ನವದೆಹಲಿ: ದಿಲ್ಲಿ ಮದ್ಯ ನೀತಿ ಹಗರಣದಲ್ಲಿ ಬಂಧಿಸ್ಪಟ್ಟ ಬಿಆರ್‌ಎಸ್ (Bharat Rashtra Samithi) ನಾಯಕಿ, ಎಂಎಲ್‌ಸಿ ಕೆ. ಕವಿತಾ (K Kavitha) ಅವರಿಗೆ ಕೊನೆಗೂ ರಿಲೀಫ್ ಸಿಕ್ಕಿದೆ. ಅವರಿಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ (ಆಗಸ್ಟ್ 27) ಜಾಮೀನು ಮಂಜೂರು ಮಾಡಿದೆ. ಮಾರ್ಚ್‌ನಲ್ಲಿ ಜಾರಿ ನಿರ್ದೇಶನಾಲಯ (Enforcement Directorate) ಮತ್ತು ಒಂದು ತಿಂಗಳ ನಂತರ ಸಿಬಿಐ ಕವಿತಾ ಅವರನ್ನು ಬಂಧಿಸಿತ್ತು. ಇದೀಗ ಹಲವು ದಿನಗಳ ನಂತರ ಅವರಿಗೆ ಷರತ್ತುಬದ್ಧ ಜಾಮೀನು ಲಭಿಸಿದೆ.
ವಿಚಾರಣೆಯ ವೇಳೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು, ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಕೆ.ಕವಿತಾ ಭಾಗಿಯಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಯಾವ ಸಾಕ್ಷ್ಯ ಇದೆ ಎಂಬುದನ್ನು ತೋರಿಸಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ಕೇಳಿದೆ.
ಈ ಪ್ರಕರಣದಲ್ಲಿ ಜಾಮೀನು ಪಡೆದ ಎರಡನೇ ನಾಯಕಿ ಕವಿತಾ. ಕಳೆದ ವರ್ಷ ಫೆಬ್ರವರಿಯಲ್ಲಿ ಬಂಧಿಸಲ್ಪಟ್ಟ ಮನೀಷ್ ಸಿಸೋಡಿಯಾ ಅವರನ್ನು ಈ ತಿಂಗಳ ಆರಂಭದಲ್ಲಿ ಬಿಡುಗಡೆ ಮಾಡಲಾಗಿತ್ತು. ಎರಡೂ ಸಂಸ್ಥೆಗಳಿಂದ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇ.ಡಿ ಪ್ರಕರಣದಲ್ಲಿ ಜಾಮೀನು ಪಡೆದಿದ್ದರೂ ಸಿಬಿಐ ಸಲ್ಲಿಸಿದ ಪ್ರಕರಣದಲ್ಲಿ ಇನ್ನೂ ಜಾಮೀನು ಪಡೆದಿಲ್ಲ. ಹೀಗಾಗಿ ಅವರು ಇನ್ನೂ ಜೈಲಿನಲ್ಲಿದ್ದಾರೆ.
ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿರುವ ಕೆ. ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿ, ಸುಮಾರು ನಾಲ್ಕು ತಾಸು ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಮಾರ್ಚ್ 15 ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.
ಜಾಮೀನು ಆದೇಶ ಹೊರಡಿಸಿದ ಸ್ವಲ್ಪ ಸಮಯದ ನಂತರ ಬಿಆರ್‌ಎಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, “ಕವಿತಾ ಅವರನ್ನು 166 ದಿನಗಳ ಕಾಲ ಅಕ್ರಮವಾಗಿ ಬಂಧಿಸಲಾಯಿತು. ಜತೆಗೆ ಯಾವುದೇ ಪುರಾವೆಗಳನ್ನು ಹಾಜರುಪಡಿಸರಿಲ್ಲ. ಕೊನೆಗೂ ರಾಜಕೀಯ ಪ್ರೇರಿತ ಪ್ರಕರಣದಲ್ಲಿ ನ್ಯಾಯ ಗೆದ್ದಿದೆʼʼ ಎಂದು ಬರೆದುಕೊಂಡಿದೆ.
#JusticePrevails – న్యాయం గెలిచింది
— BRS Party (@BRSparty) August 27, 2024
ఏ ఆధారాలు చూపకుండా అక్రమంగా 166 రోజులు జైల్లో పెట్టారు.. రాజకీయ ప్రేరేపిత కేసులో ఆఖరికి న్యాయమే గెలిచింది.
ఎమ్మెల్సీ @RaoKavitha గారికి సుప్రీం కోర్ట్ నుండి బెయిల్ మంజూరు. pic.twitter.com/dDEM5B9Phk
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿದೆ. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೀಪಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇ.ಡಿ ಹಾಗೂ ಸಿಬಿಐ ಅಧಿಕಾರಿಗಳು ಕೆ. ಕವಿತಾ ಅವರನ್ನು ವಿಚಾರಣೆ ನಡೆಸಿದೆ.
ಇಲ್ಲಿಯ ತನಕ ನಡೆದ ತನಿಖೆಯ ಪ್ರಕಾರ ಒಟ್ಟು 1,100 ಕೋಟಿ ರೂ. ಮೊತ್ತದ ಹಗರಣ ನಡೆದಿರುವುದು ಕಂಡು ಬಂದಿದೆ. ಕವಿತಾ, ಚಂಪ್ರೀತ್ ಸಿಂಗ್, ಪ್ರಿನ್ಸ್ ಕುಮಾರ್, ದಾಮೋದರ್ ಶರ್ಮಾ ಮತ್ತು ಅರವಿಂದ್ ಸಿಂಗ್ ಅವರು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿತ್ತು.
ಇದನ್ನೂ ಓದಿ: Arvind Kejriwal: “ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಸಂಚು”- ಸಂಚಲನ ಮೂಡಿಸ್ತಿದೆ ಆಪ್ ಆರೋಪ