Site icon Vistara News

Mohamed Muizzu: ಮಾಲ್ಡೀವ್ಸ್‌ನಲ್ಲಿರುವ ಭಾರತದ ಸೇನೆ ತೆರಳಲಿ; ಚೀನಾ ಪರ ನಿಲುವಿನ ಅಧ್ಯಕ್ಷ ಆಗ್ರಹ!

Mohamed Muizzu

Sack President, Summon Minister: Maldives Opposition Defends PM Narendra Modi

ಮಾಲೆ: ಮಾಲ್ಡೀವ್ಸ್‌ ಅಧ್ಯಕ್ಷರಾಗಿ ಆಯ್ಕೆಯಾದ ಕೆಲವೇ ವಾರಗಳಲ್ಲಿ ಮೊಹಮ್ಮದ್‌ ಮುಯಿಜು (Mohamed Muizzu) ಅವರು ತಾವು ಚೀನಾ ಪರ ಹಾಗೂ ಭಾರತದ ವಿರುದ್ಧ ನಿಲುವುಳ್ಳವರು ಎಂಬುದನ್ನು ಸಾಬೀತುಪಡಿಸಿದ್ದಾರೆ. “ಮಾಲ್ಡೀವ್ಸ್‌ನಲ್ಲಿರುವ ಭಾರತದ ಸೈನಿಕರು (Indian Troops) ವಾಪಸಾಗಬೇಕು” ಎಂದು ಮೊಹಮ್ಮದ್‌ ಮುಯಿಜು ಹೇಳಿರುದೇ ಅವರ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ.

ಬೂಮ್‌ಬರ್ಗ್‌ ಟಿವಿಯ ಸಂದರ್ಶನವೊಂದರಲ್ಲಿ ಮೊಹಮ್ಮದ್‌ ಮುಯಿಜು ಈ ಕುರಿತು ಪ್ರತಿಕ್ರಿಯಿಸಿದ್ದಾರೆ. “ಭಾರತದ ಜತೆ ಮಾಲ್ಡೀವ್ಸ್‌ ಉತ್ತಮ ಸಂಬಂಧ ಹೊಂದಲು ಬಯಸುತ್ತದೆ. ಆ ಸಂಬಂಧವು ಎರಡೂ ದೇಶಗಳಿಗೆ ಅನುಕೂಲವಾಗಿರಬೇಕು ಎಂದು ಇಚ್ಛಿಸುತ್ತದೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನಿಂದ ಭಾರತದ ಸೇನೆಯನ್ನು ವಾಪಸ್‌ ಕಳುಹಿಸುವ ಕುರಿತು ಭಾರತ ಸರ್ಕಾರದ ಜತೆ ಮಾತುಕತೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಭಾರತದ ಸುಮಾರು 70 ಸೈನಿಕರು ಮಾಲ್ಡೀವ್ಸ್‌ನಲ್ಲಿದ್ದಾರೆ. ಮಾಲ್ಡೀವ್ಸ್‌ನಲ್ಲಿ ಭಾರತದ ಯೋಧರು ರೆಡಾರ್‌ ಹಾಗೂ ನಿಗಾ ಯುದ್ಧವಿಮಾನವನ್ನು ನಿರ್ವಹಣೆ ಮಾಡುತ್ತಿದ್ದಾರೆ. ಚೀನಾ ಕೂಡ ಮಾಲ್ಡೀವ್ಸ್‌ನಲ್ಲಿ ಸೈನಿಕರನ್ನು ನಿಯೋಜಿಸಿದೆ. ಯಾವ ದೇಶದ ಸೇನೆಯೂ ಮಾಲ್ಡೀವ್ಸ್‌ನಲ್ಲಿ ಇರುವುದು ಬೇಕಾಗಿಲ್ಲ ಎಂದು ಮೊಹಮ್ಮದ್‌ ಮುಯಿಜು ಹೇಳಿದ್ದಾರೆ. ಆದರೆ, ಸೈನಿಕರನ್ನು ವಾಪಸ್‌ ಕಳುಹಿಸುವ ಕುರಿತು ಚೀನಾ ಜತೆ ಮಾತನಾಡಿರುವುದರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: Maldives Fire | ಮಾಲ್ಡೀವ್ಸ್​​ನಲ್ಲಿ ವಸತಿ ಕಟ್ಟಡಕ್ಕೆ ಬೆಂಕಿ; 9 ಭಾರತೀಯರು ಸೇರಿ 10 ಮಂದಿ ದುರ್ಮರಣ

ಕಳೆದ ತಿಂಗಳಷ್ಟೇ ಭರ್ಜರಿ ಜಯದೊಂದಿಗೆ ಮಾಲ್ಡೀವ್ಸ್ ಅಧ್ಯಕ್ಷರಾಗಿ ಆಯ್ಕೆಯಾದ ಮೊಹಮ್ಮದ್ ಮುಯಿಜು ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.. ಈ ವೇಳೆ, ಅವರು ತಮಗೆ ಮತಗಳನ್ನು ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಇದೇ ವೇಳೆ, ಭ್ರಷ್ಟಾಚಾರ ಅಪರಾಧಕ್ಕಾಗಿ 11 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಅವರ ಬಿಡುಗಡೆಗೆ ಆದೇಶಿಸಿದ್ದರು.

ಪಿಪಿಎಂ ನಾಯಕ ಯಾಮೀನ್ ಅವರು ಜೈಲಿನಿಂದ ಬಿಡುಗಡೆಯಾಗಲೇಬೇಕು. ಜೈಲು ಶಿಕ್ಷೆಯಿಂದ ಗೃಹ ಬಂಧನಕ್ಕೆ ಕೈದಿಯನ್ನು ಸ್ಥಳಾಂತರಿಸುವ ಅಧಿಕಾರ ಅಧ್ಯಕ್ಷರಿಗೆ ಇದೆ. ನಮ್ಮ ದೇಶದ ಹಿತಾಸಕ್ತಿಗೆ ಅನುಗುಣವಾಗಿ ನಾನು ಮಾಡುತ್ತಿರುತ್ತಿರುವ ಅತ್ಯುತ್ತಮ ಕ್ರಮವಾಗಿದೆ ಎದು ನಾನು ನಂಬುತ್ತೇನೆ ಎಂದು ನೂತನ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರು ಹೇಳಿದ್ದರು. . ಚೀನಾ ಸರ್ಕಾರದಿಂದ ತೀವ್ರ ಸಾಲ ತಂದಿರುವ ಮಾಲ್ಡೀವ್ಸ್‌ನ ನೂತನ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರು ಚೀನಾ ಪರ ಒಲವುಳ್ಳ ನಾಯಕ ಎಂದು ಗುರುತಿಸಿಕೊಂಡಿದ್ದಾರೆ. ಈ ಹಿಂದಿನ ಸರ್ಕಾರವು ಚೀನಾದಿಂದ ಸಾಕಷ್ಟು ಸಾಲವನ್ನು ಪಡೆದುಕೊಂಡಿದೆ.

Exit mobile version