Site icon Vistara News

CJI D Y Chandrachud | ಸುಪ್ರೀಂ ಕೋರ್ಟ್‌‌ನ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ ಡಿ.ವೈ. ಚಂದ್ರಚೂಡ

CJI D Y Chandrachuda

ನವದೆಹಲಿ: ಸಿಜೆಐ ಯು ಯು ಲಲಿತ್ ನಿವೃತ್ತಿಯಾದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಧನಂಜಯ ಯಶವಂತ್ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ (CJI D Y Chandrachud) ಬುಧವಾರ ಅಧಿಕಾರ ಸ್ವೀಕರಿಸಿದರು. ಚಂದ್ರಚೂಡ್ ಅವರು ಸುಮಾರು ಎರಡು ವರ್ಷಗಳ ಕಾಲ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ಮುಂದುವರಿಯಲಿದ್ದು, 2024 ನವೆಂಬರ್ 10ಕ್ಕೆ ನಿವೃತ್ತರಾಗಲಿದ್ದಾರೆ. ಈ ಮೂಲಕ ಇತ್ತೀಚಿನ ವರ್ಷಗಳಲ್ಲಿ ಅತಿ ದೀರ್ಘ ಅವಧಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಂಬ ಕೀರ್ತಿಗೆ ಪಾತ್ರವಾಗಲಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಂದ್ರಚೂಡ್ ಅವರಿಗೆ ಪ್ರಮಾಣವಚನ ಬೋಧಿಸಿದರು. 2016 ಮೇ 13ರಂದು ಸುಪ್ರೀಂ ಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ಭಡ್ತಿ ಪಡೆಯುವ ಮುಂಚೆ ಅವರು ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅದಕ್ಕೂ ಮುಂಚೆ ಅವರು ಬಾಂಬೆ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದರು.

ಈಗ ಮುಖ್ಯ ನ್ಯಾಯಮೂರ್ತಿಯಾಗಿರುವ ಚಂದ್ರಚೂಡ ಅವರು ಈ ಹಿಂದೆ ಅನೇಕ ಸಾಂವಿಧಾನಿಕ ಪೀಠಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅನೇಕ ಪ್ರಮುಖ ತೀರ್ಪುಗಳಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದಾರೆ. ಈ ಪೈಕಿ, ಅಯೋಧ್ಯ ಭೂ ವಿವಾದ, ಖಾಸಗಿ ಹಕ್ಕು ಸೇರಿದಂತೆ ಅನೇಕ ಪ್ರಕರಣಗಳನ್ನು ಹೆಸರಿಸಬಹುದಾಗಿದೆ.

ಸಿಜೆಐ ಡಿ ವೈ ಚಂದ್ರಚೂಡ ಅವರ ತಂದೆ ವೈ ವಿ ಚಂದ್ರಚೂಡ ಅವರೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದರು. ಭಾರತದಲ್ಲಿ ಅತಿ ದೀರ್ಘ ಅವಧಿಗೆ ಸಿಜೆಐ ಆಗಿದ್ದ ದಾಖಲೆ ಅವರ ಹೆಸರಿನಲ್ಲಿದೆ. ವೈ ವಿ ಚಂದ್ರಚೂಡ ಅವರು ಸುಮಾರು 7 ವರ್ಷ 4 ತಿಂಗಳು ಕಾಲ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ಇದನ್ನೂ ಓದಿ | Justice D Y Chandrachud | ಡಿ ವೈ ಚಂದ್ರಚೂಡ್ ನ್ಯಾಯನಿಷ್ಠ, ಧೈರ್ಯಶಾಲಿ ನ್ಯಾಯಮೂರ್ತಿ

Exit mobile version