Site icon Vistara News

Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Kargil Vijay Diwas 2024

ಲಡಾಖ್‌: ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಇಂದಿಗೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕ(Kargil War Memorial)ಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ದಿ ಬಾರದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದಾರೆ.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಅಗ್ನಿಪಥ್‌ ಯೋಜನೆ ಬಗ್ಗೆ ಆರೋಪಕ್ಕೆ ಪ್ರಧಾನಿ ತಿರುಗೇಟು

ಸೈನ್ಯವನ್ನು ನಿರಂತರವಾಗಿ ಯುದ್ಧಕ್ಕೆ ಸಜ್ಜುಗೊಳಿಸುವುದು ಅಗ್ನಿಪಥ್‌ನ ಗುರಿಯಾಗಿದೆ. ದುರದೃಷ್ಟವಶಾತ್, ಕೆಲವರು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಇಂತಹ ಸೂಕ್ಷ್ಮ ವಿಷಯವನ್ನು ರಾಜಕೀಯದ ವಿಷಯವನ್ನಾಗಿ ಮಾಡಿದ್ದಾರೆ. ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ. ಸೇನೆಯಲ್ಲಿ ಸಾವಿರಾರು ಕೋಟಿ ಹಗರಣಗಳನ್ನು ಮಾಡಿ ನಮ್ಮ ಸೇನೆಯನ್ನು ದುರ್ಬಲಗೊಳಿಸಿದ್ದು ಇದೇ ಜನರು ಎಂದು ಕಿಡಿ ಕಾರಿದರು.

ಇದನ್ನೂ ಓದಿ: Kargil Vijay Diwas 2024: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಕ್ಷಣವೂ ಯೋಚಿಸದ ಈ ವೀರ ಯೋಧರಿಗೊಂದು ಸಲಾಮ್

Exit mobile version