Rahul Gandhi | ಮಾಜಿ ಸಚಿವ ಜಿತೇಂದ್ರ ಸಿಂಗ್, ರಾಹುಲ್ ಗಾಂಧಿಯ ಶೂ ಲೇಸ್ ಕಟ್ಟಿದ್ರಾ? ಬಿಜೆಪಿ ಹೇಳಿದ್ದೇನು? - Vistara News

ದೇಶ

Rahul Gandhi | ಮಾಜಿ ಸಚಿವ ಜಿತೇಂದ್ರ ಸಿಂಗ್, ರಾಹುಲ್ ಗಾಂಧಿಯ ಶೂ ಲೇಸ್ ಕಟ್ಟಿದ್ರಾ? ಬಿಜೆಪಿ ಹೇಳಿದ್ದೇನು?

ಭಾರತ್ ಜೋಡೋ ಯಾತ್ರೆಯಲ್ಲಿ ಕೇಂದ್ರದ ಮಾಜಿ ಸಚಿವರೊಬ್ಬರು ರಾಹುಲ್ ಗಾಂಧಿ ಅವರ (Rahul Gandhi) ಶೂ ಲೇಸ್ ಕಟ್ಟುತ್ತಿದ್ದಾರೆಂದು ಬಿಜೆಪಿಯ ನಾಯಕ ಅಮಿತ್ ಮಾಳವೀಯಾ ಮಾಡಿರುವ ಟ್ವೀಟ್ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ (Rahul Gandhi) ಅವರ ಶೂ ಲೇಸ್ ಮಾಜಿ ಕೇಂದ್ರ ಸಚಿವರೊಬ್ಬರು ಕಟ್ಟಿದ್ದಾರೆಂದು ಆರೋಪಿಸಿ, ಅದಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದನ್ನು ಬಿಜೆಪಿ ಐಟಿ ಹೆಡ್ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ವಿವಾದಕ್ಕೆ ಕಾರಣವಾಗಿದ್ದು, ”ನನ್ನ ಶೂ ಲೇಸ್ ಕಟ್ಟಿಕೊಳ್ಳುತ್ತಿದ್ದೆ. ಒಂದು ವೇಳೆ, ರಾಹುಲ್ ಗಾಂಧಿ ಅವರಿಗೆ ಕ್ಷಮೆ ಕೇಳದಿದ್ದರೆ ಕಾನೂನು ಕ್ರಮ ಎದುರಿಸಿ,” ಎಂದು ಮಾಜಿ ಸಚಿವ ಜಿತೇಂದ್ರ ಸಿಂಗ್ ಎಚ್ಚರಿಸಿದ್ದಾರೆ.

ಮಾಳವೀಯ ಟ್ವೀಟ್ ಮಾಡಿರುವ ವಿಡಿಯೋದಲ್ಲಿ, ಯಾತ್ರೆ ವೇಳೆ ಮಾಜಿ ಸಚಿವ ಜಿತೇಂದ್ರ ಸಿಂಗ್ ಅವರು, ರಾಹುಲ್ ಗಾಂಧಿ ಎದುರಾಗಿ ಕೆಳಗೆ ಬಗ್ಗೆ ಏನೋ ಕಟ್ಟುತ್ತಿರುವಂತಿದೆ. ಮಾಳವೀಯ ಮಾತ್ರ, ರಾಹುಲ್ ಗಾಂಧಿ ಅವರ ಶೂ ಲೇಸ್ ಅನ್ನು ಮಾಜಿ ಸಚಿವರು ಕಟ್ಟುತ್ತಿದ್ದಾರೆಂದು ಆರೋಪಿಸಿದ್ದಾರೆ.

”ಮಾಜಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ರಾಹುಲ್ ಗಾಂಧಿ ಮುಂದೆ ಬಗ್ಗಿ ಅವರ ಶೂ ಲೇಸ್ ಕಟ್ಟಿದ್ದಾರೆ. ದುರಹಂಕಾರಿ ಎಂಬ ಬಿರುದು ಹೊತ್ತಿರುವ ವ್ಯಕ್ತಿ(ರಾಹುಲ್ ಗಾಂಧಿ) ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳುವುದರ ಬದಲಿಗೆ ಮೊತ್ತಬ್ಬರಿಂದ ಮಾಡಿಸುತ್ತಿದ್ದಾರೆ. ಈ ಪದ್ಧತಿಯ ಕುರಿತೇ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಿದ್ದದ್ದು? ತಲೆಮಾರುಗಳು ಕಳೆದರೂ ಕಾಂಗ್ರೆಸ್‌ನಲ್ಲಿ ಇಂಥದ್ದಕ್ಕೆ ಕೊರತೆ ಇಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಮಿತ್ ಮಾಳವೀಯ ಟ್ವೀಟ್ ಮಾಡುತ್ತಿದ್ದಂತೆ ಹಲವರು ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿ, ಜಿತೇಂದ್ರ ಸಿಂಗ್ ಅವರ ಶೂ ಲೇಸ್ ಬಿಚ್ಚಿರುವ ಮತ್ತು ಅವರು ತಮ್ಮದೇ ಶೂ ಲೇಸ್ ಕಟ್ಟಿಕೊಳ್ಳುತ್ತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಕೆಲವರಂತೂ ಬಿಜೆಪಿಯ ಫೇಕ್ ನ್ಯೂಸ್ ಫ್ಯಾಕ್ಟರಿಯ ಪಿತಾಮಹ ಎಂದು ಜರೆದಿದ್ದಾರೆ.

ಎಲ್ಲಕ್ಕಿಂತ ಹೆಚ್ಚಾಗಿ ಸ್ವತಃ ಜಿತೇಂದ್ರ ಸಿಂಗ್ ಅವರು ಮಾಳವೀಯ ಟ್ವೀಟ್‌ಗೆ ಪ್ರತಿಕ್ರಿಯಿಸಿ, ”ಆಡಳಿತ ಪಕ್ಷ ಬಿಜೆಪಿಯ ಐಟಿ ಹೆಡ್ ಆಗಿ ನೀವು ಮಾಡಿರುವ ಟ್ವೀಟ್ ಸಂಪೂರ್ಣವಾಗಿ ಸುಳ್ಳು ಮತ್ತು ಅವಮಾನಕಾರಿಯಾಗಿದೆ. ಸತ್ಯ ಏನೆಂದರೆ, ನನ್ನ ಮನವಿ ಮೇರೆಗೆ ರಾಹುಲ್ ಅವರು ಯಾತ್ರೆಯನ್ನು ಸ್ವಲ್ಪ ಸ್ಥಗಿತ ಮಾಡಿ, ನನ್ನ ಶೂ ಲೇಸ್ ಕಟ್ಟಿಕೊಳ್ಳಲು ಅವಕಾಶ ಮಾಡಿಕೊಟ್ಟರು. ಹಾಗಾಗಿ, ಕೂಡಲೇ ಟ್ವೀಟ್ ಡಿಲೀಟ್ ಮಾಡಿ, ರಾಹುಲ್ ಗಾಂಧಿ ಅವರಿಗೆ ಕ್ಷಮೆ ಕೇಳಬೇಕು. ಇಲ್ಲವೇ ಕಾನೂನು ಕ್ರಮ ಎದುರಿಸಿ,” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ | Rahul Gandhi | ʼಇದು ನೆಹರು ಕಾಲದ ಭಾರತವಲ್ಲʼ, ಚೀನಾ, ಸೇನೆ ಬಗ್ಗೆ ರಾಹುಲ್‌ ಹೇಳಿಕೆಗೆ ಬಿಜೆಪಿ ನಾಯಕರ ತಿರುಗೇಟು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

ಫೈಸಲ್‌ ರಾಜಾ ಅಬಿದಿ ಎಂಬ ಪಾಕಿಸ್ತಾನದ ಮಾಜಿ ಸಂಸದನು ಭಾರತದ ಕುರಿತು ದುರಹಂಕಾರದ ಮಾತುಗಳನ್ನಾಡಿದ್ದಾನೆ. “ಭಾರತದ ಸಂಸತ್ತಿನಲ್ಲಿ ಅಖಂಡ ಭಾರತ ಕಲ್ಪನೆಯ ನಕ್ಷೆ ಹಾಕಲಾಗಿದೆ. ಈ ನಕ್ಷೆಯಲ್ಲಿ ನೇಪಾಳ, ಶ್ರೀಲಂಕಾ, ಭೂತಾನ್‌ ಹಾಗೂ ಪಾಕಿಸ್ತಾನವೂ ಸೇರಿದೆ. ಆದರೆ, ಒಂದು ಮಾತು ನೆನಪಿರಲಿ. 2026ರ ನವೆಂಬರ್‌ನಲ್ಲಿ ಭಾರತವು ಚೂರು ಚೂರಾಗುತ್ತದೆ” ಎಂದು ಟಿವಿ ಸಂದರ್ಶನದ ವೇಳೆ ಹೇಳಿದ್ದಾನೆ. ಈ ವಿಡಿಯೊ ಈಗ ವೈರಲ್‌ ಆಗಿದೆ.

VISTARANEWS.COM


on

Faisal Raza Abidi
Koo

ಇಸ್ಲಾಮಾಬಾದ್:‌ ಅಸಮರ್ಥ ನಾಯಕತ್ವ, ಉಗ್ರರ ಪೋಷಣೆ, ರಾಜಕೀಯ ಅರಾಜಕತೆ, ಧಾರ್ಮಿಕ ಮೂಲಭೂತವಾದ, ಸೇನೆಯ ಸರ್ವಾಡಳಿತ ಸೇರಿ ಹಲವು ಕಾರಣಗಳಿಂದಾಗಿ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನವು ಹಣಕಾಸು ನೆರವಿಗಾಗಿ ಅಂತಾರಾಷ್ಟ್ರೀಯ ಸಂಸ್ಥೆಗಳ ಎದುರು ಭಿಕ್ಷಾ ಪಾತ್ರೆ ಹಿಡಿದು ನಿಂತಿದೆ. ಇಷ್ಟಿದ್ದರೂ ಅಲ್ಲಿನ ನಾಯಕರು ಮಾತ್ರ ಅಹಂಕಾರದ ಮಾತುಗಳನ್ನಾಡುವುದು, ಭಾರತದ ವಿರುದ್ಧ ಉದ್ಧಟತನದ ಹೇಳಿಕೆಗಳನ್ನು ಕೊಡುವುದು ನಿಲ್ಲಿಸಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, “2026ರ ನವೆಂಬರ್‌ನಲ್ಲಿ ಭಾರತವು (India) ತುಂಡು ತುಂಡಾಗುತ್ತದೆ” ಎಂಬುದಾಗಿ ಪಾಕಿಸ್ತಾನದ (Pakistan) ಮಾಜಿ ಸಂಸದನೊಬ್ಬ (Pakistan ex Senator) ನಾಲಗೆ ಹರಿಬಿಟ್ಟಿದ್ದಾನೆ.

ಸುದ್ದಿವಾಹಿನಿಯೊಂದರ ಜತೆ ಮಾತನಾಡುವ ವೇಳೆ ನಿರೂಪಕಿಯ ಪ್ರಶ್ನೆಗೆ ಉತ್ತರಿಸಿದ ಫೈಸಲ್‌ ರಾಜಾ ಅಬಿದಿ (Faisal Raza Abidi) ಎಂಬ ಮಾಜಿ ಸಂಸದನು ದುರಹಂಕಾರದ ಮಾತುಗಳನ್ನಾಡಿದ್ದಾನೆ. “ಭಾರತದ ಸಂಸತ್ತಿನಲ್ಲಿ ಅಖಂಡ ಭಾರತ ಕಲ್ಪನೆಯ ನಕ್ಷೆ ಹಾಕಲಾಗಿದೆ. ಈ ನಕ್ಷೆಯಲ್ಲಿ ನೇಪಾಳ, ಶ್ರೀಲಂಕಾ, ಭೂತಾನ್‌ ಹಾಗೂ ಪಾಕಿಸ್ತಾನವೂ ಸೇರಿದೆ. ಆದರೆ, ಒಂದು ಮಾತು ನೆನಪಿರಲಿ. 2026ರ ನವೆಂಬರ್‌ನಲ್ಲಿ ಭಾರತವು ಚೂರು ಚೂರಾಗುತ್ತದೆ. ನರೇಂದ್ರ ಮೋದಿ ಅವರ ಹಿಂದುತ್ವ ಅಜೆಂಡಾ ಕೂಡ ಪತನವಾಗುತ್ತದೆ” ಎಂದು ಹೇಳಿದ್ದಾನೆ.

“ಅಖಂಡ ಭಾರತ ಕಲ್ಪನೆಯ ಕುರಿತು ಪಾಕಿಸ್ತಾನ ಮಾತನಾಡಿದರೆ ತಮಾಷೆ ಮಾಡುತ್ತಾರೆ. ಆದರೆ, 2026ರ ನವೆಂಬರ್‌ 26ರಂದು ಅಲ್ಲಾ ಪಾಕಿಸ್ತಾನದ ಪರವಾಗಿರುತ್ತಾನೆ. ಅಂದು ನಡೆಯುವ ಘಟನೆಯು ನಿಮ್ಮನ್ನು ಅಚ್ಚರಿಯ ಮಡುವಿನಲ್ಲಿ ಬೀಳಿಸುತ್ತದೆ. ಮೋದಿ ಹಿಂದುತ್ವದಿಂದ ಹೊರಗೆ ಬರಲಿರುವ ಜನ, ಪ್ರಾಣ ಉಳಿದರೆ ಸಾಕು ಎಂದು ಹೇಳುತ್ತಾರೆ. ಪಾಕಿಸ್ತಾನದ ಶಸ್ತ್ರಾಸ್ತ್ರಗಳು ಹಾಗೂ ಮಾನವ ಸಂಪನ್ಮೂಲವು ಭಾರತದ ನಾಶಕ್ಕೆ ಸಿದ್ಧವಾಗಿದೆ. ನರೇಂದ್ರ ಮೋದಿ ಆಡಳಿತದಲ್ಲಿಯೇ ಭಾರತ ತುಂಡು ತುಂಡಾಗುವುದೇ ಮುಖ್ಯ” ಎಂಬುದಾಗಿ ಎಲುಬಿಲ್ಲದ ನಾಲಗೆ ಹರಿಬಿಟ್ಟಿದ್ದಾನೆ.

“ನರೇಂದ್ರ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಹಿಂದುತ್ವವನ್ನು ಪ್ರತಿಪಾದಿಸುತ್ತಿದ್ದಾರೆ. ಅವರ ಪ್ರತಿಪಾದನೆಗೆ ಜನರಿಂದ ಅಪಾರ ಬೆಂಬಲವೂ ವ್ಯಕ್ತವಾಗುತ್ತಿದೆ. ಹಾಗಾಗಿ, ಭಾರತವು ಚೂರು ಚೂರು ಆಗುವುದು ಮುಖ್ಯ” ಎಂಬುದಾಗಿ ಅಬಿದಿ ಹೇಳಿದ್ದಾನೆ. ಆ ಮೂಲಕ ಭಾರತದ ಮೇಲೆ ಪಾಕಿಸ್ತಾನವು ಶಸ್ತ್ರಾಸ್ತ್ರಗಳ ಸಮೇತ ದಾಳಿ ಮಾಡುತ್ತದೆ ಎಂಬುದರ ಮುನ್ಸೂಚನೆ ನೀಡಿದ್ದಾನೆ. ಇದುವರೆಗೆ ಭಾರತದ ವಿರುದ್ಧ ನಾಲ್ಕು ಬಾರಿ ಯುದ್ಧಕ್ಕಿಳಿದಿರುವ ಪಾಕಿಸ್ತಾನವು, ನಾಲ್ಕಕ್ಕೆ ನಾಲ್ಕು ಬಾರಿಯೂ ಹೀನಾಯವಾಗಿ ಸೋಲುಂಡಿದೆ. ಇನ್ನು ಮೋದಿ ಆಡಳಿತದಲ್ಲಿ 2016ರಲ್ಲಿ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, 2019ರ ಪುಲ್ವಾಮ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ವಾಯುದಾಳಿ ಮೂಲಕ ಪಾಕಿಸ್ತಾನದ ಉಗ್ರರನ್ನು ಹಿಮ್ಮೆಟ್ಟಿಸಲಾಗಿದೆ. ಹೀಗಿದ್ದರೂ, ಪಾಕಿಸ್ತಾನದ ನಾಯಕರು ಭಾರತದ ವಿಚಾರದಲ್ಲಿ ಹಗುರವಾಗಿ ಮಾತನಾಡುವುದನ್ನು ಬಿಟ್ಟಿಲ್ಲ ಎಂಬುದಕ್ಕೆ ಇದೇ ನಿದರ್ಶನವಾಗಿದೆ.

ಇದನ್ನೂ ಓದಿ: Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

Continue Reading

ದೇಶ

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

Rohith Vemula: ಹೈದರಾಬಾದ್‌ನಲ್ಲಿರುವ ಸೆಂಟ್ರಲ್‌ ಯುನಿವರ್ಸಿಟಿಯ ಹಾಸ್ಟೆಲ್‌ ಕೋಣೆಯಲ್ಲಿ ರೋಹಿತ್‌ ವೇಮುಲ 2016ರ ಜನವರಿ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಈತ ದಲಿತ ವಿದ್ಯಾರ್ಥಿ ಎಂಬುದಾಗಿ, ವಿವಿಯಲ್ಲಿ ರಾಜಕೀಯ ನಡೆಯುತ್ತಿದೆ, ದಲಿತರ ಮೇಲೆ ಶೋಷಣೆ ನಡೆಯುತ್ತಿದೆ ಎಂದು ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಕೇಂದ್ರ ಸರ್ಕಾರದ ವಿರುದ್ಧವೂ ಆರೋಪಗಳು ಕೇಳಿಬಂದಿದ್ದವು. ಈಗ ತೆಲಂಗಾಣದ ಪೊಲೀಸರು, ಈತನು ದಲಿತನೇ ಅಲ್ಲ ಎಂಬುದಾಗಿ ವರದಿ ಸಲ್ಲಿಸಿದ್ದಾರೆ. ಅಲ್ಲದೆ, ಪ್ರಕರಣವನ್ನು ಕ್ಲೋಸ್‌ ಮಾಡಿದ್ದಾರೆ.

VISTARANEWS.COM


on

Rohith Vemula
Koo

ಹೈದರಾಬಾದ್: ತೆಲಂಗಾಣದ ಹೈದರಾಬಾದ್‌ ವಿಶ್ವವಿದ್ಯಾಲಯದ ಪಿಎಚ್‌.ಡಿ ವಿದ್ಯಾರ್ಥಿ ರೋಹಿತ್‌ ವೇಮುಲ (Rohith Vemula) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರೋಹಿತ್‌ ವೇಮುಲ ದಲಿತನಲ್ಲ, ಆತನ ದಾಖಲೆಗಳು, ಪ್ರಮಾಣಪತ್ರಗಳು ನಕಲಿಯಾಗಿವೆ ಎಂದು ತೆಲಂಗಾಣ ಪೊಲೀಸರು (Telangana Police) ವರದಿ ಸಲ್ಲಿಸಿದ್ದಲ್ಲದೆ, ಪ್ರಕರಣವನ್ನು ಕ್ಲೋಸ್‌ ಮಾಡಿದ್ದಾರೆ. ಅಷ್ಟೇ ಅಲ್ಲ, ಪ್ರಕರಣದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಸೇರಿ ಹಲವರಿಗೆ ಪೊಲೀಸರು ಕ್ಲೀನ್‌ ಚಿಟ್‌ ನೀಡಿದ್ದಾರೆ.

2016ರ ಜನವರಿಯಲ್ಲಿ ರೋಹಿತ್‌ ವೇಮುಲ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು. ಆದರೆ, ಈ ಪ್ರಕರಣವನ್ನು ತೆಲಂಗಾಣ ಪೊಲೀಸರು ಈಗ ಕ್ಲೋಸ್‌ ಮಾಡಿದ್ದಾರೆ. ಈ ಕುರಿತು ಹೈಕೋರ್ಟ್‌ಗೆ ವರದಿಯನ್ನು ಸಲ್ಲಿಸಿದ್ದಾರೆ. ಆಗ ಸಿಕಂದರಾಬಾದ್‌ ಸಂಸದರಾಗಿದ್ದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್‌ ಸದಸ್ಯ ಎನ್‌. ರಾಮಚಂದರ್‌ ರಾವ್‌, ವಿವಿ ಕುಲಪತಿ ಅಪ್ಪಾ ರಾವ್‌, ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಹಲವು ಎಬಿವಿಪಿ ನಾಯಕರಿಗೂ ತೆಲಂಗಾಣ ಪೊಲೀಸರು ಕ್ಲೀನ್‌ಚಿಟ್‌ ನೀಡಿದ್ದಾರೆ.

ವರದಿಯಲ್ಲಿ ಏನಿದೆ?

“ರೋಹಿತ್‌ ವೇಮುಲ ಆತ್ಮಹತ್ಯೆ ಮಾಡಿಕೊಳ್ಳಲು ಹಲವು ಕಾರಣಗಳಿವೆ. ವಿವಿ ಕ್ಯಾಂಪಸ್‌ನಲ್ಲಿ ಆತನ ರಾಜಕೀಯ ಚಟುವಟಿಕೆಗಳು, ಅಧ್ಯಯನದಲ್ಲಿ ಹಿನ್ನಡೆ ಸೇರಿ ಹಲವು ಕಾರಣಗಳಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದರೆ ಆತ ಓದಿನಲ್ಲಿ ಹಿಂದಿರುತ್ತಾನೆ. ಇಲ್ಲವೇ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ರಾಜಕೀಯ ಚಟುವಟಿಕೆಗಳು ಕಾರಣವಾಗಿರುತ್ತವೆ. ಇನ್ನು ರೋಹಿತ್‌ ವೇಮುಲ ಪಿಎಚ್‌.ಡಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ, ಎರಡು ವರ್ಷದ ಬಳಿಕ ಮತ್ತೊಂದು ಪಿಎಚ್‌.ಡಿ ಮಾಡಲು ಮುಂದಾಗಿದ್ದ. ಏಕೆಂದರೆ, ಆತ ಶಿಕ್ಷಣಕ್ಕಿಂತ ಬೇರೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆತ ದಲಿತನಲ್ಲ

“ರೋಹಿತ್‌ ವೇಮುಲ ದಲಿತನಲ್ಲ” ಎಂಬುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. “ರೋಹಿತ್‌ ವೇಮುಲ ಪ್ರಮಾಣಪತ್ರಗಳು ನಕಲಿ ಆಗಿವೆ. ಆತನಿಗೆ ತಾಯಿಯು ನಕಲಿ ಪರಿಶಿಷ್ಟ ಜಾತಿ (SC) ಪ್ರಮಾಣಪತ್ರ ತಯಾರಿಸಿ ಕೊಟ್ಟಿದ್ದಾರೆ ಎಂಬುದು ಗೊತಿತ್ತು. ಇದಾದ ಬಳಿಕ ಆತನು ತನ್ನ ಘನತೆಗೆ ಧಕ್ಕೆ ಬರುತ್ತದೆ ಎಂಬುದರ ಚಿಂತೆಯಲ್ಲಿದ್ದ. ನಕಲಿ ಪ್ರಮಾಣಪತ್ರದ ಭೀತಿಯಲ್ಲಿದ್ದ ಆತನು, ಇದುವರೆಗೆ ತಾನು ಗಳಿಸಿದ ಪದವಿಗಳೆಲ್ಲ ಹಾಳಾಗುತ್ತವೆ ಎಂಬ ಚಿಂತೆ ಕಾಡುತ್ತಿತ್ತು. ಇದರಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು” ಎಂಬುದಾಗಿ ವರದಿಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.

ಏನಿದು ಪ್ರಕರಣ?

ಹೈದರಾಬಾದ್‌ನಲ್ಲಿರುವ ಸೆಂಟ್ರಲ್‌ ಯುನಿವರ್ಸಿಟಿಯ ಹಾಸ್ಟೆಲ್‌ ಕೋಣೆಯಲ್ಲಿ ರೋಹಿತ್‌ ವೇಮುಲ 2016ರ ಜನವರಿ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಈತನು ದಲಿತನೆಂದು, ವಿಶ್ವವಿದ್ಯಾಲಯದಲ್ಲಿ ದಲಿತ ವಿರೋಧಿ ನೀತಿಗಳು ಇವೆ ಎಂದು, ಕೇಂದ್ರದ ಮೋದಿ ಸರ್ಕಾರವು ದಲಿತ ವಿರೋಧಿ ಎಂದೂ ಪ್ರತಿಭಟನೆ ನಡೆಸಲಾಗಿತ್ತು. ದೆಹಲಿ ಸೇರಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ರೋಹಿತ್‌ ವೇಮುಲ ಆತ್ಮಹತ್ಯೆಗೂ ಮುನ್ನ ಆತನ ಮೇಲೆ ಎಬಿವಿಪಿ ಸದಸ್ಯರು ದಾಳಿ ಮಾಡಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. ದೇಶದಲ್ಲಿ ಅಸಹಿಷ್ಣುತೆ ಇದೆ, ಬಿಜೆಪಿ ಸರ್ಕಾರದ ಬಂದ ಬಳಿಕ ಹೀಗೆಲ್ಲ ಆಗುತ್ತಿದೆ, ದಲಿತ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದೆಲ್ಲ ಹೇಳಲಾಗುತ್ತಿತ್ತು.

ಇದನ್ನೂ ಓದಿ: ಕನ್ಹಯ್ಯ ಲಾಲ್‌ ಹತ್ಯೆಯನ್ನು ಮುಸ್ಲಿಮರು ಸ್ಪಷ್ಟವಾಗಿ ಖಂಡಿಸಬೇಕು: ಆರ್‌ಎಸ್‌ಎಸ್‌

Continue Reading

ಪ್ರವಾಸ

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

Summer Tour: ಕಾಶ್ಮೀರಕ್ಕೆ ಭೇಟಿ ನೀಡಲು ಈಗ ಸೂಕ್ತ ಸಮಯ. ಹಿಮದಿಂದ ಆವೃತವಾದ ಸುಂದರ ಭೂದೃಶ್ಯಗಳನ್ನು ಈಗ ಇಲ್ಲಿ ಕಣ್ತುಂಬಿಕೊಳ್ಳಬಹುದು. ಇದಕ್ಕಾಗಿ ಐಆರ್ ಟಿಸಿ ಯು ‘ಕಾಶ್ಮೀರ್ ಹೆವೆನ್ ಆನ್ ಅರ್ಥ್ ಎಕ್ಸ್ ಮುಂಬೈ’ ಪ್ಯಾಕೇಜ್ ಘೋಷಿಸಿದೆ. ಆಸಕ್ತರು ಇದರ ಪ್ರಯೋಜನವನ್ನು ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Summer Tour
Koo

ಧರೆಯ ಮೇಲಿನ ಸ್ವರ್ಗ ಎಂದೇ ಕರೆಯಲ್ಪಡುವ ಕಾಶ್ಮೀರಕ್ಕೆ (kashmir) ಪ್ರವಾಸ (tour) ಹೊರಡಲು ಈಗ ಸೂಕ್ತ ಸಮಯ. ಬೇಸಿಗೆಯ ಬಿಸಿಲಿನಿಂದ (Summer Tour) ಕಂಗೆಟ್ಟ ಜನರು ತಂಪಾದ ಪ್ರದೇಶದಲ್ಲಿ ಹೋಗಿ ಕೆಲ ಕಾಲ ಇದ್ದು ಬರಬೇಕು ಎಂದು ಬಯಸಿದರೆ ಐಆರ್ ಟಿಸಿ (IRTC) ವತಿಯಿಂದ ಟೂರ್ ಪ್ಯಾಕೇಜ್ ಘೋಷಣೆಯಾಗಿದೆ. ಆಸಕ್ತರು ಬ್ಯಾಗ್ ಪ್ಯಾಕ್ ,ಮಾಡಿ ಹೊರಡಲು ಸಿದ್ಧತೆ ನಡೆಸಬಹುದು.

ಇತ್ತೀಚೆಗೆ ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತವು ಕಣಿವೆ ಪ್ರದೇಶಕ್ಕೆ ಸಂಪೂರ್ಣವಾಗಿ ಬಿಳಿ ಬಣ್ಣ ಎರಕ ಹೊಯ್ದಂತೆ ಮಾಡಿದೆ. ಇದು ಪ್ರವಾಸೋದ್ಯಮ ಕ್ಷೇತ್ರದ ಉತ್ಸಾಹವನ್ನು ಪುನರುಜ್ಜೀವನಗೊಳಿಸಿದೆ. ಈಗಾಗಲೇ ಅನೇಕ ಪ್ರವಾಸಿಗರು ಕಾಶ್ಮೀರಕ್ಕೆ ಹೊರಡುವ ಯೋಜನೆ ಹಾಕಿಕೊಳ್ಳುತ್ತಿದ್ದಾರೆ. ಮೋಡಿ ಮಾಡುವ ಭೂದೃಶ್ಯಗಳನ್ನು ಕಣ್ತುಂಬಿ ಕೊಳ್ಳಲು ಪ್ರವಾಸಿಗರ ಆಗಮನಕ್ಕೆ ಕಾಶ್ಮೀರವೂ ಕಾಯುವಂತಿದೆ.

ಪ್ರವಾಸಿಗರ ಉತ್ಸಾಹವನ್ನು ಹೆಚ್ಚಿಸಲು ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC)ವು ‘ಕಾಶ್ಮೀರ್ ಹೆವೆನ್ ಆನ್ ಅರ್ಥ್ ಎಕ್ಸ್ ಮುಂಬೈ’ ಎಂಬ ಹೊಸ ಪ್ರವಾಸ ಪ್ಯಾಕೇಜ್ ಅನ್ನು ಹೊರತಂದಿದೆ.


ಇದನ್ನೂ ಓದಿ: Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

ಈ ಪ್ಯಾಕೇಜ್ ಕಾಶ್ಮೀರದ ರಮಣೀಯ ಸೌಂದರ್ಯವನ್ನು ಅನ್ವೇಷಿಸಲು ಬಯಸುವವರಿಗೆ ಹೇಳಿ ಮಾಡಲ್ಪಟ್ಟಿದೆ. ಐದು ರಾತ್ರಿ ಮತ್ತು ಆರು- ದಿನಗಳ ಸಮಗ್ರ ಪ್ಯಾಕೇಜ್ ನಲ್ಲಿ ಶ್ರೀನಗರ, ದೂದ್ ಪೆಟ್ರಿ, ಗುಲ್ಮಾರ್ಗ್, ಪಹಲ್ಗಾಮ್ ಮೊದಲಾದ ಪ್ರಸಿದ್ಧ ಸ್ಥಳಗಳನ್ನು ಒಳಗೊಂಡಿದೆ. ಈ ಪ್ಯಾಕೇಜ್ ನಲ್ಲಿ ವಿಮಾನ ಟಿಕೆಟ್‌ಗಳು, ಹೊಟೇಲ್ ವಸತಿ, ಊಟ ಮತ್ತು ಪ್ರಯಾಣ ವಿಮೆಯನ್ನು ಒಳಗೊಂಡಿದೆ. ಪ್ರಯಾಣಿಕರ ಸಂಖ್ಯೆ ಮತ್ತು ಅವರೊಂದಿಗೆ ಬರುವ ಮಕ್ಕಳ ವಯಸ್ಸನ್ನು ಪರಿಗಣಿಸಿ ವಿಭಿನ್ನ ಪ್ರಯಾಣದ ಅನುಭವಕ್ಕೆ ಸರಿಹೊಂದಿಸಲು ಬೆಲೆಗಳನ್ನು ನಿಗದಿಪಡಿಸಲಾಗಿದೆ.


ಪ್ರವಾಸದ ದಿನ

ಮೇ ತಿಂಗಳಲ್ಲಿ 11, 15, 18, 25 ಜೂನ್ ತಿಂಗಳಲ್ಲಿ 1, 9, 15, 23, 26ರಂದು ಪ್ರವಾಸ ಹೊರಡುವ ಯೋಜನೆ ರೂಪಿಸಿಕೊಳ್ಳಬಹುದು. ಹೊಟೇಲ್ ವಾಸ್ತವ್ಯ ನಾಲ್ಕು ರಾತ್ರಿ ಶ್ರೀನಗರದಲ್ಲಿ ಮತ್ತು ಒಂದು ರಾತ್ರಿ ಪಹಲ್ಗಾಮ್ ನಲ್ಲಿ.

ದರ ಇಂತಿದೆ

ಒಬ್ಬರಿಗೆ 63,400 ರೂ., ಇಬ್ಬರಿಗೆ ಪ್ಯಾಕೇಜ್ ನಡಿಯಲ್ಲಿ ತಲಾ 54,100, ಮೂವರಿಗೆ ತಲಾ 50,700, 5 ರಿಂದ 11 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ 48,400 ರೂ. ನಿಗದಿಪಡಿಸಲಾಗಿದೆ.

ಪ್ರವಾಸಿ ತಾಣಗಳು

ಟೂರ್ ಪ್ಯಾಕೇಜ್ ನಲ್ಲಿ ಶ್ರೀನಗರ, ದೂದ್ ಪೆಟ್ರಿ, ಗುಲ್ಮಾರ್ಗ್, ಪಹಲ್ಗಾಮ್ ಸುಪ್ರಸಿದ್ದ ತಾಣಗಳಿಗೆ ಭೇಟಿ ನೀಡಲಾಗುತ್ತದೆ. ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ಪಹಲ್ಗಾಮ್ , ಬೇತಾಬ್ ವಾಲಿ, ಅರು ವಾಲಿ ಮತ್ತು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮೊದಲ ದಿನ ಭೇಟಿ ನೀಡಲಾಗುತ್ತದೆ. ಎರಡನೇ ದಿನ ದಾಲ್ ಸರೋವರದ ದಡದಲ್ಲಿರುವ ಹಾಜ್ರತ್ ಬಾಲ್ ಶ್ರೀನಿ ಗೆ ಭೇಟಿ ನೀಡಲಾಗುತ್ತದೆ. ಮೂರನೇ ದಿನ ಅವಂತೀಪುರ್, ಮೊಘಲ್ ಗಾರ್ಡನ್, ಶಂಕರಾಚಾರ್ಯ ಟೆಂಪಲ್, ಶಿಖರ ರೈಡ್ ಅನ್ನು ಒಳಗೊಂಡಿರುತ್ತದೆ. ನಾಲ್ಕನೇ ದಿನ ದೂದ್ ಪೆಟ್ರಿಯಲ್ಲಿ , ಐದನೇ ದಿನ ಗುಲ್ಮಾರ್ಗ್ ನಲ್ಲಿ ಕಳೆಯಲಾಗುತ್ತದೆ. ಆರನೇ ದಿನ ವಿಮಾನದಲ್ಲಿ ಮುಂಬಯಿ ತಲುಪುವುದರೊಂದಿಗೆ ಪ್ರವಾಸ ಕೊನೆಗೊಳ್ಳುತ್ತದೆ.

Continue Reading

ವೈರಲ್ ನ್ಯೂಸ್

Viral Video: ಪ್ರಿನ್ಸಿಪಾಲ್ ಆದರೇನು, ಟೀಚರ್ ಆದರೇನು? ಹೆಂಗಸರ ಬಡಿದಾಟ ಇರೋದೇ ಹೀಗೆ! ವಿಡಿಯೊ ನೋಡಿ

Viral Video: ಉತ್ತರ ಪ್ರದೇಶದ ಆಗ್ರಾದಲ್ಲಿರುವ ಶಾಲೆಯೊಂದರಲ್ಲಿ, “ನನ್ನ ನೀನು ಗೆಲ್ಲಲಾರೆ” ಎಂಬ ಧೋರಣೆಯಲ್ಲಿ ನುಗ್ಗಿದ ಪ್ರಾಂಶುಪಾಲೆಯು, ಶಿಕ್ಷಕಿಯ ಕೆನ್ನೆಗೆ ತಿವಿದಿದ್ದಾರೆ. ಇದಕ್ಕೆ ಶಿಕ್ಷಕಿಯೂ, “ನಾ ನಿನ್ನ ಬಿಡಲಾರೆ” ಎಂಬಂತೆ ಅವರ ಬಟ್ಟೆ ಎಳೆದು ಸೇಡು ತೀರಿಸಿಕೊಂಡಿದ್ದಾರೆ. ಶಾಲೆಯಲ್ಲಿಯೇ ಶಿಕ್ಷಕಿಯರು ಹೀಗೆ ಬಡಿದಾಡಿಕೊಂಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

Viral Video
Koo

ಲಖನೌ: ”ಎರಡು ಜಡೆಗಳು ಒಟ್ಟಿಗೆ ಸೇರಲ್ಲ” ಎಂಬ ಮಾತಿದೆ. ಇನ್ನು ಸರ್ಕಾರಿ ಬಸ್‌ಗಳು, ಅಕ್ಕಪಕ್ಕದ ಮನೆಗಳಲ್ಲಿ ಹೆಣ್ಣುಮಕ್ಕಳು ಬಡಿದಾಡಿಕೊಳ್ಳುವ, ಹಿಗ್ಗಾಮುಗ್ಗ ಬೈದು ಜಗಳವಾಡುವ ಪ್ರಸಂಗಗಳು ನಡೆಯುತ್ತಲೇ ಇರುತ್ತವೆ. ವೈಷಮ್ಯ, ಜಗಳ, ಸುತ್ತಮುತ್ತಲಿನವರ ಬಗ್ಗೆ ಗಾಸಿಪ್‌ ಮಾಡುವ ಕಾರಣಕ್ಕಾಗಿಯೇ ಹೆಣ್ಣಿಗೆ ಹೆಣ್ಣೇ ಶತ್ರು ಎಂಬ ಮಾತು ಚಾಲ್ತಿಗೆ ಬಂದಿರಬೇಕು. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿರುವ (Agra) ಶಾಲೆಯೊಂದರಲ್ಲಿ ಪ್ರಾಂಶುಪಾಲೆ ಹಾಗೂ ಸಹ ಶಿಕ್ಷಕಿ ಮಧ್ಯೆ ಶಾಲೆಯಲ್ಲಿಯೇ ಮಾರಾಮಾರಿ ನಡೆದಿದೆ. ಈ ವಿಡಿಯೊ (Viral Video) ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

ಹೌದು, ಉತ್ತರ ಪ್ರದೇಶದ ಆಗ್ರಾದಲ್ಲಿರುವ ಶಾಲೆಯೊಂದರಲ್ಲಿ ಪ್ರಾಂಶುಪಾಲೆ ಹಾಗೂ ಸಹ ಶಿಕ್ಷಕಿಯು ಬಡಿದಾಡಿಕೊಂಡಿದ್ದಾರೆ. ಇಬ್ಬರೂ ಅವಾಚ್ಯ ಶಬ್ದಗಳಿಂದ ಪರಸ್ಪರ ಬೈದಿದ್ದಾರೆ. ಅಷ್ಟೇ ಅಲ್ಲ, ಪ್ರಾಂಶುಪಾಲೆಯು, ನಾನು ಯಾವುದಕ್ಕೂ ಏನು ಕಡಿಮೆ ಇಲ್ಲ ಎಂಬಂತೆ, ಶಿಕ್ಷಕಿಯ ಕೆನ್ನೆಗೆ ತಿವಿದಿದ್ದಾರೆ. ಶಿಕ್ಷಕಿಯೂ ರೊಚ್ಚಿಗೆದ್ದು, ಪ್ರಾಂಶುಪಾಲೆಯ ಬಟ್ಟೆ ಹಿಡಿದು ಎಳೆದಿದ್ದಾರೆ. ಇಬ್ಬರ ನಡುವಿನ ಈ ಜಂಗಿಕುಸ್ತಿಯು ಜಾಲತಾಣಗಳಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ನಾನು ಇವಳನ್ನು ಬಿಡಲ್ಲ ಎಂಬ ರೀತಿ ಪ್ರಾಂಶುಪಾಲೆ ಮುನ್ನುಗ್ಗಿದರೆ, ಕುರ್ಚಿ ಮೇಲೆಯೇ ಕುಳಿತ ಶಿಕ್ಷಕಿಯು ತಿರುಗೇಟು ನೀಡಿದ್ದಾರೆ. ಇವರ ಸಹೋದ್ಯೋಗಿಗಳು ಎಷ್ಟು ಜಗಳ ಬಿಡಿಸಿದರೂ ಇಬ್ಬರ ನಟುವಿನ ಜಟಾಪಟಿ ಮಾತ್ರ ನಿಂತಿಲ್ಲ. ನಿಮ್ಮಿಬ್ಬರದ್ದು ಇದೇ ಆಯಿತು, ವಿಡಿಯೊ ಮಾಡಿ ಅಪ್‌ಲೋಡ್‌ ಮಾಡುತ್ತೇನೆ, ನಿಮ್ಮ ಘನತೆಗೆ ತಕ್ಕಂತೆ ನೀವು ವರ್ತಿಸುತ್ತಿಲ್ಲ ಎಂಬುದಾಗಿ ವಿಡಿಯೊ ಮಾಡುವವರು ಹೇಳಿದರೂ, ಪ್ರಾಂಶುಪಾಲೆ ಹಾಗೂ ಶಿಕ್ಷಕಿಯು ಪಟ್ಟಿಗೆ ಬಿದ್ದು ಜಗಳವಾಡಿದ್ದಾರೆ.

“ಶಾಲೆಯಲ್ಲಿ ಹೇಗೆ ವರ್ತಿಸಬೇಕು ಎಂಬುದೇ ಗೊತ್ತಿರದ ಇವರು, ಮಕ್ಕಳಿಗೆ ಯಾವ ಶಿಕ್ಷಣ ನೀಡುತ್ತಾರೆ? ಇಬ್ಬರನ್ನೂ ವಜಾಗೊಳಿಸಬೇಕು” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಇನ್ನು, “ಇಂತಹ ಶಿಕ್ಷಕರ ಕೈಯಲ್ಲಿ ಕಲಿತ ಮಕ್ಕಳು ಕೂಡ ಹಾಳಾಗುತ್ತಾರೆ” ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಭವಿಷ್ಯದ ಬಗ್ಗೆ ಮರುಕವಿದೆ” ಎಂದು ಇನ್ನೊಬ್ಬರು ಹೇಳಿದ್ದಾರೆ. ಹೀಗೆ, ನೂರಾರು ಜನ ಪ್ರತಿಕ್ರಿಯಿಸಿ, ಪ್ರಾಂಶುಪಾಲೆ ಹಾಗೂ ಶಿಕ್ಷಕಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಇವರ ವಿರುದ್ಧ ಕ್ರಮ ತೆಗೆದುಕೊಂಡಿರುವ ಕುರಿತು, ನೋಟಿಸ್‌ ನೀಡಿರುವ ಕುರಿತು ಯಾವುದೇ ಮಾಹಿತಿ ಲಭ್ಯವಿಲ್ಲ.

ಇದನ್ನೂ ಓದಿ: Asaduddin Owaisi: ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

Continue Reading
Advertisement
Prajwal Revanna Case HD Revanna ready to leave the country SIT issues lookout notice
ಕ್ರೈಂ19 mins ago

Prajwal Revanna Case: ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

IPL 2024
Latest24 mins ago

IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

Faisal Raza Abidi
ದೇಶ30 mins ago

2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

Wonderla Bengaluru
ಕರ್ನಾಟಕ37 mins ago

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

training for election duty staff in Karwar
ಉತ್ತರ ಕನ್ನಡ41 mins ago

Lok Sabha Election 2024: ಗೊಂದಲಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಉ.ಕ ಡಿಸಿ ಸೂಚನೆ

IPL 2024
ಕ್ರೀಡೆ55 mins ago

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

Rohith Vemula
ದೇಶ1 hour ago

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

IPL 2024
Latest1 hour ago

IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

Vidyashree HS
ಬೆಂಗಳೂರು1 hour ago

Vidyashree HS: ಬೆಂಗಳೂರಿನಲ್ಲಿ ಮೇ 4ರಂದು ವಿದ್ಯಾಶ್ರೀ ಎಚ್.ಎಸ್. ಭರತನಾಟ್ಯ ರಂಗಪ್ರವೇಶ

Prajwal Revanna Case
ಕರ್ನಾಟಕ2 hours ago

Prajwal Revanna Case: ರೇವಣ್ಣ ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್‌ ಕೇಸ್; 2ನೇ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ4 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ16 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌