ನವದೆಹಲಿ: ಕನ್ನಡಿಗರೂ ಆಗಿರುವ ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅರವಿಂದ್ ಕುಮಾರ್ (justice aravind kumar) ಅವರು ಸೋಮವಾರ ಸುಪ್ರೀಂ ಕೋರ್ಟ್‌ನ (Supreme Court) ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೇ, ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಾಜೇಶ್ ಬಿಂದಾಲ್ (justice rajesh bindal) ಅವರೂ ಸುಪ್ರೀಂ ನ್ಯಾಯಮೂರ್ತಿಯಾಗಿ ನೇಮಕಗೊಂಡರು.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಅವರು ಜಸ್ಟೀಸ್ ಅರವಿಂದ್ ಕುಮಾರ್ ಮತ್ತು ಜಸ್ಟೀಸ್ ರಾಜೇಶ್ ಬಿಂದಾಲ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಇಬ್ಬರು ನ್ಯಾಯಮೂರ್ತಿಗಳ ನೇಮಕದೊಂದಿಗೆ ಸುಪ್ರೀಂ ಕೋರ್ಟ್ ಪೂರ್ಣ ನ್ಯಾಯಾಮೂರ್ತಿಗಳನ್ನು ಹೊಂದಿದಂತಾಗಿದೆ. ಈಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: Adani Group Row: ಹೂಡಿಕೆದಾರ ರಕ್ಷಣೆಗೆ ತಜ್ಞರ ಸಮಿತಿಗೆ ಸಲಹೆ ಮಾಡಿದ ಸುಪ್ರೀಂ ಕೋರ್ಟ್, ಸರ್ಕಾರ ಒಪ್ಪುವುದೇ?
ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್‌ಗಳಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಹಲವು ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿ ಮೂರು ತಿಂಗಳಾದರೂ ಕೇಂದ್ರ ಸರ್ಕಾರ ನೇಮಕದ ಕ್ರಮ ಕೈಗೊಂಡಿರಲಿಲ್ಲ. ಇದೀಗ, ಎಲ್ಲ ನೇಮಕಾತಿಗಳನ್ನು ಕ್ಲಿಯರ್ ಮಾಡಲಾಗುತ್ತಿದೆ.