Site icon Vistara News

International Yoga Day 2024: ಇಂದು ಯೋಗ ದಿನ; ಕಾಶ್ಮೀರದಲ್ಲಿ ಮೋದಿ ಯೋಗಾಸನ, ವಿಶ್ವಾದ್ಯಂತ ಆಚರಣೆ

International Yoga Day 2024

International Yoga Day 2024: Narendra Modi Will Participate In Srinagar Programme, World Is Ready To Celebrate

ನವದೆಹಲಿ: ಇಂದು ಅಂತಾರಾಷ್ಟ್ರೀಯ ಯೋಗ ದಿನ. ಭಾರತ ಸೇರಿ ಜಗತ್ತಿನಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್ ಸೆಂಟರ್ (Sher-e-Kashmir International Conference Centre)ನಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆ (World Yoga Day) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಯೋಗ ದಿನದ ಕಾರ್ಯಕ್ರಮ ಆರಂಭವಾಗಲಿದೆ. ಭಾರತ ಮಾತ್ರವಲ್ಲ ಜಗತ್ತಿನಾದ್ಯಂತ (International Yoga Day 2024) ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಬೆಳಗ್ಗೆ 6.30ಕ್ಕೆ ನರೇಂದ್ರ ಮೋದಿ ಅವರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಅವರು ಭಾಷಣ ಮಾಡಲಿದ್ದಾರೆ.

ಯೋಗ ದಿನಾಚರಣೆಯಲ್ಲಿ 9 ಸಾವಿರ ಮಂದಿ ಭಾಗಿ

ಸತತ ಮೂರನೇ ಬಾರಿಗೆ ಕೇಂದ್ರ ಸಚಿವರಾದ ನಂತರ ಜಮ್ಮು ರಾಜಧಾನಿ ಶ್ರೀನಗರಕ್ಕೆ ಆಗಮಿಸಿದ ಬಿಜೆಪಿ ಮುಖಂಡ ಜಿತೇಂದ್ರ ಸಿಂಗ್, ಜೂನ್ 21ರಂದು ಶ್ರೀನಗರದಲ್ಲಿ ನಡೆಯಲಿರುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲಿದ್ದಾರೆ. ಇವರ ಜತೆ ಸುಮಾರು 9,000 ಮಂದಿ ಯೋಗ ಪ್ರದರ್ಶನ ನೀಡಲಿದ್ದಾರೆ ಮೂಲಗಳು ತಿಳಿಸಿವೆ.

Yoga for students

ಜಗತ್ತಿನ ಎಲ್ಲೆಲ್ಲೆ ಯೋಗ ದಿನಾಚರಣೆ?

ಭಾರತ ಸೇರಿದಂತೆ ಜಗತ್ತಿನಾದ್ಯಂತ 175ಕ್ಕೂ ಅಧಿಕ ರಾಷ್ಟ್ರಗಳು ಯೋಗ ದಿನವನ್ನು ಆಚರಿಸುತ್ತವೆ. ಅದರಲ್ಲೂ, ಅಮೆರಿಕ, ಬ್ರಿಟನ್‌, ಯುಎಇ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ಜಪಾನ್‌, ನ್ಯೂಜಿಲ್ಯಾಂಡ್‌, ಆಸ್ಟ್ರೇಲಿಯಾ ಸೇರಿ ಜಗತ್ತಿನಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತದೆ. ಬೇರೆ ದೇಶಗಳಲ್ಲಿರುವ ಭಾರತದ ರಾಯಭಾರ ಕಚೇರಿಗಳಲ್ಲೂ ಯೋಗ ಸೆಷನ್‌ಗಳ ಮೂಲಕ ಆಚರಣೆ ಮಾಡಲಾಗುತ್ತದೆ. ಈ ಬಾರಿ ಶಾರ್ಜಾದಲ್ಲಿ ಭಾರತದ ರಾಯಭಾರಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 5 ಸಾವಿರ ಜನ ಯೋಗ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Yoga for students

ನರೇಂದ್ರ ಮೋದಿ ಅವರ ಪ್ರಯತ್ನದ ಫಲವಾಗಿ ಜಗತ್ತಿನಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ. ಪ್ರಧಾನಿ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ ಪ್ರಸ್ತಾಪವನ್ನು ಇಟ್ಟರು. ಯಾಕಾಗಿ ಇದನ್ನ ಅಂತಾರಾಷ್ಟ್ರೀಯ ದಿನವನ್ನಾಗಿ ಆಚರಿಸಬೇಕು ಎಂಬುದಕ್ಕೆ ಸಮರ್ಥ ವಿವರಣೆಯನ್ನೂ ಭಾರತ ಕೊಟ್ಟಿತ್ತು. ಅದನ್ನು ವಿಶ್ವ ಸಂಸ್ಥೆ ಒಪ್ಪಿಕೊಂಡು, ಸದಸ್ಯ ರಾಷ್ಟ್ರಗಳು 2015ರಲ್ಲಿ ಅನುಮೋದಿಸಿವೆ. ಆಗಿನಿಂದ ಇಲ್ಲಿಯವರೆಗೆ ಭಾರತ, ಯೋಗಕ್ಕೆ ಸಂಬಂಧಪಟ್ಟ ಹಲವು ಕಾರ್ಯಕ್ರಗಳನ್ನು ಆಯೋಜಿಸುತ್ತಿದೆ. ವಿದೇಶಗಳಲ್ಲೂ ಯೋಗದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಅದರ ಮಹತ್ವವನ್ನು ಸಾರುತ್ತಿದೆ.

ಯೋಗದಲ್ಲಿರುವ ಬಗೆಗಳನ್ನು, ಇದು ಮನುಷ್ಯನ ಮನಸು, ದೇಹವನ್ನು ಆರೋಗ್ಯವನ್ನಾಗಿಸುವ ರೀತಿಯನ್ನು ಮನಮುಟ್ಟುವಂತೆ ಹೇಳುತ್ತಿದೆ. ಹೀಗಾಗಿ ಯೋಗದ ಪ್ರಸಿದ್ಧಿ ದಿನೇದಿನೇ ಪ್ರಖರಿಸುತ್ತಲೇ ಇದೆ. ಹೆಚ್ಚೆಚ್ಚು ರಾಷ್ಟ್ರಗಳು ಒಪ್ಪಿಕೊಳ್ಳುತ್ತಿವೆ. ಕೊವಿಡ್ 19 ಕಾಲದಲ್ಲೂ ಕೂಡ ಜಗತ್ತಿನಾದ್ಯಂತ ಯೋಗ ಅನೇಕರ ಕೈ ಹಿಡಿದಿದೆ. ಈ ವರ್ಷ ಜೂ.21ಕ್ಕೂ ಕೂಡ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲು ಅತ್ಯುತ್ಸಾಹದಿಂದ ಕಾಯುತ್ತಿವೆ.

ಇದನ್ನೂ ಓದಿ: Essay on Yoga: ವಿಶ್ವದ ಎಲ್ಲ ಜನರನ್ನು ಒಗ್ಗೂಡಿಸುತ್ತಿರುವುದು ಭಾರತದ ʼಯೋಗʼ

Exit mobile version