Site icon Vistara News

India Canada Row: ಭಾರತದ ವಿರುದ್ಧ ಆರೋಪ ಮಾಡಬಲ್ಲೆ, ಸಾಕ್ಷ್ಯ ನೀಡಲು ಒಲ್ಲೆ; ಜಸ್ಟಿನ್‌ ಟ್ರುಡೋ ಇಬ್ಬಂದಿತನ

Justin Trudeau

ಒಟ್ಟಾವ: ಕೆನಡಾದಲ್ಲಿ ಖಲಿಸ್ತಾನಿಗಳ ಪರ ನಿಲುವು ಹೊಂದಿರುವ ಪಕ್ಷದ ಬೆಂಬಲದಿಂದ ಅಧಿಕಾರದಲ್ಲಿರುವ ಜಸ್ಟಿನ್‌ ಟ್ರುಡೋ (Justin Trudeau) ಅವರು ಖಲಿಸ್ತಾನಿಗಳ ಮನವೊಲಿಸಲು ಭಾರತದ ವಿರುದ್ಧ (India Canada Row) ಹಲವು ಆರೋಪ ಮಾಡುತ್ತಿದ್ದಾರೆ. ಅದರಲ್ಲೂ, ಕಳೆದ ಜೂನ್‌ 18ರಂದು ಕೆನಡಾದಲ್ಲಿ ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡ ಇದೆ, ಭಾರತದ ಏಜೆಂಟರೇ ಹತ್ಯೆ ಮಾಡಿದ್ದಾರೆ ಎಂದೆಲ್ಲ ಹೇಳುತ್ತಿದ್ದಾರೆ. ಆದರೆ, ಭಾರತದ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ಜಸ್ಟಿನ್‌ ಟ್ರುಡೋ ಬಳಿ ಯಾವುದೇ ಸಾಕ್ಷ್ಯ ಇಲ್ಲ ಎಂಬುದಕ್ಕೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ನೀಡಿದ ಹಾರಿಕೆಯ ಉತ್ತರವೇ ಸಾಕ್ಷಿಯಾಗಿದೆ.

ಜಸ್ಟಿನ್‌ ಟ್ರುಡೋ ಅವರು ಸುದ್ದಿಗೋಷ್ಠಿ ನಡೆಸುವ ವೇಳೆ ಭಾರತದ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ಇದೆಯೇ ಎಂಬ ಕುರಿತು ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ್ದಾರೆ. ಆಗ ಜಸ್ಟಿನ್‌ ಟ್ರುಡೋ ಯಾವುದೇ ಸಾಕ್ಷ್ಯ ನೀಡಿಲ್ಲ ಹಾಗೂ ಇದೆ ಎಂದು ಕೂಡ ದೃಢ ವಿಶ್ವಾಸ ವ್ಯಕ್ತಪಡಿಸಿಲ್ಲ. “ಭಾರತದ ವಿರುದ್ಧ ಆರೋಪ ಮಾಡಲು ಬಲವಾದ ಹಾಗೂ ವಿಶ್ವಾಸಾರ್ಹ ಕಾರಣಗಳಿವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದಾರೆ. ಆದರೆ, ಅವರು ಯಾವುದೇ ಸಾಕ್ಷ್ಯಗಳನ್ನು ನೀಡಿಲ್ಲ ಹಾಗೂ ಇವೆ ಎಂದು ಕೂಡ ಉತ್ತರಿಸಿಲ್ಲ.

“ಕೆಲ ದಿನಗಳ ಹಿಂದೆಯೇ ನಾನು ಭಾರತದ ವಿರುದ್ಧ ಆರೋಪ ಮಾಡಿದ್ದೇನೆ. ಇದಕ್ಕೆ ಬಲವಾದ ಕಾರಣಗಳೂ ಇವೆ. ಕೆನಡಾದಲ್ಲಿ ಕೆನಡಾ ನಾಗರಿಕನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ. ಕೆನಡಾ ನಾಗರಿಕರನ್ನು ರಕ್ಷಿಸುವುದು ನನ್ನ ಜವಾಬ್ದಾರಿಯಾಗಿದೆ. ಇದರ ದಿಸೆಯಲ್ಲಿ ನಾನು ನನ್ನ ಪ್ರಯತ್ನ, ಹೋರಾಟ ಮುಂದುವರಿಸುತ್ತೇನೆ. ಕೆನಡಾ ಹಾಗೂ ಅಂತಾರಾಷ್ಟ್ರೀಯ ನಿಯಮಗಳನ್ನು ಪಾಲಿಸುತ್ತಲೇ ನಾನು ಇದನ್ನು ಮಾಡುತ್ತೇನೆ” ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: India Canada Row: ಮೆತ್ತಗಾದ ಜಸ್ಟಿನ್‌ ಟ್ರುಡೋ; ಭಾರತ ಅಭಿವೃದ್ಧಿ ಪ್ರಧಾನ ದೇಶ ಎಂದು ಹೇಳಿಕೆ

ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನು ಉಚ್ಚಾಟನೆಗೊಳಿಸಿದ ಬಳಿಕ ಭಾರತವೂ ಹಲವು ಕ್ರಮಗಳ ಮೂಲಕ ತಿರುಗೇಟು ನೀಡಿದೆ. ಭಾರತದಲ್ಲಿರುವ ಕೆನಡಾ ರಾಯಭಾರಿಯನ್ನು ಉಚ್ಚಾಟನೆ ಮಾಡುವ ಜತೆಗೆ ಕೆನಡಾ ನಾಗರಿಕರಿಗೆ ವೀಸಾ ನೀಡುವನ್ನೂ ಭಾರತ ಸ್ಥಗಿತಗೊಳಿಸಿದೆ. ಇನ್ನು ಹರ್ದೀಪ್ ಸಿಂಗ್‌ ನಿಜ್ಜರ್‌ ಹತ್ಯೆಯ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕ ಮಧ್ಯಪ್ರವೇಶಿಸಿದ್ದು, ತನಿಖೆಗೆ ಭಾರತ ಸಹಕರಿಸಲಿ ಎಂದಿದೆ. ಮತ್ತೊಂದೆಡೆ, ಕೆನಡಾ ಆರೋಪ ಮಾಡುವ ಬದಲು ಸಾಕ್ಷ್ಯ ಒದಗಿಸಲಿ ಎಂದು ಭಾರತ ಪ್ರತ್ಯುತ್ತರ ಕೊಟ್ಟಿದೆ.

Exit mobile version