Infosys | 3ನೇ ತ್ರೈಮಾಸಿಕದಲ್ಲಿ 6000 ಫ್ರೆಶರ್ಸ್ ನೇಮಕ ಮಾಡಿಕೊಂಡ ಇನ್ಫೋಸಿಸ್! - Vistara News

ದೇಶ

Infosys | 3ನೇ ತ್ರೈಮಾಸಿಕದಲ್ಲಿ 6000 ಫ್ರೆಶರ್ಸ್ ನೇಮಕ ಮಾಡಿಕೊಂಡ ಇನ್ಫೋಸಿಸ್!

ಆರ್ಥಿಕ ಹಿಂಜರಿತ ಕಾರಣಕ್ಕೆ ಬಹುತೇಕ ಕಂಪನಿಗಳು ಉದ್ಯೋಗಗಳನ್ನು ಕಡಿತ ಮಾಡುತ್ತಿದ್ದರೆ, ಇನ್ಫೋಸಿಸ್ (Infosys) 50 ಸಾವಿರ ಫ್ರೆಶರ್ಸ್ ನೇಮಕ ಮಾಡಿಕೊಳ್ಳುವ ಯೋಜನೆ ಹಾಕಿಕೊಂಡಿದೆ.

VISTARANEWS.COM


on

infosys
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2022-23ನೇ ಸಾಲಿನಲ್ಲಿ ಇನ್ಫೋಸಿಸ್ (Infosys) ಸುಮಾರು 6 ಸಾವಿರ ಫ್ರೆಶರ್ಸ್ ನೇಮಕ ಮಾಡಿಕೊಂಡಿದೆ. ವಿತ್ತ ಆರ್ಥಿಕ ವರ್ಷದ ಅಂತ್ಯಕ್ಕೆ ಈ ಪ್ರಮಾಣವು 50 ಸಾವಿರವರೆಗೂ ತಲುಪಲಿದೆ ಎಂದು ಹೇಳಲಾಗುತ್ತಿದೆ. ಕಂಪನಿಯು ಮೊದಲರ್ಧ ವರ್ಷದಲ್ಲಿ ಸುಮಾರು 40 ಸಾವಿರ ಫ್ರೆಶರ್ಸ್ ನೇಮಕ ಮಾಡಿಕೊಳ್ಳಲಿದೆ.

ಮುಖ್ಯ ಹಣಕಾಸು ಅಧಿಕಾರಿ ನಿಲಂಜನ್ ರಾಯ್ ಅವರು ವರ್ಷದಲ್ಲಿ ಕಂಪನಿಯು ತನ್ನ ವಾರ್ಷಿಕ ಗುರಿಯನ್ನು ಪೂರೈಸಲಿದೆ. ನಾವು ವರ್ಷವನ್ನು ಕೊನೆಗೊಳಿಸುವ ಹೊತ್ತಿಗೆ ನಾವು ಆ ಸಂಖ್ಯೆಯ ಸುತ್ತಲೂ ಇರಬೇಕು ಎಂದು ನಾನು ಭಾವಿಸುತ್ತೇನೆ. ನಾವು ನೇಮಕವನ್ನು ಮುಂದುವರಿಸಿದ್ದೇವೆ ಎಂದು ಅವರು ಹೇಳಿದರು.

ಇನ್ಫೋಸಿಸ್ ಫ್ರೆಶರ್ಸ್ ನೇಮಕ ಮಾಡಿಕೊಂಡು, ತನ್ನ ಮೈಸೂರು ತರಬೇತಿ ಕೇಂದ್ರದಲ್ಲಿ ತರಬೇತಿಯನ್ನು ನೀಡಿ ಅವರನ್ನು ಉದ್ಯೋಗಕ್ಕೆ ಸಜ್ಜುಗೊಳಿಸುತ್ತದೆ. ಫ್ರೆಶರ್ಸ್‌ರನ್ನು ನೇಮಕ ಮಾಡಿಕೊಂಡಿದ್ದು, ಅವರಿಗೆ ಕಂಪನಿಯು ಟ್ರೈನಿಂಗ್ ನೀಡಲಾಗುತ್ತಿದೆ. ಇನ್ಫೋಸಿಸ್ ಭಾರತದ ಪ್ರಮುಕ ಐಟಿ ಕಂಪನಿಗಳಲ್ಲಿ ಒಂದಾಗಿದೆ. ಕರ್ನಾಟಕದವರೇ ಆದ ನಾರಾಯಣಮೂರ್ತಿ ಅವರು ಈ ಕಂಪನಿಯನ್ನು ಹುಟ್ಟು ಹಾಕಿದ್ದಾರೆ.

ಇದನ್ನೂ ಓದಿ | Infosys | ಇನ್ಫೋಸಿಸ್‌ಗೆ 6,586 ಕೋಟಿ ರೂ. ತ್ರೈಮಾಸಿಕ ನಿವ್ವಳ ಲಾಭ, 13% ಹೆಚ್ಚಳ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಸೂರತ್‌ನಲ್ಲಿ ಕಮಲ ಪಡೆಯ ಗೆಲುವಿಗೆ ಪರೋಕ್ಷ ಕಾರಣಕರ್ತರಾದ ಕಾಂಗ್ರೆಸ್‌ ಅಭ್ಯರ್ಥಿ ಬಿಜೆಪಿ ಸೇರ್ಪಡೆ?

Lok Sabha Election 2024: ಚುನಾವಣೆ ನಡೆಯುವ ಮುನ್ನವೇ ಗುಜರಾತ್‌ನ ಸೂರತ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಗೆಲುವು ಸಾಧಿಸಿದ್ದಾರೆ. ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡು, ಎಲ್ಲ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದ ಕಾರಣ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮಧ್ಯೆ ನೀಲೇಶ್‌ ಬಿಜೆಪಿ ಸೇರಲಿದ್ದಾರೆ ಎನ್ನುವ ಸುದ್ದಿ ಹರಡಿದ್ದು, ಅವರ ಮನೆ ಮುಂದೆ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

VISTARANEWS.COM


on

Lok Sabha Election 2024
Koo

ಗಾಂಧಿನಗರ: ಮಹತ್ವದ ಬೆಳವಣಿಗೆಯೊಂದರಲ್ಲಿ ಗುಜರಾತ್‌ನ ಸೂರತ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾಣಿ (Nilesh Kumbhani) ಅವರ ನಾಮಪತ್ರ ತಿರಸ್ಕೃತಗೊಂಡು, ಎಲ್ಲ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದ ಕಾರಣ ಸೋಮವಾರ ಬಿಜೆಪಿಯ ಮುಖೇಶ್ ದಲಾಲ್ (Mukesh Dalad) ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಚುನಾವಣೆಗೂ (Lok Sabha Election 2024) ಮುನ್ನವೇ ಬಿಜೆಪಿ ಒಂದು ಸೀಟನ್ನು ತನ್ನದಾಗಿಸಿಕೊಂಡಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪರೋಕ್ಷ ಕಾರಣರಾದ ನೀಲೇಶ್ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ನಿವಾಸದ ಮುಂಭಾಗ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮುಖೇಶ್ ದಲಾಲ್ ಅವರನ್ನು ವಿಜೇತರೆಂದು ಘೋಷಿಸಿದ ಒಂದು ದಿನದ ಬಳಿಕ ಅಂದರೆ ಮಂಗಳವಾರ ಕಾಂಗ್ರೆಸ್‌ ಈ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಉದ್ದೇಶಪೂರ್ವಕವಾಗಿಯೇ ನಾಮಪತ್ರವನ್ನು ರದ್ದುಗೊಳಿಸಲಾಗಿದೆ ಎಂದು ಕೈ ಪಡೆ ನೀಲೇಶ್ ಕುಂಭಾಣಿ ವಿರುದ್ಧ ಆರೋಪ ಹೊರಿಸಿದೆ. ಅಲ್ಲದೆ ಅವರನ್ನು ʼದೇಶದ್ರೋಹಿʼ ಮತ್ತು ʼಪ್ರಜಾಪ್ರಭುತ್ವದ ಕೊಲೆಗಾರʼ ಎಂದು ಕರೆದಿದೆ. ನೀಲೇಶ್ ಕುಂಭಾಣಿ ಈ ವಾರ ಬಿಜೆಪಿಗೆ ಸೇರ್ಪಡೆಯಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವೇನು?

ನಿಲೇಶ್ ಕುಂಭಾನಿ ಅವರ ಮೂವರು ಅನುಮೋದಕರ ದಾಖಲೆಗಳಲ್ಲಿನ ಸಹಿಗಳ ಪರಿಶೀಲನೆ ವೇಳೆ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಭಾನುವಾರ ಕಾಂಗ್ರೆಸ್‌ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರ ನಾಮಪತ್ರವನ್ನು ಜಿಲ್ಲಾ ಚುನಾವಣಾ ಅಧಿಕಾರಿ, ಜಿಲ್ಲಾಧಿಕಾರಿ ಸೌರಭ್ ಪರ್ಘಿ ತಿರಸ್ಕರಿಸಿದ್ದರು. ಅನುಮೋದಕರಾದ ರಮೇಶ್ ಪೋಲ್ರಾ ಅವರ ಮಾರಾಟ ಪತ್ರದ ಆಧಾರ ಮೇಲೆ, ಚಾಲನಾ ಪರವಾನಗಿಯ ಆಧಾರದ ಮೇಲೆ ಜಗದೀಶ್ ಸವಲಿಯಾ ಮತ್ತು ಅವರ ಪ್ಯಾನ್ ಕಾರ್ಡ್ ಆಧಾರದ ಮೇಲೆ ಧಮೇಲಿಯಾ ಅವರ ಸಹಿಗಳನ್ನು ಪರಿಶೀಲಿಸಿದರು. ಈ ವೇಳೆ ನಾಮನಿರ್ದೇಶನ ಪತ್ರದಲ್ಲಿನ ಸಹಿಗಳಲ್ಲಿ ವ್ಯತ್ಯಾಸ ಕಂಡು ಬಂದಿತ್ತು.

1951ರ ಜನ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 36 (2)ರ ಅಡಿಯಲ್ಲಿ ಪಾರ್ಘಿ ಅವರು ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಕೇಂದ್ರ ಸಚಿವ ದರ್ಶನಾ ಜರ್ದೋಶ್ ಬದಲಿಗೆ ಮುಕೇಶ್ ದಲಾಲ್ ಅವರನ್ನು ತನ್ನ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಿಜೆಪಿಯ ಈ ಭದ್ರಕೋಟೆಯಲ್ಲಿ ಚುನಾವಣೆಗೆ ತಡೆ ಕೋರಿ ಕಾಂಗ್ರೆಸ್‌ ಗುಜರಾತ್ ಹೈಕೋರ್ಟ್‌ಗೆ ಮೊರೆ ಹೋಗಲು ನಿರ್ಧರಿಸಿತ್ತು. ಆದರೆ ನಂತರ ನಿಲೇಶ್ ಅವರೇ ಸ್ವತಃ ಬಿಜೆಪಿ ಜತೆ ಕೈ ಜೋಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಚುನಾವಣೆಯ ಮೇಲೆ ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪ್ರಭಾವ ಬೀರುತ್ತಿದ್ದು, ಇಲ್ಲಿ ಚುನಾವಣಾ ಪ್ರಕ್ರಿಯೆ ಮರು ಸ್ಥಾಪಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಸಂಪರ್ಕಿಸಿದೆ.

ಇದನ್ನೂ ಓದಿ: Lok Sabha Election 2024: ಬಿಜೆಪಿಗೆ ಸಿಕ್ಕಿತು ಮೊದಲ ಸೀಟು; ಗುಜರಾತ್‌ನ ಸೂರತ್‌ನಲ್ಲಿ ಪಕ್ಷದ ಅಭ್ಯರ್ಥಿ ಅವಿರೋಧ ಆಯ್ಕೆ!

ಇನ್ನು ಅವಿರೋಧವಾಗಿ ಆಯ್ಕೆಯಾದ ದಲಾಲ್ ಅವರಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಶುಭ ಕೋರಿದ್ದು, “ಅವಿರೋಧವಾಗಿ ಆಯ್ಕೆಯಾದ ಸೂರತ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮುಖೇಶ್ ಭಾಯ್ ದಲಾಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು” ಎಂದು ಹೇಳಿದ್ದಾರೆ. ಇದು ದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ʼಐತಿಹಾಸಿಕ ವಿಜಯʼದ ಪ್ರಾರಂಭ ಎಂದು ಭೂಪೇಂದ್ರ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ. “ಇದು ಗುಜರಾತ್‌ನ ಎಲ್ಲ 26 ಸ್ಥಾನಗಳಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ವಿಜಯ ಸಾಧಿಸಲಿದೆ ಎನ್ನುದಕ್ಕೆ ಇದು ಸಾಕ್ಷಿʼʼ ಎಂದು ಗುಜರಾತ್ ಸಿಎಂ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Continue Reading

Latest

Voter ID: ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

Voter ID: ಮತದಾನ ಮಾಡಲು ವೋಟರ್ ಐಡಿ ಕಡ್ಡಾಯವಾಗಿದೆ. ಆದರೆ ವೋಟರ್ ಐಡಿ ಇಲ್ಲದೇ ಇದ್ದರೂ ಚಿಂತೆ ಬೇಡ. ಕೆಲವೊಂದು ದಾಖಲೆಗಳನ್ನು ತೋರಿಸಿ ಮತ ಚಲಾಯಿಸಬಹುದು. ಆ ದಾಖಲೆಗಳು ಯಾವುದು ಗೊತ್ತೇ? ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Koo

ಬೆಂಗಳೂರು: ಲೋಕಸಭಾ ಚುನಾವಣೆ- 2024ರ (Lok Sabha election 2024) ಅಂಗವಾಗಿ ರಾಜ್ಯದಲ್ಲಿ (karnataka) ಏಪ್ರಿಲ್ 26ರಂದು ಮತದಾನ (voting) ನಡೆಯಲಿದ್ದು, ಈ ಸಂದರ್ಭದಲ್ಲಿ ಮತದಾರರ ಗುರುತು ಚೀಟಿಯನ್ನು (voter id) ಪ್ರತಿಯೊಬ್ಬ ಅರ್ಹ ಮತದಾರನೂ ಹೊಂದಿರಲೇಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ (Voter ID) ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ.

ಮತದಾರರ ಗುರುತು ಚೀಟಿಯು ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಮತದಾರನ ಗುರುತು, ವಾಸಸ್ಥಳ, ಜನನ ಮತ್ತು ಇತರ ವಿವರಗಳನ್ನು ದೃಢೀಕರಿಸುವ ಇದು ಮಹತ್ವದ ಅಧಿಕೃತ ದಾಖಲೆಗಳಲ್ಲಿ ಒಂದಾಗಿದೆ.
ಮತದಾನವು ನಮ್ಮ ಮೂಲಭೂತ ಹಕ್ಕು ಮಾತ್ರವಲ್ಲ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಜವಾಬ್ದಾರಿಯಾಗಿದೆ. ಇದಕ್ಕಾಗಿ ವೋಟರ್ ಐಡಿ ಬಹಳ ಮುಖ್ಯವಾದ ದಾಖಲೆಯಾಗಿದೆ. ಯಾಕೆಂದರೆ ಅದನ್ನು ಹೊಂದಿರುವವರ ಗುರುತು ಮತ್ತು ವಿವರಗಳನ್ನು ಪರಿಶೀಲಿಸಲು ಸಹಕಾರಿಯಾಗುತ್ತದೆ.

ಇದನ್ನೂ ಓದಿ: Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

ಯಾರು ಅರ್ಹರು?

ಭಾರತದ ಚುನಾವಣಾ ಆಯೋಗದ ಪ್ರಕಾರ ನಾಗರಿಕರು ಈ ಕೆಳಗಿನ ಷರತ್ತುಗಳ ಅಡಿಯಲ್ಲಿ ಮತದಾರರಾಗಲು ಅರ್ಹರಾಗಿರುತ್ತಾರೆ. 18 ವರ್ಷ ವಯಸ್ಸಿನ ಪ್ರತಿಯೊಬ್ಬ ನಾಗರಿಕರು ಯಾವುದಾದರೂ ನಿರ್ಧಿಷ್ಟ ಕಾರಣದಿಂದ ಅನರ್ಹಗೊಳಿಸದ ಹೊರತು ಮತದಾರರ ಗುರುತು ಚೀಟಿ ಪಡೆಯಲು ದಾಖಲಾತಿ ನಡೆಸಲು ಅರ್ಹರಾಗಿರುತ್ತಾರೆ.
ಅರ್ಹ ಮತದಾರನ ಸಾಮಾನ್ಯ ನಿವಾಸದ ಸ್ಥಳದಲ್ಲಿ ಮಾತ್ರ ನೋಂದಣಿ ಮಾಡಿಸಬಹುದು ಹಾಗೂ ಒಂದೇ ಸ್ಥಳದಲ್ಲಿ ಮಾತ್ರ ನೋಂದಣಿ ಸಾಧ್ಯ.


ಸಾಗರೋತ್ತರ ಭಾರತೀಯರ ಪಾಸ್‌ಪೋರ್ಟ್‌ನಲ್ಲಿನೀಡಿರುವ ವಿಳಾಸದಲ್ಲಿ ಸಾಮಾನ್ಯವಾಗಿ ವಾಸಿಸುತ್ತಾರೆ ಎಂದು ಪರಿಗಣಿಸಲಾಗುತ್ತದೆ. ಆದರೆ ಮತದಾರರು ತಮ್ಮ ಮನೆಯ ವಿಳಾಸದಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಾರೆ ಎಂದು ಪರಿಗಣಿಸಲಾಗುವುದು.

ವೋಟರ್ ಐಡಿ ಇಲ್ಲದೆ ಮತ ಚಲಾಯಿಸಬಹುದೇ?

ಭಾರತೀಯ ಚುನಾವಣಾ ಆಯೋಗದ ಪ್ರಕಾರ ಮತಗಟ್ಟೆಗಳಲ್ಲಿ ಮತದಾರರ ಗುರುತಿನ ಅಗತ್ಯವಿದೆ. ಮತ ಚಲಾಯಿಸಲು ಚುನಾವಣಾ ಆಯೋಗ ನೀಡಿದ ಮತದಾರರ ಗುರುತಿನ ಚೀಟಿ ಅಥವಾ ಅಧಿಕೃತ ಗುರುತಿನ ಯಾವುದೇ ಒಂದು ದಾಖಲೆಯನ್ನು ಒದಗಿಸಬೇಕು.

ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿದ ಸೂಚನೆಗಳ ಪ್ರಕಾರ ಮತದಾರರ ಗುರುತಿನ ಚೀಟಿ ಇಲ್ಲದೆಯೂ ಚುನಾವಣೆಯಲ್ಲಿ ಮತ ಚಲಾಯಿಸಬಹುದು. ಅಧಿಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರೆಗೆ ಮತ ಚಲಾಯಿಸಲು ಮತದಾರರು ಅರ್ಹನಾಗಿರುತ್ತಾರೆ.


ಹೆಸರಿದೆಯೇ ಪರಿಶೀಲಿಸಿ

ಮತದಾನ ಪ್ರಕ್ರಿಯೆಯಲ್ಲಿ (ಇಸಿಐ) ಪಾಲ್ಗೊಳ್ಳುವ ಮೊದಲು ಭಾರತದ ಚುನಾವಣಾ ಆಯೋಗದ ಅಧಿಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂದು ಪರಿಶೀಲಿಸಬೇಕು. ಮತಪತ್ರವನ್ನು ಚಲಾಯಿಸುವ ಮೊದಲು ಈ ಪಟ್ಟಿಯನ್ನು ಪರಿಶೀಲಿಸುವುದು ನಿರ್ಣಾಯಕವಾಗಿದೆ ಏಕೆಂದರೆ ಅದರಲ್ಲಿ ನೀವು ಮತ ಚಲಾಯಿಸುವ ಅರ್ಹತೆಯನ್ನು ದೃಢೀಕರಿಸುತ್ತದೆ.

ಮತದಾರರ ಗುರುತಿನ ಚೀಟಿಯನ್ನು ಹೊಂದಿಲ್ಲದಿದ್ದರೆ ಚುನಾವಣಾ ಆಯೋಗವು ಗೊತ್ತುಪಡಿಸಿದ ಪರ್ಯಾಯ ದಾಖಲೆಗಳನ್ನು ಮತದಾರರು ಬಳಸಬಹುದು.

ಇತರ ದಾಖಲೆ ಯಾವುದು?

ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಗುರುತಿಗಾಗಿ ಎಪಿಕ್ ಅಥವಾ ಮತದಾರರ ಐಡಿ ಹೊಂದಿಲ್ಲದಿದ್ದರೆ ಸಾರ್ವತ್ರಿಕ ಚುನಾವಣೆಯ ವೇಳೆ ವೋಟರ್ ಐಡಿ ಇಲ್ಲದೆಯೇ ಮತವನ್ನು ಚಲಾಯಿಸಲು ಬಳಸಬಹುದಾದ ದಾಖಲೆಗಳು ಇಂತಿವೆ.

ಆಧಾರ್ ಕಾರ್ಡ್, MNREGA ಜಾಬ್ ಕಾರ್ಡ್, ಬ್ಯಾಂಕ್/ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌ಗಳು, ಕಾರ್ಮಿಕ ಸಚಿವಾಲಯದ ಯೋಜನೆಯಡಿ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಿಗೆ, ಪ್ಯಾನ್ ಕಾರ್ಡ್, NPR ಅಡಿಯಲ್ಲಿ RGI ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್ ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ಕೇಂದ್ರ/ ರಾಜ್ಯ ಸರ್ಕಾರ/ ಪಿಎಸ್‌ಯು/ ಪಬ್ಲಿಕ್ ಲಿಮಿಟೆಡ್ ಕಂಪೆನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿಗಳು/ ಎಂಎಲ್‌ಎಗಳು/ ಎಂಎಲ್‌ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು, ವಿಶಿಷ್ಟ ಅಂಗವೈಕಲ್ಯ ಐಡಿ (UDID) ಕಾರ್ಡ್ ಗಳನ್ನು ದಾಖಲೆಯಾಗಿ ಮತದಾನದ ವೇಳೆ ಗುರುತು ಚೀಟಿಯಾಗಿ ಮತದಾನ ಕೇಂದ್ರದಲ್ಲಿ ತೋರಿಸಬಹುದಾಗಿದೆ.

ನೋಂದಣಿ ಸ್ಥಿತಿ ಪರಿಶೀಲನೆ ಹೇಗೆ?

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಕಾಣಿಸಿಕೊಂಡರೆ ಮಾತ್ರ ಮತ ಚಲಾಯಿಸಬಹುದು. ಪಟ್ಟಿಯಲ್ಲಿ ಹೆಸರು ಇದೆಯೇ, ಇಲ್ಲವೇ ಎಂಬುದನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ ಸೈಟ್ ನಲ್ಲಿ https://electoralsearch.eci.gov.in ಗೆ ಲಾಗಿನ್ ಆಗಿ ನೋಡಬಹುದು. ಅಲ್ಲದೇ ಮತದಾರರ ಸಹಾಯವಾಣಿ 1950ಕ್ಕೆ ಕರೆಯೂ ಪರಿಶೀಲನೆ ನಡೆಸಬಹುದಾಗಿದೆ.

Continue Reading

ರಾಜಕೀಯ

Himanta Biswa Sarma: ಕಾಂಗ್ರೆಸ್ ಪ್ರಣಾಳಿಕೆ ಪಾಕಿಸ್ತಾನದ ಜನರಿಗೆ ಹೆಚ್ಚು ಸೂಕ್ತ: ಹಿಮಂತ ಬಿಸ್ವಾ ಶರ್ಮಾ

Himanta Biswa Sarma: ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ಸಂಭಾವ್ಯ ಉಮೇದುವಾರಿಕೆ ಕುರಿತು ಮಾತನಾಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಹಾಗೂ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

VISTARANEWS.COM


on

By

Himanta Biswa Sarma
Koo

ಅಸ್ಸಾಂ: ಕಾಂಗ್ರೆಸ್ (congress) ಪಕ್ಷ ಪಾಕಿಸ್ತಾನದಲ್ಲಿ (pakistan) ಚುನಾವಣೆ (election) ಗೆಲ್ಲುವ ತಯಾರಿ ಮಾಡಿದಂತಿದೆ. ರಾಹುಲ್ ಗಾಂಧಿ (rahul gandhi) ಅವರು ಪ್ರಧಾನಿ (PM) ಅಭ್ಯರ್ಥಿಯಾಗಲು ಸೂಕ್ತವೇ ಎಂದು ಪ್ರಶ್ನಿಸಿರುವ ಅಸ್ಸಾಂ (assam) ಮುಖ್ಯಮಂತ್ರಿ (cm) ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಟೀಕಿಸಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ಸಂಭಾವ್ಯ ಉಮೇದುವಾರಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ಪಪ್ಪುಗೆ ಉತ್ತಮ ಅಭ್ಯರ್ಥಿ ಎಂದು ಹೇಳಿದರು.

ಕಾಂಗ್ರೆಸ್ ಪ್ರಣಾಳಿಕೆ ಭಾರತಕ್ಕಿಂತ ಪಾಕಿಸ್ತಾನದ ಹಿತಾಸಕ್ತಿಗಳೊಂದಿಗೆ ಹೆಚ್ಚು ಹೊಂದಿಕೆಯಾಗಿದೆ. ಕಾಂಗ್ರೆಸ್ ಪಕ್ಷವು ಪಾಕಿಸ್ತಾನದಲ್ಲಿ ಚುನಾವಣೆ ಗೆಲ್ಲುವ ರೀತಿಯಲ್ಲಿ ಸಿದ್ಧವಾಗಿದೆ. ನಾವು ಪ್ರಣಾಳಿಕೆಯನ್ನು ಓದಿದ್ದೇವೆ ಮತ್ತು ಓದಿದ ಅನಂತರ ಈ ಪ್ರಣಾಳಿಕೆಯು ಪಾಕಿಸ್ತಾನಕ್ಕೆ ಹೆಚ್ಚು ಮತ್ತು ಭಾರತಕ್ಕೆ ಕಡಿಮೆ ಎಂದು ತೀರ್ಮಾನಿಸಿದೆವು ಎಂದು ತಿಳಿಸಿದರು.

ಇದನ್ನೂ ಓದಿ: LoK Sabha Election 2024: ಚೊಂಬು ಆರೋಪಕ್ಕೆ ಚಿಪ್ಪು ಕೊಟ್ಟ ಬಿಜೆಪಿ! ಪಿಕ್‌ ಪಾಕೆಟ್‌ ಕಾಂಗ್ರೆಸ್‌ ಪೋಸ್ಟರ್‌ ಬಿಡುಗಡೆ!

ದೇಶದ ಆರ್ಥಿಕತೆ ನಾಶಪಡಿಸುವ ಗುರಿ

ಕಾಂಗ್ರೆಸ್ ಪಕ್ಷವು ಸಾಮಾನ್ಯ ಜನರ ಸಂಪನ್ಮೂಲಗಳನ್ನು ಕಸಿದುಕೊಂಡು ದೇಶದ ಆರ್ಥಿಕತೆಯನ್ನು ನಾಶಪಡಿಸುವ ಪ್ರಣಾಳಿಕೆಯನ್ನು ಮಾಡಿದೆ. ಆದ್ದರಿಂದ ನಾವು ಕಾಂಗ್ರೆಸ್ ಪ್ರಣಾಳಿಕೆಯನ್ನು ಸರಿಯಾದ ರೀತಿಯಲ್ಲಿ ವ್ಯಾಖ್ಯಾನಿಸಿದ್ದೇವೆ ಮತ್ತು ನಾನು ಈ ಪ್ರಣಾಳಿಕೆಯು ತುಷ್ಟೀಕರಣವಲ್ಲದೆ ಬೇರೇನೂ ಅಲ್ಲ ಎಂಬುದನ್ನು ತೋರಿಸಲು ಸಾರ್ವಜನಿಕ ಚರ್ಚೆಗೆ ಬರುವಂತೆ ಸವಾಲು ಹಾಕುವುದಾಗಿ ಹೇಳಿದರು.

ಲೋಕಸಭೆ ಚುನಾವಣೆ 2024ರ ಪ್ರಯುಕ್ತ ಕಾಂಗ್ರೆಸ್ ಪಕ್ಷವು ತನ್ನ ‘ನ್ಯಾಯ ಪತ್ರ’ ಚುನಾವಣಾ ಪ್ರಣಾಳಿಕೆಯನ್ನು ಏಪ್ರಿಲ್ 5ರಂದು ಬಿಡುಗಡೆ ಮಾಡಿತು. ಇದರ ಕುರಿತು ಪ್ರಧಾನಮಂತ್ರಿಯವರು ಸರಿಯಾಗಿ ಹೇಳಿದ್ದಾರೆ. ಈ ದೇಶದ ಸಂಪನ್ಮೂಲಗಳಲ್ಲಿ ಎಲ್ಲರಿಗೂ ಹಕ್ಕಿದೆ ಎಂದು ಹೇಳಿದ್ದರು. ಆದರೆ ದೇಶದ ಸಂಪನ್ಮೂಲಗಳಲ್ಲಿ ಒಂದು ನಿರ್ದಿಷ್ಟ ಸಮುದಾಯಕ್ಕೆ ಮೊದಲ ಹಕ್ಕು ಎಂದು ಹೇಳಿರುವುದಕ್ಕೆ ಕಾಂಗ್ರೆಸ್ ಪಕ್ಷವೇ ಉತ್ತರಿಸಬೇಕು, ನಾವಲ್ಲ. ಈ ಬಗ್ಗೆ ಕಾಂಗ್ರೆಸ್ ತನ್ನ ನಿಲುವನ್ನು ವಿವರಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ನ ಪ್ರಣಾಳಿಕೆಯು “ತಾಯಿ ಮತ್ತು ಸಹೋದರಿಯರ ಚಿನ್ನ” ತೆಗೆದುಕೊಂಡು ಆ ಸಂಪತ್ತನ್ನು ಹಂಚುವ ಬಗ್ಗೆ ಮಾತನಾಡುತ್ತದೆ ಎಂದು ಪ್ರಧಾನಿ ಮೋದಿ ಏಪ್ರಿಲ್ 21ರಂದು ನಡೆದ ರಾಲಿಯಲ್ಲಿ ಹೇಳಿದ ಅನಂತರ ಶರ್ಮಾ ಈ ಹೇಳಿಕೆ ನೀಡಿದ್ದಾರೆ.

ಮೋದಿ ಏನು ಹೇಳಿದ್ದರು?

ಏಪ್ರಿಲ್ 21ರಂದು ನಡೆದ ರಾಲಿಯಲ್ಲಿಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ನ ಪ್ರಣಾಳಿಕೆಯು ತಾಯಿ ಮತ್ತು ಸಹೋದರಿಯರ ಚಿನ್ನ ತೆಗೆದುಕೊಂಡು ಆ ಸಂಪತ್ತನ್ನು ಹಂಚುವ ಬಗ್ಗೆ ಮಾತನಾಡುತ್ತದೆ. ಅವರ ಮಂಗಳಸೂತ್ರವೂ ಅದರಲ್ಲಿ ಸೇರಿದೆ. ಚಿನ್ನದ ಬೆಲೆಯ ಪ್ರಶ್ನೆಯಲ್ಲ, ಅದು ಅವಳ ಜೀವನದ ಕನಸುಗಳಿಗೆ ಸಂಬಂಧಿಸಿದೆ. ಅದನ್ನು ನಿಮ್ಮ ಪ್ರಣಾಳಿಕೆಯಲ್ಲಿ ಕಸಿದುಕೊಳ್ಳುವ ಬಗ್ಗೆ ಹೇಗೆ ಮಾತನಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಅವರ ಸರ್ಕಾರವಾಗಿದ್ದಾಗ, ದೇಶದ ಸಂಪತ್ತಿನ ಮೇಲೆ ಮುಸಲ್ಮಾನರಿಗೆ ಮೊದಲ ಹಕ್ಕಿದೆ. ಸಂಪತ್ತನ್ನು ಯಾರಿಗೆ ಹಂಚುತ್ತೀರಿ, ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚುತ್ತೀರಿ, ನಿಮ್ಮ ದುಡಿಮೆಯ ಹಣವನ್ನು ನುಸುಳುಕೋರರಿಗೆ ಹಂಚುತ್ತೀರಿ ಎಂದು ಹೇಳಿದ್ದರು. ಇದು ಸ್ವೀಕಾರಾರ್ಹವೇ? ತಾಯಿಯ, ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕಿ, ಆನಂತರ ಸಂಪತ್ತಿನ ಮೊದಲ ಹಕ್ಕು ಮುಸಲ್ಮಾನರದ್ದು ಎಂದು ಹೇಳಿದವರಿಗೆ ಸಂಪತ್ತನ್ನು ಹಂಚುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆ ಹೇಳುತ್ತಿದೆ ಎಂದು ಹೇಳಿದ್ದರು.

2006ರ ಡಿಸೆಂಬರ್‌ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಲ್ಪಸಂಖ್ಯಾತರು ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು ದೇಶದ ಸಂಪನ್ಮೂಲಗಳ ಮೇಲೆ ಮೊದಲು ಹಕ್ಕು ಪಡೆಯಬೇಕು ಎಂದು ಹೇಳಿರುವುದನ್ನು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದರು.

Continue Reading

ದೇಶ

Bridge Collapse: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

Bridge Collapse: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಸೋಮವಾರ ರಾತ್ರಿ ಕುಸಿದಿದೆ. ಬಲವಾದ ಗಾಳಿ ಬೀಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್‌ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಚ್ಚರಿ ಎಂದರೆ ಸೇತುವೆ ಕುಸಿಯುವ ಕೇವಲ ಒಂದು ನಿಮಿಷದ ಮೊದಲು ಸುಮಾರು 65 ಜನರಿದ್ದ ಮದುವೆ ಬಸ್‌ ಈ ಸೇತುವೆಯ ಕೆಳಗಿನಿಂದ ಹಾದು ಹೋಗಿತ್ತು.

VISTARANEWS.COM


on

Bridge Collapse
Koo

ಹೈದರಾಬಾದ್‌: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಸೋಮವಾರ ರಾತ್ರಿ ಕುಸಿದಿದೆ (Bridge Collapse). ಸುಮಾರು 100 ಅಡಿ ಅಂತರದ ಎರಡು ಕಂಬಗಳ ನಡುವಿನ ಭಾಗ ರಾತ್ರಿ 9.45ರ ಸುಮಾರಿಗೆ ಬೀಸಿದ ಬಲವಾದ ಗಾಳಿಗೆ ಕುಸಿದು ಬಿದ್ದಿದೆ. ಸೇತುವೆಯ ಉಳಿದ ಭಾಗವೂ ಕುಸಿಯುವ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ತಪ್ಪಿದ ಭಾರೀ ದೊಡ್ಡ ದುರಂತ

ಅದೃಷ್ಟವಶಾತ್‌ ಯಾವುದೇ ಸಾವು-ನೋವು ಸಂಭವಿಸಿಲ್ಲ. ʼʼಸೇತುವೆ ಕುಸಿಯುವ ಕೇವಲ ಒಂದು ನಿಮಿಷದ ಮೊದಲು ಸುಮಾರು 65 ಜನರಿದ್ದ ಮದುವೆ ಬಸ್‌ ಈ ಸೇತುವೆಯ ಕೆಳಗಿನಿಂದ ಹಾದು ಹೋಗಿತ್ತುʼʼ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮನೇರ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸುಮಾರು ಒಂದು ಕಿಲೋ ಮೀಟರ್ ಉದ್ದದ ಸೇತುವೆ ನಿರ್ಮಾಣಕ್ಕೆ 2016ರಲ್ಲಿ ಅಂದಿನ ತೆಲಂಗಾಣ ವಿಧಾನಸಭಾ ಸ್ಪೀಕರ್ ಎಸ್.ಮಧುಸೂದನ ಚಾರಿ ಮತ್ತು ಸ್ಥಳೀಯ ಶಾಸಕ ಪುಟ್ಟ ಮಧು ಚಾಲನೆ ನೀಡಿದ್ದರು. ಆದರೆ ಇನ್ನೂ ಅದು ಪೂರ್ಣಗೊಂಡಿಲ್ಲ. ಈ ಸೇತುವೆ ನಿರ್ಮಾಣಕ್ಕೆ ಸುಮಾರು 49 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಮಂಥಣಿ, ಪರಕಲ್ ಮತ್ತು ಜಮ್ಮಿಕುಂಟಾ ಎಂಬ ಮೂರು ಪಟ್ಟಣಗಳ ನಡುವಿನ ಅಂತರವನ್ನು ಸುಮಾರು 50 ಕಿ.ಮೀ.ನಷ್ಟು ಕಡಿಮೆ ಮಾಡಲು ಈ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಒಂದು ವರ್ಷದಲ್ಲಿ ಅಂದರೆ 2017ರಲ್ಲಿಯೇ ಕಾಮಗಾರಿ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿತ್ತು. ಸರ್ಕಾರವು ಬಾಕಿ ಹಣವನ್ನು ಪಾವತಿಸದ ಕಾರಣ ಗುತ್ತಿಗೆದಾರರು ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಅಚ್ಚರಿ ಎಂದರೆ ಇದೇ ಗುತ್ತಿಗೆದಾರ ವೇಮುಲವಾಡದಲ್ಲಿ ಸೇತುವೆಯನ್ನು ನಿರ್ಮಿಸಿದ್ದರು. ಅದು 2021ರಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೊಚ್ಚಿ ಹೋಗಿತ್ತು.

ಐದು ವರ್ಷಗಳಿಂದ ಸ್ಥಳೀಯರು ಸೇತುವೆಯ ಕೆಳಗೆ ಮಣ್ಣಿನ ರಸ್ತೆಯನ್ನು ಬಳಸುತ್ತಿದ್ದಾರೆ. ʼʼಸೇತುವೆ ಕಾಮಗಾರಿ ಶೇ. 60ರಷ್ಟೂ ಪೂರ್ಣಗೊಳ್ಳದ ಕಾರಣ ಕಳೆದ ವರ್ಷ ಹೆಚ್ಚುವರಿಯಾಗಿ 11 ಕೋಟಿ ರೂ. ಸೇರಿಸಲಾಗಿತ್ತು. ಆದರೂ ಕಾಮಗಾರಿ ನಡೆಯಲಿಲ್ಲʼʼ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಬಾಲ್ಟಿಮೋರ್‌ ಸೇತುವೆ ಕುಸಿತ ಪ್ರಕರಣ; ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯ ಸಮಯಪ್ರಜ್ಞೆಗೆ ಅಮೆರಿಕ ಅಧ್ಯಕ್ಷ ಬೈಡನ್ ಮೆಚ್ಚುಗೆ

ಕ್ರಿಸ್‌ಮಸ್‌ ಆಚರಣೆಗಾಗಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಕುಸಿತ

ಕೇರಳದಲ್ಲಿ ಕ್ರಿಸ್‌ಮಸ್‌ ಆಚರಣೆಗೆಂದು ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ಕುಸಿದು ಎಂಟು ಮಂದಿ ಗಾಯಗೊಂಡ ಘಟನೆ ಡಿಸೆಂಬರ್‌ನಲ್ಲಿ ನಡೆದಿತ್ತು. ತಿರುವನಂತಪುರಂ ಜಿಲ್ಲೆಯ ಪೂವರ್‌ ಪ್ರದೇಶದಲ್ಲಿ ಡಿಸೆಂಬರ್‌ 25ರ ರಾತ್ರಿ ಕ್ರೈಸ್ತ ಸಮುದಾಯದ ನೂರಾರು ಜನ ಕ್ರಿಸ್‌ಮಸ್‌ ಆಚರಣೆಗೆಂದು ಒಂದೆಡೆ ಸೇರಿದ್ದರು. ಇದೇ ವೇಳೆ ತಾತ್ಕಾಲಿಕವಾಗಿ ನಿರ್ಮಿಸಿದ್ದ ಸೇತುವೆ ಕುಸಿದ ಕಾರಣ ಎಂಟು ಮಂದಿ ಗಾಯಗೊಂಡಿದ್ದರು.

ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಮೇಲೆ ಹೆಚ್ಚಿನ ಜನ ನಿಂತಿದ್ದ ಕಾರಣ ಈ ದುರಂತ ಸಂಭವಿಸಿತ್ತು. ಏಕಾಏಕಿ ಸೇತುವೆ ಕುಸಿದ ಕಾರಣ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಆಂಬುಲೆನ್ಸ್‌ ವ್ಯವಸ್ಥೆ ಮಾಡುವ ಜತೆಗೆ ಜನರನ್ನು ರಕ್ಷಿಸಿದರು ಎಂದು ಮೂಲಗಳು ತಿಳಿಸಿವೆ.

Continue Reading
Advertisement
Lok Sabha Election 2024
Lok Sabha Election 20247 seconds ago

Lok Sabha Election 2024: ಸೂರತ್‌ನಲ್ಲಿ ಕಮಲ ಪಡೆಯ ಗೆಲುವಿಗೆ ಪರೋಕ್ಷ ಕಾರಣಕರ್ತರಾದ ಕಾಂಗ್ರೆಸ್‌ ಅಭ್ಯರ್ಥಿ ಬಿಜೆಪಿ ಸೇರ್ಪಡೆ?

Latest27 mins ago

Voter ID: ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

Road Accident
ಕರ್ನಾಟಕ29 mins ago

Road Accident: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು; ಅಪಘಾತದ ಬಳಿಕ ಹೊತ್ತಿ ಉರಿದ ಬಸ್

Himanta Biswa Sarma
ರಾಜಕೀಯ33 mins ago

Himanta Biswa Sarma: ಕಾಂಗ್ರೆಸ್ ಪ್ರಣಾಳಿಕೆ ಪಾಕಿಸ್ತಾನದ ಜನರಿಗೆ ಹೆಚ್ಚು ಸೂಕ್ತ: ಹಿಮಂತ ಬಿಸ್ವಾ ಶರ್ಮಾ

Dungarees Fashion In Summer
ಫ್ಯಾಷನ್33 mins ago

Dungarees Fashion In Summer: ಬೇಸಿಗೆ ಸೀಸನ್‌ನಲ್ಲಿ ಹೀಗಿರಲಿ ಲೈಟ್‌ವೈಟ್‌ ಡಂಗ್ರೀಸ್‌ ಕಾಂಬಿನೇಷನ್‌

Voting awareness programme in Shira
ತುಮಕೂರು36 mins ago

Lok Sabha Election 2024: ಶಿರಾದಲ್ಲಿ ಕ್ಯಾಂಡಲ್‌ ಹಿಡಿದು ಮತದಾನ ಜಾಗೃತಿ

Suresh Raina
ಪ್ರಮುಖ ಸುದ್ದಿ36 mins ago

Suresh Raina : ಧೋನಿ ನೇತೃತ್ವದಲ್ಲಿ ವಿಶ್ವ ಕಪ್ ಗೆದ್ದಿರುವುದು ಪೂರ್ವ ನಿಯೋಜಿತ; ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ ರೈನಾ!

Karnataka Weather Forecast
ಮಳೆ40 mins ago

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Bridge Collapse
ದೇಶ51 mins ago

Bridge Collapse: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

dimond smuggling
ದೇಶ1 hour ago

Diamond Smuggling : ನೂಡಲ್ಸ್​ ಪ್ಯಾಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌