Site icon Vistara News

IT Raid: ಶೂ ವ್ಯಾಪಾರಿಗಳಿಗೆ ಐಟಿ ಶಾಕ್‌; 40 ಕೋಟಿ ರೂ. ಸೀಜ್‌-ಕಂತೆ ಕಂತೆ ನೋಟು ನೋಡಿ ದಂಗಾದ ಅಧಿಕಾರಿಗಳು

IT Raid

ಉತ್ತರಪ್ರದೇಶ: ಶೂ ತಯಾರಿಕಾ ಉದ್ಯಮಿಗಳ ಮೇಲೆ ಆದಾಯ ತೆರಿಗೆ(IT Raid) ಅಧಿಕಾರಿಗಳು ದಾಳಿ ನಡೆಸಿ, ಬರೊಬ್ಬರಿ 40 ಕೋಟಿ ರೂ.ನಗದನ್ನು ವಶಕ್ಕೆ ಪಡೆದಿರುವ ಘಟನೆ ಉತ್ತರಪ್ರದೇಶ(Uttar Pradesh)ದ ಆಗ್ರಾದಲ್ಲಿ ನಡೆದಿದೆ. ಶನಿವಾರ ಆಗ್ರಾದ ಮೂರು ಶೂ ವ್ಯಾಪಾರಿ(Shoe Business)ಗಳ ನಿವಾಸ ಮತ್ತು ಕಚೇರಿ ಮೇಲೆ ರೇಡ್‌ ಮಾಡಿರುವ ಐಟಿ, ಭಾರೀ ಶೋಧ ಕಾರ್ಯಾಚರಣೆ ನಡೆಸಿದೆ.

ರೇಡ್‌ ವೇಳೆ 40ಕೋಟಿ ರೂ. ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಅಕ್ರಮ ಹಣದ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇವಲ 500ರೂ. ಮುಖಬೆಲೆಯ ನೋಟುಗಳಾಗಿದ್ದು, ಅಧಿಕಾರಿಗಳು ನೋಟು ಎಣಿಕೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೂ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ವ್ಯಾಪಾರಿಗಳ ವಿವರ ಇನ್ನೂ ಬಹಿರಂಗಪಡಿಸಿಲ್ಲ. ಇನ್ನು ಮಂಚದ ಮೇಲೆ ಕಂತೆ ಕಂತೆ ನೋಟುಗಳನ್ನು ಅಧಿಕಾರಿಗಳು ಜೋಡಿಸಿಟ್ಟಿರುವ ಫೋಟೋ ಎಲ್ಲೆಡೆ ವೈರಲ್‌ ಆಗುತ್ತಿದೆ.

ಕೆಲವು ದಿನಗಳ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದರು. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರು ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

Exit mobile version