ದೇಶ
Swami Nityananda: ನಮ್ಮದು ಗಡಿಯೇ ಇಲ್ಲದ ದೇಶ, ನಾನು ಹಿಂದು ಧರ್ಮದ ಗುರು; ನಿತ್ಯಾನಂದ ಘೋಷಣೆ
Swami Nityananda: ನಿತ್ಯಾನಂದನ ಕೈಲಾಸ ದೇಶದ ಕುರಿತು ಹಲವು ಅನುಮಾನಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ನಿತ್ಯಾನಂದನ ಮಾಧ್ಯಮ ಕಾರ್ಯದರ್ಶಿಯು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ನವದೆಹಲಿ: ಈಕ್ವೆಡಾರ್‌ನಲ್ಲಿ ದ್ವೀಪವೊಂದನ್ನು ಖರೀದಿಸಿ, ಅಲ್ಲಿಯೇ “ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ” ಎಂಬ ದೇಶ ನಿರ್ಮಿಸಿರುವ ಸ್ವಯಂಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದನ (Swami Nityananda) ಕುರಿತು ಭಾರತ ಮಾತ್ರವಲ್ಲ, ಅಮೆರಿಕ, ಬ್ರಿಟನ್‌ನಲ್ಲೂ ಚರ್ಚೆಯಾಗುತ್ತಿದೆ. ಅಲ್ಲದೆ, ಈತನು ಅಮೆರಿಕದ 30 ನಗರಗಳಿಗೆ ಒಪ್ಪಂದದ ಹೆಸರಿನಲ್ಲಿ ವಂಚಿಸಿರುವ ಕುರಿತು ಜಾಗತಿಕ ಮಾಧ್ಯಮಗಳು ವರದಿ ಮಾಡಿವೆ. ಹಾಗೆಯೇ, ಈತನ ದೇಶವು ಕಾಲ್ಪನಿಕ ಸೃಷ್ಟಿ ಎಂದೂ ಕರೆದಿವೆ. ಇದರ ಬೆನ್ನಲ್ಲೇ, “”ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸವು ಗಡಿಗಳೇ ಇಲ್ಲದ, ಸೇವೆಯೊಂದನ್ನೇ ದೃಷ್ಟಿಯಲ್ಲಿಟ್ಟುಕೊಂಡಿರುವ ದೇಶ. ನಾನು ಹಿಂದು ಧರ್ಮದ ಪ್ರಧಾನ ಗುರು” ಎಂಬುದಾಗಿ ಹೇಳಿದ್ದಾನೆ.
ನಿತ್ಯಾನಂದನ ದೇಶದ ಕುರಿತು ಟ್ವಿಟರ್ ಸೇರಿ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ನೋಂದಾಯಿತ ಪತ್ರಕರ್ತರ ಪ್ರಶ್ನೆಗಳಿಗೆನಿತ್ಯಾನಂದನ ಮಾಧ್ಯಮ ಕಾರ್ಯದರ್ಶಿಯು ಪ್ರತಿಕ್ರಿಯಿಸಿದ್ದಾರೆ. “ಕೈಲಾಸ ದೇಶವು ಜಗತ್ತಿನ ಹಲವು ಎನ್‌ಜಿಒಗಳು, ದೇವಾಲಯಗಳು, ಸಂಸ್ಥೆಗಳಿಂದ ನಡೆಯುತ್ತಿದೆ. ಹಾಗಾಗಿ, ಇದಕ್ಕೆ ಗಡಿ ಎಂಬುದಿಲ್ಲ. ಸೇವೆಯನ್ನೇ ಮನೋಧರ್ಮವನ್ನಾಗಿ ಇಟ್ಟುಕೊಂಡು ನಿರ್ಮಿಸಿರುವ ದೇಶ ಇದಾಗಿದೆ” ಎಂದು ತಿಳಿಸಿದ್ದಾರೆ.
ಪತ್ರಕರ್ತರ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
ಕೈಲಾಸ ದೇಶದ ಜನಸಂಖ್ಯೆ ಎಷ್ಟು?
ನಿತ್ಯಾನಂದನ ದೇಶದ ಲೊಕೇಷನ್, ಜನಸಂಖ್ಯೆ ಕುರಿತ ಕೇಳಿದ ಪ್ರಶ್ನೆಗೆ ಕಾರ್ಯದರ್ಶಿ ಉತ್ತರಿಸಿದರು. “ನಾವು ಪುರಾತನ ಹಿಂದು ನಾಗರಿಕತೆಯ ಪುನರುಜ್ಜೀವನದ ಕಾರ್ಯದಲ್ಲಿ ತೊಡಗಿದ್ದೇವೆ. ವಿಶ್ವಸಂಸ್ಥೆಯಿಂದ ಮಾನ್ಯತೆ ಪಡೆದ ಹಲವಾರು ಎನ್‌ಜಿಒಗಳ ಮೂಲಕ ಕಾರ್ಯನಿರ್ವಹಿಸಲಾಗುತ್ತಿದೆ. ಜಗತ್ತಿನ ಎನ್‌ಜಿಒಗಳು ನಮ್ಮ ದೇಶದ ಭಾಗವಾಗಿವೆ. ಹಾಗಾಗಿ, ನಮ್ಮ ದೇಶಕ್ಕೆ ಗಡಿಯೇ ಇಲ್ಲ” ಹೇಳಿದ್ದಾರೆ.
ಹಿಂದು ಧರ್ಮದ ಪ್ರಧಾನ ಗುರು
ನಿತ್ಯಾನಂದ ಯಾರು ಎಂದು ಕೇಳಿದ ಪ್ರಶ್ನೆಗೆ, “ನಿತ್ಯಾನಂದ ಪರಮಶಿವಂ ಅವರು ಕೈಲಾಸವನ್ನು ಪುನರುಜ್ಜೀವನಗೊಳಿಸಿದ, ಹಿಂದು ಧರ್ಮದ ಪ್ರಧಾನ ಗುರು ಆಗಿದ್ದಾರೆ. ಅವರು ಹಿಂದು ಧರ್ಮದ ಆಚಾರ-ವಿಚಾರಗಳನ್ನು ಸಂಪೂರ್ಣವಾಗಿ ತಿಳಿದುಕೊಂಡಿರುವ, ಹಿಂದು ಧರ್ಮದ ಗ್ರಂಥಗಳಲ್ಲಿ ಉಲ್ಲೇಖಿಸುವ ಅಂಶಗಳನ್ನು ಆಧರಿಸಿಯೇ ಬೋಧನೆ ಮಾಡುವ ಧರ್ಮಗುರು ಆಗಿದ್ದಾರೆ” ಎಂದು ಉತ್ತರಿಸಲಾಗಿದೆ.
ಭಾರತದಿಂದ ಓಡಿಬಂದಿದ್ದು ನಿಜವೇ?
ಭಾರತದಲ್ಲಿ ಅಪರಾಧ ಎಸಗಿ, ಪರಾರಿಯಾಗಿರುವ ಕುರಿತ ಆರೋಪ ನಿಜವೇ ಎಂಬ ಪ್ರಶ್ನೆಗೂ ಉತ್ತರಿಸಲಾಗಿದೆ. “ನಿತ್ಯಾನಂದ ಅವರು ಯಾವುದೇ ಅಪರಾಧ ಎಸಗಿಲ್ಲ. ಅವರು ನಿರಪರಾಧಿ ಎಂಬ ಕುರಿತು ಜಗತ್ತಿನ ಸಂಸ್ಥೆಗಳೇ ಹೇಳಿವೆ” ಎಂಬುದಾಗಿ ತಿಳಿಸಲಾಗಿದೆ. ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದನು ಅತ್ಯಾಚಾರ ಸೇರಿ ಹಲವು ಪ್ರಕರಣಗಳಲ್ಲಿ ಸಿಲುಕಿದ್ದು, 2019ರಲ್ಲಿಯೇ ಭಾರತದಿಂದ ಕಾಲ್ಕಿತ್ತಿದ್ದಾನೆ.
ಇದನ್ನೂ ಓದಿ: Swami Nithyananda: ʻಸಿಸ್ಟರ್ ಸಿಟಿʼ ಎಂದು ಅಮೆರಿಕದ 30 ನಗರಗಳನ್ನು ವಂಚಿಸಿದ ಸ್ವಾಮಿ ನಿತ್ಯಾನಂದ!
ದೇಶ
Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ?
Raghav-Parineeti: ಆಪ್ ನಾಯಕ ರಾಘವ್ ಚಡ್ಡಾ ಹಾಗೂ ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಅವರು ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ. ಇವರಿಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಮಾತುಗಳಿಗೆ ವಾರದಲ್ಲಿಯೇ ನಡೆದ ಮೂರನೇ ಭೇಟಿಯು ಪುಷ್ಟಿ ನೀಡಿದೆ.
ನವದೆಹಲಿ: ಪಂಜಾಬ್ ಆಪ್ ನಾಯಕ, ರಾಜ್ಯಸಭೆ ಸದಸ್ಯ ರಾಘವ್ ಚಡ್ಡಾ ಹಾಗೂ ಬಾಲಿವುಡ್ ನಟಿ ಪರಿಣೀತಿ ಚೋಪ್ರಾ (Raghav-Parineeti) ಅವರು ಕೆಲ ದಿನಗಳ ಹಿಂದೆ ಒಟ್ಟಿಗೆ ಕಾಣಿಸಿಕೊಂಡಿದ್ದು ಭಾರಿ ಸುದ್ದಿಯಾಗಿತ್ತು. ಇಬ್ಬರೂ ಹೋಟೆಲ್‌ನಲ್ಲಿ ಕಾಣಿಸಿಕೊಂಡ ಕಾರಣ ಇಬ್ಬರೂ ವದಂತಿಗಳಿಗೆ ಆಹಾರವಾಗಿದ್ದರು. ಈ ಕುರಿತು ರಾಘವ್ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಅವರಿಗೆ ಪತ್ರಕರ್ತರು ಪ್ರಶ್ನೆ ಕೇಳಿದ್ದರು. ಇಬ್ಬರೂ ಪ್ರೀತಿಸುತ್ತಿದ್ದಾರೆ, ಮದುವೆಯಾಗುತ್ತಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಆದರೆ, ಈ ಕುರಿತು ರಾಘವ್ ಚಡ್ಡಾ ಹಾರಿಕೆಯ ಉತ್ತರ ನೀಡಿದ್ದರು. ಈಗ ಜೋಡಿಯು ದೆಹಲಿ ವಿಮಾನ ನಿಲ್ದಾಣದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದು, ಇದು ವಾರದಲ್ಲಿ ಮೂರನೇ ಭೇಟಿಯಾಗಿದೆ. ಹಾಗಾಗಿ, ಇಬ್ಬರೂ ಜೋಡಿ ಹಕ್ಕಿಗಳಾಗಿದ್ದಾರೆ ಎಂಬ ಮಾತಿಗೆ ಹಚ್ಚಿನ ಪುಷ್ಟಿ ಬಂದಂತಾಗಿದೆ.
ಮಾರ್ಚ್ 29ರಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪರಿಣೀತಿ ಚೋಪ್ರಾ ಅವರನ್ನು ಪಿಕ್ ಮಾಡಲು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ರಾಘವ್ ಚಡ್ಡಾ ಕಾರಿನಲ್ಲಿಯೇ ಪರಿಣೀತಿ ಚೋಪ್ರಾ ಅವರು ವಿಮಾನ ನಿಲ್ದಾಣದಿಂದ ತೆರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಬ್ಬರೂ ಕಾಣಿಸಿಕೊಂಡ ಫೋಟೊಗಳು ಪಾಪರಾಜಿಗಳಿಗೆ ಸಿಕ್ಕಿದ್ದು, ಫೋಟೊಗಳು ವೈರಲ್ ಆಗಿವೆ. ಅಲ್ಲದೆ, ಇಬ್ಬರೂ ಪ್ರೀತಿಸುತ್ತಿದ್ದಾರೆ ಎಂಬುದಾಗಿ ಜಾಲತಾಣಗಳಲ್ಲಿ ಮತ್ತೆ ಹೇಳಲು ಆರಂಭಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿಯೇ ಮಾಧ್ಯಮದವರು ಇಬ್ಬರನ್ನೂ ಮಾತನಾಡಿಸಲು ಯತ್ನಿಸಿದರಾದರೂ, ಜೋಡಿಯು ಪ್ರತಿಕ್ರಿಯಿಸದೆ ತೆರಳಿದೆ.
ಏರ್‌ಪೋರ್ಟ್‌ನಲ್ಲಿ ಜೋಡಿ ಹಕ್ಕಿ
ಒಟ್ಟಿಗೆ ಊಟ, ಒಂದೇ ಕಾರಿನಲ್ಲಿ ತಿರುಗಾಟ
ಕಳೆದ ಒಂದು ವಾರದಲ್ಲಿ ರಾಘವ್ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಮೂರು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಮಾರ್ಚ್ 22ರಂದು ರಾಘವ್ ಹಾಗೂ ಪರಿಣೀತಿ ಅವರು ಮುಂಬೈನ ರೆಸ್ಟೋರೆಂಟ್ ಒಂದರಲ್ಲಿ ಒಟ್ಟಿಗೆ ಊಟಕ್ಕೆ ತೆರಳಿದ್ದರು. ಇಬ್ಬರೂ ಒಟ್ಟಿಗೆ ಹೋಟೆಲ್ ಪ್ರವೇಶಿಸುವ ಹಾಗೂ ಹೋಟೆಲ್‌ನಿಂದ ಹೊರಬರುವ ವಿಡಿಯೊ ಹಾಗೂ ಫೋಟೊಗಳು ಲಭ್ಯವಾಗಿವೆ. ಇದಾದ ಮರುದಿನವೇ (ಮಾರ್ಚ್ 23) ಇಬ್ಬರೂ ಮತ್ತೆ ಇನ್ನೊಂದು ರೆಸ್ಟೋರೆಂಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹೀಗೆ ಪದೇಪದೆ ಒಟ್ಟಿಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡೇಟಿಂಗ್ ಕುರಿತು ಮಾತುಗಳು ಕೇಳಿಬರುತ್ತಿವೆ.
ಹಾರಿಕೆಯ ಉತ್ತರ ನೀಡಿದ್ದ ಚಡ್ಡಾ
ಪರಿಣೀತಿ ಜತೆಗಿನ ಡೇಟಂಗ್ ಕುರಿತು ಇತ್ತೀಚೆಗೆ ಸುದ್ದಿಗಾರರು ಪ್ರಶ್ನೆ ಕೇಳುತ್ತಲೇ ನಾಚಿ ನೀರಾಗಿದ್ದ ರಾಘವ್ ಚಡ್ಡಾ, “ನನಗೆ ಪರಿಣೀತಿ ಬಗ್ಗೆ ಅಲ್ಲ, ರಾಜನೀತಿ ಬಗ್ಗೆ ಪ್ರಶ್ನೆ ಕೇಳಿ” ಎಂದು ನಕ್ಕಿದ್ದರು. ಹಾಗೆಯೇ, ನೀವು ಮದುವೆ ಆಗುವುದು ಯಾವಾಗ ಎಂದು ಕೇಳಿದ ಪ್ರಶ್ನೆಗೆ, “ನಾನು ಮದುವೆಯಾಗುವಾಗ ನಿಮಗೆ ಖಂಡಿತವಾಗಿಯೂ ತಿಳಿಸುತ್ತೇನೆ” ಎಂದು ಹೇಳುವ ಮೂಲಕ ಜಾರಿಕೊಂಡಿದ್ದರು.
ಪಂಜಾಬ್ ಆಪ್ ನಾಯಕ, ರಾಜ್ಯಸಭೆಯ ಯುವ ಸದಸ್ಯರಾಗಿರುವ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಒಟ್ಟಿಗೆ ಓದಿದ್ದಾರೆ. ಹಾಗಾಗಿ, ಇಬ್ಬರಿಗೂ ಮೊದಲಿನಿಂದಲೂ ಪರಿಚಯ ಇದೆ ಎಂದು ತಿಳಿದುಬಂದಿದೆ. ಆದರೆ, ಮೂಲಗಳ ಪ್ರಕಾರ, ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಇಬ್ಬರೂ ಆತ್ಮೀಯರಾಗಿದ್ದಾರೆ. ಹಾಗಾಗಿ, ಡೇಟಿಂಗ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Raghav Chadha: ಆಪ್ ನಾಯಕ ರಾಘವ್ ಚಡ್ಡಾ, ಪರಿಣೀತಿ ಚೋಪ್ರಾ ಈಗ ಜೋಡಿ ಹಕ್ಕಿ? ಜತೆಗೇ ಸುತ್ತಿ ಚಡ್ಡಾ ಹೇಳಿದ್ದೇನು?
ದೇಶ
Google Layoffs: ಗೂಗಲ್‌ನಿಂದ ವಜಾಗೊಂಡ ನೌಕರರಿಗೆ ಸಿಗಲಿದೆ 2.6 ಕೋಟಿ ರೂ., ಇವರಿಗೆ ಬೇರೆ ನೌಕರಿಯೇ ಬೇಕಿಲ್ಲ
Google Layoffs: ಐರ್ಲೆಂಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲ ನೌಕರರಿಗೆ ಮಾತ್ರ ಕೋಟ್ಯಂತರ ರೂಪಾಯಿ Severance Pay ಸಿಗಲಿದೆ. ಆದರೂ, ಗೂಗಲ್‌ನಿಂದ ವಜಾಗೊಂಡ ಯಾವ ನೌಕರನಿಗೂ ಕಂಪನಿಯು ಕಡಿಮೆ ಮೊತ್ತ ನೀಡಿ ಕಳುಹಿಸುತ್ತಿಲ್ಲ ಎಂಬುದು ಗಮನಾರ್ಹ.
ನವದೆಹಲಿ: ಟ್ವಿಟರ್, ಮೆಟಾ, ಮೈಕ್ರೋಸಾಫ್ಟ್, ಅಮೆಜಾನ್, ಆಕ್ಷೆಂಚರ್, ಫೋರ್ಡ್ ಸೇರಿ ಜಗತ್ತಿನ ಅಗ್ರ, ಬಹುರಾಷ್ಟ್ರೀಯ ಕಂಪನಿಗಳು ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. ಜಾಗತಿಕ ಆರ್ಥಿಕ ಹಿಂಜರಿತದ ಭೀತಿ, ಕೊರೊನಾ ಸಮಯದಲ್ಲಿ ಉಂಟಾದ ನಷ್ಟ ತೂಗಿಸುವಿಕೆ ಸೇರಿ ಹಲವು ಕಾರಣಗಳಿಂದಾಗಿ ಸಾಲು ಸಾಲಾಗಿ ಕಂಪನಿಗಳು ನೌಕರರನ್ನು ವಜಾಗೊಳಿಸುತ್ತಿವೆ. ಇದರಿಂದಾಗಿ ಜಾಗತಿಕ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರೂ ಭೀತಿಯಲ್ಲಿಯೇ ಕಾರ್ಯನಿರ್ವಹಿಸುವ ಪರಿಸ್ಥಿತಿ ಎದುರಾಗಿದೆ. ಆದರೆ, ಗೂಗಲ್ ಕಂಪನಿಯಿಂದ (Google Layoffs) ವಜಾಗೊಂಡವರು ಮಾತ್ರ ಹೆಚ್ಚು ಯೋಚನೆ ಮಾಡಬೇಕಿಲ್ಲ. ಏಕೆಂದರೆ, ಅವರಿಗೆ ಸಿಗುವ ಬೇರ್ಪಡಿಸುವಿಕೆ ಮೊತ್ತ ಅಥವಾ ಕಂಪನಿಯು ಉದ್ಯೋಗಿಯನ್ನು ವಜಾಗೊಳಿಸಿದ ಬಳಿಕ ನೀಡುವ ಹಣಕಾಸು ಪರಿಹಾರದ ಪ್ಯಾಕೇಜ್ (Severance Pay) ಅಷ್ಟರಮಟ್ಟಿಗೆ ಇದೆ.
ಹೌದು, ಗೂಗಲ್ ಇತ್ತೀಚೆಗೆ ಜಾಗತಿಕವಾಗಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ. ಇವರಲ್ಲಿ ಐರ್ಲೆಂಡ್‌ನಲ್ಲಿ ಕೆಲಸ ಮಾಡುತ್ತಿದ್ದ 240 ಉದ್ಯೋಗಿಗಳು ಕೂಡ ಇದ್ದು, ಅವರಿಗೆ ವಜಾಗೊಳಿಸುವ ಕುರಿತು ಮಾಹಿತಿ ನೀಡಲಾಗಿದೆ. ಸೇಲ್ಸ್ ವಿಭಾಗದ 85, ಟೆಕ್ನಾಲಜಿ ವಿಭಾಗದ 80 ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ. ಆದರೆ, ಇವರಲ್ಲಿಯೇ ಕೆಲವು ಮಂದಿಗೆ ಹಣಕಾಸು ಪರಿಹಾರದ ಪ್ಯಾಕೇಜ್ 2.6 ಕೋಟಿ ರೂಪಾಯಿವರೆಗೆ ಸಿಗಲಿದೆ. ಹಾಗಾಗಿ, ವಜಾಗೊಂಡಿರುವ ನೌಕರರಿಗೆ ಸಿಗುವ ಮೊತ್ತವನ್ನು ನೋಡಿದರೆ ಅವರು ಬೇರೆ ಕೆಲಸ ಹುಡುಕುವ ಪ್ರಮೇಯವೇ ಬರುವುದಿಲ್ಲ ಎಂಬುದಾಗಿ ಅಭಿಪ್ರಾಯ ವ್ಯಕ್ತವಾಗಿದೆ.
ವಜಾಗೊಳ್ಳುತ್ತಿರುವ ನೌಕರರಿಗೆ ಕಂಪನಿಯು Severance Pay ನೀಡುವುದಾಗಿ ಭರವಸೆ ನೀಡಿದೆ. ಐರ್ಲೆಂಡ್‌ನಲ್ಲಿ 2003ರಲ್ಲಿ ಕಚೇರಿಯನ್ನು ತೆರೆದಿದ್ದು, ಕಚೇರಿ ಆರಂಭವಾದಾಗಿನಿಂದ ಇದುವರೆಗೆ ಕಾರ್ಯನಿರ್ವಹಿಸಿದ ನೌಕರರಿಗೆ ಇಷ್ಟು ಮೊತ್ತದ ಪ್ಯಾಕೇಜ್ ಸಿಗಲಿದೆ. ಹೀಗೆ, ಸುದೀರ್ಘ ಅವಧಿಗೆ ಕಾರ್ಯನಿರ್ವಹಿಸಿದ ನೌಕರರಿಗೆ ಪ್ರತಿವರ್ಷದಂತೆ ಲೆಕ್ಕ ಹಾಕಿ ಆರು ವಾರಗಳ ಹೆಚ್ಚುವಳಿ ಸಂಬಳ, 30 ದಿನಗಳ ಗಳಿಕೆ ರಜೆ ಸೇರಿ ಅವರ ಫೈನಲ್ ಸೆಟಲ್‌ಮೆಂಟ್ ಮೊತ್ತವು 2.6 ಕೋಟಿ ಆಗಲಿದೆ ಎಂದು ತಿಳಿದುಬಂದಿದೆ.
ಅಮೆರಿಕದ ನೌಕರರಿಗೂ ಸಿಗಲಿದೆ ಹೆಚ್ಚಿನ ಮೊತ್ತ
ಅಮೆರಿಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೂಗಲ್ ಉದ್ಯೋಗಿಗಳಿಗೂ ಹೆಚ್ಚಿನ ಪ್ರಮಾಣದ Severance Pay ಪ್ಯಾಕೇಜ್ ಸಿಗಲಿದೆ. ಅಮೆರಿಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರಿಗೆ 16 ವಾರಗಳ ಸಂಬಳ, 16 ವಾರದ ಜಿಎಸ್‌ಯು ವೆಸ್ಟಿಂಗ್, 2022ರ ಬೋನಸ್, ಆರು ತಿಂಗಳವರೆಗೆ ವಿಮೆ ವಿಸ್ತರಣೆ, ವಲಸೆ ಬಂದವರು ಬೇರೆ ದೇಶಗಳಿಗೆ ತೆರಳಲು ಅಥವಾ ತಮ್ಮ ದೇಶಗಳಿಗೆ ಮರಳಲು ನೆರವು ಒದಗಿಸುವುದು ಸೇರಿ ಹತ್ತಾರು ಸೌಲಭ್ಯ ನೀಡಿದೆ. ಆದರೆ, ಐರ್ಲೆಂಡ್‌ನಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳಿಗೆ ಮಾತ್ರ ಹೆಚ್ಚಿನ ಮೊತ್ತ ನೀಡಲಾಗಿದೆ.
ಕಳೆದ ಜನವರಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಅವರು ಉದ್ಯೋಗಿಗಳಿಗೆ ಇ-ಮೇಲ್ ಕಳುಹಿಸುವ ಮೂಲಕ ಕೆಲಸದಿಂದ ವಜಾಗೊಳಿಸುತ್ತಿರುವ ತೀರ್ಮಾನವನ್ನು ಪ್ರಕಟಿಸಿದ್ದರು. ಹಾಗೆಯೇ, “ಇಂತಹ ಕಠಿಣ ತೀರ್ಮಾನದಿಂದ ನನ್ನ ಮನಸ್ಸಿಗೆ ನೋವಾಗಿದ್ದು, ಇದರ ಸಂಪೂರ್ಣ ಹೊಣೆಯನ್ನು ನಾನೇ ಹೊರುತ್ತೇನೆ” ಎಂದು ಹೇಳಿದ್ದರು. ಭಾರತದ 450 ಜನ ಗೂಗಲ್‌ನಿಂದ ವಜಾಗೊಂಡಿದ್ದಾರೆ.
ಇದನ್ನೂ ಓದಿ: xooglers: ಗೂಗಲ್‌ನಿಂದ ಕೆಲಸ ಕಳೆದುಕೊಂಡ 7 ಮಂದಿ ಹೊಸ ಕಂಪನಿಯನ್ನೇ ಆರಂಭಿಸಿದರು!
ಕರ್ನಾಟಕ
ವಿಸ್ತಾರ TOP 10 NEWS: ಕರ್ನಾಟಕದ ರಾಜಕೀಯ ಪಲ್ಸ್‌ನಿಂದ, ಸಿದ್ದುಗೆ ವರುಣ ಟೆನ್ಶನ್‌ವರೆಗಿನ ಪ್ರಮುಖ ಸುದ್ದಿಗಳಿವು
ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ದಿನದ ಪ್ರಮುಖ ಬೆಳವಣಿಗೆಗಳಲ್ಲಿ ಪ್ರಮುಖ ಸುದ್ದಿಗಳ ಗುಚ್ಛವೇವಿಸ್ತಾರ TOP 10 NEWS
1. Pulse of Karnataka 2: ಹಳೆ ಮೈಸೂರು, ಕರಾವಳಿ, ಮಲೆನಾಡು, ಮಧ್ಯಕರ್ನಾಟಕದ ಜನರ ನಾಡಿ ಮಿಡಿತ
ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಮಾರ್ಚ್ ಮೊದಲ ವಾರದಲ್ಲಿ ಪ್ರಕಟವಾಗಿದ್ದ ಮೊದಲ ಆವೃತ್ತಿ ನಂತರ ಇದೀಗ ಪಲ್ಸ್ ಆಫ್ ಕರ್ನಾಟಕ ಎರಡನೇ ಆವೃತ್ತಿ ಪ್ರಸಾರ ಆರಂಭವಾಗಿದೆ. ಮೊದಲ ದಿನದಂದು ಹಳೆ ಮೈಸೂರು, ಕರಾವಳಿ, ಮಲೆನಾಡು, ಮಧ್ಯಕರ್ನಾಟಕದ ಜನರ ನಾಡಿ ಮಿಡಿತವನ್ನು ಪ್ರಕಟಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಎಲ್ಲ ಪ್ರದೇಶದ ಚಿತ್ರಣವನ್ನು ನೀಡಲಾಗುತ್ತದೆ.
–Pulse of Karnataka 2: ಹಳೆ ಮೈಸೂರು ವಲಯ: JDS ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಆಗುವರೇ ಕಿಂಗ್?
–Pulse of Karnataka 2: ಮಧ್ಯ ಕರ್ನಾಟಕ: ಸೀರೆ, ಮಿಕ್ಸಿ, ಕುಕ್ಕರ್ ನೀಡಿದರೆ ಮತಗಳು ಸಿಗುತ್ತವೆಯೇ?
–Pulse of Karnataka 2: ಕರಾವಳಿ-ಮಲೆನಾಡು: ಬಿಜೆಪಿಗೆ ಮತ ಸೆಳೆಯಲು ಬಿ.ಎಸ್. ಯಡಿಯೂರಪ್ಪ ಎಷ್ಟು ಅನಿವಾರ್ಯ?
2. ಕೋಲಾರ ಬಳಿಕ ವರುಣದಲ್ಲೂ ಸಿದ್ದುಗೆ ಟೆನ್ಶನ್; ವಿಜಯೇಂದ್ರ ಕಣಕ್ಕಿಳಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್?
ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಕೋಲಾರ ಬಳಿಕ ಇದೀಗ ಸುರಕ್ಷಿತ ಎಂದು ಹೇಳಲಾದ ವರುಣದಲ್ಲೂ ಟೆನ್ಶನ್ ಶುರುವಾಗಿದೆ. ಇದಕ್ಕೆ ಕಾರಣ ಬಿಜೆಪಿ ಮಾಡಿಕೊಂಡಿದೆ ಎನ್ನಲಾದ ಮಾಸ್ಟರ್ ಪ್ಲ್ಯಾನ್. ಇಲ್ಲಿ ಬಿಜೆಪಿಯು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ತಂತ್ರ ಹೂಡಿದೆ ಎನ್ನಲಾಗಿದೆ. ಇದೇ ಸಂಕೇತವನ್ನು ಬಿಎಸ್‌ವೈ ಕೂಡಾ ನೀಡಿದ್ದಾರೆ.ವಿಜಯೇಂದ್ರ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿದ್ದು, ಈ ಬೆಳವಣಿಗೆಗೆ ಪುಷ್ಟಿ ನೀಡಿದೆ. ಪೂರ್ಣ ವರದಿಗೆ ಕ್ಲಿಕ್ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ವರದಿ : ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್.ವೈ
3. ಕ್ರೈಸ್ತ, ಜೈನರಿಗೆ ಮೀಸಲಾತಿ ಮುಂದುವರಿಕೆ; ಮುಸ್ಲಿಮರು ಮಾತ್ರ ಹೊರಕ್ಕೆ: ವರ್ಗೀಕರಣದ ಕುರಿತು ಚರ್ಚೆ
ಎಸ್‌ಸಿಎಸ್‌ಟಿ ಸಮುದಾಯಕ್ಕೆ ಒಳಮೀಸಲಾತಿ ಹಂಚಿಕೆ ನಂತರ ಒಕ್ಕಲಿಗೆ ಹಾಗೂ ವೀರಶೈವ ಲಿಂಗಾಯತರ ಮೀಸಲಾತಿ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದರ ಕುರಿತು ಕೆಲವು ಜಿಜ್ಞಾಸೆಗಳು ಮೂಡಿವೆ. ಸಂವಿಧಾನಬಾಹಿರ ಎಂದು ಮುಸ್ಲಿಮರನ್ನು ಮೀಸಲಿನಿಂದ ಹೊರಗಿಟ್ಟ ಸರ್ಕಾರ, ಜೈನ್ ಹಾಗೂ ಕ್ರಿಶ್ಚಿಯನ್ನರನ್ನು ಹಾಗೆಯೇ ಉಳಿಸಿಕೊಂಡಿದೆ. ಸರ್ಕಾರದ ಈ ಸರ್ಕಸ್ ಭಾರಿ ಚರ್ಚೆಗೆ ಕಾರಣವಾಗಿದೆ. ಪೂರ್ಣ ವರದಿಗೆ ಕ್ಲಿಕ್ ಮಾಡಿ
ಪೂರಕ ವರದಿ : ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಯಡಿಯೂರಪ್ಪ
4.ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ಆಂತರಿಕ ಚುನಾವಣೆ
ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಇತಿಹಾಸದಲ್ಲೆ ಮೊಟ್ಟ ಮೊದಲ ಬಾರಿಗೆ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಕಾರ್ಯಕರ್ತರ ಆಂತರಿಕ ಚುನಾವಣೆಯನ್ನು ಶುಕ್ರವಾರ ರಾಜ್ಯಾದ್ಯಂತ ನಡೆಸಲಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಚುನಾವಣಾ ಅಕ್ರಮ: ತುಮಕೂರು ಗ್ರಾಮಾಂತರ ಜೆಡಿಸ್ ಶಾಸಕ ಗೌರಿಶಂಕರ್ ಶಾಸಕತ್ವದಿಂದ ಅನರ್ಹ
ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಜಾತ್ಯತೀತ ಜನತಾದಳಕ್ಕೆ ತೀವ್ರ ಹಿನ್ನಡೆಯಾಗಿದೆ. ತುಮಕೂರು ಗ್ರಾಮಾಂತರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರನ್ನು ರಾಜ್ಯ ಹೈಕೋರ್ಟ್ ಶಾಸಕತ್ವದಿಂದ ಅನರ್ಹಗೊಳಿಸಿದೆ. ಆದರೆ, ಈ ಆದೇಶ ಈ ಅವಧಿಗೆ ಮಾತ್ರ ಸೀಮಿತವಾಗಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ಹಿಂದಿ ಹೇರಿಕೆ ವಿರೋಧಕ್ಕೆ ಮಣಿದ ಕೇಂದ್ರ, ಮೊಸರು ಪ್ಯಾಕೆಟ್‌ನಲ್ಲಿ ‘ದಹಿ’ ಎಂಬ ಮುದ್ರಣ ಆದೇಶ ವಾಪಸ್
ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಯತ್ನಕ್ಕೆ ಕರ್ನಾಟಕ ಹಾಗೂ ತಮಿಳುನಾಡು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೊಸರಿನ ಮೇಲೆ ಹಿಂದಿಯ ದಹಿ (Dahi Row) ಎಂಬುದಾಗಿ ಮುದ್ರಿಸಬೇಕು ಎಂಬ ಆದೇಶವನ್ನು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ(FSSAI)ವು ಹಿಂಪಡೆದಿದೆ. ಆ ಮೂಲಕ ಕರ್ನಾಟಕ ಹಾಗೂ ತಮಿಳುನಾಡು ಸೇರಿ ಹಲವೆಡೆ ವ್ಯಕ್ತವಾದ ವಿರೋಧಕ್ಕೆ ಕೇಂದ್ರ ಸರ್ಕಾರ ಮಣಿದಂತಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
7. ಮೋದಿ ಓಡಿಸಿ, ದೇಶ ಉಳಿಸಿ ಬಳಿಕ ದೇಶಾದ್ಯಂತ ಆಪ್‌ನಿಂದ ಪೋಸ್ಟರ್ ಕ್ಯಾಂಪೇನ್ ಶುರು!
ನವದೆಹಲಿ: ಮೋದಿಯನ್ನು ಓಡಿಸಿ, ದೇಶವನ್ನು ಉಳಿಸಿ ಅಭಿಯಾನದ ಬಳಿಕ ಆಮ್ ಆದ್ಮಿ ಪಾರ್ಟಿ, ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಪೋಸ್ಟರ್ ಕ್ಯಾಂಪೇನ್ ಗುರುವಾರ ಆರಂಭಿಸಿದೆ. ಒಟ್ಟು 11 ಭಾಷೆಗಳಲ್ಲಿ ದೇಶಾದ್ಯಂತ ಮೋದಿ ವಿರೋಧಿ ಪೋಸ್ಟರ್‌ಗಳನ್ನು ಪ್ರದರ್ಶಿಸಿದೆ. ಈ ಹಿಂದೆ, ಮೋದಿಯನ್ನು ಓಡಿಸಿ, ದೇಶವನ್ನು ಉಳಿಸಿ ಪೋಸ್ಟರ್‌ಗಳನ್ನು ದಿಲ್ಲಿಯ ಬೀದಿಗಳಲ್ಲಿ ಅಂಟಿಸಲಾಗಿತ್ತು. ಈ ಸಂಬಂಧ ದಿಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ನೂರು ಎಫ್ಐಆರ್‌ಗಳನ್ನು ದಾಖಲಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
8. IPL 2023: ಆರ್ಸಿಬಿಗೆ ಆಘಾತ; ಮೊದಲ ಪಂದ್ಯಕ್ಕೆ ಸ್ಟಾರ್ ಆಟಗಾರರು ಅಲಭ್ಯ
ಕಳೆದ 15 ಆವೃತ್ತಿಯ ಐಪಿಎಲ್ನಲ್ಲಿ ಈ ಸಲ ಕಪ್ ನಮ್ದೇ ಎಂದು ಹೇಳುತ್ತಲೇ ಬಂದಿರುವ ಆರ್ಸಿಬಿ ಒಂದು ಬಾರಿಯೂ ಕಪ್ ಗೆಲ್ಲುವಲ್ಲಿ ಯಶಸ್ಸು ಕಂಡಿಲ್ಲ. ಈ ಬಾರಿಯಾದರೂ ಕಪ್ ಗೆಲ್ಲಬೇಕೆಂದಿದ್ದ ಆರ್ಸಿಬಿಗೆ ಗಾಯದ ಸಮಸ್ಯೆಯೊಂದು ಅಡ್ಡಿಯಾದಂತೆ ತೋರುತ್ತಿದೆ. ಆರ್ಸಿಬಿ ತನ್ನ ಐಪಿಎಲ್ ಅಭಿಯಾನವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೆ ಸ್ಟಾರ್ ಆಟಗಾರರಿಬ್ಬರು ಅಲಭ್ಯರಾಗಲಿದ್ದಾರೆ ಎಂದು ತಂಡದ ಮೂಲಗಳು ತಿಳಿಸಿವೆ. ಪೂರ್ಣ ವರದಿಗೆ ಲಿಂಕ್ ಕ್ಲಿಕ್ ಮಾಡಿ
9. Import duty exemption : ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಎಲ್ಲ ಔಷಧಗಳ ದರ ಇಳಿಕೆ
ಕೇಂದ್ರ ಸರ್ಕಾರವು ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಎಲ್ಲ ಔಷಧ ಹಾಗೂ ಆಹಾರಗಳ ದರ ಇಳಿಕೆಗೆ ಪೂರಕವಾಗಿ, ಅವುಗಳಿಗೆ ಆಮದು ಸುಂಕದಿಂದ ವಿನಾಯಿತಿ (Import duty exemption) ನೀಡಿದೆ. ಏಪ್ರಿಲ್ 1ರಿಂದ ಈ ಆಮದು ಸುಂಕ ವಿನಾಯಿತಿ ಅನ್ವಯವಾಗಲಿದೆ. ಪೂರ್ಣ ವರದಿಗೆ ಕ್ಲಿಕ್ ಮಾಡಿ
10. ‘ಲೋಕವನ್ನೇ ಗೆದ್ದವನೆ’; ಮೋದಿ ಭಾವಚಿತ್ರಕ್ಕೆ ಮುತ್ತು ಕೊಟ್ಟ ಕರ್ನಾಟಕದ ರೈತ, ವಿಡಿಯೊ ವೈರಲ್
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಎಷ್ಟೇ ಟೀಕೆ ಮಾಡಿದರೂ, ಬೆಲೆಯೇರಿಕೆ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದರೂ, ಪ್ರಧಾನಿ ಮೋದಿ ಅವರ ಮೇಲೆ ಜನರಿಗಿರುವ ಪ್ರೀತಿ, ಬೆಂಬಲದಲ್ಲಿ ಮಾತ್ರ ಕಡಿಮೆಯಾಗಿಲ್ಲ. ದೇಶದ ಯಾವುದೇ ಮೂಲೆಗೆ ಹೋದರೂ ನರೇಂದ್ರ ಮೋದಿ ಅವರಿಗೆ ಜನ ಭಾರಿ ಬೆಂಬಲ ವ್ಯಕ್ತಪಡಿಸುತ್ತಾರೆ. ಗಂಟೆಗಟ್ಟಲೆ ನಿಂತು, ಜನರ ಗದ್ದಲದ ಮಧ್ಯೆಯೂ ಮೋದಿ ಅವರನ್ನು ಕಣ್ತುಂಬಿಕೊಳ್ಳುತ್ತಾರೆ. ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ ಕರ್ನಾಟಕದ ರೈತರೊಬ್ಬರು ಬಸ್ ಮೇಲಿರುವ ಮೋದಿ ಅವರ ಭಾವಚಿತ್ರಕ್ಕೆ ಮುತ್ತು ಕೊಟ್ಟಿದ್ದಾರೆ. ಈ ವಿಡಿಯೊ ಈಗ ವೈರಲ್ ಆಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಇನ್ನಷ್ಟು ಪ್ರಮುಖ ಸುದ್ದಿಗಳು
- Indore Temple Tragedy: ಇಂದೋರ್ ದೇಗುಲದಲ್ಲಿ ಮೆಟ್ಟಿಲುಬಾವಿ ಕುಸಿದು 13 ಜನ ಸಾವು; ಮೋದಿ ಸಂತಾಪ
- World Master Athletics: 95ನೇ ವಯಸ್ಸಿನಲ್ಲಿ ಮೂರು ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಗವಾನಿ ದೇವಿ
- ವಿಧಾನಸಭೆಯಲ್ಲಿ ಕುಳಿತು ಬ್ಲ್ಯೂ ಫಿಲಂ ವೀಕ್ಷಿಸಿದ ತ್ರಿಪುರಾ ಬಿಜೆಪಿ ಶಾಸಕ, ಉಗಿದು ಉಪ್ಪಿನಕಾಯಿ ಹಾಕಿದ ಜನ
- ಧವಳ ಧಾರಿಣಿ ಅಂಕಣ: ರಾಮನೆನ್ನುವ ನಿತ್ಯ ಆದರ್ಶ
- ರಾಜ ಮಾರ್ಗ ಅಂಕಣ : ಎಸ್ಸೆಸ್ಸೆಲ್ಸಿ ಪರೀಕ್ಷೆ ತಯಾರಿ ಭಾಗ-6, ನಿಮ್ಮದೂ ಒಂದು ಯಶೋಗಾಥೆ ಯಾಕಾಗಬಾರದು?
ದೇಶ
New Parliament Building: ಸಂಸತ್ ಭವನಕ್ಕೆ ಮೋದಿ ಭೇಟಿ; ಹೇಗೆ ಸಾಗುತ್ತಿದೆ ಕಾಮಗಾರಿ? ಇಲ್ಲಿವೆ ಫೋಟೊಗಳು
New Parliament Building: ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಸಂಸತ್ ಭವನಕ್ಕೆ ಮೋದಿ ಅವರು 2020ರಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ನಿರ್ಮಾಣಕ್ಕೆ 971 ಕೋಟಿ ರೂ. ವ್ಯಯಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಉದ್ಘಾಟನೆ ಮಾಡುವ ಸಾಧ್ಯತೆ ಇದೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದಿಢೀರ್ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಸಂಸತ್ ಭವನಕ್ಕೆ ಭೇಟಿ ನೀಡಿದ ಅವರು, ಒಂದು ಗಂಟೆಗೂ ಹೆಚ್ಚು ಸಮಯವನ್ನು ಅಲ್ಲಿಯೇ ಕಳೆದಿದ್ದಾರೆ. ಕಾಮಗಾರಿ ಪರಿಶೀಲನೆ ಜತೆಗೆ ನಿರ್ಮಾಣ ಕಾರ್ಮಿಕರ ಜತೆ ಮಾತುಕತೆಯನ್ನೂ ನಡೆಸಿದ್ದಾರೆ. ಸಂಸತ್ತಿನ ಉಭಯ ಸದನಗಳಿಗೆ ತೆರಳಿ ಕಾಮಗಾರಿ ಪರಿಶೀಲನೆ, ಅತ್ಯಾಧುನಿಕ ಸೌಕರ್ಯಗಳ ಕುರಿತು ಮಾಹಿತಿ ಪಡೆದಿದ್ದಾರೆ. ಅವರು ಸಂಸತ್ ಭವನಕ್ಕೆ ಭೇಟಿ ನೀಡಿದ ಫೋಟೊಗಳು ಇಲ್ಲಿವೆ.
ಇದನ್ನೂ ಓದಿ: New Parliament House : ಹೊಸ ಸಂಸತ್ ಭವನದಲ್ಲಿ ಮಿಂಚಲಿವೆ 5000 ಬಗೆಯ ಕಲಾಕೃತಿಗಳು
-
ಕರ್ನಾಟಕ15 hours ago
High Court order: ತುಮಕೂರು ಗ್ರಾಮಾಂತರ ಜೆಡಿಸ್ ಶಾಸಕ ಗೌರಿಶಂಕರ್ ಶಾಸಕತ್ವದಿಂದ ಅನರ್ಹ: ಕೋರ್ಟ್ ಆದೇಶ
-
ಕ್ರಿಕೆಟ್16 hours ago
IND VS PAK: ಏಕದಿನ ವಿಶ್ವಕಪ್; ತಟಸ್ಥ ತಾಣದಲ್ಲಿ ನಡೆಯಲಿದೆ ಪಾಕಿಸ್ತಾನದ ಪಂದ್ಯಗಳು!
-
ಕರ್ನಾಟಕ13 hours ago
Karnataka BJP: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್. ಯಡಿಯೂರಪ್ಪ
-
ಕ್ರಿಕೆಟ್13 hours ago
ICC World Cup 2023: ಭಾರತದಲ್ಲೇ ನಡೆಯಲಿದೆ ವಿಶ್ವ ಕಪ್ ಪಂದ್ಯ; ಐಸಿಸಿ ಸ್ಪಷ್ಟನೆ
-
ಕರ್ನಾಟಕ13 hours ago
Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ
-
ಕ್ರಿಕೆಟ್11 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ14 hours ago
Karnataka BJP: ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಬಿ.ಎಸ್. ಯಡಿಯೂರಪ್ಪ
-
ದೇಶ14 hours ago
ಸ್ಮೃತಿ ಇರಾನಿಯನ್ನು ಡಾರ್ಲಿಂಗ್ ಎಂದು ಬಿಜೆಪಿ ನಾಯಕ ಟ್ವೀಟ್, ಮಾನಹಾನಿ ನೋಟಿಸ್ ಕಳುಹಿಸಿದ ಕೈ ನಾಯಕ!