ನವದೆಹಲಿ: ಜನವರಿ 1ರಂದು ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್( X-Ray Polarimeter Satellite) ಉಪಗ್ರಹ ಎಕ್ಸ್‌ಪೋಸ್ಯಾಟ್(XPoSat) ಹೊತ್ತೊಯ್ಯುವ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ನ (PSLV) ಉಡಾವಣೆಯೊಂದಿಗೆ ಭಾರತವು ಹೊಸ ವರ್ಷ(New Year 2024) ಭರ್ಜರಿಯಾಗಿಯೇ ಆರಂಭಿಸುತ್ತಿದೆ. ಎಕ್ಸ್‌ಪೋಸ್ಯಾಟ್ ಲಾಂಚ್ ಜತೆಗೆ ಪಿಎಸ್‌ಎಲ್‌ವಿ ಇತರ ಹತ್ತು ಉಪಗ್ರಹಗಳನ್ನು (10 payloads) ಹೊತ್ತೊಯ್ಯಲಿದೆ. ಈ ಉಪಗ್ರಹಗಳನ್ನು ಸ್ಟಾರ್ಟ್‌ಅಪ್ಸ್(Starts Up), ಶೈಕ್ಷಣಿಕ ಸಂಸ್ಥೆಗಳು(Educational Institutions) ಮತ್ತು ಇಸ್ರೋ ಕೇಂದ್ರಗಳು (ISRO Centers) ನಿರ್ಮಾಣ ಮಾಡಿವೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಎಕ್ಸ್‌ಪೋಸ್ಯಾಟ್ ಮಿಷನ್ ಅನ್ನು ಪಿಎಸ್ಎಲ್‌ವಿ ಬಳಸಿಕೊಂಡು ಬೆಳಿಗ್ಗೆ 9:10 ಕ್ಕೆ ಲಾಂಚ್ ಮಾಡುವ ಮೂಲಕ ಭಾರತದ ಬಾಹ್ಯಾಕಾಶ ಪರಿಶೋಧನಾ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಘೋಷಿಸಿದೆ.
🚀 PSLV-C58/ 🛰️ XPoSat Mission:
— ISRO (@isro) December 31, 2023
The launch of the X-Ray Polarimeter Satellite (XPoSat) is set for January 1, 2024, at 09:10 Hrs. IST from the first launch-pad, SDSC-SHAR, Sriharikota.https://t.co/gWMWX8N6Iv
The launch can be viewed LIVE
from 08:40 Hrs. IST on
YouTube:… pic.twitter.com/g4tUArJ0Ea
ಎಕ್ಸ್‌ಪೋಸ್ಯಾಟ್ ಮಿಷನ್ ಅನ್ನು ತೀವ್ರವಾದ ಎಕ್ಸ್-ರೇ ಮೂಲಗಳ ಧ್ರುವೀಕರಣವನ್ನು ತನಿಖೆ ಮಾಡಲು ವಿನ್ಯಾಸಗೊಳಿಸಲಾಗಿದೆ, ಇದು ಬಾಹ್ಯಾಕಾಶ-ಆಧಾರಿತ ಧ್ರುವೀಯತೆಯ ಮುಂಚೂಣಿಯಲ್ಲಿ ಭಾರತವನ್ನು ಮೆರೆಸುವ ವೈಜ್ಞಾನಿಕ ಪ್ರಯತ್ನವಾಗಿದೆ. 2021ರಲ್ಲಿ ಬಿಡುಗಡೆಯಾದ ನಾಸಾದ ಇಮೇಜಿಂಗ್ ಎಕ್ಸ್-ರೇ ಪೊಲರಿಮೆಟ್ರಿ ಎಕ್ಸ್‌ಪ್ಲೋರರ್ (IXPE) ನಂತರ ಈ ಮಿಷನ್ ಭಾರತದ ಮೊದಲ ಮೀಸಲಾದ ಪೋಲರಿಮೀಟರ್ ಮಿಷನ್ ಮಾತ್ರವಲ್ಲದೆ ವಿಶ್ವದ ಎರಡನೆಯದು.
ಪಲ್ಸಾರ, ಕಪ್ಪು ಕುಳಿ ಎಕ್ಸ್-ರೇ ಬೈನರಿಗಳು, ಸಕ್ರಿಯ ಗ್ಯಾಲಕ್ಸಿಯ ನ್ಯೂಕ್ಲಿಯಸ್‌ಗಳು, ನ್ಯೂಟ್ರಾನ್ ನಕ್ಷತ್ರಗಳು ಮತ್ತು ಉಷ್ಣವಲ್ಲದ ಸೂಪರ್‌ನೋವಾ ಅವಶೇಷಗಳನ್ನು ಒಳಗೊಂಡಂತೆ ವಿಶ್ವದಲ್ಲಿ ತಿಳಿದಿರುವ 50 ಪ್ರಕಾಶಮಾನವಾದ ಮೂಲಗಳನ್ನು ಅಧ್ಯಯನ ಮಾಡುವ ಗುರಿಯನ್ನು ಎಕ್ಸ್‌ಪೋಸ್ಯಾಟ್ ಮಿಷನ್ ಹೊಂದಿದೆ. ಉಪಗ್ರಹವನ್ನು 500-700 ಕಿಮೀ ವೃತ್ತಾಕಾರದ ಕಡಿಮೆ ಭೂಮಿಯ ಕಕ್ಷೆಯಲ್ಲಿ ಇರಿಸಲಾಗುವುದು, ಕನಿಷ್ಠ ಐದು ವರ್ಷಗಳ ಮಿಷನ್ ಸಕ್ರಿಯವಾಗಿರಲಿದೆ.
ಯು ಆರ್ ರಾವ್ ಉಪಗ್ರಹ ಕೇಂದ್ರದ ಸಹಯೋಗದೊಂದಿಗೆ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಆರ್‌ಆರ್‌ಐ) ಅಭಿವೃದ್ಧಿಪಡಿಸಿದ ಈ ಉಪಕರಣಗಳು ಆಕಾಶ ವಸ್ತುಗಳ ಭೌತಶಾಸ್ತ್ರದ ಬಗ್ಗೆ ಹೊಸ ಒಳನೋಟಗಳನ್ನು ನೀಡುವ ನಿರೀಕ್ಷೆಯಿದೆ. ಕ್ಷ ಕಿರಣಗಳ ಧ್ರುವೀಕರಣವನ್ನು ಅಳೆಯುವ ಮೂಲಕ, ವಿಜ್ಞಾನಿಗಳು ಈ ದೂರದ ಮೂಲಗಳ ರೇಖಾಗಣಿತ ಮತ್ತು ಹೊರಸೂಸುವಿಕೆಯ ಕಾರ್ಯವಿಧಾನಗಳ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಊಹಿಸಬಹುದಾಗಿದೆ.
ಸ್ಟಾರ್ಟ್‌ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ಅಭಿವೃದ್ಧಿಪಡಿಸಿರುವ ಇತರ 10 ಉಪಗ್ರಹಗಳನ್ನೂ ಈ ಪಿಎಸ್‌ಎಲ್ ಹೊತ್ತೊಯ್ಯಲಿದೆ. ಟೇಕ್‌ಮೀ2ಸ್ಪೇಸ್‌ನ ರೇಡಿಯೇಶನ್ ಶೀಲ್ಡಿಂಗ್ ಎಕ್ಸ್‌ಪೆರಿಮೆಂಟಲ್ ಮಾಡ್ಯೂಲ್ (RSEM), ಮಹಿಳೆಯರಿಗಾಗಿ ಎಲ್‌ಬಿಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ತಯಾರಿಸಲಾಗಿರುವ ವುಮೆನ್ ಇಂಜಿನಿಯರ್ಡ್ ಸ್ಯಾಟಲೈಟ್ (ವೆಸ್ಯಾಟ್), ಕೆ.ಜೆ.ಸೋಮಯ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅವರ ಬಿಲೀಫ್‌ಸಾ-ಟಿ0 ಹವ್ಯಾಸಿ ರೇಡಿಯೋ ಉಪಗ್ರಹ, ಇನ್ಸ್‌ಪೆಕ್ಟಿಟಿ ಸ್ಪೇಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‌ನ ಗ್ರೀನ್ ಇಂಪಲ್ಸ್ ಟ್ರಾನ್ಸ್ಮಿಟರ್ (GITA), ಧ್ರುವಾ ಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ಲಾಂಚಿಂಗ್ ಎಸ್ಪಿಎಡಿಷನ್ಸ್ ಫಾರ್ ಅಸ್ಪಿರಿನ್ಗ್ ಟೆಕ್ನಾಲಜೀಸ್ -ಟೆಕ್ನಾಲಜಿ ಡೆಮೋನ್ಸ್ಟ್ರಾಟೋರ್ (LEAP-TD), ಬೆಲಟ್ರಿಕ್ಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ರುದ್ರ 0.3 ಮತ್ತು ಅರ್ಕಾ-200, ಪಿಆರ್‌ಎಲ್‍ನಿಂದ ಡಸ್ಟ್ ಎಕ್ಸ್‌ಪರಿಮೆಂಟ್ (DEX),ವಿಎಸ್‌ಎಸ್‌ಸಿ ಮ್ತತು ಇಸ್ರೋದಿಂದ ಇಸ್ರೋ ಫುಯೆಲ್ ಸೆಲ್ ಪವರ್ ಸಿಸ್ಟಮ್(ಎಫ್‌ಸಿಪಿಎಸ್) ಹಾಗೂ ಹೈ ಎನರ್ಜಿ ಸೆಬ್ ಉಪಗ್ರಹಗಳನ್ನು ಪಿಎಸ್‌ಎಲ್‌ವಿ ಹೊತ್ತೊಯ್ಯಲಿದೆ.
ಈ ಸುದ್ದಿಯನ್ನೂ ಓದಿ: ಇಸ್ರೋ ವಿಜ್ಞಾನಿಗೆ ಫ್ರಾನ್ಸ್‌ನ ನಾಗರಿಕ ಪ್ರಶಸ್ತಿ ಪ್ರದಾನ! ಈ ಅವಾರ್ಡ್ ಆರಂಭಿಸಿದ್ದು ಯಾರು?