YS Sharmila:‌ ಆಂಧ್ರ ಸಿಎಂ ಜಗನ್‌ ತಂಗಿ ಶರ್ಮಿಳಾ ಕಾಂಗ್ರೆಸ್‌ ಸೇರ್ಪಡೆ; ಅಣ್ಣನಿಗೇ ಟಕ್ಕರ್ - Vistara News

ದೇಶ

YS Sharmila:‌ ಆಂಧ್ರ ಸಿಎಂ ಜಗನ್‌ ತಂಗಿ ಶರ್ಮಿಳಾ ಕಾಂಗ್ರೆಸ್‌ ಸೇರ್ಪಡೆ; ಅಣ್ಣನಿಗೇ ಟಕ್ಕರ್

YS Sharmila: ದೆಹಲಿಯಲ್ಲಿರುವ ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ವೈ.ಎಸ್. ಶರ್ಮಿಳಾ ಅವರು ಕಾಂಗ್ರೆಸ್‌ ಸೇರಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಶರ್ಮಿಳಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

VISTARANEWS.COM


on

YS Sharmila Joins Congress
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2024ರಲ್ಲಿಯೇ ನಡೆಯಲಿರುವ ಲೋಕಸಭೆ ಹಾಗೂ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಹೋದರ, ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್‌ ರೆಡ್ಡಿ (YS Jagan Mohan Reddy) ಅವರಿಗೆ ಸೆಡ್ಡು ಹೊಡೆಯಲು ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರು ಸಜ್ಜಾಗಿದ್ದಾರೆ. ಹೌದು, ವೈ.ಎಸ್.ಶರ್ಮಿಳಾ (YS Sharmila) ಅವರು ಗುರುವಾರ (ಜನವರಿ 4) ಕಾಂಗ್ರೆಸ್‌ (Congress) ಸೇರ್ಪಡೆಯಾಗಿದ್ದು, ಇದರೊಂದಿಗೆ ಮುಂಬರುವ ಚುನಾವಣೆಯಲ್ಲಿ ಜಗನ್‌ಮೋಹನ್‌ ರೆಡ್ಡಿ ಅವರಿಗೆ ಭಾರಿ ಪೈಪೋಟಿ ನೀಡಲು ಕಾಂಗ್ರೆಸ್‌ ಹಾಗೂ ಶರ್ಮಿಳಾ ಸಜ್ಜಾದಂತಾಗಿದೆ.

ದೆಹಲಿಯಲ್ಲಿರುವ ಕಾಂಗ್ರೆಸ್‌ ಕೇಂದ್ರ ಕಚೇರಿಗೆ ತೆರಳಿದ ವೈ.ಎಸ್.ಶರ್ಮಿಳಾ, ಪಕ್ಷ ಸೇರ್ಪಡೆಯಾದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಶರ್ಮಿಳಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ವೈಎಸ್‌ಆರ್‌ ತೆಲಂಗಾಣ ಪಾರ್ಟಿಯ ಮುಖ್ಯಸ್ಥೆಯೂ ಆಗಿರುವ ವೈ.ಎಸ್.ಶರ್ಮಿಳಾ ಅವರು ತಮ್ಮ ಪಕ್ಷವನ್ನು ಕಾಂಗ್ರೆಸ್‌ ಜತೆ ವಿಲೀನಗೊಳಿಸಿದ್ದಾರೆ.

ಮೂಲಗಳ ಪ್ರಕಾರ, ಲೋಕಸಭೆ ಚುನಾವಣೆಯ ಜತೆಗೆ ಈ ವರ್ಷ ರಾಜ್ಯ ಚುನಾವಣೆಗೂ ಮುನ್ನ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ನಾಯಕತ್ವವು ಶರ್ಮಿಳಾ ಅವರಿಗೆ ಪ್ರಮುಖ ಪಾತ್ರವನ್ನು ನೀಡಲಿದೆ. ಆಕೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಮಟ್ಟದ ಹುದ್ದೆ ದೊರೆಯಬಹುದು ಎಂದು ತಿಳಿದುಬಂದಿದೆ. ಈ ಕ್ರಮವು ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಅನ್ನು ಪುನಶ್ಚೇತನಗೊಳಿಸುವ ಗುರಿಯನ್ನು ಹೊಂದಿದೆ. ಪ್ರಮುಖ ವಿರೋಧ ಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಪ್ರಭಾವವನ್ನು ಹಿಡಿದಿಟ್ಟುಕೊಳ್ಳಲು ಹೆಣಗಾಡುತ್ತಿದೆ.

ಶರ್ಮಿಳಾ 2012ರಲ್ಲಿ ಸುದ್ದಿಯಾಗಿದ್ದರು. ಆಂಧ್ರಪ್ರದೇಶದಿಂದ ತೆಲಂಗಾಣ ಬೇರ್ಪಡಿಸುವ ಹೋರಾಟದ ಹಿನ್ನಲೆಯಲ್ಲಿ ಆಕೆಯ ಸಹೋದರ ಜಗನ್ ಮೋಹನ್ ರೆಡ್ಡಿ ಕಾಂಗ್ರೆಸ್‌ನಿಂದ ಬೇರ್ಪಟ್ಟು ವೈಎಸ್‌ಆರ್‌ಟಿಪಿ ಸ್ಥಾಪಿಸಿದರು. ಅವರೊಂದಿಗೆ 18 ಶಾಸಕರು ಸೇರಿಕೊಂಡರು. ಇದು ಹಲವು ಉಪಚುನಾವಣೆಗಳಿಗೆ ನಾಂದಿ ಹಾಡಿತು. ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿತರಾಗಿ ರೆಡ್ಡಿ ಜೈಲಿನಲ್ಲಿರುವಾಗ ಅವರ ತಾಯಿ ವೈಎಸ್ ವಿಜಯಮ್ಮ ಮತ್ತು ಸಹೋದರಿ ವೈಎಸ್ ಶರ್ಮಿಳಾ ಪ್ರಚಾರದ ನೇತೃತ್ವ ವಹಿಸಿದ್ದರು. 2014ರ ಚುನಾವಣೆಯಲ್ಲಿ ವೈಎಸ್‌ಸಿಆರ್‌ಪಿ ಸೋತರೂ, 2019ರಲ್ಲಿ ಗೆದ್ದಿತ್ತು.

ಇದನ್ನೂ ಓದಿ: ಆಂಧ್ರ ಮುಖ್ಯಮಂತ್ರಿ ಜಗನ್​ ರೆಡ್ಡಿ ಪೋಸ್ಟರ್​ ಹರಿದ ನಾಯಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಪ್ರತಿಪಕ್ಷ ಟಿಡಿಪಿ ಕಾರ್ಯಕರ್ತೆ!

2021ರಲ್ಲಿ ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಹೊಂದಿದರು. ತೆಲಂಗಾಣದಲ್ಲಿ ವೈಎಸ್ಆರ್‌ಸಿಪಿಗೆ ಅಸ್ತಿತ್ವವಿಲ್ಲ ಎಂದರು. ಅದೇ ವರ್ಷ ಜುಲೈನಲ್ಲಿ ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಘೋಷಿಸಿ, ಕೆ. ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಪ್ರಾರಂಭಿಸಿದರು. ಕಳೆದ ಸಲದ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿ, ಕಾಂಗ್ರೆಸ್‌ಗೆ ಪರೋಕ್ಷವಾಗಿ ಬೆಂಬಲ ನೀಡಿದರು.

ಕಾಂಗ್ರೆಸ್ ಮೂಲಗಳ ಪ್ರಕಾರ, ಆಂಧ್ರದಲ್ಲಿ ಪಕ್ಷದ ಮತಗಳಿಕೆ ಕಳೆದ 10 ವರ್ಷಗಳಲ್ಲಿ ಹೀನಾಯವಾಗಿ ಕುಸಿದಿದೆ. ಕೇವಲ ಶೇ.1 ಪ್ರತಿಶತದಷ್ಟು ಮತಬ್ಯಾಂಕ್ ಇದೆ. ಶರ್ಮಿಳಾ ಸೇರ್ಪಡೆಯಿಂದ ಪಕ್ಷಕ್ಕೆ ನೆರವಾಗಬಹುದು ಎಂದು ಭಾವಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

Akbar Nagar: ಅಕ್ಬರ್‌ ನಗರದಲ್ಲಿ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿದ ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತಾ ನೇತೃತ್ವದ ನ್ಯಾಯಪೀಠವು, ಲಖನೌ ಅಭಿವೃದ್ಧಿ ಪ್ರಾಧಿಕಾರಕ್ಕೆ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿದೆ. ಆದರೆ, ಪ್ರಾಧಿಕಾರಕ್ಕೆ ಜನರ ಹಿತದೃಷ್ಟಿಯಿಂದ ಕೋರ್ಟ್‌ ಕೆಲ ಸೂಚನೆಗಳನ್ನು ನೀಡಿದೆ.

VISTARANEWS.COM


on

Akbar Nagar
Koo

ಲಖನೌ: ಉತ್ತರ ಪ್ರದೇಶದ (Uttar Pradesh) ಲಖನೌನಲ್ಲಿರುವ ಅಕ್ಬರ್‌ ನಗರದಲ್ಲಿ (Akbar Nagar) ಅಕ್ರಮವಾಗಿ ನಿರ್ಮಿಸಲಾಗಿರುವ ಎಲ್ಲ ಮನೆಗಳನ್ನು ನೆಲಸಮಗೊಳಿಸಲು ಸುಪ್ರೀಂ ಕೋರ್ಟ್‌ (Supreme Court) ಗ್ರೀನ್‌ ಸಿಗ್ನಲ್‌ ನೀಡಿದೆ. ಇದರೊಂದಿಗೆ ಅಕ್ಬರ್‌ ನಗರದಲ್ಲಿ ಕಟ್ಟಡಗಳ ನೆಲಸಮಗೊಳಿಸುವ ಕುರಿತು ಲಖನೌ ಅಭಿವೃದ್ಧಿ ಪ್ರಾಧಿಕಾರ (LDA) ತೆಗೆದುಕೊಂಡ ನಿರ್ಧಾರಕ್ಕೆ ಭಾರಿ ಮುನ್ನಡೆ ಸಿಕ್ಕಂತಾಗಿದೆ. ಶೀಘ್ರದಲ್ಲಿಯೇ ಅಕ್ಬರ್‌ ನಗರದಲ್ಲಿರುವ ಎಲ್ಲ ಮನೆಗಳನ್ನು ನೆಲಸಮಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಅಕ್ಬರ್‌ ನಗರದಲ್ಲಿ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿದ ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತಾ ನೇತೃತ್ವದ ನ್ಯಾಯಪೀಠವು, ಲಖನೌ ಅಭಿವೃದ್ಧಿ ಪ್ರಾಧಿಕಾರಕ್ಕೆ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿತು. “ಕಟ್ಟಡಗಳನ್ನು ನೆಲಸಮಗೊಳಿಸುವ ಕುರಿತು ಅಲಹಾಬಾದ್‌ ಹೈಕೋರ್ಟ್‌ ಸೂಚನೆಗಳು, ನಿರ್ದೇಶನಗಳು ಸರಿಯಾಗಿವೆ” ಎಂದು ಸ್ಪಷ್ಟಪಡಿಸಿತು.

ಏಕೆ ಕಟ್ಟಡಗಳ ನೆಲಸಮ?

ಅಕ್ಬರ್‌ ನಗರದಲ್ಲಿ ಕಾನೂನುಬಾಹಿರವಾಗಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಅದರಲ್ಲೂ, ಪ್ರವಾಹದ ಭೀತಿ ಜಾಸ್ತಿ ಇರುವ ಪ್ರದೇಶದಲ್ಲಿ (Floodplain) ಇಡೀ ನಗರದ ಕಟ್ಟಡಗಳು ನಿರ್ಮಾಣಗೊಂಡಿವೆ. ಕುಕ್ರೈಲ್‌ ನದಿ ತೀರದಲ್ಲಿ ಸುಮಾರು 15 ಸಾವಿರ ಜನ ವಾಸಿಸುತ್ತಿದ್ದು, ಸಾವಿರಾರು ಕಟ್ಟಡಗಳು ತಲೆಎತ್ತಿವೆ. ಇಲ್ಲಿ ಸರ್ಕಾರದ ಜಾಗವನ್ನು ಅತಿಕ್ರಮಣ ಮಾಡಿಕೊಂಡು, ಸ್ಲಮ್‌ಗಳನ್ನು ನಿರ್ಮಾಣ ಮಾಡಿಕೊಂಡು, ದೊಡ್ಡ ಊರನ್ನೇ ನಿರ್ಮಿಸಲಾಗಿದೆ. ಆದರೆ, ಈ ಊರು ನದಿ ತೀರದಲ್ಲಿರುವುದರಿಂದ ಪ್ರವಾಹದ ಭೀತಿ ಜಾಸ್ತಿ ಇದೆ. ಇದನ್ನು ಪ್ರಮುಖವಾಗಿ ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ನೆಲಸಮಕ್ಕೆ ಆದೇಶ ನೀಡಿದೆ ಎಂದು ತಿಳಿದುಬಂದಿದೆ.

15 ಸಾವಿರ ಜನರ ಸ್ಥಿತಿ ಏನು?

ಕಟ್ಟಡಗಳು, ಸ್ಲಮ್‌ಗಳಲ್ಲಿರುವ ಜೋಪಡಿಗಳನ್ನು ನೆಲಸಮಗೊಳಿಸುವುದರಿಂದ ಸುಮಾರು 15 ಸಾವಿರ ಜನರಿಗೆ ತೊಂದರೆಯಾಗಲಿದೆ ಎಂದು ತಿಳಿದುಬಂದಿದೆ. ಇದನ್ನು ಕೂಡ ಗಮನದಲ್ಲಿಟ್ಟುಕೊಂಡಿರುವ ಸುಪ್ರೀಂ ಕೋರ್ಟ್‌, “ನೀವು ಯಾರನ್ನು ಸ್ಥಳಾಂತರ ಮಾಡಬೇಕು ಎಂದಿದ್ದೀರೋ, ಅವರಿಗೆ ಬೇರೆ ಜಾಗದಲ್ಲಿ ಮನೆ ನಿರ್ಮಿಸಿಕೊಡಿ. ಅವರಿಗೆ ಬದಲಿ ಮನೆಯ ವ್ಯವಸ್ಥೆ ಆಗುವವರೆಗೆ ಅಲ್ಲಿಂದ ಸ್ಥಳಾಂತರ ಮಾಡುವ ಹಾಗಿಲ್ಲ” ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಹಾಗಾಗಿ, ಅಕ್ಬರ್‌ ನಗರದ ನಿವಾಸಿಗಳು ನಿರಾಶ್ರಿತರಾಗುವುದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Bulldozer Justice Video: ಅತ್ಯಾಚಾರ ಎಸಗಿ ಕ್ರೂರಹಿಂಸೆ; ಆರೋಪಿ ಅಯಾನ್‌ ಪಠಾಣ್‌ ಮನೆ ಧ್ವಂಸಗೊಳಿಸಿದ ಬುಲ್ಡೋಜರ್‌!

Continue Reading

ದೇಶ

Naxals Encounter: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 12 ನಕ್ಸಲರ ಹತ್ಯೆ

Naxals Encounter: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಗಂಗಲೂರ್‌ ಅರಣ್ಯ ಪ್ರದೇಶದಲ್ಲಿನಕ್ಸಲರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ನಕ್ಸಲರು ಕೂಡ ಪ್ರತಿ ದಾಳಿ ನಡೆಸಿದ್ದು, ಇದೇ ವೇಳೆ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು 12 ನಕ್ಸಲರನ್ನು ಹತ್ಯೆಗೈದಿದ್ದಾರೆ. ಭದ್ರತಾ ಸಿಬ್ಬಂದಿ ಶೌರ್ಯಕ್ಕೆ ಮುಖ್ಯಮಂತ್ರಿ ವಿಷ್ಣುದೇವ್‌ ಸಾಯಿ ಅವರು ಮೆಚ್ಚುಗೆ ಸೂಚಿಸಿದ್ದಾರೆ.

VISTARANEWS.COM


on

Naxals K
Koo

ರಾಯ್‌ಪುರ: ಛತ್ತೀಸ್‌ಗಢದಲ್ಲಿ ನಕ್ಸಲರ ನಿಗ್ರಹಕ್ಕೆ ಪಣ ತೊಟ್ಟಿರುವ ಭದ್ರತಾ ಸಿಬ್ಬಂದಿಯು ಶುಕ್ರವಾರ (ಮೇ 10) ಭರ್ಜರಿಯಾಗಿಯೇ ಬೇಟೆಯಾಡಿದೆ. ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ (Bijapur District) ಭದ್ರತಾ ಸಿಬ್ಬಂದಿಯು ಶುಕ್ರವಾರ 12 ಮಾವೋವಾದಿಗಳನ್ನು (Naxals Encounter) ಹೊಡೆದುರುಳಿಸಿದ್ದಾರೆ. ನಕ್ಸಲರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ನಕ್ಸಲರು ಕೂಡ ಪ್ರತಿ ದಾಳಿ ನಡೆಸಿದ್ದು, ಇದೇ ವೇಳೆ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು 12 ನಕ್ಸಲರನ್ನು ಹತ್ಯೆಗೈದಿದ್ದಾರೆ.

ನಕ್ಸಲರ ನಿಗ್ರಹದ ಕಾರ್ಯಾಚರಣೆ ಕುರಿತು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣುದೇವ್‌ ಸಾಯಿ ಅವರು ಮಾಹಿತಿ ನೀಡಿದ್ದಾರೆ. “ಬಿಜಾಪುರ ಜಿಲ್ಲೆಯ ಗಂಗಲೂರ್‌ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡು 12 ನಕ್ಸಲರನ್ನು ಹತ್ಯೆಗೈದಿದ್ದಾರೆ. ಇದುವರೆಗೆ ಎಲ್ಲ 12 ಶವಗಳು ಪತ್ತೆಯಾಗಿವೆ. ನಮ್ಮ ಭದ್ರತಾ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳಿಗೆ ಅಭಿನಂದನೆಗಳು” ಎಂದು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ, ಪೊಲೀಸರು ಕೈಗೊಂಡ ಜಂಟಿ ಕಾರ್ಯಾಚರಣೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

13 ನಕ್ಸಲರ ಹತ್ಯೆ

ಏಪ್ರಿಲ್‌ 2ರಂದು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ 13 ಮಂದಿ ನಕ್ಸಲರು ಹತರಾಗಿದ್ದರು. ಬಿಜಾಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಮತ್ತು ಛತ್ತೀಸ್‌ಗಢ ಪೊಲೀಸರ ಭದ್ರತಾ ಪಡೆಗಳೊಂದಿಗಿನ ಭೀಕರ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತರಾಗಿದ್ದರು. ಇದು 2024ರಲ್ಲಿ ನಡೆದ ಬೃಹತ್‌ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಎನಿಸಿತ್ತು. ಇದಾದ ಕೆಲ ದಿನಗಳ ಬಳಿಕವೂ ಮೂವರು ನಕ್ಸಲರನ್ನು ಹತ್ಯೆಗೈಯಲಾಗಿತ್ತು. ಒಂದು ವಾರದ ಹಿಂದಷ್ಟೇ 10 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

5 ತಿಂಗಳಲ್ಲಿ 70ಕ್ಕೂ ನಕ್ಸಲರ ಖತಂ

ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿಯು ನಕ್ಸಲರ ವಿರುದ್ಧ ಭಾರಿ ಸಮರ ಸಾರಿದ್ದಾರೆ. ಶುಕ್ರವಾರ ಹತ್ಯೆಗೈದ 12 ನಕ್ಸಲರು ಸೇರಿ ಪ್ರಸಕ್ತ ವರ್ಷದ ಐದು ತಿಂಗಳಲ್ಲಿ 70ಕ್ಕೂ ಅಧಿಕ ಮಾವೋವಾದಿಗಳನ್ನು ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದಾರೆ. 2023ರಲ್ಲಿ ಭದ್ರತಾ ಸಿಬ್ಬಂದಿಯು 22 ಮಾವೋವಾದಿಗಳನ್ನು ಎನ್‌ಕೌಂಟರ್‌ ಮಾಡಿದ್ದರು. ಲೋಕಸಭೆ ಚುನಾವಣೆಗೆ ವೇಳೆಯೇ ತೆಲಂಗಾಣ ಗಡಿ ಹಾಗೂ ಛತ್ತೀಸ್‌ಗಢದ ಸುಕ್ಮಾ, ಬಿಜಾಪುರ ಸೇರಿ ಹಲವೆಡೆ ಮಾವೋವಾದಿಗಳ ಉಪಟಳ ಜಾಸ್ತಿ ಇರುತ್ತದೆ. ಹಾಗಾಗಿ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Naxals Killed: ಮತ್ತೆ ಮೂವರು ನಕ್ಸಲರನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ; ಈ ವರ್ಷದ ಸ್ಕೋರ್‌ 49

Continue Reading

ದೇಶ

Arvind Kejriwal: ಪ್ರಜಾಪ್ರಭುತ್ವ ಉಳಿಸಲು ಹೋರಾಟ; ಜೈಲಿಂದ ಬಿಡುಗಡೆ ಬಳಿಕ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್!

Arvind Kejriwal: ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್‌ 21ರಂದು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿತ್ತು. ಹಲವು ಬಾರಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಆದರೆ, ಶುಕ್ರವಾರ (ಮೇ 10) ಸುಪ್ರೀಂ ಕೋರ್ಟ್‌ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಕಾರಣ ತಿಹಾರ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ (Delhi Excise Policy Case) ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಕಳೆದ 50 ದಿನಗಳಿಂದ ಜೈಲಿನಲ್ಲೇ ಇದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಶುಕ್ರವಾರ (ಮೇ 10) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಕಾರಣ ಶುಕ್ರವಾರ ಸಂಜೆ ತಿಹಾರ ಜೈಲಿನಿಂದ (Tihar Jail) ಅವರನ್ನು ಬಿಡುಗಡೆ ಮಾಡಲಾಯಿತು. ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಲೇ ಆಪ್‌ ಕಾರ್ಯಕರ್ತರು ಜೈಕಾರ ಕೂಗಿ ಅವರನ್ನು ಸ್ವಾಗತಿಸಿದರು.

ಯಾವುದೇ ಕಡತಗಳಿಗೆ ಸಹಿ ಹಾಕಬಾರದು ಎಂಬುದು ಸೇರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನ್ಯಾಯಾಲಯವು ಹಲವು ಷರತ್ತುಗಳನ್ನು ವಿಧಿಸಿದೆ. ಹಾಗೆಯೇ, ಜೂನ್‌ 2ರಂದು ಮತ್ತೆ ಶರಣಾಗಬೇಕು ಎಂಬುದಾಗಿ ಸೂಚಿಸಿದೆ. ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್‌ 21ರಂದು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿತ್ತು. ಹಲವು ಬಾರಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಈಗ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದ್ದು, ಜೈಲಿನಿಂದ ಹೊರಬಂದಿದ್ದಾರೆ.

ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್

ಜೈಲಿನಿಂದ ಬಿಡುಗಡೆಯಾದ ಬಳಿಕ ಕಾರ್ಯಕರ್ತರು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮೆರವಣಿಗೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, “ನಾನು ನಿಮಗೆಲ್ಲ ಧನ್ಯವಾದ ಹೇಳಲು ಬಯಸುತ್ತೇನೆ. ನೀವೆಲ್ಲರೂ ನನಗೆ ಆಶೀರ್ವಾದ ಮಾಡಿದ್ದೀರಿ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೂ ನಾನು ಧನ್ಯವಾದ ತಿಳಿಸುತ್ತೇನೆ. ಅವರಿಂದಾಗಿಯೇ ನಾನು ಈಗ ಜೈಲಿನಿಂದ ಬಿಡುಗಡೆಯಾಗಿದ್ದೇನೆ. ಸರ್ವಾಧಿಕಾರದಿಂದ ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲರೂ ಹೋರಾಡೋಣ” ಎಂದು ಹೇಳಿದರು.

‌ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಮತ್ತು ಆಮ್ ಆದ್ಮಿ ಪಕ್ಷದ ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

Continue Reading

ವಾಣಿಜ್ಯ

Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

Tata Motors: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಯನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ತನ್ನ ಇ-ಕಾರ್ಗೊ ಸಾರಿಗೆ ಪರಿಹಾರಗಳನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ಇದು ಶೂನ್ಯ ಮಾಲಿನ್ಯ ಹೊರಹೊಮ್ಮುವ ಮಿನಿ ಟ್ರಕ್ ಆಗಿದೆ.

VISTARANEWS.COM


on

New Tata Ace EV 1000 launched by Tata Motors
Koo

ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ (Tata Motors) ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಬಿಡುಗಡೆ ಮಾಡಿದ್ದು, ಈ ಮೂಲಕ ತನ್ನ ಇ-ಕಾರ್ಗೊ ಸಾರಿಗೆ ಪರಿಹಾರಗಳನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ಕಟ್ಟಕಡೆಯ ಮೈಲು ತಲುಪಲು ಪೂರಕವಾಗಿ ಈ ವಾಹನವನ್ನು ಕ್ರಾಂತಿಕಾರಕವಾಗಿ ಅಭಿವೃದ್ಧಿಪಡಿಸಲಾಗಿದೆ.

ಏಸ್ ಇವಿ ವಿಶೇಷತೆ ಏನು?

ಹೊಸದಾದ ಏಸ್ ಇವಿ ವಾಹನವು ಶೂನ್ಯ ಮಾಲಿನ್ಯ ಹೊರಹೊಮ್ಮುವ ಮಿನಿ ಟ್ರಕ್ ಆಗಿದ್ದು, 1 ಟನ್‌ವರೆಗೆ ಪೇಲೋಡ್ ಅನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 161 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು. ತನ್ನ ಗ್ರಾಹಕರಿಂದ ಅತ್ಯಮೂಲ್ಯವಾದ ಸಲಹೆಗಳನ್ನು ಪಡೆದುಕೊಂಡು ಅದಕ್ಕೆ ತಕ್ಕಂತೆ ಈ ಏಸ್ ಇವಿಯನ್ನು ಅಭಿವೃದ್ಧಿಪಡಿಸಲಾಗಿದೆ. ಈ ಹೊಸ ಶ್ರೇಣಿಯ ವಾಹನವು ಎಫ್ಎಂಸಿಜಿ, ಬೇವರೇಜಸ್, ಪೇಂಟ್ಸ್ & ಲ್ಯೂಬ್ರಿಕೆಂಟ್ಸ್, ಎಲ್‌ಪಿಜಿ & ಡೈರಿ ಉತ್ಪನ್ನಗಳ ಸಾಗಣೆ ಅಗತ್ಯತೆಗಳನ್ನು ಪೂರೈಸಲಿದೆ.

ಇದನ್ನೂ ಓದಿ: UGCET 2024: ಯುಜಿಸಿಇಟಿ ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ ನೀಡಿದ ಕೆಇಎ; ಕೊನೆಯ ದಿನಾಂಕ ಯಾವಾಗ?

ದೇಶಾದ್ಯಂತ 150ಕ್ಕೂ ಹೆಚ್ಚು ಎಲೆಕ್ಟ್ರಿಕ್ ವೆಹಿಕಲ್ ಸಪೋರ್ಟ್ ಸೆಂಟರ್‌ಗಳ ಬೆಂಬಲದೊಂದಿಗೆ ಈ ಏಸ್ ಇವಿ ವಾಹನವು ಅತ್ಯಾಧುನಿಕ, ಸುಧಾರಿತ ಬ್ಯಾಟರಿ ಮ್ಯಾನೇಜ್ಮೆಂಟ್ ಸಿಸ್ಟಂ, ಫ್ಲೀಟ್ ಎಡ್ಜ್ ಟೆಲಿಮ್ಯಾಟಿಕ್ಸ್ ಸಿಸ್ಟಂ ಮತ್ತು ಅತ್ಯುತ್ತಮ ಸಾಮರ್ಥ್ಯವನ್ನು ಹೊಂದಿದ ವಾಹನವಾಗಿದೆ.

ಟಾಟಾ ಸಮೂಹ ಸಂಸ್ಥೆಗಳ ಅಂಗವಾಗಿರುವ Tata UniEVerse ಅಗಾಧವಾದ ಸಾಮರ್ಥ್ಯಗಳನ್ನು ಬಳಸಿಕೊಂಡು ಈ ಏಸ್ ಇವಿಯನ್ನು ಸಿದ್ಧಪಡಿಸಲಾಗಿದೆ. ಗ್ರಾಹಕರಿಗೆ ಸಮಗ್ರ ಇ-ಕಾರ್ಗೊ ಮೊಬಿಲಿಟಿ ಪರಿಹಾರವನ್ನು ನೀಡಲು ದೇಶದ ಪ್ರಮುಖ ಹಣಕಾಸು ಸಂಸ್ಥೆಗಳ ಪಾಲುದಾರಿಕೆಯನ್ನೂ ಸಹ ಹೊಂದಲಾಗಿದೆ. ಇದು ಬಹುಮುಖ ಕಾರ್ಗೊ ಡೆಕ್‌ಗಳೊಂದಿಗೆ ಲಭ್ಯವಿದೆ ಮತ್ತು ದೇಶಾದ್ಯಂತ ಎಲ್ಲಾ ಟಾಟಾ ಮೋಟರ್ಸ್ ವಾಣಿಜ್ಯ ವಾಹನಗಳ ಡೀಲರ್ ಶಿಪ್‌ಗಳಲ್ಲಿ ಮಾರಾಟವಾಗಲಿದೆ. ಇದರ ಬೆಲೆ ಸುಮಾರು 9 ಲಕ್ಷ ರೂ. ಆಗುತ್ತದೆ.

ಇದನ್ನೂ ಓದಿ: Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

ಟಾಟಾ ಮೋಟರ್ಸ್ ವಾಣಿಜ್ಯ ವಾಹನಗಳ ಎಸ್‌ಸಿವಿ & ಪಿಯು ವಿಭಾಗದ ಉಪಾಧ್ಯಕ್ಷ & ಬ್ಯುಸಿನೆಸ್ ಹೆಡ್ ವಿನಯ್ ಪಾಠಕ್ ಈ ಕುರಿತು ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ನಮ್ಮ ಏಸ್ ಇವಿ ಗ್ರಾಹಕರು ಸರಿಸಾಟಿಯಿಲ್ಲದ ಅನುಭವವನ್ನು ಪಡೆಯುವ ಮೂಲಕ ಅತ್ಯಮೂಲ್ಯ ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ. ಇದೇ ವೇಳೆ ಅವರು ಲಾಭವನ್ನು ಮತ್ತು ಸುಸ್ಥಿರತೆಯನ್ನು ಪಡೆದುಕೊಂಡಿದ್ದಾರೆ. ಕ್ರಾಂತಿಕಾರಕ ಶೂನ್ಯ ಮಾಲಿನ್ಯದ ಕಟ್ಟಕಡೆಯ ಸಾರಿಗೆ ಪರಿಹಾರಗಳ ರಾಯಭಾರಿಗಳಾಗಿ ಈ ಗ್ರಾಹಕರು ಹೊರಹೊಮ್ಮಿದ್ದಾರೆ.

ಇದೀಗ ಏಸ್ ಇವಿ 1000 ಬಿಡುಗಡೆಯೊಂದಿಗೆ ಗ್ರಾಹಕರಿಗೆ ಸುಧಾರಿತ ಅನುಭವವನ್ನು ನೀಡುತ್ತಿದ್ದೇವೆ. ಈ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವುದರೊಂದಿಗೆ ಆರ್ಥಿಕತೆಯನ್ನು ಸುಧಾರಣೆ ಮಾಡಲಾಗುತ್ತಿದೆ. ಏಸ್ ಇವಿ 1000 ಉತ್ಕೃಷ್ಟ ಮೌಲ್ಯ ಮತ್ತು ಕಡಿಮೆ ವೆಚ್ಚದ ಮಾಲೀಕತ್ವವನ್ನು ನೀಡುವ ಮೂಲಕ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡಲಿದೆ ಎಂಬ ವಿಶ್ವಾಸ ನಮ್ಮದಾಗಿದೆ ಎಂದು ತಿಳಿಸಿದ್ದಾರೆ.

ಏಸ್ ಇವಿಯು EVOGEN ಪವರ್ ಟ್ರೇನ್‌ನಿಂದ ಚಾಲಿತವಾಗಿದ್ದು, ಇದು 7 ವರ್ಷಗಳ ಬ್ಯಾಟರಿ ವಾರಂಟಿ ಮತ್ತು 5 ವರ್ಷದ ಸಮಗ್ರ ನಿರ್ವಹಣೆ ಪ್ಯಾಕೇಜ್‌ನೊಂದಿಗೆ ಸರಿಸಾಟಿಯಿಲ್ಲದ ಚಾಲನಾ ಅನುಭವವನ್ನು ನೀಡುತ್ತದೆ. ಇದು ಚಾಲನಾ ಶ್ರೇಣಿಯನ್ನು ಹೆಚ್ಚಿಸಲು ಸುಧಾರಿತ ಬ್ಯಾಟರಿ ಕೂಲಿಂಗ್ ಸಿಸ್ಟಂ ಮತ್ತು ಪುನರುತ್ಪಾದಕ ಬ್ರೇಕಿಂಗ್ ಸಿಸ್ಟಂನೊಂದಿಗೆ ಸುರಕ್ಷಿತ, ಎಲ್ಲಾ ಹವಾಮಾನ ಕಾರ್ಯಾಚರಣೆಗಳನ್ನು ನೀಡುತ್ತದೆ.

ಇದನ್ನೂ ಓದಿ: IPL 2024 : ಆರ್​ಸಿಬಿಯ ಪ್ಲೇಆಫ್​ ಚಾನ್ಸ್​ ಇದೆಯೇ? ಇಲ್ಲಿದೆ ನೋಡಿ ಲೆಕ್ಕಾಚಾರ

ಇದು ಹೆಚ್ಚಿನ ಸಮಯಕ್ಕಾಗಿ ನಿಯಮಿತ ಮತ್ತು ವೇಗದ ಚಾರ್ಜಿಂಗ್ ಸಾಮರ್ಥ್ಯಗಳನ್ನು ಹೊಂದಿದೆ. ಇದು 27kW (36hp) ಮೋಟರ್ ನಿಂದ 130Nm ಪೀಕ್ ಟಾರ್ಕ್ ನೊಂದಿಗೆ ಚಾಲಿತವಾಗಿದೆ. ಬೆಸ್ಟ್-ಇನ್-ಕ್ಲಾಸ್ ಪಿಕಪ್ ಮತ್ತು ಗ್ರೇಡ್ ಸಾಮರ್ಥ್ಯವನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಲೋಡ್ ಮಾಡಲಾದ ಪರಿಸ್ಥಿತಿಗಳಲ್ಲಿ ಸುಲಭವಾಗಿ ಸಾಗಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದೆ.

Continue Reading
Advertisement
US
ಪ್ರಮುಖ ಸುದ್ದಿ4 mins ago

ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ರಸ್ತೆ ಬಂದಿಯೇ ಅತ್ಯಾಚಾರ ಎಸಗಿದ ದುಷ್ಟ; ಭೀಕರ ವಿಡಿಯೊ ಇಲ್ಲಿದೆ

Prajwal Revanna case Three FIRs against Prajwal Wanted list in all three
ಕ್ರೈಂ9 mins ago

Prajwal Revanna case: ಪ್ರಜ್ವಲ್‌ ಮೇಲೆ ಒಟ್ಟು ಮೂರು FIR; ಮೂರರಲ್ಲೂ ವಾಂಟೆಡ್‌ ಲಿಸ್ಟ್‌ನಲ್ಲಿ ಸಂಸದ!

Prajwal Revanna Case
ಪ್ರಮುಖ ಸುದ್ದಿ11 mins ago

Prajwal Revanna Case: ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ವಶಕ್ಕೆ

Prajwal Revanna case Another rape case filed against Prajwal
ಕ್ರೈಂ32 mins ago

Prajwal Revanna case: ಪ್ರಜ್ವಲ್‌ ಮೇಲೆ ಮತ್ತೊಂದು ಅತ್ಯಾಚಾರ ಕೇಸ್‌; ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

IPL 2024
ಕ್ರೀಡೆ45 mins ago

IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

Dr C N Manjunath
ಕರ್ನಾಟಕ45 mins ago

Dr C N Manjunath: ಮತ್ತೆ ವೈದ್ಯ ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

Murder Case
ಕರ್ನಾಟಕ1 hour ago

Murder Case: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ; ಮನೆ ಬಾಡಿಗೆ ಕೇಳುವ ನೆಪದಲ್ಲಿ ಕೃತ್ಯ

Akbar Nagar
ದೇಶ1 hour ago

Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

Colin Munro
ಪ್ರಮುಖ ಸುದ್ದಿ2 hours ago

Colin Munro : ನ್ಯೂಜಿಲ್ಯಾಂಡ್​ ಟಿ20 ಸ್ಪೆಷಲಿಸ್ಟ್​ ಅಟಗಾರ ನಿವೃತ್ತಿ; ಈ ಆಟಗಾರನ ಸಾಧನೆಗಳ ವಿವರ ಇಲ್ಲಿದೆ

T20 world cup
ಕ್ರೀಡೆ2 hours ago

T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ8 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ9 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ10 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ17 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ24 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 day ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ1 day ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌