Site icon Vistara News

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

JP Nadda

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಜೆ.ಪಿ.ನಡ್ಡಾ (JP Nadda) ಅವರು ರಾಜ್ಯಸಭೆಯ (Rajya Sabha) ಸದನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇದುವರೆಗೆ ಪಿಯೂಷ್‌ ಗೋಯಲ್‌ (Piyush Goyal) ಅವರು ಮೇಲ್ಮನೆಯಲ್ಲಿ ಸದನ ನಾಯಕರಾಗದ್ದರು. ಈಗ ಅವರ ಬದಲಿಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಆಯ್ಕೆ ಮಾಡಲಾಗಿದೆ. ಪಿಯೂಷ್‌ ಗೋಯಲ್‌ ಅವರು ಲೋಕಸಭೆ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಆಯ್ಕೆಯಾದ ಕಾರಣ ಜೆ.ಪಿ.ನಡ್ಡಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪಿಯೂಷ್‌ ಗೋಯಲ್‌ ಅವರು 2010ರ ಜುಲೈ 5ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅವರನ್ನು ರಾಜ್ಯಸಭೆ ಸದನ ನಾಯಕರನ್ನಾಗಿ 2021ರ ಜುಲೈ 14ರಂದು ಆಯ್ಕೆ ಮಾಡಲಾಗಿತ್ತು. ಜೂನ್‌ 24ರಂದು ಪಿಯೂಷ್‌ ಗೋಯಲ್‌ ಅವರು ಲೋಕಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೆ.ಪಿ. ನಡ್ಡಾ ಅವರು ವರ್ಷದ ಆರಂಭದಲ್ಲಿ ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಸದ್ಯ, ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರ ಅವಧಿಯು ಇದೇ ತಿಂಗಳು ಮುಗಿಯಲಿದೆ. 2020ರಿಂದ ಬಿಜೆಪಿ ಅಧ್ಯಕ್ಷರಾಗಿರುವ ನಡ್ಡಾ ಅವರು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಈಗ ಜೆ.ಪಿ. ನಡ್ಡಾ ಅವರ ಹುದ್ದೆಗೆ ಯಾರು ಆಯ್ಕೆಯಾಗುತ್ತಾರೆ, ಯಾರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂಬ ಕುತೂಹಲ ಮೂಡಿದೆ. ಜೆ.ಪಿ. ನಡ್ಡಾ ಅವರಿಗೆ ಆರೋಗ್ಯ ಖಾತೆ ಜತೆಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆಗಳನ್ನೂ ನೀಡಲಾಗಿದೆ.

ಬಜೆಟ್‌ನಲ್ಲಿ ಹೊಸ ತೆರಿಗೆ ಸ್ಲ್ಯಾಬ್‌?

“ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Parliament Session 2024: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಎಚ್‌ಡಿಕೆ, ಶೋಭಾ ಕರಂದ್ಲಾಜೆ; Video ಇಲ್ಲಿದೆ

Exit mobile version