ಕರ್ನಾಟಕ ಎಲೆಕ್ಷನ್
Narendra Modi: ಪ್ರಧಾನಿ ನರೇಂದ್ರ ಮೋದಿಗೆ ಗುರು ರಾಘವೇಂದ್ರರ ವಿಗ್ರಹ ಉಡುಗೊರೆ ಕೊಟ್ಟ ಜಗ್ಗೇಶ್
ಕುಟುಂಬ ಸಮೇತ ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿ ಮಾಡಿದ ಜಗ್ಗೇಶ್, ಈ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರು: ಚಿತ್ರನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿ ಮಾಡಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮೀಜಿಗಳ ವಿಗ್ರಹವನ್ನು ಉಡುಗೊರೆಯಾಗಿ ನೀಡಿದ್ದಾರೆ.
ಮಾರ್ಚ್ 17ರಂದು ಜಗ್ಗೇಶ್ ಅವರ ಜನ್ಮದಿನ. ಅದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರನ್ನು ಜಗ್ಗೇಶ್ ಕುಟುಂಬ ಸಮೇತ ಭೇಟಿ ಮಾಡಿದ್ದಾರೆ.
ಈ ಕುರಿತು ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಜಗ್ಗೇಶ್, Thank you Narendra Modi sir for giving an opportunity to receive my birthday blessings in advance. ನನ್ನ ಬದುಕಿನ ಶ್ರೇಷ್ಠದಿನ ಇಂದು, March17 ನನ್ನ ಹುಟ್ಟುದಿನ,ಈ ವರ್ಷ ನನಗೆ 60ನೆ ವಸಂತ,ನನ್ನ ನೆಚ್ಚಿನ ಪ್ರಧಾನಿಗಳು ನನ್ನ ಹಾಗೂ ಹೆಂಡತಿ ಮಗನ ಮನತುಂಬಿ ಹರಸಿದರು. ಅವರಿಗೆ ನನ್ನ ಗುರುಗಳು ರಾಯರ ವಿಗ್ರಹ ಸಮರ್ಪಿಸಿದೆ ಎಂದಿದ್ದಾರೆ.
ಜಗ್ಗೇಶ್ ಪುತ್ರನ ಜತೆಗೆ ಪ್ರಧಾನಿ ಮೋದಿ ಆತ್ಮೀಯವಾಗಿ ಮಾತನಾಡುತ್ತಿರುವ ಫೋಟೊಗಳನ್ನೂ ನವರಸನಾಯಕ ಹಂಚಿಕೊಂಡಿದ್ದಾರೆ.
ಕರ್ನಾಟಕ
JDS Karnataka: ಬಿಜೆಪಿಯಿಂದ ಜೆಡಿಎಸ್‌ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ
ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಖೂಬಾ ಅವರನ್ನು ಪಕ್ಷಕ್ಕೆ ಕುಮಾರಸ್ವಾಮಿ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು ಖೂಬಾ. ಕಳೆದ ಚುನಾವಣೆ ವೇಳೆ ಬಿಜೆಪಿಗೆ ಮರಳಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್ ಅಭ್ಯರ್ಥಿ ಬಿ. ನಾರಾಯಣ ರಾವ್ ವಿರುದ್ಧ ಸೋಲುಂಡಿದ್ದರು.
ಈ ಕುರಿತು ಮಾತನಾಡಿದ ಕುಮಾರಸ್ವಾಮಿ, ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ. ಒಳ್ಳೆಯ ಸಮಯ ಇದೆ ಎನ್ನುವ ಕಾರಣಕ್ಕೆ ಬಂದು ಪಕ್ಷಕ್ಕೆ ಸೇರಿದರು. ಶೀಘ್ರದಲ್ಲಿಯೇ ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.
ಇದನ್ನೂ ಓದಿ: ರಾಮ ರಾಮ! ಶ್ರೀರಾಮನ ಕಾಲಿನ ಮೇಲೆ ನಿಂತು ಪ್ರತಿಮೆಗೆ ಹೂವಿನ ಹಾರ ಹಾಕಿದ ಬಸವಕಲ್ಯಾಣ ಬಿಜೆಪಿ ಶಾಸಕ!
ಕರ್ನಾಟಕ
Karnataka Election: ಜೆಡಿಎಸ್, ಬಿಜೆಪಿಯ ತಲಾ ಒಂದು ವಿಕೆಟ್ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ
ಅನೇಕ ವರ್ಷ ಕಾಂಗ್ರೆಸ್‌ನಲ್ಲಿದ್ದ ಗೋಪಾಲಕೃಷ್ಣ ಮತ್ತೆ ಅದೇ ಪಕ್ಷಕ್ಕೆ ತೆರಳಬಹುದು ಎನ್ನಲಾಗಿದ್ದು, ಎ.ಟಿ. ರಾಮಸ್ವಾಮಿ ಬಿಜೆಪಿ ಸೇರುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಒಬ್ಬರು ಬಿಜೆಪಿಗೆ, ಮತ್ತೊಬ್ಬರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಅರಕಲಗೂಡು ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎ.ಟಿ. ರಾಮಸ್ವಾಮಿ ಬೆಂಗಳೂರಿನಲ್ಲಿ ವಿಧಾನಸಭೆ ಕಾರ್ಯದರ್ಶಿ ಮೂಲಕ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎ.ಟಿ. ರಾಮಸ್ವಾಮಿ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸಂತೋಷದಿಂದ ರಾಜೀನಾಮೆ ನೀಡಿದ್ದೇನೆ. ಕಾರ್ಯದರ್ಶಿ ಗೆ ರಾಜೀನಾಮೆ ನೀಡಿದ್ದೇನೆ, ಸ್ಪೀಕರ್ ಬಂದ ಬಳಿಕ ಅಂಗೀಕಾರ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.
ನಾನು ಇಂದೇ ಶಾಸಕರ ಭವನದ ಕೊಠಡಿ ಬಿಟ್ಟು ಕೊಡುತ್ತಿದ್ದೇನೆ. ಜೆಡಿಎಸ್ ನಾಯಕರು ನನಗೆ ಅವಕಾಶ ಮಾಡಿಕೊಟ್ಟಿದಕ್ಕೆ ಧನ್ಯವಾದಗಳನ್ನ ಸಲ್ಲಿಸುತ್ತೇನೆ. ನಾನು ಅಧಿಕಾರ ಆಸೆ ಪಡೆದವನಲ್ಲ. ನಾನು ವಿರೋಧ ಪಕ್ಷದವರ ಜತೆ ಸಹ ಉತ್ತಮವಾಗಿದ್ದೇನೆ. ನಾನು ರಾಜಕೀಯ ವಿರೋಧಿಗಳಿಗೂ ಒಳ್ಳೆಯದಾಗ್ಲಿ ಎಂದು ಭಾವಿಸುತ್ತೇನೆ. ಜನ ಸೇವೆಗಾಗಿ ಅವಕಾಶ ಸಿಕ್ಕಿತ್ತು.
ಮುಂದೆ ಅವಕಾಶ ಸಿಕ್ರೆ ಜನರ ಸೇವೆಗೆ ಮುಡುಪಾಗಿ ಇಡುತ್ತಿದ್ದೇನೆ. ಕರ್ನಾಟಕದ ರಾಜಕಾರಣ ಕೆಟ್ಟು ಹೋಗಿದೆ. ಒಲೈಕೆ ರಾಜಕಾರಣ ಜಾಸ್ತಿ ಆಗಿದೆ. ವಿಧಾನ ಸಭೆ ಮತ್ತು ಪರಿಷತ್ ಹಣದ ಸಭೆ ಆಗದೇ ಜನರ ಸಭೆ ಆಗಲಿ. ಜನರ ಹಿತಾಸಕ್ತಿಗೆ ಕೆಲಸ ಮಾಡಿಕೊಂಡು ಬಂದಿದ್ದೇನೆ. ನಾನು ಜೆಡಿಎಸ್ ಬಿಡಲಿಲ್ಲ. ಎಂದೂ ಸಹ ಸಹ ಜೆಡಿಎಸ್ ಬಿಡಲಿಲ್ಲ. ಎಲ್ಲ ಪಕ್ಷಗಳಲ್ಲೂ ಲೋಪದೋಷಗಳಿವೆ. ಮನಿ ಪವರ್ ಮುಂದೆ ಬಲಿಪಶು ಆದೆ. ಅಕ್ರಮಗಳನ್ನ ಎತ್ತಿ ಹಿಡಿದಿದ್ದೆ ಶಾಪ ಎನ್ನುವುದಾದರೆ ಅದನ್ನು ಚಾಲೆಂಜ್ ಆಗಿ ಸ್ವೀಕರಿಸುತ್ತೇನೆ ಎಂದರು.
ಯಾವ ಪಕ್ಷ ಸೇರುತ್ತೇನೆ ಎನ್ನುವ ಕುರಿತು ರಾಮಸ್ವಾಮಿ ಸ್ಪಷ್ಟವಾಗಿ ತಿಳಿಸಿಲ್ಲ. ಅವರು ಬಿಜೆಪಿ ಅಭ್ಯರ್ಥಿಯಾಗಿ ಅರಕಲಗೂಡಿನಿಂದ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ.
ಗೋಪಾಲಕೃಷ್ಣ ರಾಜೀನಾಮೆ
ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನೆಗೆ ತೆರಳಿ ರಾಜೀನಾಮೆ ನೀಡಿದ್ದಾರೆ. ವಯಸ್ಸಿನ ಕಾರಣಕ್ಕೆ ರಾಜಕೀಯ ನಿವೃತ್ತಿ ಪಡೆಯಲು ರಾಜೀನಾಮೆ ನೀಡುತ್ತೇನೆ ಎಂದು ಗೋಪಾಲಕೃಷ್ಣ ಹೇಳಿದ್ದಾರೆ.
ಆದರೆ ಅವರು ಮೊಳಕಾಲ್ಮೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಕನ್ಪರ್ಮ್ ಮಾಡಿಕೊಂಡೇ ರಾಜೀನಾಮೆ ನೀಡಿದ್ದಾರೆ. ಹಿಂದಿನ ಎಲೆಕ್ಷನ್ ನಲ್ಲಿ ಟಿಕೆಟ್ ನಿಂದ ವಂಚಿತ ಆಗಿದ್ದ ಗೋಪಾಲಕೃಷ್ಣ, ಜನಾರ್ದನ ರೆಡ್ಡಿ, ಶ್ರೀರಾಮುಲು ಪ್ರಭಾವದಿಂದ ಕೂಡ್ಲಿಗಿಯಿಂದ ಸ್ಪರ್ಧಿಸಿದ್ದರು. ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Elections : ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ ನಾಳೆ ಬಿಜೆಪಿಗೆ ರಾಜೀನಾಮೆ, ಕಾಂಗ್ರೆಸ್‌ಗೆ ಸೇರ್ಪಡೆ
ಕರ್ನಾಟಕ
Hiriyur News: ಕಾಂಗ್ರೆಸ್ ಸೇರಿದ ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್; ಬಿಜೆಪಿಗೆ ಆಘಾತ
Hiriyur News: ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ನಗರ ಸಭೆಯ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್ ಅವರನ್ನು ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಬರ ಮಾಡಿಕೊಂಡರು.
ಹಿರಿಯೂರು: ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ನಗರಸಭೆಯ (city council) ಮಾಜಿ ಅಧ್ಯಕ್ಷ ಹಾಗೂ ಭೋವಿ ಸಮಾಜದ ನಾಯಕ ಟಿ. ಚಂದ್ರಶೇಖರ್ ಬಿಜೆಪಿಗೆ ಸದ್ದಿಲ್ಲದೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.
ಟಿ. ಚಂದ್ರಶೇಖರ್, ಎಸ್‌ಟಿ ಮೋರ್ಚಾ ಅಧ್ಯಕ್ಷ ಮಂಜುನಾಥ್, ತಿಮ್ಮಭೋವಿ, ರಂಗಸ್ವಾಮಿ ಸೇರಿದಂತೆ ಮತ್ತಿತರರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ.
ಕಾಂಗ್ರೆಸ್‌ನಲ್ಲಿದ್ದ ಟಿ. ಚಂದ್ರಶೇಖರ್ ಅವರು, ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ನಂತರ ನಗರಸಭಾ ಅಧ್ಯಕ್ಷರಾಗಿದ್ದರು. ಬಳಿಕ ನಡೆದ ನಗರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಶಾಸಕಿ ಕೆ. ಪೂರ್ಣಿಮಾ ಅವರ ಪತಿ ಡಿ.ಟಿ. ಶ್ರೀನಿವಾಸ್ ಅವರ ಜತೆಗಿದ್ದ ಚಂದ್ರಶೇಖರ್ ಅವರು ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಂತರ ಕಾಯ್ದುಕೊಂಡಿದ್ದರು. ಇದೀಗ ಗುರುವಾರ (ಮಾ.30) ರಾತ್ರಿ ಮಾಜಿ ಸಚಿವ ಡಿ. ಸುಧಾಕರ್ ಅವರು ತಮ್ಮ ಮನೆಯಲ್ಲಿಯೇ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.
ಚಂದ್ರಶೇಖರ್ ಅವರು ಬಿಜೆಪಿ ತೊರೆದಿರುವುದರಿಂದ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಹಿನ್ನಡೆ ಉಂಟಾಗಲಿದೆ ಎಂಬ ವಿಶ್ಲೇಷಣೆ ಸಹ ಈ ವೇಳೆ ನಡೆಯುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭೋವಿ ಸಮಾಜದ ಮತಗಳು ಹೆಚ್ಚು ಬಂದಿದ್ದವು. ಆದರೆ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸಹಕಾರಿಯಾಗಲಿದೆಯೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಪಕ್ಷ ಸೇರ್ಪಡೆ ಕುರಿತು ಮಾತನಾಡಿದ ಮಾಜಿ ಸಚಿವ ಡಿ. ಸುಧಾಕರ್, ಚಂದ್ರಶೇಖರ್ ಅವರು ಕಾಂಗ್ರೆಸ್‌ನ ತತ್ತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ವಾಪಸ್ ಬಂದಿದ್ದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಕ್ಷೇತ್ರದಲ್ಲಿ ಭ್ರಷ್ಟಾಚಾರ, ಜನ ವಿರೋಧಿ ಆಡಳಿತ ಕೊನೆಗೊಂಡಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ
BJP Karnataka: ರಾಜ್ಯಾದ್ಯಂತ ಬಿಜೆಪಿ ಆಂತರಿಕ ಚುನಾವಣೆ: ತಲಾ ಮೂವರು ಅಭ್ಯರ್ಥಿಗಳ ಹೆಸರು ಸೂಚಿಸಿದ ಪದಾಧಿಕಾರಿಗಳು
ಕಾರ್ಯಕರ್ತರ ಒಲವು ಯಾವ ಆಕಾಂಕ್ಷಿಗಳ ಪರವಾಗಿದೆ ಎನ್ನುವುದನ್ನು ಅರಿಯುವ ಸಲುವಾಗಿ ಬಿಜೆಪಿ ಅಭಿಪ್ರಾಯ ಸಂಗ್ರಹ ನಡೆಸುತ್ತಿದೆ.
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಚುರುಕುಗೊಳಿಸಿರುವ ಬಿಜೆಪಿ ರಾಜ್ಯಾದ್ಯಂತ ಕಾರ್ಯಕರ್ತರಿಂದ ಆಂತರಿಕ ಚುನಾವಣೆ ನಡೆಸುತ್ತಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಕೇಂದ್ರ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಮತದಾನ ಮೂಲಕ ಅಭಿಪ್ರಾಯ ಸಂಗ್ರಹ ನಡೆಯಿತು. ರಾಜಾಜಿನಗರ, ಗಾಂಧಿ ನಗರ, ಚಾಮರಾಜಪೇಟೆ, ಶಿವಾಜಿನಗರ, ಶಾಂತಿನಗರ, ಸರ್ವಜ್ಞ ನಗರ, ಸಿ. ವಿ. ರಾಮನ್ ನಗರ, ಮಹದೇವಪುರ ಕ್ಷೇತ್ರಗಳ ಕುರಿತು ಪದಾಧಿಕಾರಿಗಳು ಅಭಿಪ್ರಾಯ ನೀಡುತ್ತಿದ್ದಾರೆ.
ಬೆಳಗಾವಿ ಧರ್ಮನಾಥ ಭವನದಲ್ಲಿ ಬೆಳಗಾವಿ ಬಿಜೆಪಿ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲಾ ಚುನಾವಣಾ ಸಿದ್ದತಾ ಸಭೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ನಡೆಯಿತು. ಬಳ್ಳಾರಿಯಲ್ಲಿ ಬಿಜೆಪಿ ರಾಜಾಧ್ಯಕ್ಷ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕಟೀಲ್, ಇಡೀ ರಾಜ್ಯದಲ್ಲಿ ಜಿಲ್ಲೆಗಳಿಗೆ ತಂಡಗಳನ್ನ ಕಳುಹಿಸಿ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದೇವೆ. ಅಭಿಪ್ರಾಯ ಸಂಗ್ರಹದ ನಂತರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಒಂದು ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದರು.
ಇದನ್ನೂ ಓದಿ: ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ
ಹಾವೇರಿಯಲ್ಲಿ ಸಚಿವ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಚುನಾವಣೆ ನಡೆದಿದೆ. ರಾಜ್ಯದ ಎಲ್ಲ 36 ಸಂಘಟನಾ ಜಿಲ್ಲೆಗಳಲ್ಲೂ ಚುನಾವಣೆ ನಡೆದಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಇಂತಹ ಪ್ರಕ್ರಿಯೆ ನಡೆಸುತ್ತಿದೆ. ಜಿಲ್ಲಾ ಕೇಂದ್ರ ದಲ್ಲಿ ಪ್ರಕ್ರಿಯೆ ನಡೆದರೂ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಪ್ರತ್ಯೇಕ ಅಭಿಪ್ರಾಯ ಸಂಗ್ರಹ ನಡೆದಿದೆ.
ಪದಾದಿಕಾರಿಗಳು ಮೂವರು ಅಭ್ಯರ್ಥಿಗಳ ಹೆಸರನ್ನ ಬರೆದು ಮತಪೆಟ್ಟಿಗೆಯಲ್ಲಿ ಹಾಕಿದ್ದಾರೆ. ಈ ಕಾರ್ಯನಿರ್ವಹಣೆ ಮೇಲ್ವಿಚಾರಣೆಗೆ ವೀಕ್ಷಕರ ನೇಮಕ ಮಾಡಲಾಗಿದೆ. ಅಭಿಪ್ರಾಯ ಸಂಗ್ರಹ ಮುಗಿದ ಬಳಿಕ, ಅದನ್ನ ವೀಕ್ಷಕರು ರಾಜ್ಯ ಘಟಕಕ್ಕೆ ಸಲ್ಲಿಸಲಿದ್ದಾರೆ. ಇದರ ಆಧಾರದ ಮೇಲೆ ಏಪ್ರಿಲ್ 2 ಅಥವಾ 3 ರಂದು ರಾಜ್ಯ ಪಧಾದಿಕಾರಿಗಳ ಸಭೆ ನಡೆಯಲಿದೆ. ಸಭೆ ಬಳಿಕ ಈ ಅಭಿಪ್ರಾಯವನ್ನ ಕೇಂದ್ರ ಸಂಸದೀಯ ಮಂಡಳಿಗೆ ರವಾನಿಸಲಾಗುತ್ತೆ.
ಬ್ಯಾಲೇಟ್ ಪೇಪರ್ ಮೂಲಕ ಸಂಗ್ರಹವಾಗುವ ಅಭ್ಯರ್ಥಿಗಳ ಹೆಸರನ್ನು ರಾಜ್ಯ ಪದಾಧಿಕಾರಿಗಳು ಶನಿವಾರ ಶಾರ್ಟ್ ಲಿಸ್ಟ್ ಮಾಡಲಿದ್ದಾರೆ. ಬೆಂಗಳೂರಿನ ಹೊರ ಹೊಲಯದ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಲಿರುವ ಸಭೆಗಳಲ್ಲಿ ಅಭ್ಯರ್ಥಿಗಳ ಶಿಫಾರಸನ್ನು ಕೇಂದ್ರಕ್ಕೆ ರವಾನೆ ಮಾಡಲಾಗುತ್ತದೆ.
ಇದನ್ನೂ ಓದಿ: ರಾಮ ರಾಮ! ಶ್ರೀರಾಮನ ಕಾಲಿನ ಮೇಲೆ ನಿಂತು ಪ್ರತಿಮೆಗೆ ಹೂವಿನ ಹಾರ ಹಾಕಿದ ಬಸವಕಲ್ಯಾಣ ಬಿಜೆಪಿ ಶಾಸಕ!
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ7 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಪ್ರಮುಖ ಸುದ್ದಿ16 hours ago
ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು
-
ಕರ್ನಾಟಕ8 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಕ್ರಿಕೆಟ್24 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ವೈರಲ್ ನ್ಯೂಸ್23 hours ago
Viral Video: ಇದು ರೋಲ್ಸ್ ರಾಯ್ಸ್ ಆಫ್ ಆಟೋ; ಒಂದು ಬಟನ್ ಪ್ರೆಸ್ ಮಾಡಿದ್ರೆ ಸಾಕು ಮೇಲ್ಭಾಗ ತೆರೆದುಕೊಳ್ಳತ್ತೆ!
-
ಕರ್ನಾಟಕ20 hours ago
ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ
-
ಕ್ರಿಕೆಟ್20 hours ago
IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ