Interpol ಮಾಹಿತಿ, ಆತ್ಮಹತ್ಯೆಗೆ ಮುಂದಾಗಿದ್ದ ಯುವಕನನ್ನು ರಕ್ಷಿಸಿದ ಮುಂಬೈ ಪೊಲೀಸರು - Vistara News

ದೇಶ

Interpol ಮಾಹಿತಿ, ಆತ್ಮಹತ್ಯೆಗೆ ಮುಂದಾಗಿದ್ದ ಯುವಕನನ್ನು ರಕ್ಷಿಸಿದ ಮುಂಬೈ ಪೊಲೀಸರು

ಗೂಗಲ್‌ನಲ್ಲಿ ನೋವಿಲ್ಲದೇ ಹೇಗೆ ಸಾಯುವುದು ಎಂದು ಶೋಧಿಸುತ್ತಿದ್ದ ಯುವಕನ ಬಗ್ಗೆ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ ಇಂಟರ್‌ಪೋಲ್(Interpol). ಆ ಯುವಕನನ್ನು ಮುಂಬೈ ಪೊಲೀಸರು ಸರಕ್ಷಿಸಿದ್ದಾರೆ(Viral News).

VISTARANEWS.COM


on

Interpol Tips, Mumbai police rescued a young man who was about to commit suicide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಮೆರಿಕದ ರಕ್ಷಣಾ ಸಂಸ್ಥೆ ನೀಡಿದ ಸುಳಿವಿನ ಮೇರೆಗೆ ಚುರುಕಿನ ಕಾರ್ಯಾಚರಣೆ ನಡೆಸಿದ ಮುಂಬಯಿ (Mumbai) ಪೊಲೀಸರು, ಆತ್ಮಹತ್ಯೆಗೆ ಮುಂದಾಗಿದ್ದ ಯುವಕನ ಪ್ರಾಣ ರಕ್ಷಣೆ ಮಾಡಿದ್ದಾರೆ. ʼನೋವಿಲ್ಲದೆ ಜೀವ ಕಳೆದುಕೊಳ್ಳುವುದು ಹೇಗೆʼ ಎಂಬ ಕುರಿತು ಗೂಗಲ್‌ನಲ್ಲಿ ಹುಡುಕಾಡುತ್ತಿದ್ದ ವ್ಯಕ್ತಿಯ ಬಗ್ಗೆ ಮತ್ತು ಆತನ ಐಪಿ ವಿಳಾಸ ಮತ್ತು ಲೊಕೇಶನ್‌ ಮಾಹಿತಿಯನ್ನು ಅಮೆರಿಕದ ರಾಷ್ಟ್ರೀಯ ಸಂಸ್ಥೆ-ಇಂಟರ್‌ಪೋಲ್‌(Interpol), ದೆಹೆಲಿಯಲ್ಲಿರುವ (Delhi) ತನ್ನ ಸಹವರ್ತಿಗಳಿಗೆ ಮಾಹಿತಿ ನೀಡಿತ್ತು(viral news).

ಅಮೆರಿಕದಿಂದ ಬಂದ ಮಾಹಿತಿಯನ್ನು ಆಧರಿಸಿ, ಆತ ಮುಂಬಯಿಯ ಕುರ್ಲಾದಲ್ಲಿರುವುದನ್ನು ಪೊಲೀಸ್‌ ಅಧಿಕಾರಿಗಳು ಪತ್ತೆ ಮಾಡಿದ್ದರು. ಐಟಿ ಕಂಪನಿಯೊಂದರ ಉದ್ಯೋಗಿಯಾಗಿರುವ ೨೫ ವರ್ಷದ ಆತನನ್ನು ಮಂಗಳವಾರ ಮಧ್ಯಾಹ್ನ ವಶಕ್ಕೆ ತೆಗೆದುಕೊಂಡ ಮುಂಬಯಿ ಅಪರಾಧ ವಿಭಾಗದ ಪೊಲೀಸರು, ಆಪ್ತ ಸಲಹೆ- ಸಾಂತ್ವನವನ್ನೂ ನೀಡಿದ್ದಾರೆ.

ಜೋಗೇಶ್ವರಿಯ ನಿವಾಸಿಯಾಗಿರುವ ಆತ ಖಾಸಗಿ ಐಟಿ ಸಂಸ್ಥೆಯೊಂದರ ಉದ್ಯೋಗಿ. ತನ್ನ ವಿದ್ಯಾಭ್ಯಾಸ ಮತ್ತಿತರ ಕಾರಣಗಳಿಗಾಗಿ ಆತ ಸಾಲ ಮಾಡಿದ್ದು, ತೀರಿಸಲು ಸಾಧ್ಯವಾಗದೆ ಖಿನ್ನತೆಗೆ ಜಾರಿದ್ದ. ಮನೆ ಸಾಲದ ಕಂತುಗಳನ್ನು ಕಟ್ಟಲು ಸಹ ಆತನಿಗೆ ಕಷ್ಟವಾಗಿದ್ದರಿಂದ, ನೋವಿಲ್ಲದೆ ಆತ್ಮಹತ್ಯೆಗೆ ಮಾರ್ಗಗಳನ್ನು ಆತ ಹುಡುಕುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Interpol | ದಾವೂದ್‌, ಹಫೀಜ್‌ ಎಲ್ಲಿ ಎಂಬ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಪಾಕ್‌ನ ತನಿಖಾ ಸಂಸ್ಥೆ ಅಧಿಕಾರಿ

ಅಪರಾಧ ವಿಭಾಗದ ಕಚೇರಿಗೆ ಆತನನ್ನು ಕರೆತಂದ ಪೊಲೀಸರು ಆಪ್ತ ಸಲಹೆಯನ್ನು ನೀಡಿದ್ದಾರೆ. ಈ ಹಿಂದೆಯೂ ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಆತನನ್ನು‌ ಈಗ ಪೋಷಕರ ವಶಕ್ಕೆ ಒಪ್ಪಿಸಲಾಗಿದ್ದು, ಮನೋಚಿಕಿತ್ಸಕರಿಂದ ನೆರವು ಪಡೆಯುವಂತೆ ಸೂಚಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Maldives anti-India stance: ಭಾರತ ವಿರೋಧಿ ಹೇಳಿಕೆಗಳು ನಮ್ಮ ಸರ್ಕಾರದ ನಿಲುವಲ್ಲ ಎಂದು ನಾವು ಆರಂಭದಲ್ಲಿಯೇ ಹೇಳಿದ್ದೇವೆ. ಅದನ್ನು ಮಾಡಬಾರದಿತ್ತು ಎಂಬುದನ್ನೂ ಅರಿತುಕೊಂಡಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ನಾವು ಸರಿಯಾದ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪು ತಿಳುವಳಿಕೆ ಸೃಷ್ಟಿಯಾಗಿದೆ. ಏನಾಯಿತು ಎಂದು ಮಾಲ್ಡೀವ್ಸ್ ಮತ್ತು ಭಾರತದ ಸರ್ಕಾರಗಳು ಅರ್ಥಮಾಡಿಕೊಂಡಿವೆ” ಎಂದು ಮಾಲ್ಡೀವ್ಸ್ ಸಚಿವರು ಹೇಳಿಕೆ ನೀಡಿದ್ದಾರೆ.

VISTARANEWS.COM


on

Maldives anti-India stance
Koo

ನವ ದೆಹಲಿ: ಭಾರತದ ವಿರುದ್ಧ ನೀಡಿರುವ ಹೇಳಿಕೆ ಬಗ್ಗೆ ಮಾಲ್ಡೀವ್ಸ್ ಪಶ್ಚಾತಾಪ ವ್ಯಕ್ತಪಡಿಸಿದೆ. ಅವಹೇಳನಕಾರಿ ಹೇಳಿಕೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದಾಗಿ ದ್ವೀಪ ರಾಷ್ಟ್ರ ವಿದೇಶಾಂಗ ಸಚಿವ ಮೂಸಾ ಜಮೀರ್ ಗುರುವಾರ ಭರವಸೆ ನೀಡಿದ್ದಾರೆ. ಭಾರತ ಭೇಟಿಯಲ್ಲಿರುವ ಜಮೀರ್, ಮಾಲ್ಡೀವ್ಸ್ ಮತ್ತು ಭಾರತ ಸರ್ಕಾರಗಳು ಆಗಿರುವ ವಿಷಯಗಳನ್ನು ಅರ್ಥಮಾಡಿಕೊಂಡಿವೆ. ಆ ಹಂತವನ್ನು ದಾಟಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

“ಭಾರತ ವಿರೋಧಿ ಹೇಳಿಕೆಗಳು ನಮ್ಮ ಸರ್ಕಾರದ ನಿಲುವಲ್ಲ ಎಂದು ನಾವು ಆರಂಭದಲ್ಲಿಯೇ ಹೇಳಿದ್ದೇವೆ. ಅದನ್ನು ಮಾಡಬಾರದಿತ್ತು ಎಂಬುದನ್ನೂ ಅರಿತುಕೊಂಡಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ನಾವು ಸರಿಯಾದ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪು ತಿಳುವಳಿಕೆ ಸೃಷ್ಟಿಯಾಗಿದೆ. ಏನಾಯಿತು ಎಂದು ಮಾಲ್ಡೀವ್ಸ್ ಮತ್ತು ಭಾರತದ ಸರ್ಕಾರಗಳು ಅರ್ಥಮಾಡಿಕೊಂಡಿವೆ” ಎಂದು ಮಾಲ್ಡೀವ್ಸ್ ಸಚಿವರು ಹೇಳಿಕೆ ನೀಡಿದ್ದಾರೆ.

ಮಾಜಿ ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರು ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಮೋದಿ ಲಕ್ಷ್ಮ ದ್ವೀಪಕ್ಕೆ ಭೇಟಿ ನೀಡಿದ್ದ ಬಳಿಕ ಅವರು ಈ ಅನಪೇಕ್ಷಿತ ಹೇಳಿಕೆಗಳನ್ನು ಕೊಟ್ಟಿದ್ದರು. ನಂತರ ಉಭಯ ದೇಶಗಳ ನಡುವಿನ ಸಂಬಂಧದ ಹದಗೆಟ್ಟಿತ್ತು.

ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲ್ಡೀವ್ಸ್ ತೊರೆಯಲು ಮೊಹಮ್ಮದ್ ಮುಯಿಝು ಮೇ 10 ರ ಗಡುವನ್ನು ನಿಗದಿಪಡಿಸಿದ ನಂತರ ಸಂಬಂಧಗಳು ಮತ್ತಷ್ಟು ಹಾಳಾಗಿದ್ದವು. ಏತನ್ಮಧ್ಯೆ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಮೂಸಾ ಜಮೀರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಭಾರತ-ಮಾಲ್ಡೀವ್ಸ್ ಸಂಬಂಧಗಳ ಅಭಿವೃದ್ಧಿಯು “ಪರಸ್ಪರ ಹಿತಾಸಕ್ತಿಗಳನ್ನು” ಆಧರಿಸಿದೆ ಎಂದು ಒಪ್ಪಿಕೊಂಡಿದ್ದಾರೆ.

ಮಾಲ್ಡೀವ್ಸ್ ಮತ್ತು ಭಾರತದ ನಡುವೆ ದ್ವಿಪಕ್ಷೀಯ ಮತ್ತು ಅಂತರರಾಷ್ಟ್ರೀಯ ಸಂಬಂಧ ವೃದ್ಧಿಸುವ ಮತ್ತು ಪರಸ್ಪರ ವಿನಿಮಯ ಹೆಚ್ಚಿಸುವ ಬಗ್ಗೆ ನಾವು ನಮ್ಮ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ ಎಂದು ಜಮೀರ್ ಸಭೆಯ ನಂತರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

ಪ್ರವಾಸೋದ್ಯಮ ಕುಸಿತದ ಬಗ್ಗೆ ಪ್ರತಿಕ್ರಿಯೆ

ಮಾಲ್ಡೀವ್ಸ್ ಗೆ ಪ್ರಯಾಣಿಸಲು ಬಯಸುವ ಎಲ್ಲಾ ಭಾರತೀಯರಿಗೆ ವೈಯಕ್ತಿಕವಾಗಿ ಮತ್ತು ಮಾಲ್ಡೀವ್ಸ್ ಜನರ ಪರವಾಗಿ ಆತ್ಮೀಯ ಸ್ವಾಗತ ನೀಡಲು ಬಯಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ. ಮಾಲ್ಡೀವ್ಸ್​ಗೆ ಭೇಟಿ ನೀಡುವುದನ್ನು ಮುಂದುವರಿಸಲು ನಾವು ಎಲ್ಲಾ ಭಾರತೀಯ ಪ್ರವಾಸಿಗರನ್ನು ಪ್ರೋತ್ಸಾಹಿಸಲು ಬಯಸುತ್ತೇವೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ, ಭಾರತೀಯ ಪ್ರಯಾಣಿಕರು ನಿಜವಾಗಿಯೂ ಮಾಲ್ಡೀವ್ಸ್​​​ಗೆ ಗಮನಾರ್ಹ ಸಂಖ್ಯೆಯಲ್ಲಿ ಆಗಮಿಸಿದರು. ಆ ಪ್ರವೃತ್ತಿ ಮುಂದುವರೆದಿದೆ. ಕಳೆದ ಎರಡು ತಿಂಗಳುಗಳಲ್ಲಿ, ನಾವು 16 ರಿಂದ 17% ಹೆಚ್ಚಳ ಕಂಡಿದ್ದೇವೆ. ಭಾರತೀಯ ಮಾರುಕಟ್ಟೆಗಳಲ್ಲಿ ಇಳಿಕೆ ಕಂಡುಬಂದಿದ್ದರೂ, ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

Continue Reading

Latest

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Dog Bite: ಮಾಧ್ಯಮಗಳ ವರದಿಗಳ ಪ್ರಕಾರ, ನಾಯಿಯ ಕಡಿತಕ್ಕೆ ಒಳಗಾಗ ಮಗು ಗಂಭೀರವಾಗಿ ಗಾಯಗೊಂಡಿದೆ. ಘಟನೆಯ ನಂತರ ನಿವಾಸಿಗಳೆಲ್ಲರೂ ಒಟ್ಟಿಗೆ ಜಮಾಯಿಸಿ ಆ ಸೊಸೈಟಿಯಲ್ಲಿ ವಾಸಿಸುವ ನಾಯಿಗಳಿಗೆ ಆಹಾರ ನೀಡುವವರ ವಿರುದ್ಧ ಪ್ರತಿಭಟಿಸಿದರು. ನಾಯಿಗೆ ಆಹಾರ ಹಾಕುವ ದಂಪತಿ ಸೇರಿ ಹಲವರ ಮೇಲೆ ದೂರು ದಾಖಲಿಸಿದ್ದಾರೆ.

VISTARANEWS.COM


on

Dog bite
Koo

ನವ ದೆಹಲಿ: ನೋಯ್ಡಾದ ಸೆಕ್ಟರ್ -70 ರ (Noida Society) ವಸತಿ ಸೊಸೈಟಿಯಲ್ಲಿ ಬಾಲಕನೊಬ್ಬನಿಗೆ ಬೀದಿ ನಾಯಿಯೊಂದು ಕಚ್ಚಿದ ಪರಿಣಾಮ (Dog Bite) ಕೆರಳಿ ಕೆಂಡವಾದ ಅಪಾರ್ಟ್​ಮೆಂಟ್ ನಿವಾಸಿಗಳು, ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಈ ಘಟನೆಯ ವಿಡಿಯೊ ವೈರಲ್​ ಆಗಿದ್ದು ಪರ- ವಿರೋಧ ಚರ್ಚೆ ಜೋರಾಗಿ ನಡೆದಿದೆ. ಅದಕ್ಕಿಂತಲೂ ಹೆಚ್ಚಾಗಿ ಅಪಾರ್ಟ್​ಮೆಂಟ್​ ಒಳಗೆ ದೊಡ್ಡ ಸಂಖ್ಯೆಯಲ್ಲಿ ಜನರ ಏಕಾಏಕಿ ಜಮಾಯಿಸಿದ್ದು ಕಂಡು ಸಾಕಷ್ಟು ಜನರು ಇಂಥದ್ದು ನಡೆಯಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮಗಳ ವರದಿಗಳ ಪ್ರಕಾರ, ನಾಯಿಯ ಕಡಿತಕ್ಕೆ ಒಳಗಾಗ ಮಗು ಗಂಭೀರವಾಗಿ ಗಾಯಗೊಂಡಿದೆ. ಘಟನೆಯ ನಂತರ ನಿವಾಸಿಗಳೆಲ್ಲರೂ ಒಟ್ಟಿಗೆ ಜಮಾಯಿಸಿ ಆ ಸೊಸೈಟಿಯಲ್ಲಿ ವಾಸಿಸುವ ನಾಯಿಗಳಿಗೆ ಆಹಾರ ನೀಡುವವರ ವಿರುದ್ಧ ಪ್ರತಿಭಟಿಸಿದರು. ನಾಯಿಗೆ ಆಹಾರ ಹಾಕುವ ದಂಪತಿ ಸೇರಿ ಹಲವರ ಮೇಲೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Fireworks Blast : ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿಯ ದುರ್ಮರಣ

ಉದ್ರಿಕ್ತ ಗುಂಪು ಶುಭಂ ಮತ್ತು ಸಂಕಲಿತಾ ಎಂಬ ಹೆಸರಿನ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅವರು ಕೂಡ ಪೊಲೀಸ್​ ದೂರು ನೀಡಿದ್ದಾರೆ. ಇದೆ ವೇಳೆ ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರನ್ನು ತಳ್ಳಿದ್ದಾರೆ ಎನ್ನಲಾಗಿದೆ. ಕರ್ತವ್ಯದಲ್ಲಿದ್ದ ಕಾನ್ಸ್​ಟೇಬಲ್​​ಗಳು ಈ ಬಗ್ಗೆ ದೂರು ನೀಡಿದ್ದಾರೆ. ಗಲಾಟೆ ವೇಳೆ ಕೆಲವರು ಸಿಸಿ ಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲು ಸಹ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ದಂಪತಿಯ ಆರೋಪ

ಗಲಾಟೆಯನ್ನು ರೆಕಾರ್ಡ್ ಮಾಡಲು ಮುಂದಾದಾಗ ಅವರಲ್ಲಿ ಒಬ್ಬರು ನನ್ನ ಹೆಂಡತಿಯ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿದರು. ಅಲ್ಲದೆ ಅವಳಿಗೆ ಗಾಯ ಮಾಡಿದ್ದಾರೆ ಎಂದು ಶುಭಮ್ ಹೇಳಿದ್ದಾರೆ. ನನ್ನನ್ನು ರಕ್ಷಿಸಲು ಬಂದ ತನ್ನ ಕೆಲವು ಸ್ನೇಹಿತರನ್ನೂ ಎಳೆದಾಡಿದ್ದಾರೆ. ಅದರ ದೃಶ್ಯಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪೀಪಲ್ ಫಾರ್ ಅನಿಮಲ್ಸ್ (ಪಿಎಫ್ಎ) ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ, ಗುಂಪಿನ ವೀಡಿಯೊವನ್ನು ಹಂಚಿಕೊಂಡಿದೆ. “ನೋಯ್ಡಾದ ಸೆಕ್ಟರ್ 70 ರ ಪಾನ್ ಒಯಾಸಿಸ್​ನಲ್ಲಿ ಹಿಂಸಾತ್ಮಕ ಗುಂಪು ನಾಯಿಗಳಿಗೆ ಆಹಾರ ಮತ್ತು ಆರೈಕೆ ಮಾಡುವ ಯುವ ದಂಪತಿ ಮೇಲೆ ದಾಳಿ ಮಾಡಿ ಕಾನೂನು ಉಲ್ಲಂಘಿಸಿದೆ. ಪೊಲೀಸರನ್ನು ಸಹ ತಳ್ಳಲಾಗಿದೆ. ಗಲಭೆಕೋರರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದೆ.

ನಾಯಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿಸಿ ಲಸಿಕೆ ಹಾಕಿದ ಆರೈಕೆದಾರಿಗೆ ಹಲ್ಲೆ ಮಾಡಲಾಗಿದೆ. ಅಶ್ಲೀಲವಾಗಿ ನಿಂದಿಸಲಾಗಿದೆ ಮತ್ತು ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಪ್ರಾಣಿ ಕಲ್ಯಾಣ ಸಂಸ್ಥೆ ಹೇಳಿದೆ.

Continue Reading

ಪ್ರಮುಖ ಸುದ್ದಿ

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Sensex Crash: ರಾಜಕೀಯ ಅನಿಶ್ಚಿತತೆಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಲ್ &ಟಿ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಐಟಿಸಿ ಸೇರಿದಂತೆ ದೊಡ್ಡ ಸಂಸ್ಥೆಗಳ ಷೇರುಗಳು ವ್ಯಾಪಕ ಮಾರಾಟವನ್ನು ಕಂಡವು. ಈ ಪ್ರಮುಖ ಕಂಪನಿಗಳ ಸೂಚ್ಯಂಕದ ಕುಸಿತವು ಒಟ್ಟಾರೆ ಕುಸಿತ 80 ಪ್ರತಿಶತದಷ್ಟು ಪಾಲು ಹೊಂದಿದೆ. ಷೇರು ಮಾರುಕಟ್ಟೆಗಳ ಮೇಲೆ ಗಣನೀಯವಾಗಿ ಕೆಳಮುಖ ಒತ್ತಡ ಬೀರಿದೆ.

VISTARANEWS.COM


on

Sensex crash
Koo

ಮುಂಬಯಿ : ಎಫ್ ಐಐ ಹೊರಹರಿವು ಮತ್ತು ಯುಎಸ್ ಬಾಂಡ್ ಹೆಚ್ಚಳದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಗಳು ಗುರುವಾರ ತೀವ್ರ ಕುಸಿತ (Sensex Crash) ಕಂಡಿವೆ. ಬಿಎಸ್ಇ (BSE) ಸೆನ್ಸೆಕ್ಸ್ 1,132 ಪಾಯಿಂಟ್ಸ್ ಕುಸಿದು 72,334 ಕ್ಕೆ ತಲುಪಿದ್ದರೆ, ನಿಫ್ಟಿ 50 370 ಪಾಯಿಂಟ್ಸ್ ಕುಸಿದು 21,932 ಕ್ಕೆ ತಲುಪಿದೆ. ಬಿಎಸ್ಇ ಸೂಚ್ಯಂಕವು ಅಂತಿಮವಾಗಿ 1,062 ಪಾಯಿಂಟ್​​ ಅಂದರೆ ಶೇಕಡಾ 1.45 ರಷ್ಟು ಕುಸಿದು 72,404 ಕ್ಕೆ ಕೊನೆಗೊಂಡಿತು. ನಿಫ್ಟಿ 50 ಕೂಡ 345 ಪಾಯಿಂಟ್ ಅಂದರೆ ಶೇಕಡಾ 1.55 ರಷ್ಟು ಕುಸಿದು 21,958 ಕ್ಕೆ ತಲುಪಿದೆ.

ಮಾರುಕಟ್ಟೆಗಳಲ್ಲಿ, ಬಿಎಸ್ಇ ಮಿಡ್​ಕ್ಯಾಪ್​ ಸೂಚ್ಯಂಕವು ಶೇಕಡಾ 2 ರಷ್ಟು ಕುಸಿದರೆ, ಬಿಎಸ್ಇ ಸ್ಮಾಲ್ ಕ್ಯಾಪ್ ಸೂಚ್ಯಂಕವು ಶೇಕಡಾ 2.4 ರಷ್ಟು ಕುಸಿದಿದೆ. “ಮಾರುಕಟ್ಟೆಯ ಕುಸಿತಕ್ಕೆ ಮುಖ್ಯವಾಗಿ ಸಾರ್ವತ್ರಿಕ ಚುನಾವಣೆಗಳ ಸುತ್ತಲಿನ ಅನಿಶ್ಚಿತತೆ ಕಾರಣವಾಗಿದೆ. ಈ ಅನಿಶ್ಚಿತತೆಯು ಭಾರತದ ಚಂಚಲತೆಯ ಮಾಪಕವಾದ ಇಂಡಿಯಾ ವಿಐಎಕ್ಸ್ ಅನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಇದು 52 ವಾರಗಳ ಗರಿಷ್ಠ 19 ಕ್ಕೆ ತಲುಪಿದೆ, ಇದು ಮಾರುಕಟ್ಟೆ ಆತಂಕವನ್ನು ಸೂಚಿಸಿದೆ. ಲಾರ್ಜ್ ಕ್ಯಾಪ್ ಕಂಪನಿಗಳ ನಾಲ್ಕನೇ ತ್ರೈಮಾಸಿಕ ಗಳಿಕೆಯ ಇಳಿಕೆಯು ಹೂಡಿಕೆದಾರರ ನಿರಾಸಕ್ತಿಗೆ ಕಾರಣವಾಗಿದೆ ಎಂದು ಷೇರು ಮಾರುಕಟ್ಟೆ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ಅನಿಶ್ಚಿತತೆಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಲ್ &ಟಿ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಐಟಿಸಿ ಸೇರಿದಂತೆ ದೊಡ್ಡ ಸಂಸ್ಥೆಗಳ ಷೇರುಗಳು ವ್ಯಾಪಕ ಮಾರಾಟವನ್ನು ಕಂಡವು. ಈ ಪ್ರಮುಖ ಕಂಪನಿಗಳ ಸೂಚ್ಯಂಕದ ಕುಸಿತವು ಒಟ್ಟಾರೆ ಕುಸಿತ 80 ಪ್ರತಿಶತದಷ್ಟು ಪಾಲು ಹೊಂದಿದೆ. ಷೇರು ಮಾರುಕಟ್ಟೆಗಳ ಮೇಲೆ ಗಣನೀಯವಾಗಿ ಕೆಳಮುಖ ಒತ್ತಡಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಮೇ ತಿಂಗಳಾದ್ಯಂತ ತಮ್ಮ ಹೂಡಿಕೆಗಳನ್ನು ಸಕ್ರಿಯವಾಗಿ ಮಾರಾಟ ಮಾಡುತ್ತಿದ್ದಾರೆ. ಒಟ್ಟು ಮಾರಾಟ 15,863.14 ಕೋಟಿ ರೂ. ಆಗಿದ್ದು ಇದು ಕೂಡ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಮೇ 8 ರಂದು ವಿದೇಶಿ ಹೂಡಿಕೆದಾರರು 6,669.10 ಕೋಟಿ ರೂ.ಗಳ ಈಕ್ವಿಟಿಗಳನ್ನು ಹಿಂತೆಗೆದುಕೊಂಡಿದ್ದಾರೆ. ವಿದೇಶಿ ಬಂಡವಾಳ ಹೂಡಿಕೆದಾರರು 2025ರ ಹಣಕಾಸು ವರ್ಷದಲ್ಲಿ ಇದುವರೆಗೆ 13,747 ಕೋಟಿ ರೂ.ಗಳ ಈಕ್ವಿಟಿಗಳನ್ನು ಹಿಂತೆಗೆದುಕೊಂಡಿದ್ದಾರೆ.

ದೇಶೀಯ ಸಾಂಸ್ಥಿಕ ಹೂಡಿಕೆದಾರರಿಂದ (ಡಿಐಐ) ಕಡಿಮೆ ಖರೀದಿ ಚಟುವಟಿಕೆಯು ಮಾರುಕಟ್ಟೆಯ ಚಂಚಲತೆಗೆ ಕಾರಣವಾಗಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ. ಕಳೆದ ಒಂದು ತಿಂಗಳಲ್ಲಿ, ನಿಫ್ಟಿ ಶೇಕಡಾ 1.5 ರಷ್ಟು ಕುಸಿದರೆ, ಶಾಂಘೈ ಕಾಂಪೊಸಿಟ್ ಶೇಕಡಾ 2.62 ಮತ್ತು ಹ್ಯಾಂಗ್ ಸೆಂಗ್ ಶೇಕಡಾ 8.8 ರಷ್ಟು ಏರಿಕೆಯಾಗಿದೆ. ಚೀನಾ ಮತ್ತು ಹಾಂಗ್ ಕಾಂಗ್ ಮಾರುಕಟ್ಟೆಗಳು ಸುಮಾರು 10 ಪಿಇಗಳೊಂದಿಗೆ ಇಳಿಕೆ ಕಂಡಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಲೋಕ ಸಭಾ ಚುನಾವಣೆಯ ಆರಂಭಿಕ ಮೂರು ಹಂತಗಳಲ್ಲಿ ಕಂಡುಬಂದ ಕಡಿಮೆ ಮತದಾನವು ಮಾರುಕಟ್ಟೆಗಳ ಆತಂಕ ಹೆಚ್ಚಿಸಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Continue Reading

ಪ್ರಮುಖ ಸುದ್ದಿ

Fireworks Blast : ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿಯ ದುರ್ಮರಣ

VISTARANEWS.COM


on

fireworks blast
Koo

ಶಿವಕಾಶಿ: ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ (Fireworks Blast) 8 ಜನರು ಸಾವನ್ನಪ್ಪಿದ್ದಾರೆ. ಭಾರತದ ಪಟಾಕಿ ಕೇಂದ್ರ ಎಂದು ಕರೆಯಲ್ಪಡುವ ಶಿವಕಾಶಿ (Sivakashi) ಬಳಿಯ ಪಟಾಕಿ ಉತ್ಪಾದನಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮೃತಪಟ್ಟಿರುವವರ ಜತೆ ಇನ್ನೂ ಹನ್ನೆರಡು ಮಂದಿ ಗಂಭೀರ ಪ್ರಮಾಣದ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ. ದುರ್ಘಟನೆ ನಡೆದ ಕಾರ್ಖಾನೆ ಲೈಸನ್ಸ್​ ಪಡೆದ ಕಾರ್ಖಾನೆಯಾಗಿದೆ.

ಸ್ಫೋಟದ ಹಿಂದಿನ ಕಾರಣವನ್ನು ಕಂಡುಹಿಡಿಯಲು ಪೊಲೀಸರೊಂದಿಗೆ ಸ್ಥಳೀಯ ತನಿಖಾ ಸಂಸ್ಥೆಗಳು ತನಿಖೆ ಪ್ರಾರಂಭಿಸಿವೆ. ದುರಂತ ಘಟನೆಗೆ ಕಾರಣವಾದ ಸಂಭಾವ್ಯ ಅಂಶಗಳ ಬಗ್ಗೆ ತನಿಖೆ ನಡೆಸುತ್ತಿವೆ. ಭಾರತದ ಪಟಾಕಿ ಉತ್ಪಾದನಾ ಕೇಂದ್ರವೆಂದು ಪ್ರಸಿದ್ಧವಾಗಿರುವ ಶಿವಕಾಶಿ ಭಾರತದಲ್ಲಿ ಅತಿ ಹೆಚ್ಚು ಪಟಾಕಿಗಳು ತಯಾರಿಸುವ ಕೇಂದ್ರವಾಗಿದೆ. ಇಲ್ಲಿ ಅದೇ ರೀತಿ ಸ್ಟೇಷನರಿ ವಸ್ತುಗಳ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಘಟನೆಯಿಂದಾಗಿಸ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ.

ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

ಶ್ರೀನಗರ: ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಮೇ 4ರಂದು ಭಾರತೀಯ ವಾಯುಪಡೆಯ ಬೆಂಗಾವಲು ಪಡೆಯ (Indian Air Force) ಎರಡು ವಾಹನಗಳ ಮೇಲೆ ದಾಳಿ ನಡೆಸಿದ ಉಗ್ರರ (Poonch Terrorists) ಫೋಟೊಗಳು, ಅವರ ಹೆಸರು ಬಹಿರಂಗವಾಗಿದೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಉಗ್ರರ ಫೋಟೊಗಳನ್ನು ಬಿಡುಗಡೆ ಮಾಡಲಾಗಿದ್ದು, ಭಾರತೀಯ ಸೇನೆಯು (Indian Army) ಇವರನ್ನು ಹೊಡೆದುರುಳಿಸಲು ಪ್ಲಾನ್‌ ರೂಪಿಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಾಯುಪಡೆ ವಾಹನಗಳ ಮೇಲೆ ದಾಳಿ ಮಾಡಿದ ಮೂವರನ್ನು ಇಲಿಯಾಸ್‌ (ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ), ಲಷ್ಕರೆ ತಯ್ಬಾ ಕಮಾಂಡರ್‌ ಅಬು ಹಮ್ಜಾ ಹಾಗೂ ಹದೂನ್‌ ಎಂಬುದಾಗಿ ಗುರುತಿಸಲಾಗಿದೆ. ಇಲಿಯಾಸ್‌ನ ಕೋಡ್‌ ನೇಮ್‌ (ಗೌಪ್ಯ ಹೆಸರು) ಫೌಜಿ ಎಂಬುದಾಗಿದೆ ಎಂದು ಕೂಡ ತಿಳಿದುಬಂದಿದೆ. ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆಯ ಪೀಪಲ್ಸ್‌ ಆ್ಯಂಟಿ-ಫ್ಯಾಸಿಸ್ಟ್‌ ಫ್ರಂಟ್‌ ಎಂಬ ಅಂಗಸಂಸ್ಥೆಯ ಪರವಾಗಿ ಉಗ್ರರು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇ 4ರಂದು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ವಾಯುಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಪೂಂಚ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವ ಬಗ್ಗೆ ಮೊದಲೇ ಸೇನೆಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ನಿಟ್ಟಿನಲ್ಲಿ ಅರೆ ಸೈನಿಕ ಪಡೆ ಮತ್ತು ಪೊಲೀಸರು ಅವರ ಪತ್ತೆಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿತ್ತು.

ಸಿಸಿಟಿವಿ ದೃಶ್ಯಗಳು ಹಾಗೂ ಫೋಟೊಗಳನ್ನು ಪರಿಶೀಲನೆ ಮಾಡುತ್ತಿರುವ ಭಾರತೀಯ ಸೇನೆಯು ರಾಜೌರಿ ಹಾಗೂ ಪೂಂಚ್‌ನ ಅರಣ್ಯ ಪ್ರದೇಶದಲ್ಲಿ‌ ಮೂವರ ಹತ್ಯೆಗಾಗಿ ಬೃಹತ್ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಕೆಲವೆಡೆ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪೂಂಚ್‌ ದಾಳಿಯ ಬಳಿಕ ಕುಲ್ಗಾಮ್‌ನಲ್ಲಿ ಲಷ್ಕರೆ ತಯ್ಬಾದ ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಯೋಧರು ಸೇಡು ತೀರಿಸಿಕೊಂಡಿದ್ದರು. ಮೇ 6ರಂದು ಕುಲ್ಗಾಮ್‌ನಲ್ಲಿ ಲಷ್ಕರೆ ತಯ್ಬಾ ಉಗ್ರ ಸಂಘಟನೆಯ ಕಮಾಂಡರ್‌, ಮೋಸ್ಟ್‌ ವಾಂಟೆಡ್‌ ಉಗ್ರ ಸೇರಿ ಒಟ್ಟು ಮೂವರು ಹತ್ಯೆಗೈದಿದ್ದರು.

Continue Reading
Advertisement
Maldives anti-India stance
ಪ್ರಮುಖ ಸುದ್ದಿ39 mins ago

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Self Harming Guest lecturer hangs herself to death
ಕರ್ನಾಟಕ59 mins ago

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

karnataka weather Forecast
ಮಳೆ1 hour ago

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Dog bite
Latest1 hour ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Toxic Shawarma
ಆರೋಗ್ಯ2 hours ago

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

Sensex crash
ಪ್ರಮುಖ ಸುದ್ದಿ2 hours ago

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Dietary Guidelines
ಆರೋಗ್ಯ2 hours ago

Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

Bananas mangoes crops and houses damaged due to heavy rain in Gangavathi
ಮಳೆ2 hours ago

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

New fashion Trend
ಫ್ಯಾಷನ್2 hours ago

New Fashion Trend: ಕ್ವೀನ್‌ ಲುಕ್‌ ನೀಡುವ ಡಿಸೈನರ್‌ ಪರ್ಲ್ ಶೈಲಿಯ ಹೆಡ್‌ಬ್ಯಾಂಡ್‌

Akshattadigi Amavasya Devotees darshan of Sri Guru Kottureswara Swamy
ವಿಜಯನಗರ2 hours ago

Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ6 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ7 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು9 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌