ನವದೆಹಲಿ: ಗೋದ್ರಾ ಹತ್ಯಾಕಾಂಡದ ವೇಳೆ ಬಿಲ್ಕಿಸ್ ಬಾನೊ (Bilkis Bano Case) ಮೇಲೆ ಅತ್ಯಾಚಾರ ನಡೆಸಿದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಂತ್ರಸ್ತೆ ಸಲ್ಲಿಸಿದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ಹಿಂದೆ ಸರಿದಿದ್ದಾರೆ. ಹಾಗಾಗಿ, ಮಂಗಳವಾರ ನಡೆಯಬೇಕಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ.
ಬಿಲ್ಕಿಸ್ ಬಾನೊ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಹಾಗೂ ಬೇಲಾ ಎಂ. ತ್ರಿವೇದಿ ಅವರ ಪೀಠವು ವಿಚಾರಣೆ ನಡೆಸಬೇಕಿತ್ತು. ಆದರೆ, ನ್ಯಾ.ಬೇಲಾ ತ್ರಿವೇದಿ ಅವರು ಯಾವುದೇ ನಿರ್ದಿಷ್ಟ ಕಾರಣ ನೀಡದೆ ವಿಚಾರಣೆಯಿಂದ ಹಿಂದೆ ಸರಿದರು. ಹಾಗಾಗಿ, ವಿಚಾರಣೆ ಮುಂದೂಡಲಾಗಿದ್ದು, ಹೊಸ ಪೀಠ ರಚಿಸಿದ ಬಳಿಕ ವಿಚಾರಣೆಯ ದಿನಾಂಕ ನಿಗದಿಪಡಿಸಲಾಗುತ್ತದೆ.
2002ರಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ, ಅವರ ಮಗಳು ಸೇರಿ ಹಲವು ಕುಟುಂಬಸ್ಥರ ಹತ್ಯೆ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು ಕಳೆದ ಆಗಸ್ಟ್‌ನಲ್ಲಿ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಿದೆ. ಇದರ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಗುಜರಾತ್ ಸರ್ಕಾರದ ಕ್ರಮ ಪ್ರಶ್ನಿಸಿ ಬಿಲ್ಕಿಸ್ ಸುಪ್ರೀಂ ಮೊರೆ ಹೋಗಿದ್ದಾರೆ.
ಇದನ್ನೂ ಓದಿ | Bilkis Bano | ಅತ್ಯಾಚಾರಿಗಳ ಬಿಡುಗಡೆ, ಡಿ.13ರಂದು ಬಿಲ್ಕಿಸ್ ಬಾನೊ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ