ನವದೆಹಲಿ: ಗೌತಮ್ ಅದಾನಿ ನೇತೃತ್ವದ ಅದಾನಿ ಗ್ರೂಪ್ ವಂಚನೆ ಕುರಿತು ಅಮೆರಿಕದ ಹೂಡಿಕೆ ಸಂಶೋಧನಾ ಸಂಸ್ಥೆ ‘ಹಿಂಡನ್‌ಬರ್ಗ್’ ವರದಿ (Adani Hindenburg Row) ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಕನ್ನಡಿಗ, ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ದೆಹಲಿಯಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿದೆ. ಹಾಗೆಯೇ, ಕೇಂದ್ರ ಸರ್ಕಾರದ ವಿರುದ್ಧವೂ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ದೆಹಲಿ ಕಾಂಗ್ರೆಸ್ ಕಚೇರಿ ಎದುರು, ರೈಸಿನಾ ಸೇರಿ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಅದಾನಿ ಗ್ರೂಪ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ, ಗೌತಮ್ ಅದಾನಿ, ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಫೇಸ್ ಮಾಸ್ಕ್‌ಗಳನ್ನು ಧರಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಹಾಗೂ ಕಾಂಗ್ರೆಸ್ ಮುಖಂಡರ ಮಧ್ಯೆ ವಾಗ್ವಾದ ನಡೆಯಿತು. ಪೊಲೀಸರ ಬ್ಯಾರಿಕೇಡ್ ಭೇದಿಸಲು ಯತ್ನಿಸಿದ ಕಾರಣ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಅಲ್ಲದೆ, ಪ್ರತಿಭಟನಾಕಾರರನ್ನು ಬಂಧಿಸಿ, ಬಳಿಕ ಬಿಡುಗಡೆ ಮಾಡಲಾಯಿತು.
ಇದನ್ನೂ ಓದಿ: Parliament Budget Session: ಅದಾನಿ ವಿಷಯ ಕೆಲಸಕ್ಕೆ ಬಾರದ ಚರ್ಚೆ, ಮೋದಿಯನ್ನು ಹೊಗಳಿ ಎಂದು ಕನ್ನಡದಲ್ಲೇ ಮಾತನಾಡಿದ ಜಗ್ಗೇಶ್