ನವದೆಹಲಿ: ಆದಾಯ ತೆರಿಗೆ ರಿಟರ್ನ್ (Income Tax Returns) ಸಲ್ಲಿಕೆಗೆ ಇಂದೇ (ಜುಲೈ 31) ಕೊನೆಯ ದಿನ. ಹೀಗಾಗಿ ದಂಡ ತಪ್ಪಿಸಿಕೊಳ್ಳಲು ತೆರಿಗೆ ಪಾವತಿದಾರರಿಗೆ ಇಂದೇ ಕೊನೆಯ ಅವಕಾಶ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವನ್ನು ವಿಸ್ತರಿಸಬೇಕು ಎಂಬ ಕೂಗು ಕೇಳಿ ಬಂದಿದ್ದರೂ ಇನ್ನೂ ಆದಾಯ ತೆರಿಗೆ ಇಲಾಖೆ ದಿನ ಮುಂದೂಡಿಕೆ ಮಾಡಿಲ್ಲ. ಹೀಗಾಗಿ ಗಡುವು ಮುಗಿಯಲು ಕೆಲವೇ ಗಂಟೆಗಷ್ಟೇ ಬಾಕಿ ಉಳಿದಿದ್ದು ಬೇಗ ಬೇಗ ಸಲ್ಲಿಸಿ ಎಂದು ಆರ್ಥಿಕ ತಜ್ಞರು ಸಹೆ ನೀಡಿದ್ದಾರೆ (ITR Filing).
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಸಂಬಂಧ ಜುಲೈ 26ರಂದು ಮಾಹಿತಿ ನೀಡಿದ್ದ ಇಲಾಖೆ, ಕೆಲವು ದಿನಗಳ ಹಿಂದಿನವರೆಗೆ 5 ಕೋಟಿ ಐಟಿಆರ್‌ಗಳು ಸಲ್ಲಿಕೆಯಾಗಿವೆ. ಈ ಮೂಲಕ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಿಟರ್ನ್ಸ್ ಸಲ್ಲಿಕೆ ಹೆಚ್ಚಾಗಿದೆ ಎಂದು ಹೇಳಿತ್ತು. ಜತೆಗೆ ಅಂತಿಮ ದಿನಾಂಕವರೆಗೆ ಕಾಯದೇ ಕೂಡಲೇ ಸಲ್ಲಿಸುವಂತೆ ತಿಳಿಸಿತ್ತು.
ದಂಡ ಕಟ್ಟಬೇಕು
ಜುಲೈ 31ರೊಳಗೆ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಆಗದಿದ್ದರೆ ಅಂತಹವರು ದಂಡ ಕಟ್ಟಬೇಕಾಗುತ್ತದೆ. ತೆರಿಗೆ ಲೆಕ್ಕಪರಿಶೋಧನೆಯ ಅಗತ್ಯವಿರುವ ತೆರಿಗೆದಾರರಿಗೆ ದಂಡ ಸಹಿತ ಐಟಿಆರ್ ಫೈಲ್ ಮಾಡಲು 2024ರ ಅಕ್ಟೋಬರ್ 31ರವರೆಗೆ ಅವಕಾಶವಿದೆ. ಆರ್ಥಿಕ ವರ್ಷ 2024-25ಗಾಗಿ ಪರಿಷ್ಕೃತ ಮತ್ತು ತಡವಾದ ರಿಟರ್ನ್‌ಗಳನ್ನು ಸಲ್ಲಿಸಲು ಅಂತಿಮ ಗಡುವು 2024ರ ಡಿಸೆಂಬರ್ 31 ಆಗಿದೆ.
ತೆರಿಗೆ ಸಲ್ಲಿಸುವಿಕೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆದಾಯ ತೆರಿಗೆ ಇಲಾಖೆಯು ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ವಿವಿಧ ಐಟಿಆರ್ ಫಾರ್ಮ್‌ಗಳು ಮತ್ತು ಎಕ್ಸೆಲ್ ಮಾಹಿತಿಗಳನ್ನು ನಿರ್ಧಿಷ್ಟ ವೆಬ್‌ಸೈಟ್ ಮೂಲಕ ಪ್ರಕಟಿಸುತ್ತದೆ. ಆದರೂ ಹೆಚ್ಚಿನ ಸಂಬಳ ಪಡೆಯುವ ವ್ಯಕ್ತಿಗಳು ತಮ್ಮ ಫಾರ್ಮ್ 16 ಅನ್ನು ಉದ್ಯೋಗದಾತರಿಂದ ಸ್ವೀಕರಿಸಲು ಕಾಯುತ್ತಾರೆ. ಸಾಮಾನ್ಯವಾಗಿ ಇದನ್ನು ಜೂನ್ ಕೊನೆಯಲ್ಲಿ ಅಥವಾ ಜುಲೈ ಆರಂಭದಲ್ಲಿ ವಿತರಿಸಲಾಗುತ್ತದೆ.
ಜುಲೈ 31ರ ಗಡುವಿನ ನಂತರ ಐಟಿಆರ್ ಸಲ್ಲಿಸುವುದರಿಂದ ದಂಡ ಪಾವತಿಸಬೇಕಾಗುತ್ತದೆ. ನಿವ್ವಳ ತೆರಿಗೆಯ ಆದಾಯವು 5 ಲಕ್ಷ ರೂ. ವರೆಗೆ ಇದ್ದರೆ ತಡವಾಗಿ ತೆರಿಗೆ ರಿಟರ್ನ್‌ಗೆ ಗರಿಷ್ಠ ದಂಡ 1,000 ರೂ ಆಗಿದೆ. 5 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿರುವವರು 5,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಆದಾಯ ತೆರಿಗೆ ಕಾಯಿದೆಯ ಪ್ರಕಾರ ಒಟ್ಟು ಆದಾಯವು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಾದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ.
ಪ್ರತಿ ಜುಲೈನಲ್ಲಿ ತೆರಿಗೆ ಇಲಾಖೆಯು ಗಡುವು ಮುಗಿಯುವವರೆಗೆ ತೆರಿಗೆದಾರರಿಗೆ ನಿಗದಿತ ದಿನಾಂಕವನ್ನು ನಿರಂತರವಾಗಿ ನೆನಪಿಸುತ್ತಿರುತ್ತದೆ. ತೆರಿಗೆ ಸಲ್ಲಿಸುವಿಕೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆದಾಯ ತೆರಿಗೆ ಇಲಾಖೆಯು ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ವಿವಿಧ ಐಟಿಆರ್ ಫಾರ್ಮ್‌ಗಳು ಮತ್ತು ಎಕ್ಸೆಲ್ ಮಾಹಿತಿಗಳನ್ನು ನಿರ್ಧಿಷ್ಟ ವೆಬ್‌ಸೈಟ್ ಮೂಲಕ ಪ್ರಕಟಿಸುತ್ತದೆ. ಆದರೂ ಹೆಚ್ಚಿನ ಸಂಬಳ ಪಡೆಯುವ ವ್ಯಕ್ತಿಗಳು ತಮ್ಮ ಫಾರ್ಮ್ 16 ಅನ್ನು ಉದ್ಯೋಗದಾತರಿಂದ ಸ್ವೀಕರಿಸಲು ಕಾಯುತ್ತಾರೆ. ಸಾಮಾನ್ಯವಾಗಿ ಇದನ್ನು ಜೂನ್ ಕೊನೆಯಲ್ಲಿ ಅಥವಾ ಜುಲೈ ಆರಂಭದಲ್ಲಿ ವಿತರಿಸಲಾಗುತ್ತದೆ.
ಇದನ್ನೂ ಓದಿ: Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್ ಫಾಲೋ ಮಾಡಿ