Site icon Vistara News

ಮೋದಿ ಭೇಟಿಗೆ 2 ದಿನ ಮುನ್ನ ಜಮ್ಮುವಿನಲ್ಲಿ ಗುಂಡಿನ ಸದ್ದು: ಬಸ್‌ ಮೇಲೆ ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಲು ಎರಡು ದಿನಗಳಿರುವಂತೆ ಜಮ್ಮುವಿನಲ್ಲಿ ಭಯೋತ್ಪಾದಕರು ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ಮಾಡಿದ್ದಾರೆ.

ಏಪ್ರಿಲ್‌ 24ರಂದು ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಸುಂಜ್ವಾನ್‌ ಪ್ರದೇಶದಲ್ಲಿ ಶುಕ್ರವಾರ ಬೆಳಗಿನಜಾವ ಸುಮಾರು 4:30ರ ಹೊತ್ತಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಬಸ್‌ ಮೇಲೆ ಭಯೋತ್ಪಾದಕರು ದಾಳಿ ನಡೆಸಿದರು. 15 ಸಿಐಎಸ್‌ಎಫ್‌ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್‌ ಮೇಲೆ ಭಯೋತ್ಪಾದಕರು ಗುಂಡು ಹಾಗೂ ಗ್ರೆನೇಡ್‌ ದಾಳಿ ನಡೆಸಿದರು. ಈ ಘಟನೆಯಲ್ಲಿ‌ ಜಮ್ಮು ಕಾಶ್ಮೀರದ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ಎಸ್‌.ಪಿ. ಪಾಟೀಲ್ ಮೃತಪಟ್ಟಿದ್ದಾರೆ ಹಾಗೂ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.

ಸಿಐಎಸ್‌ಎಫ್‌(CISF) ಬಸ್‌ ಮೇಲೆ ದಾಳಿ ನಡೆಸಿದ ಬಳಿಕ ಭಯೋತ್ಪಾದಕರ ಗುಂಪು ಮೊಹಮ್ಮದ್‌ ಅನ್ವರ ಎಂಬಾತನ ನಿವಾಸದಲ್ಲಿ ಆಶ್ರಯ ಪಡೆದಿದ್ದು ತಿಳಿದು ಬಂದಿತ್ತು. ಸ್ಥಳೀಯ ಪೊಲೀಸರು ಹಾಗೂ ಭಾರತೀಯ ಸೇನೆ ಜಂಟಿ ಕಾರ್ಯಾಚರಣೆ ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಬಿಗಿಮಾಡಿದ ಭದ್ರತೆ:

ಪ್ರಧಾನಿ ನರೇಂದ್ರ ಮೋದಿಯರವು ಏಪ್ರಿಲ್‌ 24ರಂದು ಜಮ್ಮು ಪ್ರದೇಶಕ್ಕೆ ಪ್ರಯಾಣಿಸಲಿದ್ದು ಅಲ್ಲಿ ಭದ್ರತೆಯನ್ನಿ ಬಿಗಿ ಮಾಡಲಾಗಿದೆ. ರಾಷ್ಟ್ರೀಯ ಪಂಚಾಯತಿ ರಾಜ್‌ ದಿನದಂದು ಪಾಲಿ ಗ್ರಾಮದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದು, ಮುಂಜಾಗೃತಾ ಕ್ರಮವಾಗಿ ಮೊಬೈಲ್‌, ಇಂಟರ್‌ನೆಟ್‌ ಸೇವಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಅಗಸ್ಟ್‌ 2019ರಲ್ಲಿ ರದ್ದುಗೊಳಿಸಿದ ಬಳಿಕ ಪ್ರಧಾನಿ ಮೋದಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರಲಿಲ್ಲ. ಕಳೆದ ದೀಪಾವಳಿಯನ್ನು ಬಾರ್ಡರ್‌ನಲ್ಲಿ ಸೈನಿಕರ ಜತೆ ಆಚಿರಿಸದ್ದರು ಆದರೆ ಜಮ್ಮು&ಕಾಶ್ಮೀರಕ್ಕೆ ಹೋಗಿರಲಿಲ್ಲ. ಹಾಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಭಜನೆಯ ಬಳಿಕ ನರೇಂದ್ರ ಮೋದಿಯವರ ಮೊದಲ ಭೇಟಿಯಾಗಿದೆ.

ಹೆಚ್ಚಿನ ಓದಿಗಾಗಿ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾದ ಸಚಿನ್‌ ಪೈಲಟ್‌, ಪಕ್ಷದಲ್ಲಿ ಮಹತ್ವದ ಹುದ್ದೆ ನಿರೀಕ್ಷೆ.

Exit mobile version