Site icon Vistara News

IT Raid: ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್‌; ಬೆಳ್ಳಂಬೆಳಗ್ಗೆ ರೇಡ್‌, ಕೋಟಿ ಕೋಟಿ ಹಣ ಜಪ್ತಿ!

IT Raid

ಮಹಾರಾಷ್ಟ್ರ: ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ(IT Raid) ಅಧಿಕಾರಿಗಳು ನಾಸಿಕ್ ಮೂಲದ ಚಿನ್ನದ ವ್ಯಾಪಾರಿ(Jewellers)ಗಳಿಗೆ ಬಿಸಿ ಮುಟ್ಟಿದ್ದಾರೆ. ಅಕ್ರಮ ಹಣ ವರ್ಗಾವಣೆ ಮತ್ತು ತೆರಿಗೆ ವಂಚನೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರದ ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ರೇಡ್‌ ಮಾಡಿದ ಅಧಿಕಾರಿಗಳು ಭಾರೀ ಮೊತ್ತದ ಅಕ್ರಮ ಹಣ ಮತ್ತು ಸಂಪತ್ತನ್ನು ವಶಕ್ಕೆ ಪಡೆದಿದ್ದಾರೆ.

ಅಧಿಕೃತ ಮಾಹಿತಿ ಮೇರೆಗೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಚಿನ್ನದ ಮಳಿಗೆಯಲ್ಲಿ ಶೋಧ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಶೋಧ ಕಾರ್ಯದ ವೇಳೆ ಬರೋಬ್ಬರಿ 26 ಕೋಟಿ ರೂ. ನಗದು ಮತ್ತು 90 ಕೋಟಿ ರೂ. ಮೊತ್ತದ ವಸ್ತುಗಳು ಪತ್ತೆ ಆಗಿವೆ. ಇನ್ನು ಈ ನಗದು ಮತ್ತು ಸ್ವತ್ತುಗಳನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದು, ಕೇಸ್‌ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:Fire Accident: ಗುಜರಾತ್‌ ಅಗ್ನಿ ದುರಂತ; ಸಾವಿನ ಸಂಖ್ಯೆ 32ಕ್ಕೆ ಏರಿಕೆ; SIT ತನಿಖೆಗೆ ಆದೇಶ

ಇನ್ನು ಕೆಲವು ವಾರಗಳ ಹಿಂದೆ ಜಾರ್ಖಂಡ್‌ನಲ್ಲೂ ಇಂತಹದ್ದೇ ಒಂದು ರೇಡ್‌ ನಡೆದಿತ್ತು. ಜಾರಿ ನಿರ್ದೇಶನಾಲಯ (Enforcement Directorate)ದ ಅಧಿಕಾರಿಗಳು ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದರು. (ED Raid). ಈ ವೇಳೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು.

Exit mobile version