KBC 15: ಕೌನ್‌ ಬನೇಗಾ ಕರೋಡ್‌ಪತಿ ಸ್ಪರ್ಧಿಯ ಕೈಜಾರಿದ ₹7 ಕೋಟಿಯ ಪ್ರಶ್ನೆ ಇದು! - Vistara News

ದೇಶ

KBC 15: ಕೌನ್‌ ಬನೇಗಾ ಕರೋಡ್‌ಪತಿ ಸ್ಪರ್ಧಿಯ ಕೈಜಾರಿದ ₹7 ಕೋಟಿಯ ಪ್ರಶ್ನೆ ಇದು!

ಆಟ ಮುಗಿದ ನಂತರ “ಖೇಲ್ ಜಾತೇ ತೋ 7 ಕೋಟಿ ಜೀತ್ ಜಾತೇ ಆಜ್ʼʼ (ನೀವು ಆಡಿದ್ದರೆ ಇಂದು 7 ಕೋಟಿ ಗೆಲ್ಲುತ್ತಿದ್ದಿರಿ) ಎಂದು ಅಮಿತಾಭ್ ಉದ್ಗರಿಸಿದರು!

VISTARANEWS.COM


on

kbc 15
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಕೌನ್‌ ಬನೇಗಾ ಕರೋಡ್‌ಪತಿ ಸೀಸನ್‌ 15 (KBC 15) ಕಾರ್ಯಕ್ರಮದ ನೂತನ ಎಪಿಸೋಡ್‌ನಲ್ಲಿ ಸ್ಪರ್ಧಿಯೊಬ್ಬರು ₹7 ಕೋಟಿ ಗೆಲ್ಲುವ ಅವಕಾಶದಿಂದ ಕೂದಲೆಳೆಯಂತರದಲ್ಲಿ ವಂಚಿತರಾದರು. ಅವರು ನಂತರ ಊಹಿಸಿದ ಉತ್ತರ ಸರಿಯಾಗಿಯೇ ಇತ್ತು!

ಹೌದು, ಕೌನ್ ಬನೇಗಾ ಕರೋಡ್‌ಪತಿಯಲ್ಲಿ ನಟ ಅಮಿತಾಭ್ ಬಚ್ಚನ್ (Amitabh Bachchan) ಎಸೆದ ₹7 ಕೋಟಿಯ ಪ್ರಶ್ನೆಗೆ ಉತ್ತರಿಸಲು ಸ್ಪರ್ಧಿ ಜಸ್ನಿಲ್ ಕುಮಾರ್ ಹಿಂಜರಿದರು. ತಮ್ಮ ಊಹೆಯ ಉತ್ತರದ ಬಗ್ಗೆ ಅವರು ಖಚಿತತೆ ಹೊಂದಿರಲಿಲ್ಲ. ಹೀಗಾಗಿ ಗೇಮ್ ಶೋದಿಂದ ಹಿಂದೆಗೆಯಲು ನಿರ್ಧರಿಸಿದರು. ಇದಕ್ಕೂ ಮುನ್ನ ₹1 ಕೋಟಿಯ ಪ್ರಶ್ನೆಗೆ ಸರಿಯಾಗಿ ಉತ್ತರಿಸಿ ಸ್ಪರ್ಧಿ ಜಸ್ನಿಲ್ ಕುಮಾರ್ ಕಾರು ಗೆದ್ದರು. ಆದರೆ, ₹7 ಕೋಟಿಯ 15ನೇ ಪ್ರಶ್ನೆಗೆ ಉತ್ತರಿಸಲಿಲ್ಲ.

ಆ ಪ್ರಶ್ನೆ ಯಾವುದು?

ʼʼಭಾರತೀಯ ಮೂಲದ ಸ್ಪರ್ಧಿ ಲೀನಾ ಗಾಡೆ ಅವರು ಈ ಕೆಳಗಿನ ಯಾವ ರೇಸ್‌ನಲ್ಲಿ ಗೆದ್ದ ಮೊದಲ ಮಹಿಳಾ ರೇಸ್ ಇಂಜಿನಿಯರ್?

ಇದಕ್ಕೆ ಆಯ್ಕೆಗಳಲ್ಲಿದ್ದ ಉತ್ತರಗಳೆಂದರೆ: ಎ) ಇಂಡಿಯಾನಾಪೊಲಿಸ್ 500, ಬಿ) 24 ಅವರ್ಸ್ ಆಫ್ ಲೆ ಮ್ಯಾನ್ಸ್, ಸಿ) 12 ಅವರ್ಸ್ ಆಫ್ ಸೆಬ್ರಿಂಗ್, ಡಿ) ಮೊನಾಕೊ ಗ್ರ್ಯಾಂಡ್ ಪ್ರಿಕ್ಸ್.

ಜಸ್ನಿಲ್ ಹೇಳಿದ್ದೇನು?

ತಮಗೆ ಸರಿಯಾದ ಉತ್ತರ ತಿಳಿದಿಲ್ಲ ಎಂದು ಜಸ್ನಿಲ್ ಹೇಳಿದರು. ನಂತರ ಆಟ ಕ್ವಿಟ್‌ ಮಾಡಿದರು. ಆಟ ತೊರೆದ ನಂತರ ಕೊನೆಯಲ್ಲಿ ಇನ್ನೊಮ್ಮೆ ಉತ್ತರವನ್ನು ಊಹಿಸಲು ಹೇಳಿದಾಗ ಜಸ್ನಿಲ್ ʼಬಿʼ ಆಯ್ಕೆಯನ್ನು ಆಯ್ದುಕೊಂಡರು. ಅದೇ ಸರಿಯಾದ ಉತ್ತರವಾಗಿತ್ತು! “ಖೇಲ್ ಜಾತೇ ತೋ 7 ಕೋಟಿ ಜೀತ್ ಜಾತೇ ಆಜ್ʼʼ (ನೀವು ಆಡಿದ್ದರೆ ಇಂದು 7 ಕೋಟಿ ಗೆಲ್ಲುತ್ತಿದ್ದಿರಿ) ಎಂದು ಅಮಿತಾಭ್ ಉದ್ಗರಿಸಿದರು!

₹1 ಕೋಟಿ ಗೆದ್ದ ನಂತರ ಜಸ್ನಿಲ್ ಅವರು ಹೇಳಿದ್ದು ಹೀಗೆ: “ಕೆಬಿಸಿ ವೇದಿಕೆಯಲ್ಲಿ ಭಾಗವಹಿಸಬೇಕು ಎಂಬುದು ನನ್ನ ಉತ್ಕಟ ಕನಸಾಗಿತ್ತು. 2011ರಿಂದ ನಾನು ಇಲ್ಲಿಗೆ ಬರಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೆ. ನಾನು ಆಗಾಗ ಈ ಬಗ್ಗೆ ಯೋಚಿಸುತ್ತಾ ಅಳುತ್ತಿದ್ದೆ. ಉಸಿರಾಟಕ್ಕಿಂತಲೂ ಕೆಬಿಸಿ ಬಗ್ಗೆ ಹೆಚ್ಚು ಗಮನವಿಟ್ಟಿದ್ದೆ. ಕೆಬಿಸಿಯಲ್ಲಿ ಭಾಗವಹಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೆ. ಜನ ನನ್ನನ್ನು ಅಪಹಾಸ್ಯ ಮಾಡುತ್ತಿದ್ದರು. ಆದರೆ ಒಂದಲ್ಲ ಒಂದು ದಿನ ನಾನು ಅವರೆಲ್ಲರನ್ನೂ ನಾಲಿಗೆ ಕಚ್ಚಿಕೊಳ್ಳುವಂತೆ ಮಾಡುತ್ತೇನೆ, ಒಂದು ದಿನ ನನ್ನ ಇಡೀ ಜೀವನ ಬದಲಾಗುತ್ತದೆ ಎಂದು ಕನಸು ಕಂಡೆ.”

ಜಸ್ನಿಲ್ ತನ್ನ 5 ವರ್ಷದ ಮಗನ ಬಗ್ಗೆಯೂ ಹೇಳಿದರು. ʼʼಕೆಬಿಸಿಯ ಕರೆ ಬರದಿದ್ದಾಗ ನಾನು ನನ್ನ ಮಗನನ್ನು ಕೇಳುತ್ತಿದ್ದೆ. ಆ ಪುಟ್ಟ ಮಗು ಒಮ್ಮೆ ನನಗೆ ಹೇಳಿತು, ʼಜರೂರ್ ಆಯೇಗಾʼ (ಖಂಡಿತವಾಗಿಯೂ ಬರುತ್ತದೆ). ಆ ನಂಬಿಕೆ ನನ್ನನ್ನು ಪ್ರೇರೇಪಿಸಿತು. ʼಪಾಪಾ, ನೀವು ಬರುವಾಗ ಹೊಳೆಯುವ ಕಾರನ್ನು ತನ್ನಿʼ ಎಂದ. ಅವನ ನಂಬಿಕೆಯೇ ನನ್ನನ್ನು ಇಲ್ಲಿಗೆ ತಲುಪುವಂತೆ ಮಾಡಿದೆ.ʼʼ

ಇದನ್ನೂ ಓದಿ: Kaun Banega Crorepati 15: 7 ಕೋಟಿ ರೂ. ಪ್ರಶ್ನೆಗೆ ಉತ್ತರಿಸದ ಜಸ್‌ಕರಣ್‌ ಸಿಂಗ್;‌ ನೀವು ಉತ್ತರಿಸಬಲ್ಲಿರಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi: ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನರೇಂದ್ರ ಮೋದಿ ಹೇಳಿದ್ದೇನು?

Narendra Modi: ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ ಸಂಸದೀಯ ಮಂಡಳಿ ಸಭೆಯಲ್ಲಿ ನರೇಂದ್ರ ಮೋದಿ ಹೇಳಿದರು.

VISTARANEWS.COM


on

Narendra Modi
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಎನ್‌ಡಿಎ ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಅವರು ಆಯ್ಕೆಯಾಗಿದ್ದು, ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ, ಎನ್‌ಡಿಎ ನಾಯಕರು, ಸಂಸದರು, ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕರ್ನಾಟಕ (Karnataka) ಸೇರಿ ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರದರ್ಶನದ ಕುರಿತು ಮಾತನಾಡಿದರು.

“ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಜನ ಎನ್‌ಡಿಎ ಮೈತ್ರಿಕೂಟವನ್ನು ಸ್ವೀಕರಿಸಿದ್ದಾರೆ. ಇದು ಎನ್‌ಡಿಎ ಮೇಲೆ ಜನ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.

“ಕರ್ನಾಟಕ, ತೆಲಂಗಾಣದ ಜತೆಗೆ ತಮಿಳುನಾಡಿನ ತಂಡಕ್ಕೂ ನಾನು ಅಭಿನಂದನೆ ತಿಳಿಸುತ್ತೇನೆ. ನಾವು ಒಗ್ಗೂಡಿ ಹೋರಾಡಿದರೂ ಒಂದು ಸೀಟು ಕೂಡ ಗೆಲ್ಲಲು ಆಗಲಿಲ್ಲ. ಆದರೆ, ಎನ್‌ಡಿಎ ಮತಗಳಿಕೆಯ ಪ್ರಮಾಣವು ಜಾಸ್ತಿಯಾಗಿದೆ. ಇದರಿಂದ ಸ್ಪಷ್ಟ ಸಂದೇಶ ರವಾನೆಯಾದಂತಾಗಿದೆ. ಮುಂದಿನ ದಿನಗಳಲ್ಲಿ ತಮಿಳುನಾಡಿನಲ್ಲಿ ಎನ್‌ಡಿಎಗೆ ಜನಬೆಂಬಲ ಸಿಗುತ್ತದೆ ಎಂಬುದಕ್ಕೆ ಇದು ಸಂಕೇತವಾಗಿದೆ. ಕೇರಳದಲ್ಲಿ ನಮ್ಮ ನೂರಾರು ಕಾರ್ಯಕರ್ತರು ತ್ಯಾಗ, ಬಲಿದಾನ ಮಾಡಿದರು. ಇದೇ ಮೊದಲ ಬಾರಿಗೆ ಕೇರಳದಲ್ಲಿ ಎನ್‌ಡಿಎ ಖಾತೆ ತೆರೆದಿದೆ” ಎಂದು ಹೇಳಿದರು.

ನೂರು ದಾಟದ ಕಾಂಗ್ರೆಸ್‌

ಹತ್ತು ವರ್ಷಗಳ ಬಳಿಕವೂ ಕಾಂಗ್ರೆಸ್‌ಗೆ 100 ಸೀಟುಗಳನ್ನು ದಾಟಲೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ ಭ್ರಷ್ಟಾಚಾರ ಮತ್ತು ಜನ ವಿರೋಧಿ ನೀತಿಯನ್ನು ಮತದಾರರು ಮರೆತಿಲ್ಲ. ಯುಪಿಎ ಹೆಸರನ್ನು ಇಂಡಿ ಒಕ್ಕೂಟ ಎಂದು ಬದಲಾಯಿಸಿಕೊಂಡರೂ ಜನ ಇವರ ಹಗರಣಗಳನ್ನು ಮರೆತಿಲ್ಲ. ಹಾಗಾಗಿ ಮೂರನೇ ಬಾರಿ ದೇಶದ ಜನ ಎನ್‌ಡಿಎ ಒಕ್ಕೂಟವನ್ನು ಬೆಂಬಲಿಸಿದ್ದಾರೆ ಎಂದು ಮೋದಿ ಹೇಳಿದರು.

ಪ್ರತಿಪಕ್ಷಗಳು ಅಭಿವೃದ್ಧಿಯ ವಿರೋಧಿ

ಚುನಾವಣೆಯುದ್ದಕ್ಕೂ ಪ್ರತಿಪಕ್ಷಗಳು ಎಲೆಕ್ಟ್ರಾನಿಕ್‌ ಮತ ಯಂತ್ರಗಳನ್ನು ದೂಷಿಸುತ್ತ ಬಂದವು. ಆದರೆ ಮತ ಎಣಿಕೆ ಮುಗಿದ ಬಳಿಕ ಮೌನವಾಗಿವೆ. ಕಾಂಗ್ರೆಸ್‌ ಮತ್ತಿತರ ಪಕ್ಷಗಳು ಮತಯಂತ್ರಗಳಿಗೆ ಕಳಂಕ ಹೊರಿಸುವ ಮೂಲಕ ಪ್ರಜಾಪ್ರಭುತ್ವವನ್ನೂ ಅವಮಾನಿಸಿದವು. ಈ ಪಕ್ಷಗಳಿಗೆ ಹಳೆಯ ಪಾಳೇಗಾರಿಕೆಯಲ್ಲೇ ನಂಬಿಕೆ ಇದೆ. ಇವರು ಆಧುನಿಕತೆಯನ್ನು ಬೆಂಬಲಿಸುವುದಿಲ್ಲ. ಇವರು ಡಿಜಿಟಲ್‌ ಪಾವತಿಯನ್ನು ವಿರೋಧಿಸುತ್ತಾರೆ. ಇವರು ಆಧಾರ್‌ ವ್ಯವಸ್ಥೆಗೆ ಅಡ್ಡಿಪಡಿಸುತ್ತಾರೆ. ದೇಶಕ್ಕೆ ಉತ್ತಮ ಕೊಡುಗೆಯಾದ ಆಧಾರ್‌ ವ್ಯವಸ್ಥೆಯನ್ನು ಹಾಳುಗೆಡವಲು ಇವರು ಎಷ್ಟೆಲ್ಲ ಪ್ರಯತ್ನಪಟ್ಟರು. ಇವರು ಅಭಿವೃದ್ಧಿ ವಿರೋಧಿಗಳು ಎಂದು ಟೀಕಿಸಿದರು.

ಇದನ್ನೂ ಓದಿ: Narendra Modi: ಪ್ರಮಾಣವಚನಕ್ಕೂ ಮೊದಲು ಅಡ್ವಾಣಿಯ ಆಶೀರ್ವಾದ ಪಡೆದ ನರೇಂದ್ರ ಮೋದಿ!

Continue Reading

ದೇಶ

NDA Meeting: ಯೋಗಿಯ ಬೆನ್ನು ತಟ್ಟಿದ ಮೋದಿ; ವಿರೋಧಿಗಳಿಗೆ ದೊಡ್ಡ ಸಂದೇಶ ರವಾನಿಸಿದ ನಾಯಕರು

ಸಭೆ ಬಳಿಕ ಎಲ್ಲಾ ನಾಯಕರು ಪ್ರಧಾನಿ ನರೇಂದ್ರ ಮೋದಿ ಬಳಿಗೆ ಹೋಗಿ ಅವರನ್ನು ಅಭಿನಂದಿಸಿದರು. ಈ ವೇಳೆ ಯೋಗಿ ಆದಿತ್ಯಾನಾಥ್‌ ಕೂಡ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಯೋಗಿಯನ್ನು ಕಂಡೊಡನೆ ಮೋದಿ ಆತ್ಮೀಯವಾಗಿ ಯೋಗಿಯ ಬೆನ್ನು ತಟ್ಟಿದರು. ಇದು ಬಿಜೆಪಿ ವಿರೋಧಿಗೆ ಬಹುದೊಡ್ಡ ಸಂದೇಶವೊಂದನ್ನು ನೀಡಿದೆ. ಉತ್ತರಪ್ರದೇಶದಲ್ಲಿ ಈ ಬಾರಿ ಭಾರೀ ಹಿನ್ನಡೆ ಅನುಭವಿಸಿದ ಬಳಿಕ ಯೋಗಿ ಮತ್ತು ಮೋದಿ ನಡುವೆ ಮನಸ್ತಾಪ ಇದೆ ಎಂದು ಪ್ರತಿಪಕ್ಷಗಳು ಹೇಳಿದ್ದವು.

VISTARANEWS.COM


on

NDA Meeting
Koo

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ (Election Results 2024) ಬಂದ ಬಳಿಕ ಎನ್‌ಡಿಎ (NDA Meeting) ಮೈತ್ರಿಪಕ್ಷಗಳನ್ನು ಸೇರಿಸಿಕೊಂಡು ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ. ಈ ನಿಟ್ಟಿನಲ್ಲಿ ಇಂದು ಎನ್‌ಡಿಎ ಮೈತ್ರಿಕೂಟ ಸಭೆ ನಡೆಸಲಾಗಿದ್ದು, ಮಿತ್ರ ಪಕ್ಷ ನಾಯಕರು ಬಹಳ ಉತ್ಸಾಹದಿಂದ ಭಾಗಿಯಾದರು. ಈ ವೇಳೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌(Yogi Adityanath) ಕೂಡ ಪ್ರಧಾನಿ ನರೇಂದ್ರ ಮೋದಿ(PM Narendra Modi) ಭೇಟಿಯಾಗಿದ್ದು, ಈ ಅಭೂತಪೂರ್ವ ದೃಶ್ಯ ಎಲ್ಲರ ಗಮನ ಸೆಳೆದಿತ್ತು.

ಸಭೆ ಬಳಿಕ ಎಲ್ಲಾ ನಾಯಕರು ಪ್ರಧಾನಿ ನರೇಂದ್ರ ಮೋದಿ ಬಳಿಗೆ ಹೋಗಿ ಅವರನ್ನು ಅಭಿನಂದಿಸಿದರು. ಈ ವೇಳೆ ಯೋಗಿ ಆದಿತ್ಯಾನಾಥ್‌ ಕೂಡ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಯೋಗಿಯನ್ನು ಕಂಡೊಡನೆ ಮೋದಿ ಆತ್ಮೀಯವಾಗಿ ಯೋಗಿಯ ಬೆನ್ನು ತಟ್ಟಿದರು. ಇದು ಬಿಜೆಪಿ ವಿರೋಧಿಗೆ ಬಹುದೊಡ್ಡ ಸಂದೇಶವೊಂದನ್ನು ನೀಡಿದೆ. ಉತ್ತರಪ್ರದೇಶದಲ್ಲಿ ಈ ಬಾರಿ ಭಾರೀ ಹಿನ್ನಡೆ ಅನುಭವಿಸಿದ ಬಳಿಕ ಯೋಗಿ ಮತ್ತು ಮೋದಿ ನಡುವೆ ಮನಸ್ತಾಪ ಇದೆ ಎಂದು ಪ್ರತಿಪಕ್ಷಗಳು ಹೇಳಿದ್ದವು. ಆದರೆ ಇಂದಿನ ಈ ಭೇಟಿ ಎರಡು ಸ್ಟಾರ್‌ ರಾಜಕಾರಣಿಗಳ ನಡುವೆ ಎಲ್ಲವೂ ಸರಿಯಾಗಿದೆ ಎಂಬ ದೊಡ್ಡ ಸಂದೇಶವನ್ನು ರವಾನಿಸಿದೆ.

ಯಾರೆಲ್ಲ ಭಾಗಿಯಾಗಿದ್ದರು?

ಎನ್‌ಡಿಎ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ತೆಲುಗು ದೇಶಂ ಪಕ್ಷದ (TDP) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು, ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ, ಜನತಾದಳ (ಜಾತ್ಯತೀತ) ನಾಯಕ ಎಚ್.ಡಿ.ಕುಮಾರಸ್ವಾಮಿ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್, ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್ ಬಣ) ನಾಯಕ ಪ್ರಫುಲ್ ಪಟೇಲ್ ಮತ್ತಿತರರು ಭಾಗವಹಿಸಿದ್ದರು.

ಚುನಾವಣಾ ಆಯೋಗ ಪ್ರಕಟಿಸಿದ ಫಲಿತಾಂಶದ ಪ್ರಕಾರ ಬಿಜೆಪಿ 240 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 99 ಕಡೆ ಜಯ ಗಳಿಸಿದೆ. ಮ್ಯಾಜಿಕ್‌ ನಂಬರ್‌ 272. 2019ರ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಮತ್ತು 2014ರ ಚುನಾವಣೆಯಲ್ಲಿ 282 ಸ್ಥಾನಗಳನ್ನು ಗೆದ್ದಿತ್ತು.

ಜೂನ್‌ 9ರಂದು ಸಂಜೆ 6 ಗಂಟೆಗೆ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು, ತಮ್ಮ ರಾಜಕೀಯ ಗುರು, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ (LK Advani) ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ದೆಹಲಿಯಲ್ಲಿರುವ ಎಲ್‌.ಕೆ.ಅಡ್ವಾಣಿ ಅವರ ನಿವಾಸಕ್ಕೆ ತೆರಳಿದ ಮೋದಿ ಅವರು ಅಡ್ವಾಣಿ ಅವರ ಜತೆ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು.

ಇದನ್ನೂ ಓದಿ:Election Results 2024: ಸಂಸದರಾಗಿ ಆಯ್ಕೆಯಾದ ಉತ್ತರ ಪ್ರದೇಶದ ಎಂಟು ಶಾಸಕರು; ಶೀಘ್ರ ಉಪಚುನಾವಣೆ

ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ರಾಜಕೀಯ ಗುರುವಿನ ಆಶೀರ್ವಾದ ಪಡೆದಿದ್ದಾರೆ. 2014, 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಳಿಕವೂ ಮೋದಿ ಅವರು ಅಡ್ವಾಣಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಅಡ್ವಾಣಿ ಅವರ ಭೇಟಿ ಬಳಿಕ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ, ಸರ್ಕಾರ ರಚಿಸುವ ಕುರಿತು ಹಕ್ಕು ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಉದ್ಯೋಗ

Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Job Alert: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection) ಬೃಹತ್‌ ನೇಮಕಾತಿಗೆ ಮುಂದಾಗಿದೆ. ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 9,923 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IBPS RRB Recruitment 2024). ಆಫೀಸರ್, ಕಚೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳಿದ್ದು, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 27.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಅಂತಹವರ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಯಾಕೆಂದರೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection) ಬೃಹತ್‌ ನೇಮಕಾತಿಗೆ ಮುಂದಾಗಿದೆ. ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 9,923 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IBPS RRB Recruitment 2024). ಆಫೀಸರ್, ಕಚೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳಿದ್ದು, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 27 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಚೇರಿ ಸಹಾಯಕ – 5,538 ಹುದ್ದೆ, ಆಫೀಸರ್ ಸ್ಕೇಲ್ 1 – 2,485 ಹುದ್ದೆ, ಆಫೀಸರ್ ಸ್ಕೇಲ್ 2 – 315 ಹುದ್ದೆ, ಆಫೀಸರ್ ಸ್ಕೇಲ್ 2 – 68 ಹುದ್ದೆ, ಆಫೀಸರ್ ಸ್ಕೇಲ್ 2 – 21 ಹುದ್ದೆ, ಆಫೀಸರ್ ಸ್ಕೇಲ್ 2 – 24 ಹುದ್ದೆ, ಆಫೀಸರ್ ಸ್ಕೇಲ್ 2 – 8 ಹುದ್ದೆ, ಆಫೀಸರ್ ಸ್ಕೇಲ್ 2 – 3 ಹುದ್ದೆ, ಆಫೀಸರ್ ಸ್ಕೇಲ್ 2 – 59 ಹುದ್ದೆ, ಆಫೀಸರ್ ಸ್ಕೇಲ್ 3 – 73 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಆಫೀಸರ್ ಸ್ಕೇಲ್ 1 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಆಫೀಸರ್ ಸ್ಕೇಲ್ 2 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಆಫೀಸರ್ ಸ್ಕೇಲ್ 3 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 850 ರೂ. ಮತ್ತು ಪ.ಜಾ. / ಪ.ಪಂ. / ಅಂಗವಿಕಲ ಅಭ್ಯರ್ಥಿಗಳು 175 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಇಂಟರ್‌ನೆಟ್‌ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Continue Reading

ದೇಶ

Narendra Modi: ಪ್ರಮಾಣವಚನಕ್ಕೂ ಮೊದಲು ಅಡ್ವಾಣಿಯ ಆಶೀರ್ವಾದ ಪಡೆದ ನರೇಂದ್ರ ಮೋದಿ!

Narendra Modi: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ರಾಜಕೀಯ ಗುರುವಿನ ಆಶೀರ್ವಾದ ಪಡೆದಿದ್ದಾರೆ. 2014, 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಳಿಕವೂ ಮೋದಿ ಅವರು ಅಡ್ವಾಣಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

VISTARANEWS.COM


on

Narendra Modi
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಜೂನ್‌ 9ರಂದು ಸಂಜೆ 6 ಗಂಟೆಗೆ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು, ತಮ್ಮ ರಾಜಕೀಯ ಗುರು, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ (LK Advani) ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ದೆಹಲಿಯಲ್ಲಿರುವ ಎಲ್‌.ಕೆ.ಅಡ್ವಾಣಿ ಅವರ ನಿವಾಸಕ್ಕೆ ತೆರಳಿದ ಮೋದಿ ಅವರು ಅಡ್ವಾಣಿ ಅವರ ಜತೆ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು.

ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ರಾಜಕೀಯ ಗುರುವಿನ ಆಶೀರ್ವಾದ ಪಡೆದಿದ್ದಾರೆ. 2014, 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಳಿಕವೂ ಮೋದಿ ಅವರು ಅಡ್ವಾಣಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಅಡ್ವಾಣಿ ಅವರ ಭೇಟಿ ಬಳಿಕ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ, ಸರ್ಕಾರ ರಚಿಸುವ ಕುರಿತು ಹಕ್ಕು ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಕೋವಿಂದ್‌ ಅವರನ್ನೂ ಭೇಟಿಯಾದ ಮೋದಿ

ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರನ್ನು ಕೂಡ ನರೇಂದ್ರ ಮೋದಿ ಅವರು ಭೇಟಿಯಾದರು. ರಾಮನಾಥ್‌ ಕೋವಿಂದ್‌ ಹಾಗೂ ಅವರ ಪತ್ನಿಯನ್ನು ಭೇಟಿಯಾದ ಮೋದಿ ಹಲವು ವಿಷಯಗಳ ಕುರಿತು ಚರ್ಚಿಸಿದರು ಎಂದು ತಿಳಿದುಬಂದಿದೆ.

ನರೇಂದ್ರ ಮೋದಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಶುಕ್ರವಾರ ಆಯ್ಕೆಯಾಗಿದ್ದಾರೆ. ಇದಾದ ಬಳಿಕ ಮಾತನಾಡಿದ ಅವರು, “ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ. ನಾನು ಇದನ್ನು ಹೆಚ್ಚಿನ ಜವಾಬ್ದಾರಿಯಿಂದ ಹೇಳುತ್ತಿದ್ದೇನೆ” ಎಂದು ಹೇಳಿದರು.

“ಭಾರತದ ಜನತೆಯ ಸ್ಥಳೀಯ ಆಸೆ ಆಕಾಂಕ್ಷೆಗಳು, ರಾಷ್ಟ್ರೀಯ ಆಸೆ ಆಕಾಂಕ್ಷೆಗಳನ್ನು ಜತೆಗೆ ಜೋಡಿಸಿ ನಾವು ಈಡೇರಿಸಬೇಕಾಗಿದೆ. ಈ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಎನ್‌ಡಿಎ ನೂತನ ರಾಜನೀತಿಯೊಂದನ್ನು ತೆರೆದಿದೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಅವರ ಸರಕಾರವಿದೆ. ಆದರೆ ಅಲ್ಲಿನ ಜನರು ಎನ್‌ಡಿಎಯನ್ನು ಅಪ್ಪಿಕೊಂಡಿದ್ದಾರೆ. ತಮಿಳುನಾಡು ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಅಲ್ಲಿನ ಜನರು ನಮ್ಮ ಧ್ವಜವನ್ನು ಎತ್ತಿ ಹಿಡಿಯಲು ಹೋರಾಡಿದರು. ಅಲ್ಲಿ ನಮ್ಮ ಮತಪ್ರಮಾಣ ಹೆಚ್ಚಿದೆ. ಅಲ್ಲಿ ನಾಳೆ ಭವಿಷ್ಯದಲ್ಲಿ ಏನು ಬರೆದಿದೆ ಎಂಬುದನ್ನು ನಾನು ಈಗಲೇ ಹೇಳಬಲ್ಲೆ. ಕೇರಳದಲ್ಲಿ ನಮ್ಮ ಎಷ್ಟೋ ಕಾರ್ಯಕರ್ತರು ಬಲಿದಾನ ಮಾಡಿದ್ದಾರೆ. ಅಲ್ಲಿಂದ ಮೊದಲ ಬಾರಿಗೆ ಒಬ್ಬ ನಮ್ಮ ಸಂಸದರು ಆರಿಸಿ ಬಂದಿದ್ದಾರೆ. ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ನಾವು ಸರಕಾರ ರಚಿಸಿದ್ದೇವೆ” ಎಂದು ಅವರು ತಿಳಿಸಿದರು.

ಆಂಧ್ರಪ್ರದೇಶದಿಂದ 16 ಸಂಸದರನ್ನು ತಂದ ಚಂದ್ರಬಾಬು ನಾಯ್ಡು ಅವರನ್ನು ಮೋದಿ ಶ್ಲಾಘಿಸಿದರು. ಪವನ್‌ ಕಲ್ಯಾಣ್‌ ಅವರು ʼಪವನʼ ಅಲ್ಲ ʼಬಿರುಗಾಳಿʼ ಎಂದು ಅವರು ಚಟಾಕಿ ಹಾರಿಸಿದರು. ಇವಿಎಂಗಳನ್ನು ವಿರೋಧಿಸಿದ ಇಂಡಿ ಒಕ್ಕೂಟ ಪ್ರಗತಿ ವಿರೋಧಿ, ತಂತ್ರಜ್ಞಾನದ ವಿರೋಧಿ ಎಂದು ಅವರು ನುಡಿದರು. ಪ್ರತಿಪಕ್ಷಗಳು ಇವಿಎಂ ಅನ್ನು ಟೀಕಿಸುತ್ತಿದ್ದವು. ಈಗ ಅದರ ಬಗ್ಗೆ ಮೌನವಾಗಿವೆ. ಹೀಗಾಗಿ ಇವಿಎಂಗಳು ಇವೆಯೋ ಇಲ್ಲವೋ ಎಂಬುದೇ ನನಗೆ ಗೊತ್ತಾಗುತ್ತಿಲ್ಲ ಎಂದೂ ಅವರು ಚಟಾಕಿ ಸಿಡಿಸಿದರು. ಭಾರತದ ಪ್ರಜಾಪ್ರಭುತ್ವದ ಬಗ್ಗೆ, ಚುನಾವಣೆ ಪ್ರಕ್ರಿಯೆಯ ಬಗ್ಗೆ ಅವಿಶ್ವಾಸ ಮೂಡಿಸುವುದೇ ಅವರ ಕೆಲಸವಾಗಿದೆ ಎಂದರು.

ಇದನ್ನೂ ಓದಿ: Narendra Modi: ಅಕೌಂಟ್‌ಗೆ ಲಕ್ಷ ರೂ. ಹಾಕ್ತೇವೆ ಎಂದರೂ ಜನ ಕಾಂಗ್ರೆಸ್‌ಗೆ ಮತ ಹಾಕಲಿಲ್ಲ: ಮೋದಿ ವ್ಯಂಗ್ಯ

Continue Reading
Advertisement
Chandan Shetty divorce main reason social nedia craze
ಸ್ಯಾಂಡಲ್ ವುಡ್3 mins ago

Chandan Shetty: ತಂಗಿ ತಂಗಿ ಎಂದೇ ಮದುವೆಯಾಗಿದ್ದ ಚಂದನ್‌! ಇವರ ಬಾಳಲ್ಲಿ ವಿಲನ್‌ ಆಗಿದ್ದು ಯಾರು?

Babar Azam
ಪ್ರಮುಖ ಸುದ್ದಿ24 mins ago

Babar Azam : ಭಾರತ ಪಾಕ್​ ಪಂದ್ಯಕ್ಕೆ ಮೊದಲೇ ವಿರಾಟ್ ಕೊಹ್ಲಿಯ ದಾಖಲೆ ಮುರಿದ ಬಾಬರ್​ ಅಜಂ

Niveditha Gowda chandan divorce whats the reason
ಕಿರುತೆರೆ37 mins ago

Niveditha Gowda: ದಸರಾ ವೇದಿಕೆ ಮೇಲೆ ಪ್ರಪೋಸ್‌ ಮಾಡಿದ್ದೇ ವಿಚ್ಛೇದನಕ್ಕೆ ಕಾರಣವೇ? ʻಕ್ಯೂಟ್‌ ಕಪಲ್‌ʼ ಬಾಳಲ್ಲಿ ಬಿರುಗಾಳಿ!

Narendra Modi
ಪ್ರಮುಖ ಸುದ್ದಿ46 mins ago

Narendra Modi: ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನರೇಂದ್ರ ಮೋದಿ ಹೇಳಿದ್ದೇನು?

RTE Admissions 2024
ಶಿಕ್ಷಣ48 mins ago

RTE Admission 2024: ನಾಳೆಯಿಂದ ಆರ್‌ಟಿಇ ಅಡಿ ದಾಖಲಾತಿ ಪ್ರಕ್ರಿಯೆ ಪ್ರಾರಂಭ

NDA Meeting
ದೇಶ50 mins ago

NDA Meeting: ಯೋಗಿಯ ಬೆನ್ನು ತಟ್ಟಿದ ಮೋದಿ; ವಿರೋಧಿಗಳಿಗೆ ದೊಡ್ಡ ಸಂದೇಶ ರವಾನಿಸಿದ ನಾಯಕರು

Job Alert
ಉದ್ಯೋಗ53 mins ago

Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Haris Rauf
ಪ್ರಮುಖ ಸುದ್ದಿ53 mins ago

T20 World Cup : ಅಮೆರಿಕದ ವಿರುದ್ಧದ ಪಂದ್ಯದಲ್ಲಿ ಬಾಲ್​ ವಿರೂಪಗೊಳಿಸಿದ ಪಾಕ್​ ಬೌಲರ್​; ಆರೋಪ

Niveditha Gowda chandan shetty divorce
ಸ್ಯಾಂಡಲ್ ವುಡ್1 hour ago

Niveditha Gowda: ನಿವೇದಿತಾ- ಚಂದನ್‌ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಕೊಟ್ರಾ ಬಾರ್ಬಿ ಡಾಲ್‌?

Election results 2024
ಪ್ರಮುಖ ಸುದ್ದಿ1 hour ago

Rahul Gandhi: ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲ; 18 ಸಚಿವರ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌