ನವದೆಹಲಿ: ಲೋಕಸಭಾ ಚುನಾವಣೆ(Lok Sabha Election 2024)ಯಲ್ಲಿ ಹಿಮಾಚಲಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಕಂಗನಾ ರಣಾವತ್ (Kangana Ranaut)ಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್‌ರನ್ನು ಅರೆಸ್ಟ್ ಮಾಡಲಾಗಿದೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗುರುವಾರ ಕಂಗನಾ ಮೇಲೆ CISF ಸಿಬ್ಬಂದಿ ಕೌರ್ ಹಲ್ಲೆ ನಡೆಸಿದ್ದರು. ಇದಾದ ಬಳಿಕ ಆಕೆಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.
ನಿನ್ನೆ ಚಂಢೀಗಡದಿಂದ ದಿಲ್ಲಿಗೆ ವಿಮಾನ ಹತ್ತುವ ವೇಳೆ ಈ ಘಟನೆ ನಡೆದಿದ್ದು, ಇನ್ನು ಕೌರ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈ ನಿಟ್ಟಿನಲ್ಲಿ ಆಕೆಯನ್ನು ಅರೆಸ್ಟ್ ಮಾಡಲಾಗಿದೆ. ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾನೂನುಗಳನ್ನ ಜಾರಿಗೆ ತರಲು ಮುಂದಾದಾಗ ಅದರ ವಿರುದ್ಧ ಆಂದೋಲನ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ‘ಖಲಿಸ್ತಾನಿ ಬೆಂಬಲಿಗರು’ ಎಂದು ಒಂದು ಗುಂಪು ಕರೆದಿತ್ತು. ಈ ವಿವಾದಕ್ಕೆ ಈಡಾದಾಗ ಕಂಗಾನಾ ಆ ಗಾಯಕ್ಕೆ ಉಪ್ಪು ಸವರುವಂಥ ಹೇಳಿಕೆ ನೀಡಿದ್ದರು.
2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.
100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು. ಫೆಬ್ರವರಿ 2021 ರಲ್ಲಿ, ಅಂತರರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಸಿಬ್ಬಂದಿ ರೈತರ ಚಳವಳಿ ಕುರಿತು ನೀಡಿದ್ದ ಹೇಳಿಕೆಯಿಂದ ನನಗೆ ನೋವಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾರೆ. ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.
ಇದನ್ನೂ ಓದಿ:Uttarakhand Trekking Tragedy: ಚಾರಣಿಗರ ಮೃತದೇಹಗಳು ಬೆಂಗಳೂರಿಗೆ, ಸಾವಿನ ಕಣಿವೆಯಿಂದ ಹಿಂದಿರುಗಿದವರ ನಿಟ್ಟುಸಿರು