Site icon Vistara News

Kashmiri Pandit Shot Dead: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ಗುಂಡಿಗೆ ಪಂಡಿತ ಬಲಿ

Kashmiri Pandit shot dead in Pulwama

ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಮತ್ತೊಂದು ಟಾರ್ಗೆಟ್ ಕಿಲ್ಲಿಂಗ್ (Kashmiri Pandit Shot Dead) ನಡೆದಿದೆ. ಕಾಶ್ಮೀರ ಪಂಡಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಉಗ್ರರು ಕೊಂದು ಹಾಕಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾ ಜಿಲ್ಲೆಯ ಅಚನ್ ಪ್ರದೇಶದಲ್ಲಿ ಸಶಸ್ತ್ರ ರಕ್ಷಕನಾಗಿ ಕೆಲಸ ಮಾಡುತ್ತಿದ್ದ ಸಂಜಯ್ ಮಿಶ್ರಾ ಅವರ ಮೇಲೆ ಉಗ್ರರ ಗುಂಡು ಹಾರಿಸಿದ್ದಾರೆ. ತೀವ್ರ ಗಾಯಗೊಂಡಿದ್ದ ಮಿಶ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.

ಕಾಶಿನಾಥ ಶರ್ಮಾ ಅವರ ಪುತ್ರನಾದ ಸಂಜಯ್ ಶರ್ಮಾ ಅವರು ಮಾರುಕಟ್ಟೆಗೆ ಹೋಗುತ್ತಿದ್ದಾಗ ಅವರ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಫಲಕಾರಿಯಾಗದೇ ಅವರು ಮೃತಪಟ್ಟರು. ಹಳ್ಳಿಯಲ್ಲಿ ಸಶಸ್ತ್ರ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದರು. ಇನ್ನಷ್ಟೇ ಹೆಚ್ಚಿನ ವಿವರಗಳು ಗೊತ್ತಾಗಬೇಕಿದೆ ಎಂದು ಜಮ್ಮು ಮತ್ತು ಕಾಶ್ಮೀರ್ ಪೊಲೀಸ್ ಇಲಾಖೆಯು ಟ್ವೀಟ್ ಮಾಡಿದೆ.

ಇದನ್ನೂ ಓದಿ: Anupam Kher: ಕಾಶ್ಮೀರಿ ಪಂಡಿತರಿಗೆ 5 ಲಕ್ಷ ರೂ. ದೇಣಿಗೆ ನೀಡಿದ ನಟ ಅನುಪಮ್‌ ಖೇರ್

ಈ ಘಟನೆ ಕುರಿತು ಟ್ವೀಟ್ ಮಾಡಿರುವ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಟ್ವೀಟ್ ಮಾಡಿ, ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಜಯ್ ಮಿಶ್ರಾ ಅವರು ಬ್ಯಾಂಕ್ ಸೆಕ್ಯುರಿಟಿಯಾಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಗ್ಗೆ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದಾರೆ. ನಾನು ಈ ದಾಳಿಯನ್ನು ಖಂಡಿಸುತ್ತೇನೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಾಶ್ಮೀರಿ ಪಂಡಿತರು ಸೇರಿದಂತೆ ಅಲ್ಪಸಂಖ್ಯಾತರಿಗೆ ಸೇರಿದ 14 ಜನರನ್ನು 2022ರಲ್ಲಿ ಉಗ್ರರು ಹತ್ಯೆ ಮಾಡಿದ್ದಾರೆ. ಈ ಪೈಕಿ ಮೂವರು ಕಾಶ್ಮೀರ ಪಂಡಿತರಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಇತ್ತೀಚೆಗೆ ರಾಜ್ಯಸಭೆಗೆ ಮಾಹಿತಿ ನೀಡಿದ್ದರು.

Exit mobile version