West Bengal: ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ 'ಐಎಸ್ಎಫ್' ಹೊಸ ತಲೆನೋವು! - Vistara News

ದೇಶ

West Bengal: ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ‘ಐಎಸ್ಎಫ್’ ಹೊಸ ತಲೆನೋವು!

West Bengal:2021ರಲ್ಲಿ ಆರಂಭವಾದ ಇಂಡಿಯನ್ ಸೆಕ್ಯುಲರ್ ಫ್ರಂಟ್, ಆಡಳಿತಾರೂಢ ಟಿಎಂಸಿಗೆ ಭಯ ಹುಟ್ಟಿಸಿದೆ. 24 ಪರಗಣ ಹಾಗೂ ಅದರ ಸುತ್ತಲಿನ ಜಿಲ್ಲೆಗಳಲ್ಲಿ ಹೆಚ್ಚ ಸ್ಥಾನಗಳನ್ನು ಗೆದ್ದುಕೊಂಡಿದೆ.

VISTARANEWS.COM


on

Mamata Banerjee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು (Trinamool Congress Party) ಮೂರು ಹಂತದ ಗ್ರಾಮೀಣ ಪಂಚಾಯ್ತಿ ಚುನಾವಣೆಯಲ್ಲಿ (West Bengal rural polls) ಅಭೂತಪೂರ್ವ ಗೆಲುವು ಸಾಧಿಸಿದೆ. ಅದರಲ್ಲೇನೂ ಅನುಮಾನವಿಲ್ಲ. ಹಾಗಿದ್ದೂ, ಟಿಎಂಸಿ (TMC) ಹೊಸ ತಲೆನೋವು ಶುರುವಾಗಿದೆ. ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಇಂಡಿಯನ್ ಸೆಕ್ಯುಲರ್ ಫ್ರಂಟ್(Indian Secular Front – ISF) ಟಿಎಂಸಿ ಮತಗಳಿಗೆ ಕನ್ನ ಹಾಕಿದೆ.

2021ರ ಪಶ್ಚಿಮ ಬಂಗಾಳ ವಿಧಾಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಐಎಸ್ಎಫ್ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಈಗ ಹಿಂಸಾಚಾರ ಪೀಡಿತ ಮತ್ತು ಸಂಘರ್ಷ ಸಾಮಾನ್ಯವಾಗಿರುವ ದಕ್ಷಿಣ 24 ಪರಗಣ ಜಿಲ್ಲೆಯ ತನ್ನ ಭದ್ರಕೋಟೆಯಾದ ಭಂಗಾರ್‌ನಲ್ಲಿ ಗ್ರಾಮ ಪಂಚಾಯ್ತಿ ಸ್ಥಾನಗಳನ್ನು ಗೆದ್ದುಕೊಂಡಿದೆ. ಜತೆಗೆ ಉತ್ತರ 24 ಪರಗಣಗಳು, ಹೌರಾ ಮತ್ತು ಇತರ ಸಮೀಪದ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯ್ತಿ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಹಾಗೆ ನೋಡಿದರೆ, ಪಂಚಾಯ್ತಿ ಇಲೆಕ್ಷನ್ ಫಲಿತಾಂಶಗಳ ಸಂಪೂರ್ಣ ಮಾಹಿತಿಯನ್ನು ಇನ್ನಷ್ಟೇ ರಾಜ್ಯ ಚುನಾವಣ ಆಯೋಗವು ಪ್ರಕಟಿಸಬೇಕಿದೆ. ಇದೇ ಮೊದಲ ಬಾರಿಗೆ ಗ್ರಾಮೀಣ ಪಂಚಾಯ್ತಿಗಳಲ್ಲಿ ಸ್ಪರ್ಧಿಸಿದ್ದೇವೆ. ಸುಮಾರು 1300 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳಿದ್ದರು. ರಾಜ್ಯದ ವಿವಿಧೆಡೆ ನಾವು ಚುನಾವಣೆ ಗೆದ್ದಿದ್ದೇವೆ ಎಂದು ಐಎಸ್ಎಫ್ ಹೇಳಿಕೊಂಡಿದೆ.

ಪಂಚಾಯ್ತಿ ಚುನಾವಣೆಗೆ ನಾಮಿನೇಷನ್ ಶುರುವಾದ ಕೂಡಲೇ ಭಂಗಾರ್‌ನಲ್ಲಿ ಟಿಎಂಸಿ ಮತ್ತು ಐಎಸ್ಎಫ್ ಮಧ್ಯೆ ಸಂಘರ್ಷ ಶುರುವಾಯಿತು. ಹಿಂಸಾತ್ಮಾಕ ಘಟನೆಗಳು ಸಂಭವಿಸಿದವು. ಇದು ಟಿಎಂಸಿಯ ಆತಂಕಕ್ಕೆ ಕಾರಣವಾದರೆ, ಐಎಸ್ಎಫ್ ಏಳಿಗೆಯನ್ನು ಪ್ರತಿನಿಧಿಸುತ್ತದೆ. ಚುನಾವಣೆಯ ಹೊತ್ತಿಗೆ ಭಂಗಾರ್‌ನಲ್ಲಿ ಚುನಾವಣಾ ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿತ್ತು.

ಈ ಸುದ್ದಿಯನ್ನೂ ಓದಿ: ಪಶ್ಚಿಮ ಬಂಗಾಳ ಪಂಚಾಯ್ತಿ ಎಲೆಕ್ಷನ್‌ನಲ್ಲಿ ಟಿಎಂಸಿಗೆ ಭರ್ಜರಿ ಜಯ! ಆದ್ರೆ ಕಂಡಿಷನ್ಸ್ ಅಪ್ಲೈ ಎಂದ ಹೈಕೋರ್ಟ್

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮುಸ್ಲಿಮರ ಸಂಪೂರ್ಣ ಬೆಂಬಲವಿದೆ. ಕೋಲ್ಕೊತಾದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಭಂಗಾರ್‌ ಮುಸ್ಲಿಮ್ ಬಾಹುಳ್ಯದ ಪ್ರದೇಶವಾಗಿದೆ. ಹಾಗಾಗಿ, ಭಂಗಾರ್ ಯಾವಾಗಲೂ ಟಿಎಂಸಿಗೆ ಮೊದಲ ಆದ್ಯತೆಯಾಗಿರುತ್ತದೆ. ಆದರೀಗ ಟಿಎಂಸಿಗೆ ಐಎಸ್ಎಫ್ ಹೊಡೆತ ನೀಡಲಾರಂಭಿಸಿದೆ.

2021ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಫರ್ಫುರಾ ಷರೀಫ್ ಕ್ಷೇತ್ರದ ಗುರು ಪೀರ್ಜಾದ್ ಅಬ್ಬಾಸ್ ಸಿದ್ದಿಕಿ ಅವರು ಇಂಡಿಯನ್ ಸೆಕ್ಯುಲರ್ ಫ್ರಂಟ್ ಶುರು ಮಾಡಿದರು. ಪಶ್ಚಿಮ ಬಂಗಾಳದಲ್ಲಿನ ಮುಸ್ಲಿಮರು ಮತ್ತು ದಲಿತರಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದಾಗಿ ಐಎಸ್ಎಫ್ ಶುರು ಮಾಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಐಎಸ್ಎಫ್ ಪಕ್ಷದ ಮುಖ್ಯಸ್ಥರಾಗಿರುವ ಸಿದ್ದಿಕ್ಕಿ ಅವರ ತಮ್ಮ ನೌಷಾದ್ ಅವರು ಭಂಗಾರ್ ಕ್ಷೇತ್ರದ ಶಾಸಕರಾಗಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

VISTARANEWS.COM


on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅರನ್ನು ‘ಭಯೋತ್ಪಾದಕ’ ಎಂದು ಟೀಕಿಸಿರುವ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹಿರಿಯ ಬಿಜೆಪಿ ಮಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಎಕ್ಸ್‌ ನಲ್ಲಿ ಅವರು ವಿವರವಾದ ಹೇಳಿಕೆ ನೀಡಿದ್ದು, ಇಂತಹ ಹೇಳಿಕೆ ನಿಮ್ಮ ಅಹಂಕಾರವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆಯಾಚಿಸಬೇಕು ಎಂದೂ ಆಗ್ರಹಪಡಿಸಿದ್ದಾರೆ.


ತೀರಾಕೀಳು ಮಟ್ಟದಲ್ಲಿ ನೀವು ನೀಡಿರುವ ಹೇಳಿಕೆ ನಿಮ್ಮ ದುರಹಂಕಾರದ ಪರಮಾವಧಿ ಮಾತ್ರವಲ್ಲ, ಅದು ನಿಮ್ಮ ಕೊಳಕು, ವಿಷಕಾರಿ ಮನಸ್ಥಿತಿಯನ್ನು ಅನಾವರಣಗೊಳಿಸಿದೆ. ಖರ್ಗೆಯವರೇ, ಪ್ರಧಾನಿ ಮೋದಿ ರವರ ನಾಯಕತ್ವದ ಮೇಲೆ ಅಚಲ ವಿಶ್ವಾಸವಿಟ್ಟು ಭಾರತದ ಜನತೆ ಸತತ ಮೂರನೇ ಬಾರಿಗೆ ಅವರನ್ನು ಪ್ರಧಾನಿ ಪೀಠದಲ್ಲಿ ಕೂರಿಸಿದ್ದಾರೆ. ಅವರನ್ನು ಟೀಕಿಸುವ ಭರದಲ್ಲಿ ಹೀಗೆ ಅವಮಾನಿಸುವುದು ಎಂದರೆ ಮೋದಿ ರವರನ್ನು ಬೆಂಬಲಿಸಿದ ಕೋಟ್ಯಂತರ ಭಾರತೀಯರನ್ನು ಅಪಮಾನಿಸಿದಂತೆ! ಕಾಂಗ್ರೆಸ್ ನಾಯಕರಿಗೆ ಇಂತಹ ದುರ್ವರ್ತನೆ ಅಭ್ಯಾಸವಾಗಿಬಿಟ್ಟಿದೆ. ಚುನಾವಣೆ ಬಂದಾಗಲೆಲ್ಲ ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದು, ಜನರು ನಿಮಗೆ ಪಾಠ ಕಳಿಸುತ್ತಲೇ ಬಂದಿದ್ದಾರೆ. ಆದರೂ ತಿದ್ದಿಕೊಳ್ಳದ ನಿಮ್ಮ ವರ್ತನೆ ನಿಮ್ಮ ಅಹಂಕಾರಕ್ಕೆ ಕನ್ನಡಿ ಹಿಡಿದಿದೆ.


ಖರ್ಗೆಯವರೇ, ಭಾರತದ ಪ್ರಧಾನಿ @narendramodi ರವರು ಅಪ್ರತಿಮ ಜಾಗತಿಕ ನಾಯಕ ಎಂದು ವಿಶ್ವದ ಹಲವಾರು ದೇಶಗಳ ನೇತಾರರು ಕೊಂಡಾಡುತ್ತಿದ್ದಾರೆ. ವಿಶ್ವದ 26ಕ್ಕೂ ಅಧಿಕ ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಮೋದಿ ಅವರನಾಯಕತ್ವವನ್ನು ಗೌರವಿಸಿವೆ. ಇಡೀ ಜಗತ್ತೇ ಭಾರತದತ್ತ ಹೆಮ್ಮೆಯಿಂದ ನೋಡುತ್ತಿರುವಾಗ, ಕೇವಲ ನಿಮ್ಮ ರಾಜಕೀಯ ವೈಷಮ್ಯಕ್ಕಾಗಿ ದೇಶದ ಪ್ರಧಾನಮಂತ್ರಿಗಳ ಬಗ್ಗೆ ಇಷ್ಟು ಕೀಳುಮಟ್ಟದ ಶಬ್ದಗಳನ್ನು ಬಳಸುವುದು, ನಿಮ್ಮ ಕೀಳು ಮನಸ್ಥಿತಿಯನ್ನು ಮತ್ತು ನಿಮ್ಮ ರಾಜಕೀಯ ಹತಾಶೆಯನ್ನು ಸಾಬೀತುಪಡಿಸಿದೆ. ಅಧಿಕಾರದ ಹಪಾಹಪಿಯಲ್ಲಿ, ಒಂದು ಮನೆತನವನ್ನು ಸಂತೋಷಪಡಿಸುವ ಭರದಲ್ಲಿ ನಿಮ್ಮ ಘನತೆಯನ್ನು ಕಳೆದುಕೊಂಡಿದ್ದೀರಿ. ಹಿರಿಯರಾದ ನಿಮ್ಮಿಂದ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನಾಡಿನ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಇಂತಹ ಕೀಳು ಮಟ್ಟದ ಅಸಂಬದ್ಧ ಹೇಳಿಕೆಗೆ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

Continue Reading

Latest

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

VISTARANEWS.COM


on

ಗುಜರಾತ್‌: ಗುಜರಾತ್‌ನಲ್ಲಿ ಪತ್ತೆಯಾದ ಈ ಬೃಹತ್ ಸೈಬರ್ ವಂಚನೆ ಪ್ರಕರಣವು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಆತಂಕಕ್ಕೆ ತಳ್ಳಿದೆ. ಸುಮಾರು 2,500 ಕೋಟಿ ರೂ. ಮೊತ್ತದ ಈ ಹಗರಣದಲ್ಲಿ ಭಾಗಿಯಾಗಿದ್ದ 20 ಆರೋಪಿಗಳನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದು, ಇವರಲ್ಲಿ ಎಚ್.ಡಿಎಫ್.ಸಿ, ಯೆಸ್ ಮತ್ತು ಆಕ್ಸಿಸ್ ಬ್ಯಾಂಕ್‌ನಂತಹ ಪ್ರತಿಷ್ಠಿತ ಸಂಸ್ಥೆಗಳ ಅಧಿಕಾರಿಗಳೂ ಸೇರಿರುವುದು ಗಂಭೀರ ವಿಚಾರವಾಗಿದೆ.

ಈ ಬ್ಯಾಂಕ್ ಅಧಿಕಾರಿಗಳು ಸೈಬರ್ ಕ್ರಿಮಿನಲ್‌ಗಳೊಂದಿಗೆ ಶಾಮೀಲಾಗಿ, ನಕಲಿ ದಾಖಲೆಗಳನ್ನು ಬಳಸಿ ಸುಮಾರು 85ಕ್ಕೂ ಹೆಚ್ಚು ‘ಮ್ಯೂಲ್ ಅಕೌಂಟ್’ಗಳನ್ನು (ನಕಲಿ ಖಾತೆ) ತೆರೆದಿದ್ದರು. ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುತ್ತಿದ್ದ ಇವರು, ವ್ಯವಸ್ಥೆಯಲ್ಲಿ ಬರುವ ಎಚ್ಚರಿಕೆಗಳನ್ನು (Internal Alerts) ಬೇಕೆಂದೇ ನಿರ್ಲಕ್ಷಿಸುತ್ತಿದ್ದರು. ಬಳಿಕ ಈ ಹಣವನ್ನು ಹವಾಲಾ ದಂಧೆಯ ಮೂಲಕ ಬೇರೆಡೆ ರವಾನಿಸಿ, ವಂಚಕರಿಂದ ದೊಡ್ಡ ಮೊತ್ತದ ಕಮಿಷನ್ ಪಡೆಯುತ್ತಿದ್ದರು.

ಗೊಂಡಲ್ ಮಾರ್ಕೆಟಿಂಗ್ ಯಾರ್ಡ್‌ನ ಕಂಪನಿಯೊಂದರ ಖಾತೆಯಲ್ಲಿ ನಡೆದ 200 ಕೋಟಿ ರೂ.ಗಳ ಸಂಶಯಾಸ್ಪದ ವ್ಯವಹಾರವು ಈ ಮಹಾ ಹಗರಣವನ್ನು ಬಯಲಿಗೆಳೆದಿದೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 535 ದೂರುಗಳು ದಾಖಲಾಗಿದ್ದು, 35 ನಕಲಿ ಸಂಸ್ಥೆಗಳನ್ನು ಪೊಲೀಸರು ಗುರುತಿಸಿದ್ದಾರೆ. ತನಿಖೆ ಮುಂದುವರಿದಂತೆ ಇನ್ನೂ ಹೆಚ್ಚಿನ ಬ್ಯಾಂಕ್ ನೌಕರರು ಸಿಕ್ಕಿಬೀಳುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

Latest

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

VISTARANEWS.COM


on

ಲಖನೌ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳು ತಮ್ಮ ಮಹಿಳಾ ವಿರೋಧಿ ನೀತಿಯನ್ನು ಪ್ರದರ್ಶಿಸಿವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಲಖನೌದಲ್ಲಿ ಇಂದು ನಡೆದ ಜನ ಆಕ್ರೋಶ ಮಹಿಳಾ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿರು. ದೇಶಾದ್ಯಂತ ಮಹಿಳೆಯರು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ಬೀದಿಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ಸಮಾಜವಾದಿ, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಮಹಿಳೆಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಅವರ ಅಸಮಾಧಾನ ಈ ಪಾದಯಾತ್ರೆಯಲ್ಲಿ ಕಂಡುಬರುತ್ತಿದೆ ಎಂದರು. ಮಹಿಳಾ ಮೀಸಲಾತಿಗೆ ಸಂಬಂಧಿಸಿದ ನಿರ್ಣಾಯಕ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್‌ ನೇತೃತ್ವದ ಪಕ್ಷಗಳ ನಡೆ ವಿರುದ್ಧ ಈ ಪಾದಯಾತ್ರೆಯನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ ಆಯೋಜಿಸಿತ್ತು.

Continue Reading

Latest

ಭಾರತ ಈಗ ‘ವಿಶ್ವಗುರು’ ಅಲ್ಲ, ಆ ಪದ ಬಳಸಬೇಡಿ: ಮುರಳಿ ಮನೋಹರ ಜೋಶಿ ಪ್ರತಿಪಾದನೆ

VISTARANEWS.COM


on

ನವದೆಹಲಿ: ಭಾರತವು ಪ್ರಸ್ತುತ ‘ವಿಶ್ವಗುರು’ ಆಗಿ ಉಳಿದಿಲ್ಲ, ಆದ್ದರಿಂದ ಆ ಪದವನ್ನು ಬಳಸುವುದರಿಂದ ನಾವು ದೂರವಿರಬೇಕು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ ಹೇಳಿದ್ದಾರೆ. ದೆಹಲಿಯಲ್ಲಿ ಆರ್‌ಎಸ್‌ಎಸ್ ಅಂಗಸಂಸ್ಥೆಯಾದ ‘ಸಂಸ್ಕೃತ ಭಾರತಿ’ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ತಮ್ಮ ವೈಯಕ್ತಿಕ ಮತ್ತು ವಾಸ್ತವಿಕ ನಿಲುವನ್ನು ಬಿಚ್ಚಿಟ್ಟರು.

ಸತ್ಯವನ್ನು ಒಪ್ಪಿಕೊಳ್ಳಬೇಕು:
ಭಾರತವು ‘ವಿಶ್ವಗುರು’ ಆಗುತ್ತಿರುವ ಮತ್ತು ಎ.ಐ (AI) ಕೇಂದ್ರವಾಗುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಾವು ಒಂದು ಕಾಲದಲ್ಲಿ ವಿಶ್ವಗುರು ಆಗಿದ್ದೆವು ಎಂಬುದು ಸತ್ಯ. ಆದರೆ ಇಂದು ನಾವು ಹಾಗಿಲ್ಲ ಎಂಬ ವಾಸ್ತವವನ್ನು ಒಪ್ಪಿಕೊಳ್ಳಬೇಕು. ಈ ಹಂತದಲ್ಲಿ ನಾವು ವಿಶ್ವಗುರು ಅಲ್ಲ, ಬದಲಾಗಿ ಆ ಸ್ಥಾನಕ್ಕೇರಲು ಪ್ರಯತ್ನಿಸಬೇಕಷ್ಟೇ,” ಎಂದು ಮಾರ್ಮಿಕವಾಗಿ ನುಡಿದರು.

ಸಂಸ್ಕೃತಕ್ಕೆ ಅಗ್ರಸ್ಥಾನ ನೀಡಲು ಕರೆ:
ಸಂಸ್ಕೃತ ಭಾಷೆಯ ಮಹತ್ವದ ಬಗ್ಗೆ ಮಾತನಾಡಿದ ಜೋಶಿ, ಕ್ವಾಂಟಮ್ ಕಂಪ್ಯೂಟಿಂಗ್‌ನಂತಹ ಆಧುನಿಕ ತಂತ್ರಜ್ಞಾನಗಳಲ್ಲಿ ಸಂಸ್ಕೃತವನ್ನು ಬಳಸಬೇಕು ಎಂದು ಆಶಿಸಿದರು. ಸಂಸ್ಕೃತವನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಮಾಡಲು ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರು ಶ್ರಮಿಸಿದ್ದರು. ಸಂಸ್ಕೃತದ ಹೆಚ್ಚಿನ ಪ್ರಚಾರ ಮತ್ತು ಬಳಕೆಯಿಂದ ಮಾತ್ರ ಭಾರತವು ತನ್ನ ಪ್ರಾಚೀನ ಗೌರವವನ್ನು ಮರಳಿ ಪಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

Continue Reading
Advertisement
Latest11 hours ago

ಮಹಿಳಾ ಮೀಸಲಾತಿಗೆ ಬೆಂಬಲ; ಡಿಲಿಮಿಟೇಷನ್‌ ಗೆ ವಿರೋಧ:ಸಿಎಂ ಸಿದ್ದರಾಮಯ್ಯ ಸಷ್ಟನೆ

Latest11 hours ago

ಕುಮಾರಸ್ವಾಮಿಗೆ ಬೆಂಗಳೂರಿನ ಬಗ್ಗೆ ಅರಿವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Latest11 hours ago

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

Latest11 hours ago

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

Latest11 hours ago

ದಲಿತರಿಗೆ ಒಳ ಮೀಸಲಾತಿ: ಏ.24ರಂದು ವಿಶೇಷ ಸಂಪುಟ ಸಭೆ

Latest11 hours ago

“ಗ್ರೇಟರ್ ಇಸ್ರೇಲ್” ಸಾಕಾರಕ್ಕೆ ನೆತನ್ಯಾಹು ಬಿಗ್‌ ಪ್ಲಾನ್:‌ ಮಧ್ಯ ಪ್ರಾಚ್ಯದಲ್ಲಿ ಶಾಂತಿಗಿಲ್ಲ ನೆಲೆ

Latest12 hours ago

ಜೆಡಿಎಸ್‌ ಗೆ ಮರಳುತ್ತೀರಾ?; ಸಚಿವ ಜಮೀರ್‌ ಅಹಮದ್‌ ಕೊಟ್ಟ ಉತ್ತರ ಏನು?

Latest12 hours ago

ಬೇಸಿಗೆಯಲ್ಲೂ ಸಣ್ಣ ನೀರಾವರಿ ಕೆರೆಗಳಲ್ಲಿ ಸಮೃದ್ದ ನೀರು ಸಂಗ್ರಹ: ಸಚಿವ ಎನ್‌ ಎಸ್‌ ಭೋಸರಾಜು

Latest12 hours ago

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

Latest13 hours ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌