Site icon Vistara News

Ram Mandir: ರಾಮ ಮಂದಿರಕ್ಕೆ ಚಿನ್ನದ ಬಾಗಿಲುಗಳ ಅಳವಡಿಕೆ ಪೂರ್ಣ!

installation of Golden Doors of Ram Mandir Completed

ಅಯೋಧ್ಯಾ: ರಾಮ ಮಂದಿರ (Ram Mandir) ಪ್ರಾಣ ಪ್ರತಿಷ್ಠಾಪನೆಯ (Pran Pratistha) ಧಾರ್ಮಿಕ ವಿಧಿ ವಿಧಾನಗಳು ಜನವರಿ 16, ಮಂಗಳವಾರದಿಂದ ಆರಂಭವಾಗುತ್ತಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಮಧ್ಯೆ, ಗರ್ಭಗೃಹಕ್ಕೆ ಚಿನ್ನದ ಬಾಗಿಲುಗಳನ್ನು (Golden Doors) ಅಳವಡಿಸುವ ಕಾರ್ಯವೂ ಪೂರ್ತಿಯಾಗಿದೆ. ಚಿನ್ನದ ಬಾಗಿಲುಗಳ ಫೋಟೋಗಳನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ (Shri Ram Janmbhoomi Teerth Kshetra) ಎಕ್ಸ್ ವೇದಿಕೆಯಲ್ಲಿ ಬಿಡುಗಡೆ ಮಾಡಿದೆ.

ಭಗವಾನ್ ಶ್ರೀ ರಾಮಲಲ್ಲಾ ದೇವ ಅವರ ಗರ್ಭಗೃಹದಲ್ಲಿ ಚಿನ್ನದ ಬಾಗಿಲುಗಳನ್ನು ಅಳವಡಿಸುವುದರೊಂದಿಗೆ ನೆಲ ಮಹಡಿಯಲ್ಲಿ ಎಲ್ಲಾ ಚಿನ್ನದ ಬಾಗಿಲುಗಳ ಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಟ್ವೀಟ್ ಮಾಡಿದೆ.

ರಾಮ ಮಂದಿರ (Ram Mandir) ಪ್ರಾಣ ಪ್ರತಿಷ್ಠಾಪನೆ (Pran Pratishta) ಕಾರ್ಯಕ್ರಮಗಳು ನಾಳೆಯಿಂದ ಅಂದರೆ ಜನವರಿ 16ರಿಂದ ಶುರುವಾಗಲಿದ್ದು, ಜ.22ವರೆಗೂ ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಆಹ್ವಾನಿಸಲಾಗಿದ್ದು, ರಾಮ ಲಲ್ಲಾ (Ram Lalla) ಪ್ರಾಣ ಪ್ರತಿಷ್ಠಾಪನೆಯನ್ನು ನೆರವೇರಿಸಲಿದ್ದಾರೆ. ರಾಮ ಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ನಾಳೆಯಿಂದ ಕಾರ್ಯಕ್ರಮವು ಅಧಿಕೃತವಾಗಿ ಆರಂಭವಾಗಲಿದೆ. ಜನವರಿ 23ರಿಂದ ಭಕ್ತರಿಗೆ ರಾಮ ಮಂದಿರವು ಮುಕ್ತವಾಗಲಿದೆ ಎಂದು ತಿಳಿದು ಬಂದಿದೆ.

ದೇವಾಲಯದ ಟ್ರಸ್ಟ್ ಪ್ರಕಾರ, ರಾಜಕಾರಣಿಗಳು, ಸೆಲೆಬ್ರಿಟಿಗಳು, ಕೈಗಾರಿಕೋದ್ಯಮಿಗಳು, ಸಂತರು ಮತ್ತು ವಿವಿಧ ದೇಶಗಳ ಸುಮಾರು 100 ಪ್ರತಿನಿಧಿಗಳು ಸೇರಿದಂತೆ 7,000 ಕ್ಕೂ ಹೆಚ್ಚು ಜನರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಜನವರಿ 22 ಮಕರ ಸಂಕ್ರಾಂತಿಯ ನಂತರ ಬರುತ್ತದೆ. ಮಕರ ಸಂಕ್ರಾಂತಿ ಉತ್ತರದ ಕಡೆಗೆ ಸೂರ್ಯನ ಚಲನೆಯನ್ನು ಗುರುತಿಸುವ ಮಹತ್ವದ ಹಿಂದೂ ಪರ್ವ. ಇಲ್ಲಿಂದ ಬಳಿಕ ಉತ್ತರಾಯಣ. ಇದು ಮಂಗಳಕರ, ಬೆಳವಣಿಗೆ ಮತ್ತು ಹೊಸ ಆರಂಭದ ಸಮಯವೆಂದು ಪರಿಗಣಿಸಲಾಗಿದೆ. ಹಾಗಾಗಿ ಈ ಅವಧಿಯಲ್ಲಿ ಪ್ರಾಣ ಪ್ರತಿಷ್ಠಾಪನೆಯನ್ನ ಕೈಗೊಳ್ಳಲಾಗುತ್ತಿದೆ.

ಜನವರಿ 16
ದೇವಸ್ಥಾನದ ಟ್ರಸ್ಟ್ ನೇಮಿಸಿದ ಆತಿಥೇಯರಿಂದ ಸರಯೂ ನದಿಯ ದಡದಲ್ಲಿ ದಶವಿದ್ ಸ್ನಾನ, ವಿಷ್ಣು ಪೂಜೆ ಮತ್ತು ಗೋದಾನ.

ಜನವರಿ 17
ರಾಮಲಲ್ಲಾ ಮೂರ್ತಿಯೊಂದಿಗೆ ಅಯೋಧ್ಯೆಯಲ್ಲಿ ಮೆರವಣಿಗೆ ನಡೆಯಲಿದ್ದು, ಭಕ್ತರು ಮಂಗಲ ಕಲಶದಲ್ಲಿ ಸರಯು ಜಲವನ್ನು ಹೊತ್ತು ದೇವಸ್ಥಾನಕ್ಕೆ ಬರಲಿದ್ದಾರೆ.

ಜನವರಿ 18
ಗಣೇಶ ಅಂಬಿಕಾ ಪೂಜೆಗಳೊಂದಿಗೆ ಔಪಚಾರಿಕ ಪೂಜಾ ವಿಧಿ ವಿಧಾನಗಳು ಶುರುವಾಗಲಿವೆ. ವರುಣ ಪೂಜೆ, ಮತ್ರಿಕಾ ಪೂಜೆ, ಬ್ರಾಹ್ಮಿಣ್ ವರನ್, ವಾಸ್ತು ಪೂಜೆ ಸೇರಿದಂತೆ ವಿವಿಧ ಪೂಜೆ ಕಾರ್ಯಕ್ರಮಗಳು ನಡೆಯಲಿವೆ.

ಜನವರಿ 19
ಅಗ್ನಿ ಸ್ಥಾಪನೆ, ನವಗ್ರಹ ಸ್ಥಾಪನೆ ಮತ್ತು ಹವನ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಜನವರಿ 20
ದೇವಾಲಯದ ಗರ್ಭಗುಡಿಯನ್ನು ಸರಯುವಿನ ಪವಿತ್ರ ನೀರಿನಿಂದ ತೊಳೆದ ನಂತರ ವಾಸ್ತು ಶಾಂತಿ ಪೂಜಾ ವಿಧಿವಿಧಾನಗಳು ನಡೆಯಲಿವೆ.

ಜನವರಿ 21
125 ಕಲಶಗಳಿರುವ ದೈವ ಸ್ನಾನದ ನಂತರ ಶಯಾಧಿವಾಸ ನಡೆಯಲಿದೆ.

ಜನವರಿ 22
ಬೆಳಗಿನ ಪೂಜೆಯ ನಂತರ ಮಧ್ಯಾಹ್ನ ಮೃಗಶಿರ ನಕ್ಷತ್ರದಲ್ಲಿ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ನಡೆಯಲಿದೆ.

ಈ ಸುದ್ದಿಯನ್ನೂ ಓದಿ: Ram Mandir: ನಾಳೆಯಿಂದ ರಾಮ ಮಂದಿರ ಉದ್ಘಾಟನೆಯ ಧಾರ್ಮಿಕ ಕಾರ್ಯಕ್ರಮಗಳು ಶುರು

Exit mobile version