Jio Airfiber: ಈಗ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರ, 200ಕ್ಕೂ ಹೆಚ್ಚು ನಗರಗಳಲ್ಲಿ ಜಿಯೋಏರ್ ಫೈಬರ್! - Vistara News

ದೇಶ

Jio Airfiber: ಈಗ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರ, 200ಕ್ಕೂ ಹೆಚ್ಚು ನಗರಗಳಲ್ಲಿ ಜಿಯೋಏರ್ ಫೈಬರ್!

Jio Airfiber: ಜಿಯೋಏರ್ ಫೈಬರ್ ಬಳಕೆದಾರರು ಪ್ರಮುಖ ಒಟಿಟಿ ಅಪ್ಲಿಕೇಷನ್‌ಗಳನ್ನು ಉಚಿತವಾಗಿ ವೀಕ್ಷಿಸಬಹುದು. ಬಳಕೆದಾರರು ಈ ಚಂದಾದಾರಿಕೆಯನ್ನು ಬಳಸಿಕೊಳ್ಳಬಹುದು ಮತ್ತು ಟಿವಿ, ಲ್ಯಾಪ್‌ಟಾಪ್, ಮೊಬೈಲ್ ಅಥವಾ ಟ್ಯಾಬ್ಲೆಟ್‌ನಂತಹ ಅವರ ಆಯ್ಕೆಯ ಯಾವುದೇ ಸಾಧನಗಳಳು ಎಲ್ಲದರಲ್ಲೂ ಅಪ್ಲಿಕೇಷನ್‌ಗಳನ್ನು ಬಳಸಬಹುದು.

VISTARANEWS.COM


on

Jio Airfiber now available in all district headquarters and over 200 cities in Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಿಯೋ ಏರ್ ಫೈಬರ್ (Jio Airfiber) ಈಗ ಕರ್ನಾಟಕದ (Karnataka) ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ(district headquarters), ಇನ್ನೂರಕ್ಕೂ ಹೆಚ್ಚು ನಗರಗಳಲ್ಲಿ ಮತ್ತು ಪಟ್ಟಣಗಳಲ್ಲಿ (Cities of Karnataka) ಲಭ್ಯ ಇದೆ. ಇದರ ಜತೆಗೆ ಇನ್ನೂ ಖುಷಿಯ ವಿಚಾರ ಏನೆಂದರೆ, ಈ ನಗರಗಳು ಮತ್ತು ಪಟ್ಟಣಗಳಿಗೆ ಹೊಂದಿಕೊಂಡಿರುವ ನೂರಾರು ಹಳ್ಳಿಗಳಲ್ಲೂ ಜಿಯೋಏರ್ ಫೈಬರ್ ಅನುಕೂಲಗಳು ದೊರೆಯಲಿದೆ.

ಜಿಯೋದ ಆಪ್ಟಿಕಲ್ ಫೈಬರ್ ಮೂಲಸೌಕರ್ಯವು ಭಾರತದಾದ್ಯಂತ 1.5 ಮಿಲಿಯನ್, ಅಂದರೆ ಹದಿನೈದು ಲಕ್ಷ ಕಿಲೋಮೀಟರ್‌ಗಳಷ್ಟು ವ್ಯಾಪಿಸಿದೆ. ಜಿಯೋದ ವ್ಯಾಪಕವಾದ ಆಪ್ಟಿಕಲ್-ಫೈಬರ್ ಅಳವಡಿಕೆಯಿಂದಾಗಿ ಜಿಯೋ ಈಗ 200 ಮಿಲಿಯನ್ (ಇಪ್ಪತ್ತು ಕೋಟಿ) ಸ್ಥಳಗಳಿಗೆ ಹತ್ತಿರದಲ್ಲಿದೆ. ಆದರೂ ಭೌತಿಕವಾಗಿ ಕೊನೆಯ ಸ್ಥಳದ ತನಕ ಸಂಪರ್ಕವನ್ನು ಒದಗಿಸುವುದಕ್ಕೆ ಸಾಮಾನ್ಯವಾಗಿ ನಮ್ಮ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಕಷ್ಟು ಸಮಯವನ್ನು ತೆಗೆದುಕೊಳ್ಳುತ್ತದೆ.
ಈ ಕಾರಣದಿಂದಾಗಿ ಹತ್ತಾರು ಲಕ್ಷ ಸಂಭಾವ್ಯ ಗ್ರಾಹಕರು ಹೋಮ್ ಬ್ರಾಡ್‌ಬ್ಯಾಂಡ್ ವಂಚಿತರಾಗುತ್ತಾರೆ. ಏಕೆಂದರೆ ಅವರಿರುವ ಸ್ಥಳಕ್ಕೆ ಆಪ್ಟಿಕಲ್ ಫೈಬರ್ ಅನ್ನು ವಿಸ್ತರಿಸುವುದಕ್ಕೆ ಅದರದೇ ಆದ ರೀತಿಯಲ್ಲಿ ಸಂಕೀರ್ಣತೆ ಮತ್ತು ವಿಳಂಬ ಎದುರಾಗುತ್ತಿದೆ.
ಜಿಯೋ ಏರ್ ಫೈಬರ್ ಅತ್ಯುತ್ತಮ ದರ್ಜೆಯ ಮೌಲ್ಯವನ್ನು ಗ್ರಾಹಕರಿಗೆ ಒದಗಿಸುತ್ತದೆ ಮತ್ತು ಪ್ರತಿಪಾದನೆ ಮತ್ತು ಜಿಯೋಫೈಬರ್ ನಂತೆಯೇ ಪ್ಲಾನ್ ಗಳನ್ನು ಒದಗಿಸುತ್ತದೆ ಮತ್ತು ಸಕ್ರಿಯಗೊಳಿಸುತ್ತದೆ.
ಜಿಯೋಏರ್ ಫೈಬರ್ ಏನೇನು ಒದಗಿಸುತ್ತದೆ ಎಂಬುದರ ವಿವರಣೆ ಇಲ್ಲಿದೆ.

  1. ಡಿಜಿಟಲ್ ಎಂಟರ್ ಟೇನ್ ಮೆಂಟ್
  • ಎಲ್ಲ ಪ್ರಮುಖ 550+ ಡಿಜಿಟಲ್ ಟಿವಿ ಚಾನೆಲ್‌ಗಳು: ನಿಮ್ಮ ಮೆಚ್ಚಿನ ಎಲ್ಲ ಟಿವಿ ಚಾನೆಲ್‌ಗಳು ಹೈ-ಡೆಫಿನಿಷನ್‌ನಲ್ಲಿ ಲಭ್ಯವಿದೆ
  • ಕ್ಯಾಚ್-ಅಪ್ ಟಿವಿ: ಬಳಕೆದಾರರು ಈಗ ಅವರು ಬಯಸಿದಷ್ಟು ಹಿಂದಿನ ತನಕ ಕಾರ್ಯಕ್ರಮಗಳನ್ನು ಹೆಕ್ಕಿ, ನೋಡಬಹುದು.
  • ಅತ್ಯಂತ ಜನಪ್ರಿಯ 16+ ಒಟಿಟಿ ಅಪ್ಲಿಕೇಷನ್‌ಗಳು: ಜಿಯೋಏರ್ ಫೈಬರ್ ಬಳಕೆದಾರರು ಪ್ರಮುಖ ಒಟಿಟಿ ಅಪ್ಲಿಕೇಷನ್‌ಗಳನ್ನು ಉಚಿತವಾಗಿ ವೀಕ್ಷಿಸಬಹುದು. ಬಳಕೆದಾರರು ಈ ಚಂದಾದಾರಿಕೆಯನ್ನು ಬಳಸಿಕೊಳ್ಳಬಹುದು ಮತ್ತು ಟಿವಿ, ಲ್ಯಾಪ್‌ಟಾಪ್, ಮೊಬೈಲ್ ಅಥವಾ ಟ್ಯಾಬ್ಲೆಟ್‌ನಂತಹ ಅವರ ಆಯ್ಕೆಯ ಯಾವುದೇ ಸಾಧನಗಳಳು ಎಲ್ಲದರಲ್ಲೂ ಅಪ್ಲಿಕೇಷನ್‌ಗಳನ್ನು ಬಳಸಬಹುದು.
  1. ಬ್ರಾಡ್ ಬ್ಯಾಂಡ್

ಒಳಾಂಗಣ ವೈಫೈ ಸೇವೆ: ಜಿಯೋದ ವಿಶ್ವಾಸಾರ್ಹ ವೈಫೈ ಸಂಪರ್ಕ ಮತ್ತು ನಿಮ್ಮ ಮನೆ ಅಥವಾ ವ್ಯಾಪಾರ ಸ್ಥಳದ ಪ್ರತಿ ಮೂಲೆಯಲ್ಲಿಯೂ ಹೆಚ್ಚಿನ ವೇಗದ ಬ್ರಾಡ್‌ಬ್ಯಾಂಡ್ ಅನುಭವ ದೊರೆಯುತ್ತದೆ.

  1. ಸ್ಮಾರ್ಟ್ ಹೋಮ್ ಸೇವೆ:

-ಶಿಕ್ಷಣ ಮತ್ತು ಮನೆಯಿಂದಲೇ ಕೆಲಸ ಮಾಡುವುದಕ್ಕೆ ಕ್ಲೌಡ್ ಪಿಸಿ
-ಭದ್ರತೆ ಮತ್ತು ಕಣ್ಗಾವಲು ಸಲ್ಯೂಷನ್ಸ್
-ಹೆಲ್ತ್ ಕೇರ್
-ಶಿಕ್ಷಣ
-ಸ್ಮಾರ್ಟ್ ಹೋಮ್ ಐಒಟಿ
-ಗೇಮಿಂಗ್
-ಹೋಮ್ ನೆಟ್ ವರ್ಕಿಂಗ್

  1. ಹೆಚ್ಚುವರಿ ವೆಚ್ಚವಿಲ್ಲದೆ ಗೃಹ ಸಾಧನಗಳು

-ನಿಮ್ಮ ಮನೆ ಅಥವಾ ವ್ಯಾಪಾರದ ಸ್ಥಳದಲ್ಲಿ ಯಾವಾಗಲೂ ಉತ್ತಮ ಕವರೇಜ್‌ಗಾಗಿ ವೈಫೈ ರೂಟರ್
-4ಕೆ ಸ್ಮಾರ್ಟ್ ಸೆಟ್ ಟಾಪ್ ಬಾಕ್ಸ್
-ಧ್ವನಿ ನೆರವಿನಿಂದ ಕಾರ್ಯ ನಿರ್ವಹಿಸುವ ರಿಮೋಟ್

ಜಿಯೋ ಏರ್‌ಫೈಬರ್ ಸಂಪರ್ಕಗಳು ಹೆಚ್ಚಾಗುವುದರಿಂದ ಭಾರತೀಯರು ಮನರಂಜನೆಗಾಗಿ ಬಳಕೆ ಮಾಡುವ ಅಭ್ಯಾಸದಲ್ಲಿ ಭಾರೀ ಬದಲಾವಣೆ ಆಗುತ್ತದೆ. ಹವಾಮಾನ ಪರಿಸ್ಥಿತಿಗಳು ಮತ್ತು ತಾಂತ್ರಿಕ ದೋಷಗಳಿಂದ ಉಂಟಾಗುವ ಸೇವಾ ಅಡೆತಡೆಗಳು ಉಂಟಾಗುವ ಡಿಟಿಎಚ್ ಸೇವೆಗಳಿಗಿಂತ ಭಿನ್ನವಾಗಿ, ಜಿಯೋ ಏರ್ ಫೈಬರ್ ಸಂಪರ್ಕಗಳು ದೃಢವಾದ ಮತ್ತು ವಿಶ್ವಾಸಾರ್ಹ ಪರ್ಯಾಯವನ್ನು ನೀಡುತ್ತವೆ.

ಜಿಯೋ ಸಂಪರ್ಕಗಳು ಅಡೆತಡೆಯಿಲ್ಲದ ಸೇವೆಯನ್ನು ಖಾತ್ರಿ ಪಡಿಸುತ್ತದೆ, ಉತ್ತಮ ಕಾರ್ಯಕ್ಷಮತೆಯನ್ನು ಸಹ ಒದಗಿಸುತ್ತವೆ. ಆದ್ದರಿಂದ ಇದು ಗ್ರಾಹಕರಿಗೆ ಆಕರ್ಷಕ ಆಯ್ಕೆಯಾಗಿದೆ. ಒಟಿಟಿ ಅಪ್ಲಿಕೇಷನ್‌ಗಳು ಮತ್ತು ಜಿಯೋ ಸಿನಿಮಾ ಮತ್ತು ಜಿಯೋಟಿವಿಯಂಥ ಪ್ಲಾಟ್‌ಫಾರ್ಮ್‌ಗಳ ಹೆಚ್ಚಳವು ಈ ಪರಿವರ್ತನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ.
ಈ ಪ್ಲಾಟ್‌ಫಾರ್ಮ್‌ಗಳು ಜಿಯೋ ಏರ್‌ಫೈಬರ್ ಸಂಪರ್ಕಗಳ ಮೂಲಕ ಕೂಡ ದೊರೆಯುತ್ತವೆ. ಕ್ರೀಡೆಗಳ ನೇರಪ್ರಸಾರ, ಇತ್ತೀಚಿನ ಚಲನಚಿತ್ರಗಳು, ವೆಬ್ ಸರಣಿಗಳು ಮತ್ತು ಜನಪ್ರಿಯ ಟಿವಿ ಕಾರ್ಯಕ್ರಮಗಳು ಸೇರಿದಂತೆ ಭಾರತೀಯ ವೀಕ್ಷಕರ ವಿವಿಧ ಅಭಿರುಚಿಗಳಿಗೆ ತಕ್ಕಂತೆ ಅತ್ಯುತ್ಕೃಷ್ಟ ಗುಣಮಟ್ಟದ ಎಚ್ ಡಿ ಕಂಟೆಂಟ್ ಗಳನ್ನು ಪೂರೈಸುತ್ತವೆ. ಈಗ ದೇಶದಲ್ಲಿ ಮನರಂಜನಾ ಜಗತ್ತಿನಲ್ಲಿ ಅತಿ ದೊಡ್ಡ ಬದಲಾವಣೆ ಆಗುತ್ತಿದೆ. ಡಿಟಿಎಚ್ ಸೇವೆಗಳಿಗಿಂತ ಜಿಯೋಏರ್ ಫೈಬರ್ ಗೆ ಪ್ರಾತಿನಿಧ್ಯ ನೀಡುತ್ತಿರುವುದು ಭಾರತೀಯ ಮನರಂಜನಾ ಲೋಕದ ಅನೂಹ್ಯ ಬದಲಾವಣೆಗೆ ಸಾಕ್ಷಿಯಾಗಿದೆ.

ಈ ಸುದ್ದಿಯನ್ನೂ ಓದಿ: Jio AirFiber: ಜಿಯೋ ಏರ್‌ಫೈಬರ್‌ ಹೊಸ ಬೂಸ್ಟರ್ ಪ್ಲ್ಯಾನ್‌ಗಳು ಲಾಂಚ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Porsche Crash: ಕಾರು ಅಪಘಾತ; ದುಡ್ಡಿಗಾಗಿ ರಕ್ತದ ಮಾದರಿಯನ್ನು ಡಸ್ಟ್‌ಬಿನ್‌ಗೆ ಎಸೆದ ಗುಮಾಸ್ತನ ಬಂಧನ!

Porsche Crash: ಬಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವ ಶಂಕೆ ವ್ಯಕ್ತವಾಗಿತ್ತು. ಇದಕ್ಕೆ ಪೂರಕ ಎಂಬಂತೆ ಘಟನೆಗೂ ಮುನ್ನ ಆತ ಸ್ನೇಹಿತರ ಜತೆಗೂಡಿ ಬಾರ್‌ನಲ್ಲಿ ಕುಡಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿತ್ತು. ಹೀಗಾಗಿ ಆತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳಿಹಿಸಲಾಗಿತ್ತು. ಇದೆಲ್ಲಾ ನಡೆದ ಬಳಿಕ ಆತ ಮದ್ಯಪಾನ ಮಾಡಿರಲಿಲ್ಲ ಎನ್ನುವ ವರದಿ ಆಸ್ಪತ್ರೆಯಿಂದ ಹೊರಬಿದ್ದಿತ್ತು. ಇದೀಗ ವೈದ್ಯರು ದುಡ್ಡಿನ ಆಸೆಗೆ ಬಿದ್ದು ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಿದ್ದಾರೆ ಎಂಬುದು ಬಯಲಾಗಿದೆ.

VISTARANEWS.COM


on

Porsche Crash
Koo

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಬಾಲಕನು ಮದ್ಯಪಾನ ಮಾಡಿ ಪೋರ್ಶೆ ಕಾರು ಚಲಾಯಿಸಿ, ಅಪಘಾತದಲ್ಲಿ (Porsche Crash) ಇಬ್ಬರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇದಿನೆ ಹೊಸ ಟ್ವಿಸ್ಟ್‌ಗಳು ಹೊರಬೀಳುತ್ತಿವೆ. ಹಣಕ್ಕಾಗಿ ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಿದ ಕಾರಣ ಪುಣೆ ಪೊಲೀಸರು (Pune Police) ಇಬ್ಬರು ವೈದ್ಯರನ್ನು ಬಂಧಿಸಿದ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಗುಮಾಸ್ತನಾಗಿದ್ದ ಮತ್ತೊಬ್ಬನನ್ನು ಬಂಧಿಸಿದ್ದಾರೆ. ಬಾಲಕನ ರಕ್ತದ ಮಾದರಿಯನ್ನು ಬದಲಿಸಲು, ಸ್ಯಾಂಪಲ್‌ಅನ್ನು ಕಸದಬುಟ್ಟಿಗೆ ಎಸೆದ ಗುಮಾಸ್ತನನ್ನು ಈಗ ಪೊಲೀಸರು ಬಂದಿಸಿದ್ದಾರೆ.

ಮೊದಲು ಬಾಲಕನ ತಂದೆ ವಿಶಾಲ್ ಅಗರ್ವಾಲ್,​ ನನ್ನ ಮಗ ಕಾರು ಓಡಿಸುತ್ತಿರಲಿಲ್ಲ ಕಾರಿಗೆ ಬೇರೆ ಡ್ರೈವರ್​ ಇದ್ದಾರೆ ಎಂದು ಹೇಳಿದ್ದರು. ಇನ್ನು ಬಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವ ಶಂಕೆ ವ್ಯಕ್ತವಾಗಿತ್ತು. ಇದಕ್ಕೆ ಪೂರಕ ಎಂಬಂತೆ ಘಟನೆಗೂ ಮುನ್ನ ಆತ ಸ್ನೇಹಿತರ ಜತೆಗೂಡಿ ಬಾರ್‌ನಲ್ಲಿ ಕುಡಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿತ್ತು. ಹೀಗಾಗಿ ಆತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳಿಹಿಸಲಾಗಿತ್ತು. ಇದೆಲ್ಲಾ ನಡೆದ ಬಳಿಕ ಆತ ಮದ್ಯಪಾನ ಮಾಡಿರಲಿಲ್ಲ ಎನ್ನುವ ವರದಿ ಆಸ್ಪತ್ರೆಯಿಂದ ಹೊರಬಿದ್ದಿತ್ತು. ಇದೀಗ ವೈದ್ಯರು ದುಡ್ಡಿನ ಆಸೆಗೆ ಬಿದ್ದು ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಿದ್ದಾರೆ ಎನ್ನುವುದನ್ನು ಅರಿತ ಪೊಲೀಸರು ರಕ್ತದ ಮಾದರಿಯನ್ನು ತಿರುಚಿದ ಆರೋಪದ ಮೇಲೆ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ.

ಕಾರು ಅಪಘಾತದ ವಿಡಿಯೊ

“ಮೇ 19ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಬಾಲಕನ ರಕ್ತದ ಮಾದರಿಯನ್ನು ಸಾಸೂನ್‌ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ, ಆ ರಕ್ತದ ಮಾದರಿಯನ್ನು ಕಸದಬುಟ್ಟಿಗೆ ಎಸೆಯಲಾಗಿದೆ. ಫೊರೆನ್ಸಿಕ್‌ ಲ್ಯಾಬ್‌ಗೆ ಮತ್ತೊಬ್ಬ ವ್ಯಕ್ತಿಯನ್ನು ಕರೆದುಕೊಂಡು ಹೋಗಲಾಗಿದೆ. ಇಬ್ಬರು ವೈದ್ಯರ ಸೂಚನೆ ಮೇರೆಗೆ ಸಹಾಯಕನೊಬ್ಬನು ರಕ್ತದ ಮಾದರಿಯನ್ನು ಡಸ್ಟ್‌ಬಿನ್‌ಗೆ ಎಸೆದಿದ್ದಾನೆ. ಈಗ ಆತನನ್ನೂ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆಯ ಸಾಸೂನ್‌ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಅಜಯ್‌ ತಾವರೆ ಮತ್ತು ಡಾ. ಶ್ರೀಹರಿ ಹರ್ನೂರ್‌ ಆರೋಪಿಯ ರಕ್ತದ ಮಾದರಿಯನ್ನೇ ಬದಲಿಸಿದ್ದಾರೆ. ಆಮೂಲಕ ಈ ಪ್ರರಕಣದ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಅವರಿಬ್ಬರನ್ನೂ ಇದೀಗ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಈ ಪ್ರಕರಣವನ್ನು ಕ್ರೈಂ ಬ್ರ್ಯಾಂಚ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿಸಿದ್ದ ಎರವಾಡ ಪೊಲೀಸ್‌ ಠಾಣೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು.

ಕೆಲ ದಿನಗಳ ಹಿಂದೆ ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಬಾರ್‌ನಲ್ಲಿ ಮದ್ಯ ಸೇವಿಸಿ ಪಾನಮತ್ತರಾಗಿದ್ದ 17 ವರ್ಷದ ಬಾಲಕ ಚಾಲನೆ ಮಾಡುತ್ತಿದ್ದ ಪೋರ್ಶೆ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಮೃತಪಟ್ಟಿದ್ದರು. ಇದಾದ ಬಳಿಕ ಪೊಲೀಸರು ಬಾಲಾಪರಾಧಿ ನ್ಯಾಯಾಲಯದ ತೀರ್ಪಿನಂತೆ ಬಾಲಕನನ್ನು ಬಂಧಿಸಿದ್ದರು. ಬಳಿಕ ಬಾಲಕನ ತಂದೆ ವಿಶಾಲ್​ ಅಗರ್ವಾಲ್​ ಹಾಗೂ ಬಾಲಕನ ಅಜನನ್ನು ಕೂಡ ಬಂಧಿಸಿದ್ದಾರೆ.

ಇದನ್ನೂ ಓದಿ: Porsche Crash: ಇಬ್ಬರ ಸಾವಿಗೆ ಕಾರಣವಾದ 17 ವರ್ಷದ ಬಾಲಕನಿಗೆ ಪೋರ್ಶೆ ಕಾರು ಸಿಕ್ಕಿದ್ದು ʼಬರ್ತ್‌ಡೇ ಗಿಫ್ಟ್‌ʼ!

Continue Reading

ದೇಶ

Hemchand Manjhi: ಕಳೆದ ತಿಂಗಳು ಪಡೆದಿದ್ದ ಪದ್ಮಶ್ರೀ ಪ್ರಶಸ್ತಿ ವಾಪಸ್‌ ನೀಡಿದ ಹೇಮಚಂದ್‌ ಮಾಂಝಿ; ಏಕೆ?

Hemchand Manjhi: ನಾರಾಯಣಪುರ ಜಿಲ್ಲೆಯ ಛೋಟೆಡೊಂಗರ್‌ ಗ್ರಾಮದವರಾದ ಹೇಮಚಂದ್‌ ಮಾಂಝಿ ಅವರು ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಸಾಂಪ್ರದಾಯಿಕ ಔಷಧ ಪದ್ಧತಿ (ಆಯುರ್ವೇದ, ಸಿದ್ಧ, ಹೋಮಿಯೋಪತಿ, ಯುನಾನಿ) ಮೂಲಕ ಜನರ ರೋಗಗಳನ್ನು ನಿವಾರಣೆ ಮಾಡಿದ್ದಾರೆ. ಇವರ ಸಮಾಜ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಘೋಷಿಸಿತ್ತು.

VISTARANEWS.COM


on

Hemchand Manjhi
Koo

ರಾಯ್‌ಪುರ:‌ ದೇಶದಲ್ಲಿ ಮತ್ತೆ ಪ್ರಶಸ್ತಿ ವಾಪ್ಸಿ ಅಭಿಯಾನ ಆರಂಭವಾಗಿದೆ. ಛತ್ತೀಸ್‌ಗಢದ ಪ್ರಮುಖ ಆಯುರ್ವೇದ ವೈದ್ಯ ಹೇಮಚಂದ್‌ ಮಾಂಝಿ (Hemchand Manjhi) ಅವರು ಕಳೆದ ತಿಂಗಳಷ್ಟೇ ಸ್ವೀಕರಿಸಿದ್ದ ಪದ್ಮಶ್ರೀ ಪ್ರಶಸ್ತಿಯನ್ನು (Padma Shri Award) ಕೇಂದ್ರ ಸರ್ಕಾರಕ್ಕೆ ಹಿಂತಿರುಗಿಸಲು ತೀರ್ಮಾನಿಸಿದ್ದಾರೆ. ಛತ್ತೀಸ್‌ಗಢದ ನಾರಾಯಣಪುರದಲ್ಲಿ ಮಾವೋವಾದಿಗಳು (Naxalites) ಅವರಿಗೆ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸಲು ಅವರು ತೀರ್ಮಾನಿಸಿದ್ದಾರೆ.

ನಾರಾಯಣಪುರ ಜಿಲ್ಲೆಯ ಛೋಟೆಡೊಂಗರ್‌ ಗ್ರಾಮದವರಾದ ಹೇಮಚಂದ್‌ ಮಾಂಝಿ ಅವರು ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಸಾಂಪ್ರದಾಯಿಕ ಔಷಧ ಪದ್ಧತಿ (ಆಯುರ್ವೇದ, ಸಿದ್ಧ, ಹೋಮಿಯೋಪತಿ, ಯುನಾನಿ) ಮೂಲಕ ಜನರ ರೋಗಗಳನ್ನು ನಿವಾರಣೆ ಮಾಡಿದ್ದಾರೆ. ಇವರ ಸಮಾಜ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಘೋಷಿಸಿತ್ತು. ಕಳೆದ ಏಪ್ರಿಲ್‌ನಲ್ಲಿಯೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಮಚಂದ್‌ ಮಾಂಝಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದರು. ಆದರೀಗ, ಒಂದೇ ತಿಂಗಳಲ್ಲಿ ಹೇಮಚಂದ್‌ ಮಾಂಝಿ ಅವರು ಪ್ರಶಸ್ತಿ ಹಿಂತಿರುಗಿಸುವುದಾಗಿ ಘೋಷಿಸಿದ್ದಾರೆ.

ಪ್ರಶಸ್ತಿ ವಾಪಸ್‌ಗೆ ಕಾರಣವೇನು?

ನಾರಾಯಣಪುರ ಜಿಲ್ಲೆಯ ಹಲವೆಡೆ ಮಾವೋವಾದಿಗಳ ಉಪಟಳ ಜಾಸ್ತಿಯಾಗಿದೆ. ಇತ್ತೀಚೆಗೆ ಚಮೇಲಿ ಹಾಗೂ ಗೌರ್‌ದಂಡ್‌ ಗ್ರಾಮಗಳಲ್ಲಿ ಎರಡು ಮೊಬೈಲ್‌ ಟವರ್‌ಗಳಿಗೆ ಮಾವೋವಾದಿಗಳು ಬೆಂಕಿ ಹಚ್ಚಿದ್ದಾರೆ. ಅಷ್ಟೇ ಅಲ್ಲ, ಹೇಮಚಂದ್‌ ಮಾಂಝಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುತ್ತಿರುವ ಬ್ಯಾನರ್‌ಗಳನ್ನು ನಕ್ಸಲರು ಎಲ್ಲೆಡೆ ಅಳವಡಿಸಿದ್ದಾರೆ. ಹೇಮಚಂದ್‌ ಮಾಂಝಿ ಅವರ ವಿರುದ್ಧ ಘೋಷಣೆ ಇರುವ ಬ್ಯಾನರ್‌ಗಳನ್ನು ಕೂಡ ಹಾಕಿದ್ದಾರೆ. ಇದರಿಂದಾಗಿ ಮನನೊಂದು ಹೇಮಚಂದ್‌ ಮಾಂಝಿ ಅವರು ಪ್ರಶಸ್ತಿ ವಾಪಸ್‌ ನೀಡುವ ಘೋಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹೇಮಚಂದ್‌ ಮಾಂಝಿಗೆ ಜೀವ ಬೆದರಿಕೆ

ಮಾವೋವಾದಿಗಳು ಹೇಮಚಂದ್‌ ಮಾಂಝಿ ಅವರಿಗೆ ಜೀವ ಬೆದರಿಕೆಯನ್ನೂ ಹಾಕಿದ್ದಾರೆ. “ನನಗೆ ಹೇಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿತು ಎಂಬುದು ನಕ್ಸಲರ ಪ್ರಶ್ನೆಯಾಗಿದೆ. ನಾನು ಕಳೆದ ಹಲವು ದಶಕಗಳಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡಮೂಲಿಕೆಗಳಿಂದ ತಯಾರಿಸಿದ ಔಷಧಗಳನ್ನು ಜನರಿಗೆ ನೀಡುವ ಮೂಲಕ ಅವರ ಸೇವೆ ಮಾಡಿದ್ದೇನೆ. ಕ್ಯಾನ್ಸರ್‌ಗೂ ಔಷಧ ನೀಡಿದ್ದೇನೆ. ಇದನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿದೆಯೇ ಹೊರತು, ನಾನಾಗೇ ಕೇಳಿ ಪಡೆದಿಲ್ಲ. ಇದಕ್ಕೂ ಮೊದಲು ನಕ್ಸಲರು ನನ್ನ ಸಂಬಂಧಿಯನ್ನು ಹತ್ಯೆ ಮಾಡಿದ್ದರು. ಈಗ ಇಡೀ ಕುಟುಂಬವು ಭಯದಲ್ಲಿಯೇ ಕಾಲ ಕಳೆಯುತ್ತಿದೆ. ಹಾಗಾಗಿ, ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸಲು ತೀರ್ಮಾನಿಸಿದ್ದೇನೆ” ಎಂದು ಹೇಮಚಂದ್ ಮಾಂಝಿ ತಿಳಿಸಿದ್ದಾರೆ.

ಇದನ್ನೂ ಓದಿ: ಖೇಲ್‌ರತ್ನ, ಅರ್ಜುನ ಪ್ರಶಸ್ತಿ ವಾಪಸ್​ ಮಾಡುವ ನಿರ್ಧಾರ ಘೋಷಿಸಿ ಮೋದಿಗೆ ಪತ್ರ ಬರೆದ ವಿನೇಶ್‌ ಫೋಗಟ್

Continue Reading

ದೇಶ

Rahul Gandhi: ರಾಹುಲ್‌ ಗಾಂಧಿ ಜಿಂದಾಬಾದ್‌ ಎನ್ನುತ್ತಲೇ ಕುಸಿದ ವೇದಿಕೆ; ತಬ್ಬಿಬ್ಬಾದ ಕಾಂಗ್ರೆಸ್‌ ನಾಯಕ, ವಿಡಿಯೊ ಇಲ್ಲಿದೆ

Rahul Gandhi: ನಾಯಕರು ವೇದಿಕೆ ಮೇಲೆ ನಿಂತು, ಜನರತ್ತ ಕೈಬೀಸಿ ಬಲ ಪ್ರದರ್ಶನ ಮಾಡುವಾಗಲೇ ವೇದಿಕೆ ಕುಸಿದಿದೆ. ಕೆಲ ಸೆಕೆಂಡ್‌ಗಳವರೆಗೆ ಗಾಬರಿಯಾದ ರಾಹುಲ್‌ ಗಾಂಧಿ ಅವರು ಕೂಡಲೇ ಮೀಸಾ ಭಾರ್ತಿ ಅವರು ಸರಿಯಾಗಿ ನಿಲ್ಲಲು ನೆರವು ನೀಡಿದರು. ಕೆಲವೇ ಕ್ಷಣಗಳಲ್ಲಿ ವೇದಿಕೆಯು ಎರಡು ಬಾರಿ ಕುಸಿದ ಕಾರಣ ಜನರಲ್ಲೂ ಕೆಲ ಕಾಲ ಆತಂಕ ಮೂಡಿತ್ತು.

VISTARANEWS.COM


on

Rahul Gandhi
Koo

ಪಟನಾ: ಲೋಕಸಭೆ ಚುನಾವಣೆಯ (Lok Sabha Election 2024) ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಹಾಗಾಗಿ, ಕೊನೆಯ ಹಂತದ ಚುನಾವಣೆಗಾಗಿ ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದೇ ರೀತಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಬಿಹಾರದಲ್ಲಿ (Bihar) ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ಇನ್ನು ರಾಹುಲ್‌ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುವ ವೇಳೆ ಅವರಿದ್ದ ವೇದಿಕೆ ಕುಸಿದಿದ್ದು, ಸ್ವಲ್ಪರದರಲ್ಲಿಯೇ ಕಾಂಗ್ರೆಸ್‌ ನಾಯಕ ಪಾರಾಗಿದ್ದಾರೆ.

ಪಟನಾ ಹೊರವಲಯದಲ್ಲಿರುವ ಪಾಲಿಗಂಜ್‌ನಲ್ಲಿ ಚುನಾವಣೆ ಸಮಾವೇಶ ಆಯೋಜಿಸಲಾಗಿತ್ತು. ಬೃಹತ್‌ ಸಮಾವೇಶದ ಹಿನ್ನೆಲೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು. ಇಂಡಿಯಾ ಒಕ್ಕೂಟದ ಮಿತ್ರಪಕ್ಷ, ಆರ್‌ಜೆಡಿ ಅಭ್ಯರ್ಥಿ ಮೀಸಾ ಭಾರ್ತಿ ಪರವಾಗಿ ಮತಯಾಚಿಸಲು ರಾಹುಲ್‌ ಗಾಂಧಿ ಆಗಮಿಸಿದ್ದರು. ಇದೇ ವೇಳೆ, ರಾಹುಲ್‌ ಗಾಂಧಿ ಹಾಗೂ ಮೀಸಾ ಭಾರ್ತಿ ಸೇರಿ ಹಲವು ನಾಯಕರು ವೇದಿಕೆ ಮೇಲೆ ನಿಂತಿದ್ದರು. ಆಗ, ವೇದಿಕೆಯು ಕುಸಿದಿದೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವೇದಿಕೆ ಕುಸಿದ ವಿಡಿಯೊ ಇಲ್ಲಿದೆ

ನಾಯಕರು ವೇದಿಕೆ ಮೇಲೆ ನಿಂತು, ಜನರತ್ತ ಕೈಬೀಸಿ ಬಲ ಪ್ರದರ್ಶನ ಮಾಡುವಾಗಲೇ ವೇದಿಕೆ ಕುಸಿದಿದೆ. ಕೆಲ ಸೆಕೆಂಡ್‌ಗಳವರೆಗೆ ಗಾಬರಿಯಾದ ರಾಹುಲ್‌ ಗಾಂಧಿ ಅವರು ಕೂಡಲೇ ಮೀಸಾ ಭಾರ್ತಿ ಅವರು ಸರಿಯಾಗಿ ನಿಲ್ಲಲು ನೆರವು ನೀಡಿದರು. ಇನ್ನೇನು ಸ್ಟೇಜ್‌ನಿಂದ ಹೊರಡಬೇಕು ಎನ್ನುವರಷ್ಟರಲ್ಲಿ ವೇದಿಕೆಯು ಮತ್ತಷ್ಟು ಕುಸಿಯಿತು. ಆಗ ರಾಹುಲ್‌ ಗಾಂಧಿ ಅವರು ನಗುತ್ತಲೇ ಜನರತ್ತ ಕೈಬೀಸಿದರು. ವೇದಿಕೆಯು ತುಂಬ ಎತ್ತರದಲ್ಲಿ ಇರದ ಕಾರಣ ಯಾರಿಗೂ ಗಾಯಗಳಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.

ಬಿಹಾರದಲ್ಲಿ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳು ಒಗ್ಗೂಡಿ ಚುನಾವಣೆ ಕಣಕ್ಕಿಳಿದಿವೆ. ಆರ್‌ಜೆಡಿಯು 26 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್‌ 9, ಸಿಪಿಐ (ಎಂಎಲ್) ಹಾಗೂ ಸಿಪಿಎಂ ಪಕ್ಷಗಳು ತಲಾ ಒಂದು ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿದಿವೆ. ನಾಲ್ಕೂ ಪಕ್ಷಗಳು ಒಗ್ಗೂಡಿ ಎನ್‌ಡಿಎ ಮೈತ್ರಿಕೂಟಕ್ಕೆ ಸೆಡ್ಡು ಹೊಡೆಯಲು ತೀರ್ಮಾನಿಸಿವೆ. ಹಾಗಾಗಿ, ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬಿಹಾರದಲ್ಲಿ ಮೀಸಾ ಭಾರ್ತಿ ಅವರ ಪರವಾಗಿ ಪ್ರಚಾರ ಕೈಗೊಂಡಿದ್ದಾರೆ. ಜೂನ್‌ 1ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

Lok Sabha Election: Stage Collapses At Rahul Gandhi’s Bihar Poll Rally With Misa Bharti

Continue Reading

ಕ್ರೈಂ

Physical Abuse: ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಅಸ್ತ್ರ; ವಿದ್ಯಾರ್ಥಿನಿ ಅತ್ಯಾಚಾರ ಆರೋಪಿಯ ಮನೆ ನೆಲಸಮ

ಮಧ್ಯಪ್ರದೇಶದ ಭೋಪಾಲ್ ನ ಸಿಧಿಯಲ್ಲಿ ಒಟ್ಟು ಏಳು ಮಂದಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ನಡೆಸಲಾಗಿದ್ದು (Physical Abuse), ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಮನೆಯನ್ನು ಜಿಲ್ಲಾಡಳಿತ ನೆಲಸಮಗೊಳಿಸಿದೆ.

VISTARANEWS.COM


on

By

physical abuse
Koo

ಮಧ್ಯಪ್ರದೇಶ: ವಾಯ್ಸ್ ಮಾಡ್ಯುಲೇಷನ್ ಆ್ಯಪ್ (voice modulation app) ಬಳಸಿ ಮಧ್ಯಪ್ರದೇಶದ (madhyapradesh) ಭೋಪಾಲ್ ನ (bhopal) ಸಿಧಿಯಲ್ಲಿ ನಾಲ್ವರು ಅಪ್ರಾಪ್ತ ಬಾಲಕಿಯರು ಸೇರಿದಂತೆ ಏಳು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ (Physical Abuse) ಸಂಬಂಧಿಸಿ ವಿಶೇಷ ತನಿಖಾ ತಂಡ (Special Investigation Team- SIT)) ರಚನೆಗೆ ಮುಖ್ಯಮಂತ್ರಿ (Chief Minister) ಮೋಹನ್ ಯಾದವ್ (Mohan Yadav ) ಆದೇಶಿಸಿದ್ದಾರೆ.

ಈ ಬಳಿಕ ಸಿಧಿ ಜಿಲ್ಲಾಡಳಿತವು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳಲ್ಲಿ ಒಬ್ಬನಾದ ಬ್ರಿಜೇಶ್ ಪ್ರಜಾಪತಿಯ ಮನೆಯನ್ನು ನೆಲಸಮಗೊಳಿಸಿದೆ. ರೇವಾ ವ್ಯಾಪ್ತಿಯ ಐಜಿ ಮಹೇಂದ್ರ ಸಿಕರ್ವಾರ್ ಅವರು ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ಘೋಷಿಸಿದರು. ತನಿಖೆಗಾಗಿ ಒಂಬತ್ತು ಸದಸ್ಯರ ಎಸ್‌ಐಟಿಯನ್ನು ರಚಿಸಲಾಗಿದೆ. ಸಿಧಿಯ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (SDOP) ರೋಶ್ನಿ ಸಿಂಗ್ ಠಾಕೂರ್ ಅವರು ಇದರ ಮುಖ್ಯಸ್ಥರಾಗಿದ್ದಾರೆ ಎಂದು ತಿಳಿಸಿದರು.

ಪ್ರಮುಖ ಆರೋಪಿಗಳು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಯೋಜನೆ ರೂಪಿಸಿದ್ದು, ವಿದ್ಯಾರ್ಥಿ ವೇತನ ನೀಡುವ ನೆಪದಲ್ಲಿ ಈ ದುಷ್ಕೃತ್ಯ ಎಸಗುತ್ತಿದ್ದರು ಎಂದು ಮಹೇಂದ್ರ ಸಿಕರ್ವಾರ್ ಹೇಳಿದರು. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಬ್ರಿಜೇಶ್ ಪ್ರಜಾಪತಿ (30) ಎಂದು ಗುರುತಿಸಲಾಗಿದೆ. ಆತನ ಇಬ್ಬರು ಸಹಚರರನ್ನು ಸಿಧಿ ನಿವಾಸಿಗಳಾದ ರಾಹುಲ್ ಪ್ರಜಾಪತಿ ಮತ್ತು ಸಂದೀಪ್ ಪ್ರಜಾಪತಿ ಎಂದು ಗುರುತಿಸಲಾಗಿದೆ.


ಘಟನೆಯ ಹಿನ್ನೆಲೆ ಏನು?

ಘಟನೆಯ ಕುರಿತು ವಿವರಿಸಿದ ಐಜಿ ಮಹೇಂದ್ರ ಸಿಕರ್ವಾರ್, ಬ್ರಿಜೇಶ್ ಪ್ರಜಾಪತಿ ಮೂರು ವರ್ಷಗಳ ಹಿಂದೆ ಜಬಲ್‌ಪುರದ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆತನ ಕೈ ಮತ್ತು ಕಾಲುಗಳು ಸುಟ್ಟುಹೋಗಿವೆ ಎಂದು ಪ್ರಜಾಪತಿ ತನಿಖೆ ವೇಳೆ ಹೇಳಿಕೊಂಡಿದ್ದಾನೆ. ಸ್ವಲ್ಪ ಸಮಯದ ಅನಂತರ ಆತ ಗುಜರಾತ್‌ಗೆ ಹೋಗಿದ್ದು, ಅಲ್ಲಿಂದ ಹಿಂದಿರುಗಿದ ಬಳಿಕ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಎಂದು ತಿಳಿಸಿದರು.

ಮಹಿಳಾ ಕಾಲೇಜು ಉದ್ಯೋಗಿಯ ಧ್ವನಿಯನ್ನು ಅನುಕರಿಸಲು ವಾಯ್ಸ್ ಮಾಡ್ಯುಲೇಶನ್ ಅಪ್ಲಿಕೇಶನ್ ಅನ್ನು ಬಳಸಿರಿವ ಪ್ರಜಾಪತಿ ಉದ್ದೇಶಿತ ಮಹಿಳೆಯರನ್ನು ನಿರ್ಜನ ಪ್ರದೇಶಕ್ಕೆ ಕರೆದು ಹೇಯ ಕೃತ್ಯ ಎಸಗುತ್ತಿದ್ದ. ಪೊಲೀಸರಿಂದ ತಪ್ಪಿಸಿಕೊಳ್ಳಲು ಸಂತ್ರಸ್ತರ ಮೊಬೈಲ್ ಫೋನ್ ಗಳನ್ನು ಕಸಿದುಕೊಳ್ಳುತ್ತಿದ್ದರು ಎಂದು ಐಜಿ ತಿಳಿಸಿದರು.

ಇದನ್ನೂ ಓದಿ: Swati Maliwal case: ಕೋರ್ಟ್‌ ವಿಚಾರಣೆ ವೇಳೆ ಕಣ್ಣೀರಿಟ್ಟ ಸ್ವಾತಿ ಮಲಿವಾಲ್‌!

ಪ್ರಜಾಪತಿ ಕತ್ತಲೆಯ ಸಮಯದಲ್ಲಿ ಅಪರಾಧ ಎಸಗುತ್ತಿದ್ದ. ಆತ ಗುರಿಯಾಗಿಸಿದ ಮಹಿಳೆಯನ್ನು ಬೈಕ್‌ನಲ್ಲಿ ಎತ್ತಿಕೊಂಡು ಹೋಗುತ್ತಿದ್ದರು ಮತ್ತು ತಮ್ಮ ಗುರುತನ್ನು ಮರೆಮಾಚಲು ಹೆಲ್ಮೆಟ್ ಮತ್ತು ಕೈಗವಸುಗಳನ್ನು ಧರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಸಹಚರರಾದ ರಾಹುಲ್ ಮತ್ತು ಸಂದೀಪ್ ಅವರ ಸಹಾಯದಿಂದ ಸಂತ್ರಸ್ತರ ಮೊಬೈಲ್ ಮಾರಾಟ ಮಾಡುತ್ತಿದ್ದ. ಬಂಧಿತ ಆರೋಪಿಯಿಂದ ಒಟ್ಟು 16 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Porsche Crash
ದೇಶ8 mins ago

Porsche Crash: ಕಾರು ಅಪಘಾತ; ದುಡ್ಡಿಗಾಗಿ ರಕ್ತದ ಮಾದರಿಯನ್ನು ಡಸ್ಟ್‌ಬಿನ್‌ಗೆ ಎಸೆದ ಗುಮಾಸ್ತನ ಬಂಧನ!

Prajwal Revanna Case
ಪ್ರಮುಖ ಸುದ್ದಿ29 mins ago

Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

Hemchand Manjhi
ದೇಶ46 mins ago

Hemchand Manjhi: ಕಳೆದ ತಿಂಗಳು ಪಡೆದಿದ್ದ ಪದ್ಮಶ್ರೀ ಪ್ರಶಸ್ತಿ ವಾಪಸ್‌ ನೀಡಿದ ಹೇಮಚಂದ್‌ ಮಾಂಝಿ; ಏಕೆ?

Prajwal Revanna Case
ಕರ್ನಾಟಕ1 hour ago

Prajwal Revanna Case: ವಿಚಾರಣೆಗೆ ಬರುವ ಪ್ರಜ್ವಲ್‌ ನಿರ್ಧಾರ ಸ್ವಾಗತಿಸುವೆ ಎಂದ ಸಚಿವ ಪರಮೇಶ್ವರ್‌

Rahul Gandhi
ದೇಶ1 hour ago

Rahul Gandhi: ರಾಹುಲ್‌ ಗಾಂಧಿ ಜಿಂದಾಬಾದ್‌ ಎನ್ನುತ್ತಲೇ ಕುಸಿದ ವೇದಿಕೆ; ತಬ್ಬಿಬ್ಬಾದ ಕಾಂಗ್ರೆಸ್‌ ನಾಯಕ, ವಿಡಿಯೊ ಇಲ್ಲಿದೆ

Karnataka Weather Forecast
ಮಳೆ2 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

HairStyle Craze
ಫ್ಯಾಷನ್2 hours ago

Hairstyle Craze: ಸೋಷಿಯಲ್‌ ಮೀಡಿಯಾದಲ್ಲಿ ರಂಗೇರಿದ ಹೇರ್‌ ಸ್ಟೈಲ್ಸ್

Lok Sabha Election 2024
ಕರ್ನಾಟಕ2 hours ago

Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

Prajwal Revanna Video
ಕರ್ನಾಟಕ2 hours ago

Prajwal Revanna Video: ಪ್ರಜ್ವಲ್‌ ಪ್ರತ್ಯಕ್ಷನಾಗಿದ್ದಕ್ಕೆ ಸಮಾಧಾನ ಆಯ್ತು ಎಂದ ಎಚ್‌ಡಿಕೆ; ಫಸ್ಟ್‌ ರಿಯಾಕ್ಷನ್‌ ಹೀಗಿದೆ

Mouthwashes
ಆರೋಗ್ಯ2 hours ago

Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌