Site icon Vistara News

Kashmir Encounter: ಕಾಶ್ಮೀರದಲ್ಲಿ ಮತ್ತೆ ಎನ್‌ಕೌಂಟರ್‌; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Kashmir Encounter

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರ ಉಪಟಳ ಮುಂದುವರಿದಿದೆ. ಕುಪ್ವಾರಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ (Kashmir Encounter) ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕೇರನ್‌ ಗಡಿ ನಿಯಂತ್ರಣ ರೇಖೆ ಬಳಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಒಬ್ಬ ಯೋಧ ಗಂಭೀರವಾಗಿ ಗಾಯಗೊಂಡಿದ್ದಾನೆ.

ಜಡ್ಡಾನ ಬಾಟಾ ಗ್ರಾಮದಲ್ಲಿ ಉಗ್ರರು ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆಗೆ ಬೆಳ್ಳಂ ಬೆಳಗ್ಗೆ 2ಗಂಟೆಗೆ ಸೇನೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಶೋಧ ಕಾರ್ಯದ ವೇಳೆ ಸರ್ಕಾರಿ ಶಾಲೆಯೊಳಗಿನ ತಾತ್ಕಾಲಿಕ ಭದ್ರತಾ ಶಿಬಿರದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಬಗ್ಗೆ ಜಮ್ಮುವಿನ ರಕ್ಷಣಾ ಇಲಾಖೆ ಪಿಆರ್‌ಒ ಪ್ರತಿಕ್ರಿಯಿಸಿದ್ದು, ಉಧಂಪುರದ ಏರ್ ಫೋರ್ಸ್ ಸ್ಟೇಷನ್‌ನಿಂದ ಎಎಲ್‌ಹೆಚ್‌ನ ತ್ವರಿತ ಕ್ರಮವು ದೋಡಾದಲ್ಲಿ (ಜೆ&ಕೆ) ತೀವ್ರವಾಗಿ ಗಾಯಗೊಂಡ ಸೈನಿಕನ ಜೀವವನ್ನು ಉಳಿಸಿದೆ. ಸವಾಲಿನ ಹವಾಮಾನದ ಹೊರತಾಗಿಯೂ, ಉಧಮ್‌ಪುರದ ಕಮಾಂಡ್ ಆಸ್ಪತ್ರೆಯಲ್ಲಿ ಸಕಾಲಿಕ ವೈದ್ಯಕೀಯ ಆರೈಕೆಯನ್ನು ಖಾತರಿಪಡಿಸುವ ಮೂಲಕ ಸ್ಥಳಾಂತರಿಸುವಿಕೆ ಯಶಸ್ವಿಯಾಗಿದೆ. ಅವರ ಸಮರ್ಪಣೆ ಮತ್ತು ಶೌರ್ಯಕ್ಕಾಗಿ ತಂಡಕ್ಕೆ ಅಭಿನಂದನೆಗಳು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ದೋಡಾ ಜಿಲ್ಲೆಯ ದೇಸಾ ಎಂಬ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಸೋಮವಾರ (ಜುಲೈ 16) ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಉಗ್ರರಿಗಾಗಿ ನಡೆದ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ಯೋಧರು ಕೂಡ ಗುಂಡಿನ ದಾಳಿ ಆರಂಭಿಸಿದ್ದಾರೆ. ರಾತ್ರೋರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿರುವ ಕಾರಣ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. ಇದಾದ ಕೇವಲ ಒಂದು ವಾರದ ನಂತರ ಈ ಕಾರ್ಯಾಚರಣೆಯು ನಡೆದಿದೆ. ಸೈನಿಕರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರು ಇತ್ತೀಚೆಗೆ ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Exit mobile version