Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ - Vistara News

ದೇಶ

Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Narendra Modi: ನರೇಂದ್ರ ಮೋದಿ ಅವರನ್ನು ನೋಡುತ್ತಲೇ ಜಾರ್ಜಿಯಾ ಮೆಲೋನಿ ಖುಷಿಯಾದರು. ನಗುತ್ತಲೇ ಕೈಮುಗಿದು ಮೋದಿ ಅವರನ್ನು ತಮ್ಮ ದೇಶಕ್ಕೆ ಸ್ವಾಗತಿಸಿದರು. ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೂರನೇ ಬಾರಿಗೆ ಪ್ರಧಾನಿಯಾಗಿದ್ದಕ್ಕೂ ಮೆಲೋನಿ ಅವರು ಅಭಿನಂದನೆ ತಿಳಿಸಿದರು ಎಂದು ತಿಳಿದುಬಂದಿದೆ. ಇನ್ನು, ಇಬ್ಬರೂ ಆತ್ಮೀಯವಾಗಿ ಮಾತುಕತೆ ನಡೆಸಿದ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರೋಮ್:‌ 50ನೇ ಆವೃತ್ತಿಯ ಜಿ 7 ಶೃಂಗಸಭೆಯಲ್ಲಿ (G 7 Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಇಟಲಿಯ ಅಪುಲಿಯಾಗೆ ತೆರಳಿದ್ದಾರೆ. ಇನ್ನು, ಜಿ 7 ಸಭೆ ನಡೆಯುವ ಸ್ಥಳಕ್ಕೆ ತೆರಳಿದ ನರೇಂದ್ರ ಮೋದಿ ಅವರಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ನಮಸ್ತೆ ಎಂದು ಕೈಮುಗಿದು ಭಾರತದ ಸಂಪ್ರದಾಯದಂತೆ ಸ್ವಾಗತಿಸಿದ್ದಾರೆ. ಮೋದಿ ಹಾಗೂ ಮೆಲೋನಿ ಅವರು ಆತ್ಮೀಯ ಸ್ನೇಹಿತರಾಗಿದ್ದು, ಇಬ್ಬರೂ ಕೆಲ ನಿಮಿಷ ಆತ್ಮೀಯವಾಗಿ ಮಾತುಕತೆ ನಡೆಸಿರುವ ವಿಡಿಯೊ ವೈರಲ್‌ ಆಗಿದೆ.

ಭಾರತವು ಜಿ7 ರಾಷ್ಟ್ರಗಳ ಒಕ್ಕೂಟದ ಸದಸ್ಯ ರಾಷ್ಟ್ರವಾಗಿರದಿದ್ದರೂ ಜಾರ್ಜಿಯಾ ಮೆಲೋನಿ ಅವರು ನರೇಂದ್ರ ಮೋದಿ ಅವರನ್ನು ವಿಶೇಷವಾಗಿ ಆಹ್ವಾನಿಸಿದ್ದಾರೆ. ಮೋದಿ ಅವರು ಶುಕ್ರವಾರ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್‌, ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಸೇರಿ ಹಲವು ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಇನ್ನೂ ಹಲವು ನಾಯಕರೊಂದಿಗೆ ಮೋದಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಮೋದಿ+ಮೆಲೋನಿ= ಮೆಲೋಡಿ ಎಂದೇ ಟ್ರೋಲ್‌

ನರೇಂದ್ರ ಮೋದಿ ಹಾಗೂ ಜಾರ್ಜಿಯಾ ಮೆಲೋನಿ ಅವರ ಫೋಟೊ ಹಾಗೂ ವಿಡಿಯೊಗಳು ದೇಶದಲ್ಲಿ ಜಾಸ್ತಿ ಟ್ರೋಲ್‌ ಆಗುತ್ತಿರುತ್ತವೆ. ಅದರಲ್ಲೂ, ಮೋದಿ ಹಾಗೂ ಮೆಲೋನಿ ಎಂಬ ಪದಗಳನ್ನು ಸೇರಿಸಿ ಮೆಲೋಡಿ ಎಂದೇ ಕರೆಯುತ್ತಾರೆ. ಈಗ ಮೋದಿ ಅವರು ಇಟಲಿಗೆ ಹೋಗಿದ್ದು, ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮೆಲೋಡಿ ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

2023ರ ಡಿಸೆಂಬರ್‌ 2ರಂದು ಯುಎಇ ದೇಶದ ರಾಜಧಾನಿ ದುಬೈನಲ್ಲಿ ನಡೆದ 28ನೇ ಕಾನ್ಫರೆನ್ಸ್‌ ಆಫ್‌ ದಿ ಪಾರ್ಟೀಸ್‌ (COP28) ಶೃಂಗಸಭೆಯಲ್ಲಿ ನರೇಂದ್ರ ಮೋದಿ ಹಾಗೂ ಜಾರ್ಜಿಯಾ ಮೆಲೋನಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಇದೇ ವೇಳೆ ಜಾರ್ಜಿಯಾ ಮೆಲೋನಿ ಅವರು ನರೇಂದ್ರ ಮೋದಿ ಅವರ ಜತೆ ಸೆಲ್ಫಿ ತೆಗೆಸಿಕೊಂಡಿದ್ದರು. “ಸಿಒಪಿ28 ಸಭೆಯಲ್ಲಿ ಆತ್ಮೀಯ ಸ್ನೇಹಿತರು” ಎಂದು ಒಕ್ಕಣೆ ಬರೆದಿದ್ದರು. ಅಷ್ಟೇ ಅಲ್ಲ, ಮೆಲೋನಿ+ಮೋದಿ= ಮೆಲೋಡಿ ಎಂಬ ಅರ್ಥ ಬರುವ ಕಾರಣ ಮೆಲೋಡಿ ಎಂಬ ಹ್ಯಾಶ್‌ ಟ್ಯಾಗ್‌ ಬಳಸಿದ್ದರು. ಈ ಫೋಟೊ ಭಾರಿ ವೈರಲ್‌ ಆಗಿದ್ದು, ಸಾವಿರಾರು ಜನ ಪ್ರತಿಕ್ರಿಯಿಸಿದ್ದರು.

ಮೋದಿಯನ್ನು ಹಾಡಿ ಹೊಗಳಿದ್ದ ಮೆಲೋನಿ

ಜಾರ್ಜಿಯಾ ಮೆಲೋನಿ ಅವರು ಇದಕ್ಕೂ ಮೊದಲು ನರೇಂದ್ರ ಮೋದಿ ಅವರನ್ನು ಹೊಗಳಿದ್ದರು. ರೈಸಿನಾ ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಜಾರ್ಜಿಯಾ ಮೆಲೋನಿ, “ನರೇಂದ್ರ ಮೋದಿ ಅವರು ವಿಶ್ವದ ನಾಯಕರಲ್ಲಿಯೇ ಹೆಚ್ಚು ಪ್ರೀತಿಗೆ ಪಾತ್ರರಾಗಿದ್ದಾರೆ. ಅವರು ಧೀಮಂತ ನಾಯಕರು ಎಂಬುದು ಸಾಬೀತಾಗಿದೆ. ಇದಕ್ಕಾಗಿ ಮೋದಿ ಅವರಿಗೆ ಅಭಿನಂದನೆಗಳು” ಎಂದಿದ್ದರು. “ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಾಗೂ ಇಟಲಿ ಸಂಬಂಧ ಮತ್ತಷ್ಟು ವೃದ್ಧಿಯಾಗುತ್ತಿದೆ. ಉಭಯ ದೇಶಗಳ ಸಂಬಂಧವನ್ನು ವ್ಯೂಹಾತ್ಮಕ ಸಂಬಂಧವಾಗಿ ಮಾರ್ಪಡಿಸಲು ನಾವು ಉತ್ಸುಕರಾಗಿದ್ದೇವೆ. ಇದರಿಂದ ಎರಡೂ ದೇಶಗಳ ಸಂಬಂಧ ಇನ್ನಷ್ಟು ವೃದ್ಧಿಯಾಗಲಿದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ: Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Train Accident: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿಯಾಗಿ ಸುಮಾರು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೀಗ ರೈಲು ಅಪಘಾತಕ್ಕೆ ಕಾರಣವೇನು ಎನ್ನುವ ತನಿಖೆ ನಡೆಯುತ್ತಿದೆ. ಪ್ರಾಥಮಿಕ ವರದಿ ಪ್ರಕಾರ ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಸಿಗ್ನಲ್‌ನಲ್ಲಿ ಕಂಡು ಬಂದ ದೋಷವೇ ದುರಂತಕ್ಕೆ ಕಾರಣ ಎನ್ನಲಾಗಿದೆ.

VISTARANEWS.COM


on

Train Accident
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿಯಾಗಿ (Train Accident) ಸುಮಾರು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೀಗ ರೈಲು ಅಪಘಾತಕ್ಕೆ ಕಾರಣವೇನು ಎನ್ನುವ ತನಿಖೆ ನಡೆಯುತ್ತಿದೆ. ಪ್ರಾಥಮಿಕ ವರದಿ ಪ್ರಕಾರ ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಸಿಗ್ನಲ್‌ನಲ್ಲಿ ಕಂಡು ಬಂದ ದೋಷವೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ದೋಷದಿಂದ ಕೂಡಿದ ಸ್ವಯಂಚಾಲಿತ ಸಿಗ್ನಲ್‌ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಗೂಡ್ಸ್‌ ರೈಲು ವೇಗದ ಮಿತಿಯನ್ನು ಮೀರಿ ಸಂಚರಿಸಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮಂಡಳಿಯ ಆರಂಭಿಕ ವರದಿ ತಿಳಿಸಿದೆ.

ನಿಯಮ ಏನು ಹೇಳುತ್ತದೆ?

ಟಿಎ 912 (TA 912) (ಸ್ವಯಂಚಾಲಿತ ವ್ಯವಸ್ಥೆಯಲ್ಲಿ ಸಿಗ್ನಲ್ ವೈಫಲ್ಯ ಸಂಭವಿಸಿದಾಗ, ಕೆಂಪು ಸಿಗ್ನಲ್‌ಗಳನ್ನು ದಾಟಲು ಸ್ಟೇಷನ್ ಮಾಸ್ಟರ್ ಚಾಲಕನಿಗೆ ಲಿಖಿತ ಪಾಸ್ ಅನ್ನು ಟಿಎ 912 ಎಂದು ಕರೆಯಲಾಗುತ್ತದೆ) ನಿಯಮದ ಪ್ರಕಾರ ಒಂದುವೇಳೆ ದೋಷಪೂರಿತ ಸಿಗ್ನಲ್‌ಗಳನ್ನು ದಾಟಲು ಅನುಮತಿ ಪಡೆದಿದ್ದರೆ, ಚಾಲಕ ಪ್ರತಿ ಸಿಗ್ನಲ್‌ನಲ್ಲಿ ಕೆಲವು ಹೊತ್ತು ನಿಂತು ಗಂಟೆಗೆ 10 ಕಿ.ಮೀ. ವೇಗದಲ್ಲಿ ಮಾತ್ರ ರೈಲು ಓಡಿಸಬೇಕು. ಮಾತ್ರವಲ್ಲ ಇನ್ನೊಂದು ರೈಲಿನಿಂದ 150 ಮೀಟರ್ ಅಂತರವನ್ನು ಕಾಯ್ದುಕೊಳ್ಳಬೇಕು. ಆದಾಗ್ಯೂ ಈ ಘಟನೆಯಲ್ಲಿ ಗೂಡ್ಸ್‌ ರೈಲು ಚಾಲಕ ಈ ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್‌ ಟಿಎ 912ರೊಂದಿಗೆ 9 ಸ್ವಯಂಚಾಲಿತ ಸಿಗ್ನಲ್‌ಗಳನ್ನು ದಾಟಿ ಮುಂದೆ ಸಾಗಲು ಅನುಮತಿಗಾಗಿ ಕಾಯುತ್ತಿತ್ತು ಎನ್ನಲಾಗಿದೆ.

ದೋಷಯುಕ್ತ ಸ್ವಯಂಚಾಲಿತ ಸಿಗ್ನಲ್‌ ವ್ಯವಸ್ಥೆಯಿಂದಾಗಿ ಗೂಡ್ಸ್‌ ರೈಲು ಚಾಲಕನಿಗೆ ರಂಗಪಾಣಿ ಮತ್ತು ಚಟ್ಟರ್ ಹ್ಯಾಟ್ ರೈಲ್ವೆ ನಿಲ್ದಾಣಗಳ ನಡುವಿನ ಎಲ್ಲ ಸಿಗ್ನಲ್‌ಗಳನ್ನು ದಾಟಲು ಅನುಮತಿ ನೀಡಲಾಗಿತ್ತು. ಆದರೆ ರೈಲು ಅಂತಹ ಸಂದರ್ಭಗಳಿಗೆ ನಿಗದಿಪಡಿಸಿದ ಮಿತಿಯನ್ನು ಮೀರಿ ಸಂಚರಿಸಿದೆ. ʼʼರಾಣಿಪಾತ್ರ ರೈಲ್ವೆ ನಿಲ್ದಾಣ ಮತ್ತು ಚಟ್ಟರ್ ಹ್ಯಾಟ್ ಜಂಕ್ಷನ್ ನಡುವಿನ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯು ಸೋಮವಾರ ಬೆಳಿಗ್ಗೆ 5.50ರಿಂದ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಗೂಡ್ಸ್ ರೈಲು ಚಾಲಕನಿಗೆ ರಂಗಪಾಣಿಯ ಸ್ಟೇಷನ್ ಮಾಸ್ಟರ್ ಟಿಎ 912 ಅನ್ನು ನೀಡಿ, ಒಂಬತ್ತು ಸಿಗ್ನಲ್‌ ಅನ್ನು ಹಾದುಹೋಗಲು ಅನುಮತಿ ನೀಡಿದ್ದರು. ಆದರೆ ಚಾಲಕ ನಿಗದಿ ಪಡಿಸಿದ ಮಿತಿಗಿಂತ ವೇಗವಾಗಿ ಚಲಿಸಿದ್ದರಿಂದ ದುರಂತ ಸಂಭವಿಸಿದೆʼʼ ಎಂದು ಮೂಲಗಳು ತಿಳಿಸಿವೆ.

ಬೆಳಿಗ್ಗೆ 8:42ಕ್ಕೆ ರಂಗಪಾಣಿಯಿಂದ ಹೊರಟ ಗೂಡ್ಸ್ ರೈಲು ಬೆಳಿಗ್ಗೆ 8:55ಕ್ಕೆ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಗಾರ್ಡ್ ಕೋಚ್, ಎರಡು ಪಾರ್ಸೆಲ್ ಬೋಗಿಗಳು ಮತ್ತು ಪ್ಯಾಸೆಂಜರ್ ರೈಲಿನ ಸಾಮಾನ್ಯ ಆಸನದ ಬೋಗಿ ಹಳಿ ತಪ್ಪಿದೆ. ಮೃತರಲ್ಲಿ ಗೂಡ್ಸ್ ರೈಲಿನ ಚಾಲಕ ಕೂಡ ಸೇರಿದ್ದಾರೆ. ಇತ್ತ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಚಾಲಕ ಸಿಗ್ನಲಿಂಗ್ ದೋಷದ ಸಮಯದಲ್ಲಿ ಅಗತ್ಯವಿರುವ ಸುರಕ್ಷತಾ ಮಾನದಂಡಗಳನ್ನು ಅನುಸರಿಸಿದ್ದಾರೆ. ಎಲ್ಲ ಕೆಂಪು ಸಿಗ್ನಲ್‌ಗಳಲ್ಲಿ ಒಂದು ನಿಮಿಷ ನಿಲ್ಲಿಸಿ 10 ಕಿ.ಮೀ. ವೇಗದಲ್ಲಿ ಸಂಚರಿಸಿದ್ದರು ಎಂದು ವರದಿ ತಿಳಿಸಿದೆ.

ಸದ್ಯ ರೈಲ್ವೆ ಸುರಕ್ಷತಾ ಆಯುಕ್ತರು (Commissioner of Railway Safety) ಅಪಘಾತದ ಕಾರಣದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50 ಸಾವಿರ ರೂ. ಪ್ರಕಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Andhra train accident: 13 ಜನರ ಬಲಿ ಪಡೆದ ಆಂಧ್ರ ರೈಲು ಅಪಘಾತದ‌ ಮೂಲ ಕಾರಣ ಬಹಿರಂಗ

Continue Reading

ದೇಶ

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

ಆರತಿ ಯಾದವ್‌ ಹಾಗೂ ರೋಹಿತ್‌ ಯಾದವ್‌ ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಆತನ ನೋವಿಗೆ ಈಕೆ ಮುಲಾಮು ಆಗುತ್ತಿದ್ದಳು. ಈಕೆಯ ಮುನಿಸನ್ನು ಆತ ಪಿಸುಮಾತಿನಿಂದಲೇ ಸಮಾಧಾನ ಮಾಡುತ್ತಿದ್ದ. ಆದರೆ, ಕೆಲ ದಿನಗಳ ಹಿಂದಷ್ಟೇ ಆರತಿ ಯಾದವ್‌, ಬ್ರೇಕಪ್‌ ಮಾಡಿಕೊಳ್ಳೋಣ ಎಂದಿದ್ದಳು. ಈಕೆಯು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದಾಳೆ ಎಂಬ ಶಂಕೆಯೂ ರೋಹಿತ್‌ ಯಾದವ್‌ ಮನಸ್ಸಲ್ಲಿ ಮೂಡಿತ್ತು. ಹಾಗಾಗಿಯೇ, ನಡು ರಸ್ತೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Mumbai News
Koo

ಮುಂಬೈ: ಬದಲಾದ ಕಾಲಘಟ್ಟದಲ್ಲಿ ಲವ್‌ ಬ್ರೇಕಪ್‌ (Love Breakup) ಎನ್ನುವುದು ತುಂಬ ಸಾಮಾನ್ಯ ಎನಿಸಿದೆ. ಆಕರ್ಷಣೆಗೆ ಒಳಗಾಗಿ ಪ್ರೀತಿಸುವುದು, ಒಂದು ವರ್ಷ ಜತೆಗೆ ತಿರುಗಾಡಿ, ಸಣ್ಣ ಭಿನ್ನಾಭಿಪ್ರಾಯ ಬಂದರೂ ಪ್ರೀತಿಗೆ ತಿಲಾಂಜಲಿ ಇಡುವುದು ಯುವಕ-ಯುವತಿಯರಿಗೆ ರೂಢಿಯಾಗಿದೆ. ಆದರೆ, ಕೆಲವೊಂದು ಪ್ರಕರಣಗಳಲ್ಲಿ ಬ್ರೇಕಪ್‌ಗಳು ಹಿಂಸೆ, ಕೊಲೆಗೂ ಕಾರಣವಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ (Maharashtra) ಮುಂಬೈನಲ್ಲಿ (Mumbai) ವ್ಯಕ್ತಿಯೊಬ್ಬ ಲವ್‌ ಬ್ರೇಕಪ್‌ ಎಂದಿದ್ದಕ್ಕೆ ಪ್ರೇಯಸಿಯನ್ನು ನಡು ರಸ್ತೆಯಲ್ಲಿಯೇ ಸ್ಪ್ಯಾನರ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಕೃತ್ಯದ ಭೀಕರ ವಿಡಿಯೊ ಈಗ ವೈರಲ್‌ ಆಗಿದೆ.

ಮುಂಬೈ ಬಳಿಯ ವಸಾಯ್‌ ಪ್ರದೇಶದ ರಸ್ತೆಯೊಂದರಲ್ಲಿ 20 ವರ್ಷದ ಆರತಿ ಯಾದವ್ ನಡೆದುಕೊಂಡು ಹೋಗುತ್ತಿರುತ್ತಾರೆ. ಆಗ 29 ವರ್ಷದ ರೋಹಿತ್‌ ಯಾದವ್‌ ಎಂಬಾತ ಸ್ಪ್ಯಾನರ್‌ ಹಿಡಿದುಕೊಂಡೇ ಓಡಿ ಬಂದು ಯುವತಿ ಮೇಲೆ ದಾಳಿ ಮಾಡಿದ್ದಾನೆ. ಯುವತಿ ತಲೆಗೆ, ಎದೆಗೆ ಸ್ಪ್ಯಾನರ್‌ನಿಂದ ಹೊಡೆದು, ಆಕೆ ನೆಲಕ್ಕೆ ಬಿದ್ದ ಮೇಲೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಇದೇ ವೇಳೆ ಒಂದಿಬ್ಬರು ವ್ಯಕ್ತಿಯನ್ನು ತಡೆಯಲು ಪ್ರಯತ್ನಿಸಿದರೂ ಅಷ್ಟೊತ್ತಿಗಾಗಲೇ ಗಂಭೀರವಾಗಿ ಗಾಯಗೊಂಡಿದ್ದ ಆರತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಲವ್‌ ಬ್ರೇಕಪ್‌ ಆಗಿದ್ದೇ ಕಾರಣ?

ಆರತಿ ಯಾದವ್‌ ಹಾಗೂ ರೋಹಿತ್‌ ಯಾದವ್‌ ಅವರು ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ನಡುವೆ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕೆಲ ದಿನಗಳ ಹಿಂದೆ ಆರತಿ ಯಾದವ್‌ ಈತನಿಗೆ ಬ್ರೇಕಪ್‌ ಎಂದಿದ್ದಳು. ಇನ್ಯಾವತ್ತೂ ನನ್ನನ್ನು ನೋಡಲು ಬರಬೇಡ, ಮಾತನಾಡಿಸಬೇಡ, ಕಾಲ್‌ ಮಾಡಿ ತೊಂದರೆ ಕೊಡಬೇಡ ಎಂದಿದ್ದಳು. ಇದರಿಂದ ರೋಹಿತ್‌ ಯಾದವ್‌ ನೊಂದಿದ್ದ. ಅಲ್ಲದೆ, ಆರತಿ ಯಾದವ್‌ ಬೇರೊಬ್ಬನ ಜತೆ ಪ್ರೀತಿಯ ಬಲೆಗೆ ಸಿಲುಕಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿತ್ತು.

ಬೇರೆಯವನನ್ನು ಪ್ರೀತಿಸುತ್ತಿದ್ದಾಳೆ ಎಂದು ಭಾವಿಸಿದ ರೋಹಿತ್‌ ಯಾದವ್‌, ನನಗೆ ಸಿಗದವಳು ಯಾರಿಗೂ ಸಿಗಬಾರದು ಎಂದು ಭಾವಿಸಿದ್ದಾನೆ. ಇದೇ ಕಾರಣಕ್ಕಾಗಿ ತುಂಬಿದ ರಸ್ತೆಯಲ್ಲಿಯೇ ಸ್ಪ್ಯಾನರ್‌ನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ಬಳಿಕ, “ನನಗೇಕೆ ಹೀಗೆ ಮಾಡಿದೆ” ಎಂದು ಹತಾಶಯ ಧ್ವನಿಯಲ್ಲಿ ಕಿರುಚಿದ್ದಾನೆ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Continue Reading

ದೇಶ

Reliance Jio Down: ದೇಶಾದ್ಯಂತ ಜಿಯೋ ನೆಟ್‌ವರ್ಕ್‌ ಡೌನ್;‌ ಇಂಟರ್‌ನೆಟ್‌ ಇಲ್ಲದೆ ಅಲ್ಲೋಲಕಲ್ಲೋಲ!

Reliance Jio Down: ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಜಿಯೋ ಸಮಸ್ಯೆಯಾಗಿದೆ. ಇನ್ನೂ ಕೆಲವರು, ಇಂಟರ್‌ನೆಟ್‌ ಕನೆಕ್ಷನ್‌ ಇದೆ. ಆದರೆ, ದಿನ ನಿತ್ಯ ಬಳಸುವ ಫೇಸ್‌ಬುಕ್‌, ವಾಟ್ಸ್ಯಾಪ್‌, ಜಿಯೋ ಟಿವಿ ಸೇರಿ ಹಲವು ಅಪ್ಲಿಕೇಶನ್‌ಗಳನ್ನು ಓಪನ್‌ ಮಾಡಲು ಆಗುತ್ತಿಲ್ಲ ಎಂಬುದಾಗಿ ತಿಳಿದುಬಂದಿದೆ. ಆದರೆ, ನೆಟ್‌ವರ್ಕ್‌, ಇಂಟರ್‌ನೆಟ್‌ ಡೌನ್‌ ಆಗಿರುವ ಕುರಿತು ಇದುವರೆಗೆ ರಿಲಯನ್ಸ್‌ ಜಿಯೋ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

VISTARANEWS.COM


on

Reliance Jio Down
Koo

ನವದೆಹಲಿ: ಕರ್ನಾಟಕ ಸೇರಿ ದೇಶಾದ್ಯಂತ ರಿಲಯನ್ಸ್‌ ಜಿಯೋ ನೆಟ್‌ವರ್ಕ್‌ ಡೌನ್‌ (Reliance Jio Down) ಆಗಿದ್ದು, ನೆಟ್‌ವರ್ಕ್‌ ಇಲ್ಲದೆ, ಇಂಟರ್‌ನೆಟ್‌ ಇಲ್ಲದೆ ಜನರ ಪರದಾಡುತ್ತಿದ್ದಾರೆ. ಮೊಬೈಲ್‌ ಇಂಟರ್‌ನೆಟ್‌ (Mobile Internet), ಜಿಯೋ ಫೈಬರ್‌, ಮೊಬೈಲ್‌ ನೆಟ್‌ವರ್ಕ್‌ (Mobile Network) ಸೇರಿ ಗ್ರಾಹಕರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕುರಿತು ಎಕ್ಸ್‌ ಸೇರಿ ಹಲವು ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಾವಿರಾರು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಇಂಟರ್‌ನೆಟ್‌, ನೆಟ್‌ವರ್ಕ್‌ ಸಮಸ್ಯೆ ಬಗ್ಗೆ ಇದುವರೆಗೆ ರಿಲಯನ್ಸ್‌ ಜಿಯೋ (Reliance Jio) ಪ್ರತಿಕ್ರಿಯೆ ನೀಡಿಲ್ಲ.

ಸರ್ವರ್‌ಗಳ ಮೇಲೆ ನಿಗಾ ಇಡುವ ಡೌನ್‌ಡಿಟೆಕ್ಟರ್‌ ಸಂಸ್ಥೆ ವರದಿ ಪ್ರಕಾರ ಶೇ.54ರಷ್ಟು ಗ್ರಾಹಕರು ಮೊಬೈಲ್‌ ಇಂಟರ್‌ನೆಟ್‌ ಸಮಸ್ಯೆ ಬಗ್ಗೆ ದೂರಿದರೆ, ಶೇ.38ರಷ್ಟು ಜಿಯೋ ಬಳಕೆದಾರರು ಜಿಯೋ ಫೈಬರ್‌ ಹಾಗೂ ಶೇ.7ರಷ್ಟು ಗ್ರಾಹಕರು ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಬಗ್ಗೆ ದೂರಿದ್ದಾರೆ ಎಂದು ತಿಳಿಸಿದೆ. ಬೆಂಗಳೂರು, ಹೈದರಾಬಾದ್‌, ಚೆನ್ನೈ ಸೇರಿ ದೇಶದ ಮೂಲೆ ಮೂಲೆಗಳ ಗ್ರಾಹಕರು ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಇಂಟರ್‌ನೆಟ್‌, ನೆಟ್‌ವರ್ಕ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಜಿಯೋ ಸಮಸ್ಯೆಯಾಗಿದೆ. ಇನ್ನೂ ಕೆಲವರು, ಇಂಟರ್‌ನೆಟ್‌ ಕನೆಕ್ಷನ್‌ ಇದೆ. ಆದರೆ, ದಿನ ನಿತ್ಯ ಬಳಸುವ ಫೇಸ್‌ಬುಕ್‌, ವಾಟ್ಸ್ಯಾಪ್‌, ಜಿಯೋ ಟಿವಿ ಸೇರಿ ಹಲವು ಅಪ್ಲಿಕೇಶನ್‌ಗಳನ್ನು ಓಪನ್‌ ಮಾಡಲು ಆಗುತ್ತಿಲ್ಲ ಎಂಬುದಾಗಿ ತಿಳಿದುಬಂದಿದೆ. ದೇಶಾದ್ಯಂತ ಕೋಟ್ಯಂತರ ಜನ ಜಿಯೋ ಸಿಮ್‌, ಜಿಯೋ ಫೈಬರ್‌ಅನ್ನು ಬಳಸುವ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಜನ ದೂರಿದ್ದಾರೆ.

ಕೆಲ ತಿಂಗಲ ಹಿಂದೆ ಎಕ್ಸ್‌ ಸಾಮಾಜಿಕ ಜಾಲತಾಣದ ಸರ್ವರ್‌ ಡೌನ್‌ ಆಗಿತ್ತು, ಶೇ.53ರಷ್ಟು ಜನ ವೆಬ್‌ನಲ್ಲಿ ಸಮಸ್ಯೆ ಎದುರಿಸಿದರೆ, ಶೇ.29ರಷ್ಟು ಮಂದಿಗೆ ಸರ್ವರ್‌ನಲ್ಲಿ ಸಮಸ್ಯೆ ಎದುರಾಗಿದೆ ಹಾಗೂ ಶೇ.18ರಷ್ಟು ಬಳಕೆದಾರರು ಅಪ್ಲಿಕೇಶನ್‌ನಲ್ಲಿ (App) ಸಮಸ್ಯೆ ಎದುರಿಸಿದ್ದಾರೆ. ಒಂದಷ್ಟು ಜನರಿಗೆ ಪೋಸ್ಟ್‌ಗಳು, ಅಪ್‌ಡೇಟ್‌ಗಳು ಕಾಣಿಸಿಲ್ಲ. ಇನ್ನೂ ಒಂದಷ್ಟು ಜನರ ಖಾತೆಗಳು ಲಾಗೌಟ್‌ ಆಗಿವೆ. ಕೆಲವೊಂದಿಷ್ಟು ಮಂದಿಗೆ ತಮ್ಮ ಪೋಸ್ಟ್‌ಗಳು ಅಪ್‌ಲೋಡ್‌ ಆಗಿಲ್ಲ ಎಂಬುದಾಗಿ ಡೌನ್‌ಡಿಟೆಕ್ಟರ್‌ ಮಾಹಿತಿ ನೀಡಿತ್ತು.

ಇದನ್ನೂ ಓದಿ: Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Continue Reading

ದೇಶ

NEET UG 2024: ನೀಟ್ ಯುಜಿ ವಿವಾದ; ಶೇ. 0.001ರಷ್ಟು ನಿರ್ಲಕ್ಷ್ಯವೂ ಸಹಿಸಲು ಸಾಧ್ಯವಿಲ್ಲ ಎಂದು ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

NEET UG 2024: ಈ ಬಾರಿಯ ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯಲ್ಲಿನ ಅಕ್ರಮ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪರೀಕ್ಷೆ ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಮಂಗಳವಾರ ಮತ್ತೆ ಸುಪ್ರೀಂ ಕೋರ್ಟ್‌ ಎನ್‌ಟಿಎಯನ್ನು ತರಾಟೆಗೆ ತೆಗೆದುಕೊಂಡಿದೆ. “ಯಾರ ಕಡೆಯಿಂದಾದರೂ ಶೇ. 0.001ರಷ್ಟು ನಿರ್ಲಕ್ಷ್ಯವಿದ್ದರೂ ಅದನ್ನು ಕೂಲಂಕಷವಾಗಿ ಪರಿಶೀಲಿಸಬೇಕು” ಎಂದು ಹೇಳಿದೆ.

VISTARANEWS.COM


on

NEET UG 2024
Koo

ನವದೆಹಲಿ: ಈ ಬಾರಿಯ ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ(NEET UG 2024)ಯಲ್ಲಿನ ಅಕ್ರಮ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪರೀಕ್ಷೆ ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಮಂಗಳವಾರ ಮತ್ತೆ ಸುಪ್ರೀಂ ಕೋರ್ಟ್‌ (Supreme Court) ಎನ್‌ಟಿಎಯನ್ನು ತರಾಟೆಗೆ ತೆಗೆದುಕೊಂಡಿದೆ.

“ಯಾರ ಕಡೆಯಿಂದಾದರೂ ಶೇ. 0.001ರಷ್ಟು ನಿರ್ಲಕ್ಷ್ಯವಿದ್ದರೂ ಅದನ್ನು ಕೂಲಂಕಷವಾಗಿ ಪರಿಶೀಲಿಸಬೇಕು” ಎಂದು ಚಾಟಿ ಬೀಸಿರುವ ಸುಪ್ರೀಂ ಕೋರ್ಟ್ ಎನ್‌ಟಿಎಗೆ ನೋಟಿಸ್‌ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆ ಜುಲೈ 8ರಂದು ನಡೆಯಲಿದೆ. ಈ ಹಿಂದೆಯೂ ಕೋರ್ಟ್‌ ಪರೀಕ್ಷೆಯಲ್ಲಿನ ಅಕ್ರಮದ ವಿಚಾರವಾಗಿ ಎನ್‌ಟಿಎ ಮತ್ತು ಕೇಂದ್ರಕ್ಕೆ ಛೀಮಾರಿ ಹಾಕಿತ್ತು.

ನೀಟ್​ ಯುಜಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್​ (ಕೃಪಾಂಕ) ಪಡೆದಿರುವ 1,563 ಅಭ್ಯರ್ಥಿಗಳಿಗೆ ಜೂನ್​ 23ರಂದು ಮರು ಪರೀಕ್ಷೆ ನಡೆಸುವುದಾಗಿ ಎನ್​ಟಿಎ ಜೂನ್‌ 13ರಂದು ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದೂ ಹೇಳಿದೆ. ಮರು ಪರೀಕ್ಷೆಗಳನ್ನು ಜೂನ್ 23ರಂದು ನಡೆಸಲಾಗುವುದು ಮತ್ತು ಜೂನ್ 30ರೊಳಗೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದಿರುವ ಎನ್​​ಟಿಎ ಮರುಪರೀಕ್ಷೆ ಬರೆಯಲು ಬಯಸದವರಿಗೆ ಗ್ರೇಸ್‌ ಮಾರ್ಕ್‌ ರಹಿತ ಅಂಕ ಹೊಂದುವ ಅವಕಾಶ ನೀಡಲಾಗಿದೆ ಎಂದು ಕೋರ್ಟ್‌ಗೆ ತಿಳಿಸಿದೆ.

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಕೇಂದ್ರ ಸೇರಿದಂತೆ 571 ನಗರಗಳ 4,750 ಕಡೆಗಳಲ್ಲಿ ನಡೆದ ನೀಟ್‌ ಪರೀಕ್ಷೆಗೆ 24 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರೀ ಸುದ್ದಿಯಾಗಿ ವಿವಾದ ಭುಗಿಲೆದ್ದಿತ್ತು. ಅಲ್ಲದೆ 67 ಅಭ್ಯರ್ಥಿಗಳು 720ಕ್ಕೆ 720 ಅಂಕ ಪಡೆದಿರುವುದು ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪಕ್ಕೆ ಇನ್ನಷ್ಟು ಪುಷ್ಟಿ ನೀಡಿತ್ತು. ಈ ಎಲ್ಲ ಕಾರಣಗಳಿಂದ ಹಲವು ಅಭ್ಯರ್ಥಿಗಳು ಕೋರ್ಟ್‌ ಮೆಟ್ಟಿಲೇರಿ ಮರು ಪರೀಕ್ಷೆ ನಡೆಸಬೇಕೆಂದು ಮನವಿ ಸಲ್ಲಿಸಿದ್ದರು.

‘ಗ್ರೇಸ್ ಅಂಕ’ ಯಾಕೆ?

ಸಮಯ ನಷ್ಟವನ್ನು ಸರಿದೂಗಿಸಲು 1,563 ಅಭ್ಯರ್ಥಿಗಳಿಗೆ ಗ್ರೇಸ್‌ ಅಂಕ ನೀಡಲಾಗಿತ್ತು. ತಪ್ಪಾದ ಪ್ರಶ್ನೆ ಪತ್ರಿಕೆ, ಹರಿದ ಒಎಂಆರ್‌ ಶೀಟ್ ವಿತರಣೆ, ಒಎಂಆರ್‌ ಶೀಟ್ ವಿತರಣೆಯಲ್ಲಿ ವಿಳಂಬದಿಂದಾಗಿ ಪರೀಕ್ಷೆ ಬರೆಯಲಿರುವ ಸಮಯ ವ್ಯರ್ಥವಾಗಿದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಅವರಿಗೆ ಗ್ರೇಸ್‌ ಮಾರ್ಕ್‌ ನೀಡಲಾಗಿದೆ ಎಂದು ಎನ್‌ಟಿಎ ಕಾರಣ ನೀಡಿತ್ತು. ಈ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ನೀಟ್‌ ಪರೀಕ್ಷೆಯನ್ನು ದೇಶಾದ್ಯಂತ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಎನ್‌ಟಿಎ ನಡೆಸುತ್ತದೆ. ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ.

Continue Reading
Advertisement
Viral Video
ಕ್ರಿಕೆಟ್6 mins ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ12 mins ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Train Accident
ದೇಶ12 mins ago

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Mumbai News
ದೇಶ42 mins ago

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

prajwal revanna case test
ಪ್ರಮುಖ ಸುದ್ದಿ45 mins ago

Prajwal Revanna Case: ʼಮತ್ತೆ ಮತ್ತೆ ಅದನ್ನು ತೋರಿಸೋಕೆ ಮುಜುಗರ….ʼ ಜಡ್ಜ್‌ ಮುಂದೆ ಅಲವತ್ತುಕೊಂಡ ಪ್ರಜ್ವಲ್!‌

Gemini Mobile App
ತಂತ್ರಜ್ಞಾನ50 mins ago

Gemini Mobile App: ಕನ್ನಡ ಸೇರಿದಂತೆ 9 ಭಾರತೀಯ ಭಾಷೆಗಳಲ್ಲಿ ಗೂಗಲ್ ಜೆಮಿನಿ ಆ್ಯಪ್; ಏನಿದರ ಉಪಯೋಗ?

SA vs USA
ಕ್ರೀಡೆ59 mins ago

SA vs USA: ನಾಳೆ ಮೊದಲ ಸೂಪರ್​-8 ಪಂದ್ಯ; ಅಮೆರಿಕ ಸವಾಲಿಗೆ ಹರಿಣ ಪಡೆ ಸಿದ್ಧ

Kolar News
ಕೋಲಾರ1 hour ago

Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

Actor Darshan
ಕರ್ನಾಟಕ1 hour ago

Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Reliance Jio Down
ದೇಶ1 hour ago

Reliance Jio Down: ದೇಶಾದ್ಯಂತ ಜಿಯೋ ನೆಟ್‌ವರ್ಕ್‌ ಡೌನ್;‌ ಇಂಟರ್‌ನೆಟ್‌ ಇಲ್ಲದೆ ಅಲ್ಲೋಲಕಲ್ಲೋಲ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌