದರ್ಶನಗಳು, ಮಾಧ್ಯಮಗಳಲ್ಲಿ ಸಾರ್ವಜನಿಕ ಹೇಳಿಕೆಗಳು (ಎಲೆಕ್ಟ್ರಾನಿಕ್, ಮುದ್ರಣ, ಸಾಮಾಜಿಕ ಮಾಧ್ಯಮ) ಇತ್ಯಾದಿಗಳನ್ನು ನಡೆಸುವಂತಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಈ ಹೇಳಿಕೆಗಳು “ಅತ್ಯಂತ ಅಮಾನವೀಯ, ಅಶ್ಲೀಲ ಮತ್ತು ಅನಾಗರಿಕ” ಮತ್ತು ಮೇಲ್ನೋಟಕ್ಕೆ ಮಾದರಿ ನೀತಿ ಸಂಹಿತೆಯ ನಿಬಂಧನೆಗಳ ಉಲ್ಲಂಘನೆಯಾಗಿದೆ. ಕಳೆದ ತಿಂಗಳು ಪಕ್ಷಗಳಿಗೆ ಚುನಾವಣಾ ಆಯೋಗ ನೀಡಿದ ಸಲಹೆಯನ್ನು ಇಲ್ಲಿ ಉಲ್ಲಂಘಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮೊದಲ ನಿಷೇಧ

ಈ ಲೋಕಸಭಾ ಚುನಾವಣಾ ಚಕ್ರದಲ್ಲಿ ಚುನಾವಣಾ ಆಯೋಗವು ವಿಧಿಸಿದ ಮೊದಲ ಪ್ರಚಾರ ನಿಷೇಧ ಇದಾಗಿದೆ. ಬಿಜೆಪಿಯನ್ನು ಟೀಕಿಸುವಾಗ ಸುರ್ಜೆವಾಲಾ ಅವರು ಹೇಮಾ ಮಾಲಿನಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಆ ವಿಡಿಯೊವನ್ನು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಹಂಚಿಕೊಂಡ ನಂತರ ಈ ವಿವಾದ ಉದ್ಭವಿಸಿದೆ.

ಸುರ್ಜೇವಾಲಾ ಅವರ ಹೇಳಿಕೆಯನ್ನು “ಅಶ್ಲೀಲ, ಲೈಂಗಿಕ ಮತ್ತು ಅವಮಾನಕರ” ಎಂದು ಖಂಡಿಸಿ ಬಿಜೆಪಿ ತಕ್ಷಣ ಚುನಾವಣಾ ಆಯೋಗಕ್ಕೆ ದೂರು ನೀಡಿತು. ಸುರ್ಜೆವಾಲಾ ತಮ್ಮನ್ನು ಸಮರ್ಥಿಸಿಕೊಂಡಿದ್ದು, ವೀಡಿಯೊವನ್ನು ನಕಲಿ ಮತ್ತು ತಿರುಚಲಾಗಿದೆ ಎಂದು ಹೇಳಿದ್ದಾರೆ. ಬಿಜೆಪಿ ಸಂಸದರನ್ನು ನೋಯಿಸುವ ಅಥವಾ ಅವಮಾನಿಸುವ ಉದ್ದೇಶ ನನಗಿಲ್ಲ ಎಂದು ಅವರು ಪ್ರತಿಪಾದಿಸಿದರು.

Continue Reading

ದೇಶ

Kanker Encounter: ಎನ್‌ಕೌಂಟರ್‌ನಲ್ಲಿ 18 ಮಾವೋವಾದಿಗಳ ಹತ್ಯೆಗೈದ ಭದ್ರತಾ ಪಡೆ

Kanker Encounter: ದೇಶದಲ್ಲಿ ಲೋಕದಭಾ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಭದ್ರತಾ ಸಿಬ್ಬಂದಿ 18 ಮಾವೋವಾದಿಗಳನ್ನು ಕೊಂದಿದ್ದಾರೆ. ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಿಎಸ್ಎಫ್ ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ ಕಂಕರ್‌ನ ಚೋಟೆಬೆಟಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಬಿನಗುಂಡ ಪ್ರದೇಶದಲ್ಲಿ ಈ ಜಂಟಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಮೂವರು ಭದ್ರತಾ ಪಡೆಯ ಸಿಬ್ಬಂದಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Kanker Encounter
Koo

ರಾಯ್‌ಪುರ: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ (Kanker Encounter)ನಲ್ಲಿ ಕನಿಷ್ಠ 18 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಗಡಿ ಭದ್ರತಾ ಪಡೆ ಮಂಗಳವಾರ ತಿಳಿಸಿದೆ. ಈ ವೇಳೆ ಮೂವರು ಭದ್ರತಾ ಪಡೆಯ ಸಿಬ್ಬಂದಿ ಗಾಯಗೊಂಡಿದ್ದಾರೆ.

ʼʼಗುಪ್ತಚರದ ಖಚಿತ ಮಾಹಿತಿಯ ಮೇರೆಗೆ ಬಿಎಸ್ಎಫ್ (BSF) ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ (DRG) ಕಂಕರ್‌ನ ಚೋಟೆಬೆಟಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಬಿನಗುಂಡ ಪ್ರದೇಶದಲ್ಲಿ ಈ ಜಂಟಿ ಕಾರ್ಯಾಚರಣೆ ನಡೆಸಿತುʼʼ ಎಂದು ಕೇಂದ್ರ ಪೊಲೀಸ್ ಪಡೆ ತಿಳಿಸಿದೆ. ಕಾರ್ಯಾಚರಣೆಯ ವೇಳೆ ಬಿಎಸ್ಎಫ್ ತಂಡವು ಸಿಪಿಐ ಮಾವೋವಾದಿಗಳಿಂದಲೂ ಭಾರೀ ಗುಂಡಿನ ದಾಳಿಯನ್ನು ಎದುರಿಸಬೇಕಾಯಿತು.

ಶಸ್ತ್ರಾಸ್ತ್ರ ವಶ

ಎನ್‌ಕೌಂಟರ್‌ ನಡೆದ ಸ್ಥಳದಿಂದ 18 ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್ಎಫ್ ತಿಳಿಸಿದೆ. ಕಾರ್ಯಾಚರಣೆಯ ಸ್ಥಳದಿಂದ ಏಳು ಎಕೆ ಸರಣಿ ರೈಫಲ್‌ಗಳು ಮತ್ತು ಮೂರು ಲೈಟ್ ಮೆಷಿನ್ ಗನ್‌ಗಳನ್ನೂ (LMGs) ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಗುಂಡಿನ ಚಕಮಕಿ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಕಂಕರ್ ಪೊಲೀಸ್ ವರಿಷ್ಠಾಧಿಕಾರಿ ಕಲ್ಯಾಣ್ ಎಲೆಸೆಲಾ ಮಾಹಿತಿ ನೀಡಿದ್ದಾರೆ. ಗಾಯಗೊಂಡ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಹತರಾದ ಮಾವೋವಾದಿಗಳ ಪೈಕಿ ಉನ್ನತ ನಕ್ಸಲ್ ನಾಯಕ ಶಂಕರ್ ರಾವ್ ಕೂಡ ಸೇರಿದ್ದಾನೆ. ಪೊಲೀಸ್ ಅಧಿಕಾರಿಗಳ ಪ್ರಕಾರ ಶಂಕರ್‌ ತಲೆಗೆ 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಛತ್ತೀಸ್‌ಗಢವು ಹಲವು ದಶಕಗಳಿಂದ ನಕ್ಸಲೈಟ್‌, ಮಾವೋವಾದಿಗಳ ಭೀತಿ ಎದುರಿಸುತ್ತಿದೆ. ವಿಶೇಷವಾಗಿ ಬಸ್ತಾರ್ ಪ್ರದೇಶವು ನಕ್ಸಲ್ ಚಟುವಟಿಕೆಗಳ ಕೇಂದ್ರ ಸ್ಥಾನವಾಗಿದೆ. ಇಲ್ಲಿ ಆಗಾಗ ಹಿಂಸಾಚಾರ ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್‌ ನಡೆಯುತ್ತಲೇ ಇರುತ್ತದೆ. ನಕ್ಸಲರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವುದು, ಸ್ಥಳೀಯ ಅಭಿವೃದ್ಧಿಗೆ ಆದ್ಯತೆ ನೀಡುವುದು ಮತ್ತು ಶರಣಾಗುವ ನಕ್ಸಲರಿಗೆ ಪುನರ್ವಸತಿ ಕಲ್ಪಸಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಆದಾಗ್ಯೂ ಈ ಪ್ರಯತ್ನಗಳ ಹೊರತಾಗಿಯೂ ರಾಜ್ಯದಲ್ಲಿ ನಕ್ಸಲ್ ಹಾವಳಿ ಮುಂದುವರಿದಿದೆ.

ಕೆಲವು ದಿನಗಳ ಹಿಂದೆ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ನಕ್ಸಲ್‌ ಸಾವನ್ನಪ್ಪಿದ್ದ. ಕೊಯಲಿಬೇಡಾ ಪೊಲೀಸ್ ಠಾಣೆ ವ್ಯಾಪ್ತಿಯ ಚಿಲ್ಪಾರಸ್ ಗ್ರಾಮದ ಬಳಿಯ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ತಂಡವು ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿತ್ತು.

ಇದನ್ನೂ ಓದಿ: Encounter In Kanker: ಭದ್ರತಾ ಪಡೆಗಳೊಂದಿಗೆ ಎನ್‌ಕೌಂಟರ್‌; ಓರ್ವ ನಕ್ಸಲ್‌ ಸಾವು

ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಗಡಿ ಭದ್ರತಾ ಪಡೆ ಜಂಟಿಯಾಗಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಈ ವೇಳೆ ಗುಂಡಿನ ಚಕಮಕಿ ನಡೆದಿತ್ತು. ಸಾವನ್ನಪ್ಪಿದ ನಕ್ಸಲ್‌ನ ಶವ, ಶಸ್ತ್ರಾಸ್ತ್ರ ಮತ್ತು ಸ್ಫೋಟಕ ವಸ್ತುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿತ್ತು. ಅದಕ್ಕೂ ಮೊದಲು ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ ಮತ್ತು ಮಾವೋವಾದಿ ಸಾವನ್ನಪ್ಪಿದ್ದರು. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಛೋಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹಿಡೂರ್ ಗ್ರಾಮದ ಬಳಿಯ ಕಾಡಿನಲ್ಲಿ ಗುಂಡಿನ ಚಕಮಕಿ ನಡೆದಿತ್ತು.

Continue Reading
Advertisement
Universal Coaching Centre
ಬೆಂಗಳೂರು1 hour ago

UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

Sanju Samson
ಪ್ರಮುಖ ಸುದ್ದಿ1 hour ago

Sanju Samson : ಸಂಜು ಸ್ಯಾಮ್ಸನ್​ಗೆ ರಾಯಲ್ಸ್​ ತಂಡದಲ್ಲಿ ದಶಕದ ಸಾಧನೆ; ಬೆಸ್ಟ್​ ಕ್ಯಾಪ್ಟನ್ ಎಂದ ಅಭಿಮಾನಿಗಳು

UPSC Result 2024
ಶಿಕ್ಷಣ1 hour ago

UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

Lok Sabha Election 2024 Rs 18 crore seized from raids for liquor
Lok Sabha Election 20241 hour ago

Lok Sabha Election 2024: ಲಿಕ್ಕರ್‌ ಇದೆ ಎಂದು ದಾಳಿ ಮಾಡಿದರೆ ಸಿಕ್ಕಿದ್ದು 18 ಕೋಟಿ ರೂ.; ಧಾರವಾಡದಲ್ಲಿ ಭರ್ಜರಿ ಬೇಟೆ!

Akshya Kumar
ಸಿನಿಮಾ2 hours ago

Akshya Kumar: ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅಕ್ಷಯ್ ಕುಮಾರ್!

Drinking water problem Provide water immediately by tanker says DC
ಉತ್ತರ ಕನ್ನಡ2 hours ago

Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

MS Dhoni
ಪ್ರಮುಖ ಸುದ್ದಿ2 hours ago

MS Dhoni : ಮೊಣಕಾಲು ನೋವಿನಿಂದ ರೈನಾ ಕೈಹಿಡಿದು ಮೆಟ್ಟಿಲು ಇಳಿದ ಧೋನಿ…

UPSC Results 2023
ಕರ್ನಾಟಕ2 hours ago

UPSC Results 2023: ಯುಪಿಎಸ್‌ಸಿಯಲ್ಲಿ ವಿಜಯಪುರದ ವಿಜೇತಾ ರಾಜ್ಯಕ್ಕೆ ಪ್ರಥಮ, 20ಕ್ಕೂ ಹೆಚ್ಚು ಮಂದಿ ತೇರ್ಗಡೆ

Modi in Karnataka on April 20 Massive rallies in Chikkaballapura and Bengaluru
Lok Sabha Election 20242 hours ago

Modi in Karnataka: ಏಪ್ರಿಲ್‌ 20ರಂದು ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

IPL 2024
ಪ್ರಮುಖ ಸುದ್ದಿ2 hours ago

IPL 2024 : ಆಟಗಾರರಿಗೆ ಇಂಗ್ಲಿಷ್ ಗೊತ್ತಿಲ್ಲದ್ದು ಆರ್​ಸಿಬಿ ಸೋಲಿಗೆ ಕಾರಣ; ಮಾಜಿ ಆಟಗಾರನ ವಿಭಿನ್ನ ವಿಶ್ಲೇಷಣೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ18 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌