ಲಖನೌ: ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಹೋಟೆಲ್, ರೆಸ್ಟೋರೆಂಟ್ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಶ್ರಾವಣ ಮಾಸದಲ್ಲಿ ಈ ಯಾತ್ರೆ ನಡೆಯುತ್ತದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22ರಂದು ಪ್ರಾರಂಭವಾಗಿ ಆಗಸ್ಟ್ 2ರವರೆಗೆ ನಡೆಯಲಿದೆ.
UP government enforces ID display for all shops in state along Kanwar Yatra route, opposition hits out
— ANI Digital (@ani_digital) July 19, 2024
Read @ANI Story | https://t.co/cLiSUDlBRD#YogiAdityanath #KanwarYatra #UttarPradesh pic.twitter.com/uyQ1p8NCII
ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.
ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಗುರುವಾರ ತಿಳಿಸಿದ್ದರು. ಅದಾಗ್ಯೂ ಪ್ರತಿಪಕ್ಷಗಳು ಈ ನಡೆಯನ್ನು ಖಂಡಿಸಿದ್ದವು. ಇದೀಗ ಸ್ವತಃ ಮುಖ್ಯಮಂತ್ರಿಯೇ ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.
ʼʼಧಾರ್ಮಿಕ ಯಾತ್ರಾರ್ಥಿಗಳ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದ ಹಿನ್ನೆಲೆಯಲ್ಲಿ ಮುಜಾಫರ್‌ನಗರ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಸಿಎಂ ಯೋಗಿ ಆದಿತ್ಯನಾಥ್ ಗಮನಿಸಿದರು. ಹೀಗಾಗಿ ಅವರು ರೆಸ್ಟೋರೆಂಟ್, ಹೋಟೆಲ್, ರಸ್ತೆಬದಿಯ ಢಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಕಡೆ ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸುವಂತೆ ಸೂಚಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಮಾತನಾಡಿ, ಮುಸ್ಲಿಂ ಮಾರಾಟಗಾರರು ಹಿಂದುಗಳಂತೆ ನಟಿಸಿ ಯಾತ್ರಾರ್ಥಿಗಳಿಗೆ ಮಾಂಸಾಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. “ಅವರು ವೈಷ್ಣೋ ಡಾಬಾ ಭಂಡಾರ್, ಶಕುಂಭರಿ ದೇವಿ ಹೋಟೆಲ್ ಮತ್ತು ಶುದ್ಧ ಸಸ್ಯಾಹಾರಿ ಎಂದು ಬೋರ್ಡ್ ಸ್ಥಾಪಿಸಿ ಮಾಂಸಾಹಾರ ಮಾರಾಟ ಮಾಡುತ್ತಾರೆ” ಎಂದು ಅವರು ತಿಳಿಸಿದ್ದರು.
मुज़फ़्फ़रनगर पुलिस ने जनता के भाईचारे और विपक्ष के दबाव में आकर आख़िरकार होटल, फल, ठेलोंवालों को अपना नाम लिखकर प्रदर्शित करने के प्रशासनिक आदेश को स्वैच्छिक बनाकर जो अपनी पीठ थपथपायी है, उतने से ही अमन-औ-चैन पसंद करनेवाली जनता माननेवाली नहीं है। ऐसे आदेश पूरी तरह से ख़ारिज होने…
— Akhilesh Yadav (@yadavakhilesh) July 18, 2024
ಮುಜಾಫರ್‌ನಗರ ಪೊಲೀಸರ ಆದೇಶಕ್ಕೆ ಕಿಡಿ ಕಾರಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಹೊಟೇಲ್‌ಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂತಹ ಆದೇಶಗಳನ್ನು ತಹೊರಡಿಲಾಗುತ್ತಿದೆʼʼ ಎಂದು ಅವರು ಕಿಡಿಕಾರಿದ್ದಾರೆ.
#WATCH | On UP police in Muzaffarnagar asking eateries, including roadside carts, on the Kanwar Yatra route to display the names of owners, AIMIM chief Asaduddin Owaisi says, "We condemn it because it is a violation of Article 17 of the Constitution, which talks about… pic.twitter.com/4b3FND3cXI
— ANI (@ANI) July 18, 2024
“ಉತ್ತರ ಪ್ರದೇಶ ಪೊಲೀಸರ ಈ ಆದೇಶವು ವರ್ಣಭೇದ ಹಾಗೂ ಹಿಟ್ಲರ್ ನೀತಿಗೆ ಸಮವಾಗಿದೆ. ಕನ್ವರ್ ಯಾತ್ರಿಗಳು ಮುಸ್ಲಿಮರ ಬಳಿ ವ್ಯಾಪಾರ ಮಾಡಬಾರದು ಎನ್ನುವುದು ಇದರ ಉದ್ದೇಶ” ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅಭಿಪ್ರಾಯಪಟ್ಟಿದ್ದಾರೆ. ಒಟ್ಟಿನಲ್ಲಿ ಈ ಆದೇಶ ಇನ್ನೊಂದು ಸುತ್ತಿನ ಧರ್ಮ ದಂಗಲ್‌ಗೆ ಕಾರಣವಾಗುವ ಲಕ್ಷಣಗಳಿವೆ.
ಇದನ್ನೂ ಓದಿ: Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು